Tuesday, May 30, 2023

ಧಾರವಾಡದಲ್ಲಿ ತಡರಾತ್ರಿ ಡಬಲ್ ಮರ್ಡರ್ : ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದ ದುಷ್ಕರ್ಮಿಗಳು..!

ರಿಯಲ್ ಎಸ್ಟೇಟ್ ಉದ್ಯಮಿ ಸೇರಿ ಇಬ್ಬರನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಧಾರವಾಡದಲ್ಲಿ (Dharwad) ತಡರಾತ್ರಿ ನಡೆದಿದೆ.

ಧಾರವಾಡ: ರಿಯಲ್ ಎಸ್ಟೇಟ್ ಉದ್ಯಮಿ ಸೇರಿ ಇಬ್ಬರನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಧಾರವಾಡದಲ್ಲಿ (Dharwad) ತಡರಾತ್ರಿ ನಡೆದಿದೆ.

ಕೊಲೆಯಾದ ಮಹಮ್ಮದ್

ರಿಯಲ್ ಎಸ್ಟೇಟ್ ಉದ್ಯಮಿ ಮಹಮ್ಮದ್ ಕುಡಚಿ ಹಾಗೂ ಮತ್ತೊರ್ವ ವ್ಯಕ್ತಿಯನ್ನು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದಿದ್ದಾರೆ.

ನಗರದ ಕಮಲಾಪುರ ಹೊರವಲಯದ ಮನೆ ಎದುರು ಮಹಮ್ಮದ್ ಕುಳಿತಿದ್ದಾಗ ದುಷ್ಕರ್ಮಿಗಳ ಗುಂಪು ಅವರ ಮೇಲೆ ದಾಳಿ ನಡೆಸಿದೆ.
ಈ ವೇಳೆ ಅವರು ಸ್ಥಳದಲ್ಲೇ ಮೃತಪಟ್ಟಧಾರವಾಡ: ರಿಯಲ್ ಎಸ್ಟೇಟ್ ಉದ್ಯಮಿ ಸೇರಿ ಇಬ್ಬರನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಧಾರವಾಡದಲ್ಲಿ (Dharwad) ತಡರಾತ್ರಿ ನಡೆದಿದೆ.ಿದ್ದಾರೆ.

ಮಹಮ್ಮದ್ ಅವರ ಅವರ ಮನೆಯಲ್ಲಿದ್ದ ಮತ್ತೋರ್ವನ ಮೇಲೂ ದುಷ್ಕರ್ಮಿಗಳು ಹಲ್ಲೆ ನಡೆಸಿದ್ದಾರೆ.

ದಾಳಿಯಿಂದ ತಪ್ಪಿಸಿಕೊಳ್ಳಲು ಆತ ಓಡಿ ಹೋಗಿದ್ದು, ಮನೆಯಿಂದ ರಸ್ತೆಯುದ್ದಕ್ಕೂ ರಕ್ತ ಚೆಲ್ಲಾಡಿದೆ. ಆತ ಕೂಡ ಸ್ವಲ್ಪ ದೂರದಲ್ಲಿ ಶವವಾಗಿ ಪತ್ತೆಯಾಗಿದ್ದಾನೆ. ಆತನ ಗುರುತು ಪತ್ತೆಯಾಗಿಲ್ಲ.

ಸ್ಥಳಕ್ಕೆ ಪೊಲೀಸ್ ಆಯುಕ್ತ ರಮಣ್ ಗುಪ್ತಾ ಸೇರಿದಂತೆ ಉಪನಗರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಜೋಡಿ ಕೊಲೆಗೆ ಸಂಬಂಧಿಸಿದಂತೆ ಆರೋಪಿಗಳನ್ನು ಶೀಘ್ರವೇ ಬಂಧಿಸಲಾಗುವುದು. ಈ ಹತ್ಯೆ ಹಿಂದಿನ ಕಾರಣ ಏನು ಎಂಬುದನ್ನು ಬಹಿರಂಗಪಡಿಸಲಾಗುವುದು ಎಂದು ಗುಪ್ತಾ ಅವರು ತಿಳಿಸಿದ್ದಾರೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಮೂರು ಮಾರಕಾಸ್ತ್ರಗಳು ಪತ್ತೆಯಾಗಿವೆ. ಆರೋಪಿಗಳ ಪತ್ತೆಗೆ ತನಿಖಾ ತಂಡ ರಚನೆ ಮಾಡಲಾಗಿದೆ.

LEAVE A REPLY

Please enter your comment!
Please enter your name here

Hot Topics