Connect with us

DAKSHINA KANNADA

ಮಂಗಳೂರು : ಮೂರು ಕ್ಷೇತ್ರಕ್ಕೆ ಗ್ರಾಮೀಣ ಕುಡಿಯುವ ನೀರು ಪೂರೈಕೆಗೆ 201 ಕೋಟಿ ರೂ.ವೆಚ್ಚದಲ್ಲಿ ಡಿಪಿಆರ್

Published

on

ಮಂಗಳೂರು : ಮೂರು ಕ್ಷೇತ್ರಕ್ಕೆ ಗ್ರಾಮೀಣ ಕುಡಿಯುವ ನೀರು ಪೂರೈಕೆಗೆ 201 ಕೋಟಿ ರೂ.ವೆಚ್ಚದಲ್ಲಿ ಡಿಪಿಆರ್

ಮಂಗಳೂರು : ಮಂಗಳೂರು ಉತ್ತರ ಕ್ಷೇತ್ರದ 13 ಗ್ರಾಮ ಪಂಚಾಯತ್ ಹಾಗೂ ಮೂಡಬಿದ್ರೆ, ಬಂಟ್ವಾಳದ ಕೆಲವು ಗ್ರಾಮಗಳನ್ನು ಒಳಗೊಂಡಂತೆ “ಜಲಜೀವನ್ ಮಿಷನ್” ಯೋಜನೆಯಡಿ ಗುರುಪುರ ಹಾಗೂ ನೇತ್ರಾವತಿಯಲ್ಲಿರುವ ಅಣೆಕಟ್ಟುಗಳಿಂದ ವರ್ಷಪೂರ್ತಿ ಸಮಸ್ಯೆಯಾಗದಂತೆ ಕುಡಿಯುವ ನೀರು ಅಗತ್ಯವಿರುವ ಗ್ರಾಮಗಳಿಗೆ ಪೂರೈಸಲು ರಾಜ್ಯದ ಗ್ರಾಮೀಣ ಅಭಿವೃದ್ಧಿ ಇಲಾಖೆಯ ಸಚಿವ ಕೆ.ಎಸ್ ಈಶ್ವರಪ್ಪ ಅವರು 201 ಕೋಟಿ ರೂ.ಗಳ ವೆಚ್ಚದಲ್ಲಿ ವಿಸ್ತೃತ ಡಿಪಿಆರ್ ರೂಪಿಸಿ ಕಾಮಗಾರಿ ಆರಂಭಿಸಲು ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ಬೆಂಗಳೂರಿನಲ್ಲಿ ನಡೆದ ಸಭೆಯಲ್ಲಿ ಜಲಜೀವನ್ ಮಿಷನ್ ಗ್ರಾಮೀಣ ಭಾಗದ ಜನತೆಗೆ ಮುಟ್ಟಿಸಲು ಬೇಕಾದ ಕ್ರಮಗಳ ಕುರಿತು ನಡೆದ ವಿಶೇಷ ಸಭೆಯಲ್ಲಿ ಆದೇಶ ನೀಡಿದರು.

ಮಂಗಳೂರು ಉತ್ತರ ಕ್ಷೇತ್ರದ ಶಾಸಕ ಡಾ.ಭರತ್ ಶೆಟ್ಟಿ ಅವರು ಮಾಹಿತಿ ನೀಡಿ ಗ್ರಾಮೀಣ ಭಾಗದಲ್ಲಿ ಹಲವೆಡೆ ಬೋರ್ವೆಲ್, ಮನೆ ಮನೆ ನಳ್ಳಿ ಮೂಲಕ ನಿರಂತರ ನೀರು ಪೂರೈಕೆಗೆ ನೀರಿನ ಒರತೆಯಿಲ್ಲದೆ ಸಮಸ್ಯೆಯಾಗುತ್ತದೆ.

ಈ ಸಂದರ್ಭ ನೀರು ಪೂರೈಸಲು ಜಲಜೀವನ ಮಿಷನ್ ಮೂಲಕ ಈ ಹಿಂದೆ ಇದ್ದ ಬಹುಗ್ರಾಮ ನೀರು ಪೂರೈಕೆಯಂತೆ ಅಣೆಕಟ್ಟುಗಳಿಂದ ಕುಡಿಯುವ ನೀರು ಪೂರೈಕೆಗೆ ಜಲಜೀವನ್ ಮಿಷನ್ನಲ್ಲೂ ಅವಕಾಶ ನೀಡಬೇಕು.

ಪೈಪ್ ಲೈನ್, ಪಂಪ್ ಅಳವಡಿಗೆ, ನೀರು ಶುದ್ಧೀಕರಣ ಘಟಕ ಸಹಿತ ವಿವಿಧ ಸೌಲಭ್ಯಗೆ ಹೆಚ್ಚಿನ ಅನುದಾನದ ಅಗತ್ಯವಿದೆ ಎಂದು ಮನವಿ ಮಾಡಿದರು. ಇದಕ್ಕೆ ಪೂರಕವಾಗಿ ಪ್ರತಿಕ್ರಿಯಿಸಿದ ಸಚಿವರು ಕುಡಿಯುವ ನೀರಿನ ಪೂರೈಕೆಯಲ್ಲಿ ಯಾವುದೇ ಸಮಸ್ಯೆಯಾಗದಂತೆ ನೋಡಿಕೊಳ್ಳಲು ಇಲಾಖೆ ಸಹಕಾರ ನೀಡುತ್ತದೆ ಎಂದು ಭರವಸೆ ನೀಡಿದರು.
ಸಭೆಯಲ್ಲಿ ಶಾಸಕರಾದ ಉಮಾನಾಥ ಕೋಟ್ಯಾನ್, ರಾಜೇಶ್ ನಾಕ್, ಪ್ರಧಾನ ಕಾರ್ಯದಶರ್ಿ ಆತಿಕ್, ಮುಖ್ಯ ಎಂಜಿನಿಯರ್ ಹೊಳೆಯಾಚೆ ,ಕುಡಿಯುವ ನೀರಿನ ನಿರ್ವಹಣೆ ಮುಖ್ಯ ಎಂಜಿನಿಯರ್ ನರೇಂದ್ರ ಬಾಬು ಮತ್ತಿತರರು ಉಪಸ್ಥಿತರಿದ್ದರು.

Click to comment

Leave a Reply

Your email address will not be published. Required fields are marked *

DAKSHINA KANNADA

ಬೈಕ್-ಕಾರು ನಡುವೆ ಅಪ*ಘಾತ; ಓರ್ವ ಮೃ*ತ್ಯು

Published

on

ಅರಂತೋಡು: ಬೈಕ್ ಹಾಗೂ ಕಾರಿನ ನಡುವೆ ಸಂಭವಿಸಿದ ಭೀಕರ ರಸ್ತೆ ಅಪ*ಘಾತದಲ್ಲಿ ಬೈಕ್‌ನ ಹಿಂಬದಿ ಸವಾರ ಮೃ*ತಪಟ್ಟ ಘಟನೆ ಸಂಪಾಜೆ ಕಲ್ಲುಗುಂಡಿ ಸಮೀಪ ದೊಡ್ಡಡ್ಕ ಎಂಬಲ್ಲಿ ಗುರುವಾರ ತಡರಾತ್ರಿ ಸಂಭವಿಸಿದೆ.


ಮತದಾನ ಮಾಡಲು ಊರಿಗೆ ಬರುತ್ತಿದ್ದರು ಎಂದು ಹೇಳಲಾಗುತ್ತಿದ್ದು ಡಿ*ಕ್ಕಿಯ ರಭಸಕ್ಕೆ ಬೈಕ್‌ನ ಹಿಂಬದಿ ಸವಾರನಿಗೆ ಗಂಭೀರ ಗಾಯಗೊಂಡು ಮೃ*ತಪಟ್ಟರೆ ಇನ್ನೋರ್ವನಿಗೆ ಗಾಯವಾಗಿದ್ದು ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಮೃ*ತರ ವಿವರ ಇನ್ನಷ್ಟೇ ತಿಳಿದುಬರಬೇಕಾಗಿದೆ.

Continue Reading

DAKSHINA KANNADA

ಮಂಗಳೂರು: 30.98% ಮತದಾರರಿಂದ ಮತ ಚಲಾವಣೆ

Published

on

ಮಂಗಳೂರು: 17-ದ.ಕ ಲೋಕಸಭಾ ಕ್ಷೇತ್ರದಲ್ಲಿ ಬೆಳಿಗ್ಗೆ 9 ಗಂಟೆಯವರೆಗೆ 30.98 ಪ್ರತಿಶತ ಮತದಾರರು ಮತ ಚಲಾವಣೆ ಮಾಡಿದ್ದಾರೆ.

ಸುಳ್ಯದಲ್ಲಿ ಅತಿ ಹೆಚ್ಚು ಮತ ಚಲಾವಣೆಯಾಗಿದ್ದು, 16.46 ಪ್ರತಿಶತ ಮತದಾರರು ಮತ ಚಲಾವಣೆ ಮಾಡಿದ್ದಾರೆ. ಮೂಡುಬಿದಿರೆ ಕ್ಷೇತ್ರದಲ್ಲಿ ಅತಿ ಕನಿಷ್ಠ ಮತ ಚಲಾವಣೆಯಾಗಿದ್ದು, 12.2 ಪ್ರತಿಶತ ಮತದಾರರು ಮತ ಚಲಾಯಿಸಿದ್ದಾರೆ.

ಇನ್ನು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಿಸಿಲಿನ ಬೇಗೆಗೆ ಕಾರ್ ಸ್ಟ್ರೀಟ್ ಸರ್ಕಾರಿ ಬಾಲಕಿಯರ ಎಪಿಯು ಕಾಲೇಜಿನಲ್ಲಿ ಮತದಾರರು ಬಿಸಿಲಿನಿಂದ ತಪ್ಪಿಸಿಕೊಳ್ಳಲು ಛತ್ರಿ ಹಿಡಿದು ಮತದಾನ ಮಾಡಲು ಸರತಿ ಸಾಲಿನಲ್ಲಿ ನಿಂತ ದೃಶ್ಯ ಕಂಡುಬಂತು.

Continue Reading

DAKSHINA KANNADA

ಮಂಗಳೂರು: ಮತಗಟ್ಟೆಯಲ್ಲಿ ಬಿಜೆಪಿ ಕಾರ್ಯಕರ್ತರ ಗೂಂಡಾಗಿರಿ; ಪೊಲೀಸ್ ಅಧಿಕಾರಿಗಳ ಜೊತೆಯಲ್ಲೇ ಅನುಚಿತ ವರ್ತನೆ

Published

on

ಮಂಗಳೂರು: ನಗರದ ಕಪಿತಾನಿಯೋ ಮತಗಟ್ಟೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಮತ ಚಲಾಯಿಸಿದ ಬಳಿಕ ಮಾಧ್ಯಮ ಪ್ರತಿನಿಧಿ ಜೊತೆ ಪ್ರತಿಕ್ರಿಯೆ ನೀಡುತ್ತಿದ್ದ ವೇಳೆ ಬಿಜೆಪಿ ಕಾರ್ಯಕರ್ತನೊಬ್ಬ ಪೊಲೀಸ್ ಹಾಗೂ ಪತ್ರಕರ್ತರೊಂದಿಗೆ ಅನುಚಿತವಾಗಿ ವರ್ತಿಸಿ ವಾಗ್ವಾದವುಂಟಾದ ಘಟನೆ ನಡೆಯಿತು.

ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್. ಆರ್ ಪೂಜಾರಿಯವರು ಮತದಾನ ಮಾಡಿ ಹೊರಬಂದಾಗ ಮಾಧ್ಯಮದವರು ಗೇಟಿನ ಹೊರಭಾಗದಲ್ಲಿ ಅವರ ಹೇಳಿಕೆ ತೆಗೆದುಕೊಳ್ಳುತ್ತಿದ್ದರು. ಆಗ “ಎಷ್ಟು ಹೊತ್ತು ಪ್ರತಿಕ್ರಿಯೆ ಪಡೆಯುವುದು”ಎಂದು ಸಂದೀಪ್ ಎಕ್ಕೂರು ಎಂಬಾತ ಕ್ಯಾತೆ ತೆಗೆದಿದ್ದಾನೆ. ಈ ವೇಳೆ ಅಲ್ಲಿಯೇ ಇದ್ದ ಪೊಲೀಸ್ ಇನ್ಸ್ ಪೆಕ್ಟರ್ ಟಿ.ಡಿ.ನಾಗರಾಜ್ ಸೇರಿದಂತೆ ಇತರ ಪೊಲೀಸರು ಆತನನ್ನು ತಳ್ಳಿಕೊಂಡು ಒಂದಷ್ಟು ದೂರ ಹೋಗಿದ್ದಾರೆ. ಈ ವೇಳೆ ಆತನೊಂದಿಗೆ ಇದ್ದವರು ಸಮಾಧಾನ ಮಾಡಲು ಯತ್ನಿಸಿದರೂ, ಆತ ಪೊಲೀಸರೊಂದಿಗೆ ಅನುಚಿತವಾಗಿ ವರ್ತಿಸಿ, ವಾಗ್ವಾದ ನಡೆಸಿದ್ದಾನೆ. ಆಗ ಪೊಲೀಸ್ ಇನ್ಸ್ ಪೆಕ್ಟರ್ ಟಿ.ಡಿ.ನಾಗರಾಜ್ ಎಚ್ಚರಿಕೆ ನೀಡಿ ಕಳಿಸಿದ್ದಾರೆ.

ಪೊಲೀಸರು ಅಲ್ಲಿಂದ ಹಿಂದಿರುಗಿದ ಬಳಿಕ ತಂಡದಲ್ಲಿದ್ದ ಮತ್ತೊಬ್ಬ ಘಟನೆಯ ದೃಶ್ಯ ಚಿತ್ರೀಕರಿಸುತ್ತಿದ್ದ ಮಾಧ್ಯಮ ವರದಿಗಾರರ ಮೇಲೆ ಹರಿಹಾಯ್ದಿದ್ದಾನೆ. ಈ ವೇಳೆ ಪತ್ರಕರ್ತರೊಂದಿಗೂ ತಂಡದಿಂದ ವಾಗ್ವಾದ ನಡೆದಿದೆ. ಈ ವೇಳೆ ಸ್ಥಳದಲ್ಲಿ ಸ್ವಲ್ಪ ಗೊಂದಲದ ವಾತಾವರಣ ಸೃಷ್ಟಿಯಾಗಿತ್ತು. ಸಂಜೆ ವೇಳೆ ಆತನ ಮೇಲೆ ಪ್ರಕರಣ ದಾಖಲಿಸಿ ಅರೆಸ್ಟ್ ಮಾಡುತ್ತೇನೆ ಎಂದು ಪೊಲೀಸ್ ಇನ್ಸ್ ಪೆಕ್ಟರ್ ಟಿ.ಡಿ.ನಾಗರಾಜ್ ಎಚ್ಚರಿಕೆ ನೀಡಿದ ಬಳಿಕ ಪರಿಸ್ಥಿತಿ ಶಾಂತವಾಯಿತು.

Continue Reading

LATEST NEWS

Trending