Thursday, August 11, 2022

ಗಂಡ-ಕುಟುಂಬಸ್ಥರಿಂದ ವರದಕ್ಷಿಣೆ ಕಿರುಕುಳ ಆರೋಪ-ದೂರು ದಾಖಲು

ಮಂಗಳೂರು : ಗಂಡ ಮತ್ತು ಆತನ ಕುಟುಂಬಸ್ಥರು ತನಗೆ ವರದಕ್ಷಿಣೆ ವಿಚಾರದಲ್ಲಿ ದೈಹಿಕ ಹಾಗೂ ಮಾನಸಿಕ ಕಿರುಕುಳ ನೀಡುತ್ತಿದ್ದಾರೆ ಎಂದು ಮಹಿಳೆಯೋರ್ವರು ಮಂಗಳೂರು ಮಹಿಳಾ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಮಂಗಳೂರು ಹೊರ ವಲಯದ ಪೊಳಲಿ ಅಡೂರು ಕಲ್ಲಕಲಂಬಿಯ ಮೊಹಮ್ಮದ್ ಇಮ್ರಾನ್ ಮತ್ತು ಕುಟುಂಬಿಕರು ಸೇರಿ ಆತನ ಪತ್ನಿಗೆ ವರದಕ್ಷಿಣೆಯ ವಿಚಾರವಾಗಿ ಮಾನಸಿಕ ಹಾಗೂ ದೈಹಿಕವಾಗಿ ಕಿರುಕುಳ ನೀಡಿರುವ ಬಗ್ಗೆ ಮಂಗಳೂರು ಮಹಿಳಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

2019ರ ನ.11 ರಂದು ವಿವಾಹವಾಗಿದ್ದು ವಿವಾಹದ ನಂತರ ಇಮ್ರಾನ್ ಮತ್ತು ಆತನ ಸಂಬಂಧಿಕರು ವರದಕ್ಷಿಣೆಗಾಗಿ ಮಾನಸಿಕ ಮತ್ತು ದೈಹಿಕ ಹಿಂಸೆ ನೀಡುತ್ತಿದ್ದಾರೆ.

ಡಿ.13 ರಂದು ಹಲ್ಲೆ ನಡೆಸಿ ಅವಾಚ್ಯ ಶಬ್ದಗಳಿಂದ ಬೈದು ಜೀವ ಬೆದರಿಕೆಯೊಡ್ಡಿದ್ದಾರೆ ಎಂದು ಇಮ್ರಾನ್‌ನ ಪತ್ನಿ ತನ್ನ ದೂರಿನಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

Hot Topics

ಸ್ಥಳೀಯರೇ ಪ್ರವೀಣ್‌ನನ್ನು ಹತ್ಯೆಗೈದಿದ್ದು, ಆರೋಪಿಗಳಿಗೆ ಎಸ್‌ಡಿಪಿಐ ಲಿಂಕ್‌ ಎಂದ ಎಡಿಜಿಪಿ

ಮಂಗಳೂರು: ಪ್ರವೀಣ್‌ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಪ್ರಮುಖ ಆರೋಪಿಗಳನ್ನು ಬಂಧಿಸಲಾಗಿದೆ. ಇವರೆಲ್ಲರೂ ಸ್ಥಳೀಯರೇ ಆಗಿದ್ದಾರೆ ಎಂದು ಎಡಿಜಿಪಿ ಅಲೋಕ್‌ ಕುಮಾರ್‌ ತಿಳಿಸಿದ್ದಾರೆ.ಈ ಬಗ್ಗೆ ಮಂಗಳೂರಿನ ಎಸ್‌ಪಿ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ...

ಬೆಳ್ತಂಗಡಿ: ಸಾರ್ವಜನಿಕ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

ಬೆಳ್ತಂಗಡಿ: ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಬಳಂಜ, ನಾಲ್ಕೂರು,ತೆಂಕಕಾರಂದೂರು ಇದರ ವತಿಯಿಂದ ನಡೆಯುವ 35 ನೇ ವರ್ಷದ ಗಣೇಶೋತ್ಸವದ ಆಮಂತ್ರಣ ಪತ್ರಿಕೆಯನ್ನು ಉಭಯ ಜಿಲ್ಲಾ ಜನಜಾಗೃತಿ ವೇದಿಕೆಯ ಸ್ಥಾಪಕಾಧ್ಯಕ್ಷ ಕೆ.ವಸಂತ ಸಾಲಿಯಾನ್  ಬಳಂಜದಲ್ಲಿ ...

ಹಂತಕರನ್ನು ಬಂಧಿಸಿದ ಪೊಲೀಸರಿಗೆ ಧನ್ಯವಾದ ತಿಳಿಸಿದ ಪ್ರವೀಣ್ ಕುಟುಂಬ

ಪುತ್ತೂರು: ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಈಗಾಗಲೇ ಪೊಲೀಸರು ಮೂವರು ಪ್ರಮುಖ ಆರೋಪಿಗಳನ್ನು ಬಂಧಿಸಿದ್ದಾರೆ. ಈ ಹಿನ್ನೆಲೆ ಪ್ರವೀಣ್ ನೆಟ್ಟಾರು ಕುಟುಂಬಸ್ಥರು ಪೋಲೀಸ್ ಇಲಾಖೆಗೆ ಧನ್ಯವಾದ ಹೇಳಿದ್ದಾರೆ.ಈ ಬಗ್ಗೆ...