Connect with us

    DAKSHINA KANNADA

    ಉಪ್ಪಿನಂಗಡಿ: ಮಹಿಳೆ ಸಾ*ವಿನಲ್ಲಿ ಅನುಮಾನ; ಕೊ*ಲೆ ಶಂಕೆ

    Published

    on

    ಉಪ್ಪಿನಂಗಡಿ : ಇಲ್ಲಿನ ಪೆರ್ನೆ ಬಳಿಯ ಬಿಳಿಯೂರು ದರ್ಖಾಸ್ ಎಂಬಲ್ಲಿ ಮಹಿಳೆಯೋರ್ವರು ಮೃ*ತಪಟ್ಟಿದ್ದು ಕೊ*ಲೆ ಶಂಕೆ ವ್ಯಕ್ತವಾಗಿದೆ. ಹೇಮಾವತಿ (37) ಮೃ*ತ ಮಹಿಳೆ.


    ಈಕೆ ತಾಯಿ, ಅಕ್ಕನ ಮಗನೊಂದಿಗೆ ಮನೆಯಲ್ಲಿದ್ದ ವೇಳೆ ಭಾನುವಾರ(ಜೂ.16) ರಾತ್ರಿ ಕೃತ್ಯ ನಡೆದಿದೆ. ಮೊದಲಿಗೆ ಪರಿಸರದಲ್ಲಿ ಹೃದಯಾಘಾ*ತವೆಂಬ ಸುದ್ದಿ ಹರಡಿತ್ತು. ಆದರೆ ಬಳಿಕ ಈ ಬಗ್ಗೆ ಸಂಶಯ ವ್ಯಕ್ತವಾಗಿದ್ದು, ಪೊಲೀಸರು ಸ್ಥಳಕ್ಕೆ ಆಗಮಿಸಿದ್ದಾರೆ.

    ಇದನ್ನೂ ಓದಿ : ಕಡಬ : ವಿದ್ಯುತ್ ಶಾಕ್ ಹೊಡೆದು ಯುವಕ ಸಾ*ವು

    ವಿಚಾರಣೆಗಾಗಿ ಮೃ*ತಳ ಅಕ್ಕನ ಮಗ ಎಸ್ ಎಸ್ ಎಲ್ ಸಿ ಓದುತ್ತಿರುವ ಅಪ್ರಾಪ್ತ ಬಾಲಕನನ್ನು, ಆತನ ತಂದೆ ಶಂಕರ ಎಂಬವರನ್ನು ಕರೆದೊಯ್ದಿದ್ದಾರೆ. ಈ ಬಗ್ಗೆ ಹೆಚ್ಚಿನ ಮಾಹಿತಿ ಉಪ್ಪಿನಂಗಡಿ ಪೊಲೀಸರ ತನಿಖೆಯಿಂದಷ್ಟೇ ಬೆಳಕಿಗೆ ಬರಬೇಕಷ್ಟೇ. ಮೃ*ತರು ಹೊಟೇಲ್ ಕಾರ್ಮಿಕೆಯಾಗಿದ್ದರು.

    DAKSHINA KANNADA

    ಜಪ್ಪಿನಮೊಗರು ದೊಂಪದಬಲಿ ಗದ್ದೆ ಸಮೀಪ ಮನೆಗಳು ಜಲಾವೃತ

    Published

    on

    ಮಂಗಳೂರು ಹೊರವಲಯದ ಜಪ್ಪಿನಮೊಗೆರು ಪ್ರದೇಶದಲ್ಲಿ ಮಳೆಯಿಂದಾಗಿ ಹಲವು ರಸ್ತೆಗಳು ಹಾಗೂ ಮನೆಗಳು ಜಲಾವೃತಗೊಂಡಿದೆ. ಇಲ್ಲಿನ ದೊಂಪದಬಲಿ ಎಂಬಲ್ಲಿನ ರಾಜಾಕಾಲುವೆ ಬ್ಲಾಕ್ ಆಗಿ ನೀರು ನದಿ ಸೇರದೆ ಈ ಕೃತಕ ನೆರೆ ಉಂಟಾಗಿದೆ.

    ಹಲವಾರು ವರ್ಷಗಳಿಂದ ಇಲ್ಲಿ ರಸ್ತೆ ಸಮಸ್ಯೆ ಇದ್ದು, ಇತ್ತೀಚೆಗೆ ನೂತನ ಕಾಂಕ್ರೀಟ್ ರಸ್ತೆ ನಿರ್ಮಾಣ ಮಾಡಲಾಗಿದೆ. ಆದ್ರೆ ಕಾಂಕ್ರೀಟ್ ರಸ್ತೆಯ ಇಕ್ಕೆಲೆಗಳಲ್ಲಿ ನಿರ್ಮಿಸಬೇಕಾದ ಚರಂಡಿಯನ್ನು ನಿರ್ಮಾಣ ಮಾಡದೆ ಇರುವುದು ಇದಕ್ಕೆ ಕಾರಣ ಎಂದು ಸ್ಥಳಿಯರು ದೂರಿದ್ದಾರೆ. ಮೊದಲೇ ತಗ್ಗು ಪ್ರದೇಶದಲ್ಲಿ ಇರುವ ದೊಂಪದ ಬಲಿ ಪ್ರದೇಶ ರಸ್ತೆಗಿಂತ ಕೆಳಗೆ ಇರುವ ಕಾರಣ ರಸ್ತೆಯಲ್ಲಿ ಹರಿಯುವ ನೀರು ನೇರ ಜನವಸತಿ ಪ್ರದೇಶಕ್ಕೆ ನುಗ್ಗುತ್ತಿದೆ. ಚರಂಡಿ ನಿರ್ಮಾಣ ಮಾಡಿದ್ದೇ ಆಗಿದ್ದಲ್ಲಿ ಈ ರೀತಿಯ ಸಮಸ್ಯೆ ಆಗುತ್ತಿರಲಿಲ್ಲ ಎಂದು ಸ್ಥಳೀಯರು ಆರೋಪಿಸಿದ್ದಾರೆ.

    ಸ್ಥಳಕ್ಕೆ ಭೇಟಿ ನೀಡಿ ಕಾರ್ಪೋರೇಟರ್ ವೀಣಾಮಂಗಳ ಸ್ಥಳೀಯ ನಿವಾಸಿಗಳು ತ್ಯಾಜ್ಯ ವಿಲೇವಾರಿಯಲ್ಲಿ ಸಹಕರಿಸದೇ ಇರುವುದು ಈ ಸಮಸ್ಯೆಗೆ ಮೂಲಕ ಕಾರಣ ಎಂದು ಹೇಳಿದ್ದಾರೆ. ಎಲ್ಲಾ ತ್ಯಾಜ್ಯಗಳನ್ನು ಇಲ್ಲಿನ ಚರಂಡಿಗೆ ಎಸೆಯುವ ಕಾರಣ ರಾಜಾಕಾಲುವೆಯಲ್ಲಿ ಶೇಖರಣೆಯಾಗಿ ಈ ರೀತಿ ಅವಾಂತರ ಸೃಷ್ಟಿಯಾಗಿದೆ ಎಂದು ಹೇಳಿದ್ದಾರೆ.

    ಇಷ್ಟೇ ಅಲ್ಲದೆ ನೀರು ಸರಾಗವಾಗಿ ಹರಿದು ರಾಜಕಾಲುವ ಸೇರಲು ಚರಂಡಿ ನಿರ್ಮಾಣದ ವೇಳೆ ಕೆಲವರು ಅನಗತ್ಯವಾಗಿ ಸ್ಟೇ ತಂದು ಕಾಮಾಗಾರಿ ತಡೆ ಹಿಡಿದಿದ್ದಾರೆ ಎಂದು ಸ್ಥಳಿಯರ ಅಸಹಕಾರದಿಂದ ಈ ರೀತಿ ಆಗಿದೆ ಎಂದು ಹೇಳಿದ್ದಾರೆ.

    Continue Reading

    DAKSHINA KANNADA

    ಅತ್ತಾವರ: ಮಳೆಗೆ ಧರೆಗುರುಳಿದ ಬೃಹತ್ ಮರ

    Published

    on

    ಮಂಗಳೂರು: ಭಾರೀ ಮಳೆಯ ಹಿನ್ನೆಲೆಯಲ್ಲಿ ಅತ್ತಾವರ ಕಾಪ್ರಿಗುಡ್ಡದ ಬ್ರಿಟ್ಟೋಲೇನ್ ಬಳಿ ವಾಣಿಜ್ಯ ಸಂಕೀರ್ಣದ ತಳಪಾಯದ ಕಾಮಗಾರಿ ನಡೆಯುತ್ತಿದ್ದ ಜಾಗಕ್ಕೆ ಮೇಲ್ಭಾಗದಲ್ಲಿದ್ದ ಬೃಹತ್ ಮರವೊಂದು ಬುಡ ಸಹಿತ ಉರುಳಿ ಬಿದ್ದಿದೆ.

    ಮಳೆಯ ಹಿನ್ನೆಲೆಯಲ್ಲಿ ಕಳೆದೆರಡು ದಿನಗಳಿಂದ ಕಾಮಗಾರಿ ನಿಲ್ಲಿಸಲಾಗಿದ್ದ ಕಾರಣ ಕಾರ್ಮಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎನ್ನಲಾಗಿದೆ. ಸ್ಥಳೀಯ ಕಾರ್ಪೊರೇಟರ್ ಅಬ್ದುಲ್ ಲತೀಫ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ.

    Continue Reading

    DAKSHINA KANNADA

    ಮಕ್ಕಳಿಗೆ ಯಾವ ವಯಸ್ಸಿನಿಂದ ಚಹಾ, ಕಾಫಿ ಕೊಡಬಹುದು?

    Published

    on

    ಮಂಗಳೂರು: ಪೋಷಕರು ಅಥವಾ ಮನೆಯವರು ಚಹಾ, ಕಾಫಿ ಕುಡಿಯುವುದು ನೋಡಿ ಮಕ್ಕಳು ತಮಗೂ ಕೊಡಿ ಎಂದು ಹಟ ಮಾಡುತ್ತಾರೆ. ಮಕ್ಕಳಿಗೆ ಯಾವ ವಯಸ್ಸಿನಿಂದ ಚಹಾ, ಕಾಫಿ ಕೊಡಬಹುದು ಎಂದು ಸಂದಿಗ್ಧತೆ ಪೋಷಕರಲ್ಲಿ ಇರುವುದು ಸಹಜ. ಮಕ್ಕಳಿಗೆ ಈ ಪಾನೀಯವನ್ನು ಕೊಡುವ ಬಗ್ಗೆ ತಜ್ಞರು ಏನು ಹೇಳುತ್ತಾರೆ ನೋಡೋಣ.

    ಅಮೆರಿಕನ್ ಅಕಾಡೆಮಿ ಆಫ್ ಪೀಡಿಯಾಟ್ರಿಕ್ಸ್ ಪ್ರಕಾರ 12 ಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಚಹಾ, ಕಾಫಿ ಕೊಡಬಾರದು ಹಾಗೂ ಎನರ್ಜಿ ಡ್ರಿಂಕ್ ಕೂಡ ನೀಡುವಂತಿಲ್ಲ. 12 ರಿಂದ 18 ವರ್ಷ ಮಕ್ಕಳು 100 ಮಿಲಿ ಗ್ರಾಂ ನಷ್ಟು ಕೆಫಿನ್ ಹೊಂದಬಹುದು.

    12 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಕೆಫಿನ್ ನೀಡುವುದರಿಂದ ಅವರ ಹೃದಯ, ಮೆದುಳು, ಮೂತ್ರಪಿಂಡ ಯಕೃತ್ತಿನ ಮೇಲೆ ಪರಿಣಾಮ ಬೀರುತ್ತದೆ ಎಂದು ತಜ್ಞರು ಹೇಳುತ್ತಾರೆ. ಕೆಫಿನ್ ಅಂಶ ಇರುವ ಚಹಾ ಮತ್ತು ಕಾಫಿ ಮಾತ್ರವಲ್ಲ ಚಾಕೊಲೇಟ್ ಪಾನೀಯಗಳು, ಬೇಕರಿ ಐಟಂಗಳು, ಕುಕ್ಕೀಸ್ ಇತ್ಯಾದಿಗಳು ಕೂಡ 12 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಕೊಡುವಂತಿಲ್ಲ.

    12 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಕೆಫಿನ್ ನೀಡುವುದರಿಂದ ಇದು ಅವರ ಒಟ್ಟಾರೆ ದೈಹಿಕ ಹಾಗೂ ಮಾನಸಿಕ ಆರೋಗ್ಯದ ಮೇಲೆ ಪರಿಣಾಮ ಬೀರುತ್ತದೆ.

    Continue Reading

    LATEST NEWS

    Trending