ಮಂಗಳೂರು/ಬೆಂಗಳೂರು: ಕಿರುತೆರೆಯ ದೊಡ್ಡ ರಿಯಾಲಿಟಿ ಶೋ ‘ಬಿಗ್ ಬಾಸ್ ಸೀಸನ್ 11’ ದಿನಕ್ಕೊಂದು ಹೊಸ ಹೊಸ ತಿರುವು ಪಡೆದುಕೊಂಡು ಮುನ್ನುಗ್ಗುತ್ತಿದೆ. ಈ ವಾರ ದೊಡ್ಮನೆಯಲ್ಲಿ ಡಬಲ್ ಎಲಿಮಿನೇಷನ್ ಆಗುವ ಸಾಧ್ಯತೆ ಹೆಚ್ಚಿದೆ. ಈ ಹಿಂದಿನ ಸೀಸನ್ ಗಳಲ್ಲಿಯೂ ಡಬಲ್ ಎಲಿಮಿನೇಷನ್ ಪದ್ದತಿ ಇತ್ತು.
‘ಬಿಗ್ ಬಾಸ್ ಕನ್ನಡ ಸೀಸನ್ 11’ರಲ್ಲಿ ಈ ವಾರ ಭಿನ್ನವಾಗಿ ನಾಮಿನೇಷನ್ ಪ್ರಕ್ರಿಯೆ ನಡೆಸಲಾಗಿದೆ. ಕಳೆದ ಸೀಸನ್ ನ ಸ್ಪರ್ಧಿಗಳು ಬಂದು ನಾಮಿನೇಷನ್ ಪ್ರಕ್ರಿಯೆ ನಡೆಸಿಕೊಟ್ಟಿದ್ದಾರೆ. ಕಾರ್ತಿಕ್ ಮಹೇಶ್, ನಮ್ರತಾ ಗೌಡ, ವರ್ತೂರ್ ಸಂತೋಷ್, ತುಕಾಲಿ ಸಂತೋಷ್ ಮೊದಲಾದವರು ಬಿಗ್ ಬಾಸ್ ಮನೆ ಒಳಗೆ ಬಂದಿದ್ದರು. ಅವರುಗಳು ಫನ್ ಮಾಡುವುದರ ಜೊತೆಗೆ, ಅವರ ನೇತೃತ್ವದಲ್ಲಿ ನಾಮಿನೇಷನ್ ಪ್ರಕ್ರೀಯೆ ನಡೆದಿದೆ.
ಇದನ್ನೂ ಓದಿ: ಭಾರತದ ಯುದ್ದ ನೌಕೆ ಹಸ್ತಾಂತರ ವೇಳೆ ಒಗ್ಗೂಡಿದ ರಷ್ಯಾ- ಉಕ್ರೇನ್ !
ಈ ವಾರ ಡಬಲ್ ಎಲಿಮಿನೇಷನ್ ನಡೆಯಬಹುದೇ ಎನ್ನುವ ಪ್ರಶ್ನೆಯೂ ಕಾಡಿದೆ. ಸದ್ಯ ದೊಡ್ಮನೆಯಲ್ಲಿ 12 ಸ್ಪರ್ಧಿಗಳು ಇದ್ದಾರೆ. ಎಲಿಮಿನೇಷನ್ ನಡೆದರೆ ದೊಡ್ಮನೆಯ ಸ್ಪರ್ಧಿಗಳ ಸಂಖ್ಯೆ 10ಕ್ಕೆ ಇಳಿಕೆ ಆಗಲಿದೆ. ಆ ಬಳಿಕ ಆಟ ಮತ್ತಷ್ಟು ದುರ್ಗಮ ಆಗಲಿದೆ.
ದೊಡ್ಮನೆಯಲ್ಲಿರುವ 11 ಸ್ಪರ್ಧಿಗಳ ಪೈಕಿ ಈ ವಾರ ಬಹುತೇಕ ಘಟಾನುಘಟಿಗಳು ನಾಮಿನೇಟ್ ಆಗಿದ್ದಾರೆ. ತ್ರಿವಿಕ್ರಮ್, ಭವ್ಯಾ ಗೌಡ, ಧನರಾಜ್ ಆಚಾರ್, ಶಿಶಿರ್, ರಜತ್ ಕಿಶನ್, ಹನುಮಂತ, ಚೈತ್ರಾ ಹಾಗೂ ಮೋಕ್ಷಿತಾ ನಾಮಿನೇಟ್ ಲಿಸ್ಟ್ ನಲ್ಲಿದ್ದಾರೆ. ಈ ಪೈಕಿ ಯಾರು ಎಲಿಮಿನೇಟ್ ಆಗುತ್ತಾರೆ ಎನ್ನುವ ಕುತೂಹಲ ಮೂಡಿದೆ. ಧನರಾಜ್, ಶಿಶೀರ್ ಹಾಗೂ ಚೈತ್ರಾಗೆ ಹೆಚ್ಚಿನ ಭಯ ಇದೆ.
ಒಂದು ವೇಳೆ ಡಬಲ್ ಎಲಿಮಿನೇಷನ್ ನಡೆದರೆ ಯಾವ ಇಬ್ಬರು ಸ್ಪರ್ಧಿಗಳು ಹೊರಕ್ಕೆ ಬರಬಹುದು ಎಂಬ ಪ್ರಶ್ನೆ ಬಿಗ್ ಬಾಸ್ ನ ವಿಕ್ಷಕರಲ್ಲಿ ಕೂತುಹಲ ಕೆರಳಿಸಿದೆ.
Pingback: ಮುನಿಸು ಮರೆತು ಒಂದಾಗ್ತಾರಾ ಗೌತಮಿ, ಮೋಕ್ಷಿತಾ; ಮತ್ತೆ ರೌದ್ರವತಾರ ತಾಳಿದ ಮಂಜು ! - NAMMAKUDLA NEWS - ನಮ್ಮಕುಡ್ಲ ನ್ಯೂಸ್