Connect with us

    LATEST NEWS

    ‘ಡಾ. ಎಪಿಜೆ ಅಬ್ಧುಲ್ ಕಲಾಂ’ರವರ 90ನೇ ವರ್ಷದ ಜನ್ಮದಿನ; ‘ವಿಶ್ವ ವಿದ್ಯಾರ್ಥಿಗಳ ದಿನ’ದ ಸಂಭ್ರಮಾಚರಣೆ

    Published

    on

    ಮಂಗಳೂರು: ಅವುಲ್ ಫಕೀರ್ ಜೈನುಲಬ್ದೀನ್ ಅಬ್ದುಲ್ ಕಲಾಂ ಅವರು ತಮಿಳುನಾಡು ರಾಜ್ಯದ ರಾಮೇಶ್ವರಂನಲ್ಲಿ, 15 ಅಕ್ಟೋಬರ್ 1931 ರಂದು ತಮಿಳು ಮುಸ್ಲಿಂ ಕುಟುಂಬದಲ್ಲಿ ಜನಿಸಿದರು. ಕಡು ಬಡ ಕುಟುಂಬದಿಂದ ಬಂದ ಕಲಾಂ ನಂತರದಲ್ಲಿ ಶ್ರೇಷ್ಠ ವಿಜ್ಞಾನಿ ಹಾಗೂ ಭಾರತದ ಮಿಸೈಲ್ ಮ್ಯಾನ್ ಎಂದೇ ಖ್ಯಾತರಾಗಿದ್ದರು. ಎಲ್ಲಾ ಕ್ಷೇತ್ರದಲ್ಲೂ ತಮ್ಮನ್ನು ತಾವು ತೊಡಗಿಸಿಕೊಂಡು ಬರುತ್ತಿದ್ದ ಕಲಾಂರವರಿಗೆ ಮಕ್ಕಳೆಂದರೆ ಎಲ್ಲಿಲ್ಲದ ಪ್ರೀತಿ. ಹಾಗಾಗಿ ಪ್ರತೀ ವರ್ಷ ಅವರ ಜನ್ಮ ದಿನದ ಸ್ಮಮರಣಾರ್ಥವಾಗಿ ಈ ದಿನವನ್ನು ‘ವಿಶ್ವ ವಿದ್ಯಾರ್ಥಿಗಲ ದಿನ” ಎಂದು ಆಚರಿಸಲಾಗುವುದು.

    ಬೋಧಿಸುವುದನ್ನು ಹೆಚ್ಚು ಇಷ್ಟಪಡುತ್ತಿದ್ದ ಕಾರಣ ‘ನಾನು ಶಿಕ್ಷಕನಾಗಿ ನೆನಪಿನಲ್ಲಿರಲು ಇಷ್ಟಪಡುತ್ತೇನೆ ಎನ್ನುತ್ತಿದ್ದರು. ಅಷ್ಟೇ ಅಲ್ಲದೇ, ಉತ್ತಮ ಶಿಕ್ಷಣ ಪಡೆಯುವ ವಿದ್ಯಾರ್ಥಿಗಳು ದೇಶದ ಭವಿಷ್ಯ ಎಂದು ನಂಬಿದ್ದವರು. ಹೀಗಾಗಿ ಶಿಕ್ಷಣವನ್ನು ಉತ್ತೇಜಿಸುವಲ್ಲಿ, ಶಿಕ್ಷಣ ಕ್ಷೇತ್ರದಲ್ಲಿ ಹಲವು ಸುಧಾರಣೆಗಳನ್ನು ಮಾಡುವಲ್ಲಿ ತಮ್ಮದೇ ಆದ ಕೊಡುಗೆಗಳನ್ನು ನೀಡಿದ್ದಾರೆ.


    ಮೊದಲ ಬಾರಿಗೆ 2010 ರಲ್ಲಿ, ಕಲಾಂ ಅವರ 79ನೇ ಜನ್ಮದಿನದಂದು ವಿಶ್ವ ವಿದ್ಯಾರ್ಥಿಗಳ ದಿನವನ್ನು ಆಚರಿಸಲಾಯಿತು. ಶಿಕ್ಷಣ, ಪ್ರಪಂಚದಾದ್ಯಂತ ವಿದ್ಯಾರ್ಥಿಗಳ ಪ್ರಗತಿಗಾಗಿ ಅವರು ಮಾಡಿದ ಕಾರ್ಯ ಮತ್ತು ಸಂಶೋಧನಾ ಕ್ಷೇತ್ರದಲ್ಲಿ ಕಲಾಂ ಅವರ ಮಹತ್ವದ ಕೊಡುಗೆಯನ್ನು ಗೌರವಿಸಲು ಸಲುವಾಗಿ ವಿಶ್ವ ಸಂಸ್ಥೆಯು ಈ ದಿನದ ಆಚರಣೆಯನ್ನು ಕಡ್ಡಾಯವಾಗಿ ಜಾರಿಗೊಳಿಸಿತು.


    ಡಾ. ಎ.ಪಿ.ಜೆ ಅಬ್ದುಲ್ ಕಲಾಂರವರ ನುಡಿಮುತ್ತುಗಳು:

    • ಒಂದು ಉತ್ತಮ ಪುಸ್ತಕ ನೂರು ಸ್ನೇಹಿತರಿಗೆ ಸಮಾನ, ಆದರೆ ಒಬ್ಬ ಉತ್ತಮ ಸ್ನೇಹಿತ ಒಂದು ಗ್ರಂಥಾಲಯಕ್ಕೆ ಸಮಾನ.
    • ನಿದ್ರೆಯಲ್ಲಿ ಕಾಣುವುದು ಕನಸಲ್ಲ, ನಿದ್ದೆ ಗೆಡುವಂತೆ ಮಾಡುವುದಿದೆಯಲ್ಲ ಅದು ನಿಜವಾದ ಕನಸು.
    •  ಸೋಲೆಂಬ ರೋಗಕ್ಕೆ ಆತ್ಮವಿಶ್ವಾಸ ಮತ್ತು ಕಠಿಣ ಪರಿಶ್ರಮವೇ ಮದ್ದು, ಇದು ಯಾರಲ್ಲಿರುತ್ತದೆಯೋ ಅವರಿಗೆ ಯಶಸ್ಸು ಕಟ್ಟಿಟ್ಟ ಬುತ್ತಿ.
    •  ಒಬ್ಬರನ್ನ ಸೋಲಿಸೋದು ಸುಲಭ, ಆದರೆ ಒಬ್ಬರ ಮನಸ್ಸನ್ನು ಗೆಲ್ಲೋದು ಕಷ್ಟ.
    • ಇತರರಿಗಾಗಿ ನಿಮ್ಮ ಸ್ವಂತಿಕೆಯನ್ನು ಎಂದಿಗೂ ಬಿಟ್ಟುಕೊಡಬೇಡಿ. ಏಕೆಂದರೆ ಈ ಪ್ರಪಂಚದಲ್ಲಿ ನಿಮ್ಮ ಪಾತ್ರವನ್ನು ನಿಮಗಿಂತ ಚೆನ್ನಾಗಿ ಯಾರೂ ನಿಭಾಯಿಸಲು ಸಾಧ್ಯವಿಲ್ಲ.
    • ಈ ಜಗತ್ತು ನಾವು ಹೇಳುವ ಸತ್ಯಕ್ಕಿಂತ ಮಿಗಿಲಾಗಿ ನಮ್ಮ ಕುರಿತು ಇತರರು ಹೇಳುವ ಸುಳ್ಳನ್ನು ನಂಬುತ್ತದೆ.
    • ನೀವಂದುಕೊಂಡಿದ್ದನ್ನು ಸಾಧಿಸಲು ಮೊಟ್ಟಮೊದಲನೆಯದಾಗಿ ಬೇಕಿರುವುದು ಗುರಿಯೆಡೆಗಿನ ಏಕಾಗ್ರಚಿತ್ತ ಬದ್ಧತೆ ಅದರಲ್ಲಿ ಪ್ರೀತಿ.
    Click to comment

    Leave a Reply

    Your email address will not be published. Required fields are marked *

    LATEST NEWS

    ಆಳ್ವಾಸ್ ನಲ್ಲಿ ವೇಯ್ಟ್ ಲಿಫ್ಟಿಂಗ್ ತರಬೇತಿ ಕೇಂದ್ರ ಉದ್ಘಾಟನೆ

    Published

    on

    ಮೂಡುಬಿದಿರೆ: ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ(ರಿ)ದ ವತಿಯಿಂದ ವಿದ್ಯಾಗಿರಿಯ ಶ್ರೀಮತಿ ಮೋಹಿನಿ ಅಪ್ಪಾಜಿ ನಾಯಕ್ ಸಭಾಂಗಣದಲ್ಲಿ ನಿರ್ಮಾಣಗೊಂಡಿರುವ ಕೀರ್ತಿಶೇಷ ಲೋಕನಾಥ ಬೋಳಾರ್ ವೆಯ್ಟ್ ಲಿಫ್ಟಿಂಗ್ ತರಬೇತಿ ಕೇಂದ್ರವು ಸೋಮವಾರ ಉದ್ಘಾಟನೆಗೊಂಡಿತು.

    ಕೇಂದ್ರವನ್ನು ಅರ್ಜುನ ಪ್ರಶಸ್ತಿ ಪುರಸ್ಕೃತ ಒಲಂಪಿಯನ್ ಸತೀಶ್ ರೈ ಅವರು ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು, ಜೀವನದಲ್ಲಿ ನಿರ್ದಿಷ್ಟ ಗುರಿ ಮತ್ತು ಸ್ಪಷ್ಟತೆ ಇರಲಿ. ಭವಿಷ್ಯದ ಗುರಿಯನ್ನು ಈಡೇರಿಸಲು ಇಂದೇ ಶ್ರಮವಹಿಸಿ ಹೆಜ್ಜೆ ಇಡಬೇಕು. ಪ್ರತಿ ಕ್ರೀಡಾಪಟುವಿನಲ್ಲೂ ಶಿಸ್ತು, ಸಂಯಮ, ಸಮಯಪಾಲನೆ ಅತ್ಯವಶ್ಯಕ. ಕ್ರೀಡಾ ಮನೋಭಾವದಿಂದ ಕ್ರೀಡೆ, ಸಂಸ್ಥೆ ಹಾಗೂ ದೇಶಕ್ಕೂ ಹೆಮ್ಮೆಯ ವಿದ್ಯಾರ್ಥಿಗಳಾಬೇಕು ಎಂದು ನುಡಿದರು.

    ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ. ಎಂ. ಮೋಹನ ಆಳ್ವ ಅವರು ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿ, ಪ್ರತಿಯೊಬ್ಬರಲ್ಲೂ ಇಚ್ಛಾ ಶಕ್ತಿ ಇದ್ದೆ ಇರುತ್ತದೆ. ಅದನ್ನು ಸರಿಯಾದ ರೀತಿಯಲ್ಲಿ ವಿನಿಯೋಗಿಸಿಕೊಂಡರೆ ಉತ್ತಮ ಪ್ರಜೆಗಳಾಗಲು ಸಾಧ್ಯ ಎಂದು ನುಡಿದರು.

    ಮಾಜಿ ಸಚಿವ ಕೆ. ಅಭಯಚಂದ್ರ ಜೈನ್ ಅವರು ಉಪಸ್ಥಿತರಿದ್ದು ಮಾತನಾಡಿದರು. ಲೋಕನಾಥ ಬೋಳಾರ್ ಅವರ ಪತ್ನಿ ಡಾ. ದೇವಿ, ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯದ ವಿಶ್ರಾಂತ ಕುಲಪತಿ ಡಾ ಎಸ್. ರಮಾನಂದ ಶೆಟ್ಟಿ, ಉದ್ಯಮಿ ಕಿಶೋರ್ ಶೆಟ್ಟಿ, ವೇಯ್ಟ್ ಲಿಫ್ಟಿಂಗ್ ಅಸೋಸಿಯೇಷನ್ ಅಧ್ಯಕ್ಷ ಆಲ್ವಿನ್ ಪಿಂಟೊ, ಯುವಜನ ಮತ್ತು ಕ್ರೀಡಾ ಇಲಾಖೆಯ ಉಪನಿರ್ದೇಶಕ ಪ್ರದೀಪ್ ಡಿ ಸೋಜಾ, ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ವ್ಯವಸ್ಥಾಪಕ ಟ್ರಸ್ಟಿ ವಿವೇಕ್ ಆಳ್ವ ಉಪಸ್ಥಿತರಿದ್ದರು.

    Continue Reading

    LATEST NEWS

    ಸುಳ್ಯ: ಶಂಕಿತ ಇಲಿ ಜ್ವರಕ್ಕೆ ಯುವಕ ಮೃತ್ಯು

    Published

    on

    ಸುಳ್ಯ: ಶಂಕಿತ ಇಲಿ ಜ್ವರಕ್ಕೆ ತುತ್ತಾಗಿ ಯುವಕನೋರ್ವ ಸಾವನ್ನಪ್ಪಿರುವ ಘಟನೆ ಜಾಲ್ಸೂರು ಗ್ರಾಮದ ಸೋಣಂಗೇರಿಯ ಸುಡಿಂಕಿರಿ ಮೂಲೆಯಲ್ಲಿ ನಡೆದಿದೆ.

    ಸುಡಿಂಕಿರಿ ಮೂಲೆಯ ಚಂದ್ರಶೇಖರ (36)ರವರು ಶಂಕಿತ ಜ್ವರದ ಹಿನ್ನಲೆ ಕಳೆದ 1 ವಾರದಿಂದ ಮಂಗಳೂರಿನ ಆಸ್ಪತ್ರೆಯಲ್ಲಿ ದಾಖಲಾಗಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಸೋಮವಾರ ಸಾವನ್ನಪ್ಪಿದ್ದಾರೆ. ಮೃತರಿಗೆ ತಂದೆ, ತಾಯಿ, ತಂಗಿ ಇದ್ದಾರೆ.

    Continue Reading

    DAKSHINA KANNADA

    WATCH : ಓವರ್ ಟೇಕ್ ಮಾಡಲು ಹೋಗಿ ಬೈಕ್ ಗಳ ನಡುವೆ ಅಪಘಾ*ತ; ಭ*ಯಾನಕ ವೀಡಿಯೋ ವೈರಲ್

    Published

    on

    ಬೆಳ್ತಂಗಡಿ : ಗುರುವಾಯನ ಕೆರೆಯ ಬಳಿ ಇರುವ ಶೆಣೈ ಹೊಟೇಲ್ ಮುಂಭಾಗದಲ್ಲಿ ಎರಡು ಬೈಕ್ ನಡುವೆ ಅಪಘಾ*ತ ಸಂಭವಿಸಿದೆ.  ಓವರ್ ಟೇಕ್ ಮಾಡಲು ಹೋಗಿ ಈ ದುರಂ*ತ ನಡೆದಿದೆ.

    ಘಟನೆಯಲ್ಲಿ ಇಬ್ಬರಿಗೆ ಗಾ*ಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಅಪಘಾ*ತದ ದೃಶ್ಯ ಸಿಸಿ ಟಿವಿಯಲ್ಲಿ ಸೆರೆಯಾಗಿದೆ.

     

    Continue Reading

    LATEST NEWS

    Trending