ಬಾಂಬರ್ ಆದಿತ್ಯನ ಸ್ಪೋಟಕ ಸುದ್ದಿಯನ್ನು ಬಹಿರಂಗಗೊಳಿಸಿದ ಡಾ. ಹರ್ಷ
ಬಾಂಬರ್ ಆದಿತ್ಯನ ಸ್ಪೋಟಕ ಸುದ್ದಿಯನ್ನು ಬಹಿರಂಗಗೊಳಿಸಿದ ಡಾ. ಹರ್ಷ
ಬಾಂಬರ್ ಆದಿತ್ಯನ ಸ್ಪೋಟಕ ಸುದ್ದಿಗಳನ್ನು ಮಂಗಳೂರು ಕಮಿಷನರ್ ಡಾ.ಪಿ.ಎಸ್ ಹರ್ಷ ಬಹಿರಂಗಗೊಳಿಸಿದ್ದಾರೆ.ಮಂಗಳೂರಿನಲ್ಲಿ ಕರೆದ ಸುದ್ದಿಗೋಷ್ಟಿಯಲ್ಲಿ ಆದಿತ್ಯ ರಾವ್ ಬಗ್ಗೆ ಸಮಗ್ರ ಮಾಹಿತಿಯನ್ನು ನೀಡಿದ್ದಾರೆ.
ಆರೋಪಿ ಆದಿತ್ಯ ರಾವ್ ಬಹಳಷ್ಟು ಮಾಹಿತಿಗಳನ್ನು ಬಾಯ್ಬಿಟ್ಟಿದ್ದಾನೆ. ಐಸಿಐಸಿಐ, ಎಚ್ ಡಿ ಎಫ್ ಸಿ, ಬಿಲ್ಲಾ ಗ್ರೂಪ್, ಇನ್ಯೂರೆನ್ಸ್ ಕಂಪನಿಯಲ್ಲಿ ಈತ ಕೆಲಸ ಮಾಡಿದ್ದಾನೆ.ಕೋಣೆಯೊಳಗೆ ಕೆಲಸ ಮಾಡಲು ಒಲ್ಲದ ಆದಿತ್ಯ ಆಗಾಗ ಕೆಲಸ ಬದಲಾಯಿಸ್ತಿದ್ದು ಬೆಂಗಳೂರಿನ ಪೀಣ್ಯ ಆಟೋ ಮೊಬೈಲ್ ಕಂಪನಿಯಲ್ಲೂ ಕೆಲಸ ಮಾಡಿದ್ದಾಗಿ ಪೊಲೀಸ್ ಆಯುಕ್ತರು ಮಾಹಿತಿ ನೀಡಿದ್ದಾರೆ.
ಬಿಡದಿಯಲ್ಲಿ ಟೊಯೋಟೊ ಕಂಪನಿಯಲ್ಲೂ ಕೆಲಸ ಮಾಡಿಕೊಂಡಿದ್ದ ಆದಿತ್ಯ ವೈಟ್ ಕಾಲರ್ ಜಾಬ್ ಬೇಡ ಎಂದು ಸೆಕ್ಯುರಿಟಿ ಗಾರ್ಡ್ ಆಗಿಯೂ ಮೂಡಬಿದ್ರೆಯ ಶಿಕ್ಷಣ ಸಂಸ್ಥೆಯೊಂದರಲ್ಲಿ, ಬೆಳ್ತಂಗಡಿ- ಮಣಿಪಾಲ ಎಂಐಟಿ ಕಾಲೇಜು ನಲ್ಲಿ ಸೆಕ್ಯೂರಿಟಿ ಗಾರ್ಡ್ ಕೆಲಸನೂ ಆದಿತ್ಯ ಮಾಡಿಕೊಂಡಿದ್ದ.2015-16ರಲ್ಲಿ ಉಡುಪಿ ಮಣಿಪಾಲದ ಆಶ್ಲೇಷ ಬಾರ್ ನಲ್ಲಿ ಕೆಲಸ ಮಾಡಿಕೊಂಡಿದ್ದ ಆದಿತ್ಯ ಊಟ, ವಸತಿ, ಸಂಬಳದ ಒತ್ತಡ ಇಲ್ಲ ಅಂತ ಇಲ್ಲಿ ಹೋಟೆಲ್ ಕೆಲಸಕ್ಕೂ ಸೇರಿಕೊಂಡಿದ್ದ. ಕೃಷ್ಣ ಗಾರ್ಡನ್, ಗೋಕುಲ ಗಾರ್ಡನ್ ಹೋಟೆಲ್, ಎಂಟಿ ಆರ್ , ಡಾಮಿನೋಸ್ ಪಿಜ್ಜಾ ದಲ್ಲೂ ಕೆಲಸ ಮಾಡಿದ್ದ ಎಂದು ಮಾಹಿ ನೀಡದ್ದಾರೆ.
2018ರಲ್ಲಿ ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಜಾಬ್ ಆಫರ್ ಗೊತ್ತಾಗಿ ಅಪ್ಲೈ ಮಾಡಿದ್ದ ಓವರ್ ಕ್ವಾಲಿಫೈಯ್ಡ್ ಅಂತ ಅಥ ಸಬೂಬು ಹೇಳಿದ್ದರಿಂದ ವಿಮಾನ ನಿಲ್ದಾಣ ಅಧಿಕಾರಿಗಳು ಲೀಗಲ್ ಅಫಿಡವಿಟ್ ಕೇಳಿ ಮನಸ್ಸಿಗೆ ಹರ್ಟ್ ಮಾಡಿದ್ದರು ಎಂದು ಭಾವಿಸಿ ವಿಮಾನ ನಿಲ್ದಾಣ ಅಧಿಕಾರಿಗಳ ಬೆನ್ನತ್ತಿ ಕಾಟ ಕೊಡಲಾರಂಭಿಸಿದ್ದ. 2018ರಲ್ಲಿ ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ಹುಸಿ ಕರೆನೂ ಮಾಡಿದ್ದ. ಮೂರು ಪ್ರಕರಣಗಳಲ್ಲಿ ಭಾಗಿಯಾಗಿರುವ ಆದಿತ್ಯ ಚಿಕ್ಕಬಳ್ಳಾಪುರ ಜೈಲಿನಲ್ಲಿ 1 ವರ್ಷ ಸಜೆ ಅನುಭವಿಸಿದ್ದ.
ಆದಿತ್ಯ ಏರ್ಪೋರ್ಟ್ ಅಧಿಕಾರಿಗಳಿಗೆ ಇನ್ನೂ ದೊಡ್ಡ ಮಟ್ಟದ ಕಿರುಕುಳ ನೀಡಲು ನಿರ್ಧರಿಸಿದ್ದ ಎಂದು ಪೊಲೀಸ್ ಅಯುಕ್ತರು ಮಾಹಿತಿ ನೀಡಿದ್ದಾರೆ. ಬ್ರಿಲಿಯಂಟ್ ಆಗಿರುವ ಆದಿತ್ಯ ಸ್ಪೋಟಕ, ಬಾಂಬ್ ತಯಾರಿ ಬಗ್ಗೆ ವಿವರ ತಿಳ್ಕೊಂಡಿದ್ದಾನೆ. ತಿಂಗಳಾನುಗಟ್ಟಲೆ ಬಾಂಬ್ ಬಗ್ಗೆ ಅಧ್ಯಯನ ಮಾಡಿದ್ದಾನೆ.ಟ್ಯುಟೋರಿಯಲ್ ತರದಷ್ಟು ಮಾಹಿತಿ ಪೊಲೀಸರಿಗೆ ಕೊಟ್ಟಿದ್ದಾನೆ. ಸುಧಾರಿತ ಸ್ಪೋಟಕ ಮಾಡಲು ತಯಾರು ಮಾಡಿಕೊಂಡಿದ್ದ.ಎಲ್ಲ ರಾಸಾಯನಿಕಗಳನ್ನು ತರಿಸಿಕೊಂಡು ಬಾಂಬ್ ತಯಾರಿ ಮಾಡಿದ್ದ.ಮಂಗಳೂರಿನ ಹೊಟೇಲಿನಲ್ಲಿ ಕೆಲಸಕ್ಕಿದ್ದು ರಜೆಯಲ್ಲಿ ಬಾಂಬ್ ತಯಾರಿ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದ, ಕಾರ್ಕಳದ ಕಿಂಗ್ಸ್ ಕೋರ್ಟ್ ಹೊಟೇಲಿನಲ್ಲಿ ಕೊನೆಯ ಬಾರಿಗೆ ಕೆಲಸ ಮಾಡಿದ್ದ ಆದಿತ್ಯ ಅಲ್ಲಿಯೇ ಬಾಂಬ್ ಫೈನಲ್ ಟಚ್ ಮಾಡಿ ಮಂಗಳೂರಿಗೆ ತಂದಿದ್ದ ಎಂಬ ಸ್ಪೋಟಕ ಮಾಹಿತಿಯನ್ನು ಡಾ. ಹರ್ಷ ಅವರು ನೀಡಿದ್ದಾರೆ.ಇಂದು ಕೋರ್ಟಿಗೆ ಹಾಜರುಪಡಿಸಿ ಕಸ್ಟಡಿ ಪಡೆಯುತ್ತೇವೆ. ಉಗ್ರರ ಮೇಲೆ ಹಾಕುವ ಕಠಿಣ ಸೆಕ್ಷನ್ ಹಾಕಿದ್ದೇವೆ.ಡಿವೈಸ್ ಬ್ಯಾಗ್ ತನ್ನ ಬಳಿ ಇರಿಸಿಕೊಂಡಿದ್ದಾನೆ. ಟೈಮರ್ ಡಿವೈಸ್ ಇದೆಯೆಂದು ಹೇಳಿಕೊಂಡಿದ್ದಾನೆ. ದೊಡ್ಡ ಮಟ್ಟದ ಸ್ಫೋಟಕ್ಕೆ ಪ್ಲಾನ್ ಮಾಡಿ ಕೊಂಡಿದ್ದ ದೇಶದ ಆಂತರಿಕ ಭದ್ರತೆಗೆ ತಲೆನೋವಾಗಿದ್ದ. ಆತನ ಜೊತೆ ಯಾರೂ ಇರಲಿಲ್ಲ.ತಂತ್ರಜ್ಞಾನ ಓದಿರುವುದರಿಂದ ಒಬ್ಬನೇ ಕೃತ್ಯ ಮಾಡಿದ್ದ. ಜಸ್ಟ್ ಡಯಲ್, ಯೂಟ್ಯೂಬ್ ನೋಡಿ ಮಾಹಿತಿ ಸಂಗ್ರಹಿಸಿದ್ದ ಎಂದು ಡಾ. ಹರ್ಷ ಅವರು ಹೇಳಿದರು.
DAKSHINA KANNADA
ಕೋಟಿ ಗಾಯತ್ರಿ ಯಾಗ: ಸೆ. 29ರಂದು ಚಿತ್ರಾಪುರ ಮಠದಲ್ಲಿ ಸಂಕಲ್ಪ ದಿನ
ಮಂಗಳೂರು : ಅಖಿಲ ಭಾರತ ಬ್ರಾಹ್ಮಣ ಮಹಾಸಭಾ ವತಿಯಿಂದ ಅಕ್ಟೋಬರ್ 26 ಮತ್ತು 27ರಂದು ನಡೆಯಲಿರುವ ಕೋಟಿ ಗಾಯತ್ರಿ ಯಾಗದ ಪೂರ್ವಭಾವಿಯಾಗಿ ಸೆ. 29ರ ಭಾನುವಾರ ಮುಂಜಾನೆ ಸಂಕಲ್ಪ ದಿನವನ್ನು ಮಂಗಳೂರಿನ ಚಿತ್ರಾಪುರ ಮಠದಲ್ಲಿ ನಡೆಲು ಉದ್ದೇಶಿಸಲಾಗಿದೆ ಎಂದು ಪ್ರಧಾನ ಸಂಚಾಲಕ ಶ್ರೀಧರ ಹೊಳ್ಳ ಹೇಳಿದರು. ಚಿತ್ರಾಪುರ ಮಠದಲ್ಲಿ ನಡೆದ ಬ್ರಾಹ್ಮಣ ಸಮುದಾಯದ ಸಮಸ್ತರ ಸಭೆಯಲ್ಲಿ ಕೋಟಿ ಗಾಯತ್ರಿ ಯಾಗದ ಯಶಸ್ವಿಗಾಗಿ ನಾನಾ ಸಮಿತಿಗಳನ್ನು ರಚನೆಯ ಬಗ್ಗೆ ಚರ್ಚಿಸಿ ನಿರ್ಣಯಿದ ಬಳಿಕ ನಡೆದ ಸಭೆಯಲ್ಲಿ ಮಾತನಾಡಿದರು.
ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ಬ್ರಾಹ್ಮಣ ಸಮುದಾಯವು ಈಗಾಗಲೇ ಗಾಯತ್ರಿ ಯಜ್ಞದ ಪೂರ್ವಭಾವಿಯಾಗಿ ಜಪದ ಸಂಕಲ್ಪ ಮಾಡಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಹೊರಭಾಗದಲ್ಲಿರುವ ಜಿಲ್ಲೆಯ ಬ್ರಾಹ್ಮಣರು ಕೂಡಾ ಹೆಸರು ನೋಂದಾಯಿಸಿಕೊಳ್ಳುತ್ತಿದ್ದಾರೆ. ಇನ್ನೂ ಹೆಚ್ಚಿನ ಮಂದಿ ಹೆಸರು ನೋಂದಾಯಿಸುವ ನಿಟ್ಟಿನಲ್ಲಿ ಪ್ರೇರೇಪಿಸುವ ಕೆಲಸವಾಗಬೇಕು ಎಂದರು. ಬ್ರಾಹ್ಮಣ ಸಮಾಜದ ಎಲ್ಲಾ ಬಾಂಧವರು ಒಂದೇ ಸೂರಿನಡಿ ಸೇರಿಸಿ, ಹೊರ ಜಗತ್ತಿಗೆ ಬ್ರಾಹ್ಮಣ ಎಂಬ ಸಂದೇಶ ಮುಟ್ಟಿಸುವಂತಾಗಬೇಕು. ಇದೊಂದು ವಿಶೇಷ ಕಾರ್ಯಕ್ರಮ ಈ ಕಾರ್ಯಕ್ರಮವು ಗಾಯತ್ರಿ ಸಂಗಮವಾಗಿದೆ. ’ಸಾಮರಸ್ಯದಿ ಜಗವ ಬೆಳಗುವ ಬ್ರಹ್ಮ ತೇಜದ ಬೆಳಕಲಿ’ ಶೀರ್ಷಿಕೆಯಡಿ ಜರಗಲಿದೆ. ಆದುದರಿಂದ ರಚನೆಯಾದ ಸಮಿತಿಯ ಸದಸ್ಯರು ಎಲ್ಲರೂ ಒಂದಾಗಿ ತಮ್ಮ ಮನೆ ಕಾರ್ಯಕ್ರಮ ಎಂಬ ರೀತಿಯಲ್ಲಿ ದುಡಿಯಬೇಕು. ಆ ಮೂಲಕ ಸಮಾಜಕ್ಕೆ ನಮ್ಮ ಒಗ್ಗಟ್ಟನ್ನು ತೋರಿಸಿಕೊಡಬೇಕು ಎಂದು ಸಮಿತಿಯ ಕಾರ್ಯಾಧ್ಯಕ್ಷ ನ್ಯಾಯವಾದಿ ಶ್ರೀ ಮಹೇಶ್ ಕಜೆ ಹೇಳಿದರು.
ನಾನಾ ಸಮಿತಿಗಳ ಜವಾಬ್ದಾರಿ, ಹೋಮದ ರೂಪು ರೇಶೆ, ಹೋಮದ ಉದ್ದೇಶ, ಕಾರ್ಯಯೋಜನೆಯ ಕುರಿತು ಮಾಹಿತಿ ನೀಡಿದ ವಿದ್ವಾನ್ ಕಶೆಕೋಡಿ ಸೂರ್ಯನಾರಾಯಣ ಭಟ್ ಸಾಂದರ್ಭಿಕವಾಗಿ ಮಾತನಾಡಿದರು. ಅ. 26ರಂದು ಮಹಿಳೆಯರಿಗಾಗಿ ಮಾತೃ ಸಂಗಮ ಕಾರ್ಯಕ್ರಮ ಆಯೋಜಿಸಲಾಗಿದೆ. ಎಲ್ಲ ಮಾತೆಯರು ಈ ಸಂಗಮದಲ್ಲಿ ಭಾಗವಹಿಸಬೇಕು. ಮುಂದಿನ ದಿನಗಳಲ್ಲಿ ಈ ವೇದಿಕೆಯೇ ಇಡೀ ಸಮಾಜದ ಮುಖವಾಗಬೇಕು ಎಂಬ ಅಭಿಪ್ರಾಯ ವ್ಯಕ್ತವಾಯಿತು. ಈ ಹಿಂದೆ ಗಾಯತ್ರಿ ಯಾಗ ಮಾಡಿ ಅನುಭವ ಇರುವ ವಿದ್ವಾನ್ ಬಂದಗದ್ದೆ ನಾಗರಾಜ್ ಮಾತನಾಡಿ, ಗಾಯತ್ರಿ ಮಂತ್ರ ಅನುಷ್ಠಾನ ಮಾಡುವುದರಿಂದ ಸಿಗುವ ಲಾಭ, ಮಾನಸಿಕ ವಿಕಸನದ ಬಗ್ಗೆ ತಮ್ಮ ಅನುಭವವನ್ನು ಹಂಚಿಕೊಂಡರು.
ವಿದ್ವಾನ್ ಕಟೀಲಿನ ಶ್ರೀಹರಿ ನಾರಾಯಣದಾಸ ಆಸ್ರಣ್ಣ ಮಾತನಾಡಿ, ಎಲ್ಲಾ ವಿಪ್ರ ಸಮಾಜ ಬಾಂಧವರು ಒಟ್ಟು ಸೇರಿ ಈ ಯಜ್ಞ ಕಾರ್ಯದಲ್ಲಿ ಭಾಗಿಗಳಾಗೋಣ, ಪ್ರತಿಯೊಬ್ಬ ಬ್ರಾಹ್ಮಣನು ಸಹ ಕುಟುಂಬ ಸಹಿತ ಪಾಲ್ಗೊಳ್ಳಬೇಕು ಹಾಗೂ ಸೆ.೨೯ರ ಸಂಕಲ್ಪ ಕಾರ್ಯದಲ್ಲಿ ಕನಿಷ್ಠ ೫೦೦ ಜನ ಬಾಂಧವರು ಸೇರಬೇಕು ಎಂದರು. ಬ್ರಾಹ್ಮಣ ಮಹಾಸಭಾ ಸುರತ್ಕಲ್ನ ಗೌರವಾಧ್ಯಕ್ಷ ಪಿ. ಪುರುಷೋತ್ತಮ ರಾವ್ ಇದು ನಮ್ಮೆಲ್ಲರ ಕಾರ್ಯಕ್ರಮ ಪ್ರತಿಯೊಬ್ಬರು ತಾನು ಮನ ಧನಗಳಿಂದ ಸಾಹಕರಿಸೋಣ ಎಂದರು.
ವಿವಿಧ ಬ್ರಾಹ್ಮಣ ಸಮಾಜದ ಪ್ರಮುಖರಾದ ಕರ್ಗಿ ಶ್ರೀನಿವಾಸ ಅಚಾರ್, ಶ್ರೀನಿವಾಸ್ ಚಿತ್ರಾಪುರ, ಸುರೇಶ್ ರಾವ್ ಚಿತ್ರಾಪುರ, ಶ್ರೀಕರ ದಾಮ್ಲೆ, ಎಂ.ಟಿ. ಭಟ್, ಉದಯ ಕುಮಾರ್, ಉದಯ ಕುಮಾರ್ ಸುರತ್ಕಲ್, ಕಾತ್ಯಾಯಿನಿ ರಾವ್, ಶೋಭಾ ಚಿತ್ರಾಪುರ, ಸಾವಿತ್ರಿ ಹೆಚ್ ಭಟ್, ಹೊಸಬೆಟ್ಟು, ರಮಾ.ವಿ ರಾವ್, ಯಮುನಾ ಪಿ ರಾವ್, ಎಂ ಸದಾಶಿವ ಕುಳಾಯಿ, ಪ್ರಕಾಶ್ ಕೋಟೆಕಾರ್, ಜಯಪ್ರಕಾಶ್ ಹೆಬ್ಬಾರ್, ಜಯರಾಮ್ ಭಟ್, ಸುಬ್ರಹ್ಮಣ್ಯ ವಿ ಭಟ್, ಗೋಪಾಲಕೃಷ್ಣ ಮಯ್ಯ, ಜ್ಯೋತಿಷಿ ರಂಗ ಐತಾಳ್ ಕದ್ರಿ, ವಿದ್ವಾನ್ ಸತ್ಯಕೃಷ್ಣ ಭಟ್ ಮೊದಲಾದ ಪ್ರಮುಖರು ಉಪಸ್ಥಿತರಿದ್ದರು.
LATEST NEWS
ಪೋಕ್ಸೋ ಪ್ರಕರಣ: ಖ್ಯಾತ ಜ್ಯೋತಿಷಿ ಬಂಧನ
ಸುಳ್ಯ: ತಾಲೂಕಿನ ಬೆಳ್ಳಾರೆಯ ಪೊಲೀಸರು ಪೋಕ್ಸೋ ಪ್ರಕರಣಕ್ಕೆ ಸಂಬಂಧಿಸಿದಂತೆ ಖ್ಯಾತ ಜ್ಯೋತಿಷಿಯೊಬ್ಬನನ್ನು ಬಂಧಿಸಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯ ಹಲವು ಕಡೆಯಲ್ಲಿ ಧಾರ್ಮಿಕ ಉಪನ್ಯಾಸದ ಜೊತೆಗೆ ಜ್ಯೋತಿಷ್ಯ ಶಾಸ್ತ್ರದ ಮೂಲಕ ಫೇಮಸ್ ಆಗಿದ್ದ ನರಸಿಂಹ ಪ್ರಸಾದ್ ಪಾಂಗಣೇಯ ಬಂಧಿತ ಆರೋಪಿ.
ಕಾಣಿಯೂರಿನ ಬೆಳಂದೂರು ನಿವಾಸಿಯಾಗಿರುವ ಈತನ ಮನೆಗೆ ಮುಂಜಾನೆಯ ವೇಳೆ ದಾಳಿ ಮಾಡಿದ ಪೊಲೀಸರು ಪ್ರಸಾದ್ ಪಾಂಗಣೇಯನನ್ನು ಬಂಧಿಸಿದ್ದಾರೆ. ಮಂಗಳೂರಿನಲ್ಲಿ ಬಾಲಕಿಯೊಬ್ಬಳ ಕೌನ್ಸಿಲಿಂಗ್ ವೇಳೆ ಸಿಕ್ಕ ಮಾಹಿತಿಯ ಆಧಾರದಲ್ಲಿ ಈ ಬಂಧನ ಆಗಿದೆ ಎಂಬ ಮಾಹಿತಿ ದೊರೆತಿದೆ.
LATEST NEWS
ಗೌರವಧನ ಸರಿಯಾಗಿ ನೀಡದೇ ಇದ್ದಲ್ಲಿ ಕೆಲಸ ಸ್ಥಗಿತ: ಅಂಗನವಾಡಿ ಕಾರ್ಯಕರ್ತೆಯರಿಂದ ಎಚ್ಚರಿಕೆ
ಉಡುಪಿ: ವಿವಿಧ ಬೇಡಿಕೆಗಳನ್ನು ಈಡೇರಿಸಿ ಅಂತ ಆಗ್ರಹಿಸಿ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರು ಪ್ರತಿಭಟನೆ ನಡೆಸಿದ್ದಾರೆ.
ಉಡುಪಿ ಜಿಲ್ಲೆಯ ಅಂಗನವಾಡಿ ಕಾರ್ಯಕರ್ತರೆಯರು ಹಾಗೂ ಸಹಾಯಕಿಯರು ಈ ಪ್ರತಿಭಟನೆ ನಡೆಸಿದ್ದಾರೆ. ಮಣಿಪಾಲದ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿ ತಮ್ಮ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿದ್ದಾರೆ.
ಪ್ರಮುಖವಾಗಿ ಗೌರವಧನವನ್ನು ಪ್ರತಿ ತಿಂಗಳ ಸರಿಯಾಗಿ ಪಾವತಿ ಮಾಡಬೇಕು ಹಾಗೂ ಮೊಟ್ಟೆ ವಿತರಣೆಗೆ ತಗಲುವ ಖರ್ಚನ್ನು ಮುಂಚಿತವಾಗಿ ನೀಡಬೇಕು ಮತ್ತು ಮಾರುಕಟ್ಟೆ ದರದಲ್ಲಿ ಏರಿಳಿತಕ್ಕೆ ತಕ್ಕಂತೆ ಮೊಟ್ಟದರವನ್ನು ನಿಗದಿ ಪಡಿಸಬೇಕು ಎಂದು ಒತ್ತಾಯಿಸಿದ್ದಾರೆ.
ನಮ್ಮನ್ನು ದುಡಿಸಿಕೊಳ್ಳೂತ್ತಿರುವ ಸರ್ಕಾರ ನಮಗೆ ಸಾಮಾಜಿಕ ಮತ್ತು ಆರ್ಥಿಕ ಭದ್ರತೆಯನ್ನು ನೀಡದೆ ಶೋಷಣೆ ಮಾಡುತ್ತಿದೆ ಎಂದು ಆರೋಪಿಸಿದ್ದಾರೆ. ಈ ವೇಳೆ ಮಾತನಾಡಿದ ಸಂಘದ ಜಿಲ್ಲಾಧ್ಯಕ್ಷೆ ಫಿಲೋಮಿನಾ ಫೆರ್ನಾಂಡಿಸ್ ಸರ್ಕಾರ ಸೂಕ್ತವಾಗಿ ಸ್ಪಂಧಿಸದೇ ಇದ್ದಲ್ಲಿ ಕೆಲಸ ಸ್ಥಗಿತಗೊಳಿಸುವುದಾಗಿ ಎಚ್ಚರಿಸಿದ್ದಾರೆ.
- DAKSHINA KANNADA7 days ago
ಫುಟ್ ಬೋರ್ಡ್ನಲ್ಲಿ ನೇತಾಡಿ ಪ್ರಯಾಣಿಸಿದ ವಿದ್ಯಾರ್ಥಿಗಳು; ಬಸ್ ಸೀಝ್
- LATEST NEWS4 days ago
ಆಪಲ್ ಮೊಬೈಲ್ ವಿರುದ್ಧ ಗ್ರಾಹಕರ ಪ್ರತಿಭಟನೆ
- International news4 days ago
ಖಾಸಗಿ ಬಾಹ್ಯಾಕಾಶ ನಡಿಗೆ ಯಶಸ್ವಿ; ಸುರಕ್ಷಿತವಾಗಿ ಭೂಮಿಗೆ ಮರಳಿದ ಗಗನಯಾತ್ರಿಗಳು
- BELTHANGADY7 days ago
ಬೆಳ್ತಂಗಡಿ: ತಂದೆ ತೀರ್ಪುಗಾರ… ಮಗಳಿಗೆ ಪ್ರಥಮ ಸ್ಥಾನ