Connect with us

    DAKSHINA KANNADA

    ಸಹಕಾರ ರತ್ನ ಡಾ.M.N ರಾಜೇಂದ್ರ ಕುಮಾರ್ ಅವರಿಗೆ ‘ಮೈಲ್‌ಸ್ಟೋನ್ ಗ್ಲೋಬಲ್ ಅವಾರ್ಡ್’

    Published

    on

    ಮಂಗಳೂರು: ಮೈಲ್‌ಸ್ಟೋನ್ ಗ್ಲೋಬಲ್ ಅಚೀವರ್ಸ್ ಫೋರಮ್ ಲಖನೌ ನೀಡುವ ಇಂಟರ್‌ನ್ಯಾಶನಲ್ ವರ್ಲ್ಡ್ ” ಮೈಲ್‌ಸ್ಟೋನ್ ಗ್ಲೋಬಲ್ ಅವಾರ್ಡ್ ” ಗೆ ಸಹಕಾರ ರಂಗದ ಸಾಧಕ, ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಅಧ್ಯಕ್ಷ ಡಾ.ಎಂ.ಎನ್.ರಾಜೇಂದ್ರ ಕುಮಾರ್ ಅವರು ಭಾಜನರಾಗಿದ್ದಾರೆ.


    ಮೈಲ್‌ಸ್ಟೋನ್ ಗ್ಲೋಬಲ್ ಅಚೀವರ್ಸ್ ಫೋರಮ್ ಈ ಬಾರಿ ಅಂತಾರಾಷ್ಟ್ರೀಯ ಮಟ್ಟದಲ್ಲಿ ವಿವಿಧ ಕ್ಷೇತ್ರಗಳ ಸಾಧಕರನ್ನು ಗುರುತಿಸಿ ಈ ಪ್ರತಿಷ್ಠಿತ ಪ್ರಶಸ್ತಿಗೆ ಆಯ್ಕೆ ಮಾಡಿದ್ದು , ಡಾ.ಎಂ.ಎನ್. ರಾಜೇಂದ್ರ ಕುಮಾರ್ ಅವರನ್ನು.

    ಸಹಕಾರಿ ಬ್ಯಾಂಕಿಂಗ್ ಕ್ಷೇತ್ರದಲ್ಲಿ ಗೈದ ಅಪೂರ್ವ ಸಾಧನೆಗೆ ಈ ಪ್ರಶಸ್ತಿ ಬಂದಿದೆ.
    ದುಬೈಯ ಭಾಯಿ ಅಜ್ಮಾನ್ ಪ್ಯಾಲೇಸ್ ಹೋಟೆಲ್ ಸಭಾಂಗಣದಲ್ಲಿ ನಾಳೆ ಮತ್ತು ಜೂನ್ -15ರಂದು ಎರಡು ದಿನಗಳ ಮೈಲ್‌ಸ್ಟೋನ್ ಗ್ಲೋಬಲ್ ಕಾನ್‌ಕ್ಲೇವ್ ಇಂಟರ್ ನ್ಯಾಶನಲ್ ಸೆಮಿನರ್ ನಡೆಯಲಿದೆ.

    ಜೂನ್ -14ರಂದು ನಡೆಯುವ ಇಂಟರ್ ನ್ಯಾಶನಲ್ ಸೆಮಿನರ್ ನಲ್ಲಿ ಡಾ.ಎಂ.ಎನ್.ರಾಜೇಂದ್ರ ಕುಮಾರ್ ಅವರು ‘ಮಹಿಳಾ ಸಬಲೀಕರಣ’ ವಿಷಯದ ಬಗ್ಗೆ ಮಾತನಾಡಲಿದ್ದಾರೆ.

    ಸ್ವ ಸಹಾಯ ಸಂಘಗಳ ಮೂಲಕ ವಿಶೇಷವಾಗಿ ಮಹಿಳೆಯರು ಆರ್ಥಿಕ ಸ್ವಾವಲಂಬನೆ ಮೂಲಕ ಗೈದ ಯಶೋಗಾಥೆಯ ಕುರಿತು ರಾಜೇಂದ್ರ ಕುಮಾರ್ ತಮ್ಮ ಅಭಿಪ್ರಾಯವನ್ನು ಇಂಟರ್ ನ್ಯಾಶನಲ್ ಸೆಮಿನರ್ ನಲ್ಲಿ ಮಂಡಿಸಲಿದ್ದಾರೆ.

    ಜೂನ್ -15ರಂದು ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದ್ದು ಡಾ. ಎಂ.ಎನ್.ರಾಜೇಂದ್ರ ಕುಮಾರ್ ಮೈಲ್‌ಸ್ಟೋನ್ ಗ್ಲೋಬಲ್ ಅವಾರ್ಡ್ ನ್ನು ಸ್ವೀಕರಿಸಲಿದ್ದಾರೆ. ಕಳೆದ ಒಂದು ತಿಂಗಳ ಅವಧಿಯಲ್ಲಿ ರಾಜೇಂದ್ರ ಕುಮಾರ್ ಅವರಿಗೆ ಇದು ನಾಲ್ಕನೆಯ ಪ್ರಶಸ್ತಿ.

    ಭಾರತ ಸರಕಾರದ ಪಿಂಚಣಿ ನಿಧಿ ನಿಯಂತ್ರಣ ಮತ್ತು ಅಭಿವೃದ್ಧಿ ಪ್ರಾಧಿಕಾರ ಹೊಸದೆಹಲಿ ಇದರ ವತಿಯಿಂದ ಅಟಲ್ ಪಿಂಚಣಿ ಯೋಜನೆಯ ಸಮಗ್ರ ಅನುಷ್ಠಾನಕ್ಕಾಗಿ ” ಎಪಿವೈ ರಾಷ್ಟ್ರೀಯ ಪ್ರಶಸ್ತಿ ” , ಹೊಸದೆಹಲಿಯ ಇನ್ ಸ್ಟಿಟ್ಯೂಟ್ ಆಫ್ ಎಕನಾಮಿಕ್ಸ್ ಸ್ಟಡೀಸ್ ವತಿಯಿಂದ ” ಔಟ್ ಸ್ಟ್ಯಾಂಡಿಂಗ್ ಲೀಡರ್ ಶಿಪ್ ಅವಾರ್ಡ್ ” , ಗ್ಲೋಬಲ್ ಲೀಡರ್ಸ್ ಫೌಂಡೇಶನ್ ಹೊಸದಿಲ್ಲಿ ಇದರ ವತಿಯಿಂದ ” ಮೋಸ್ಟ್ ಇನ್ನೋವೇಟೀವ್ ಬಿಸಿನೆಸ್ ಅವಾರ್ಡ್ ” ರಾಜೇಂದ್ರ ಕುಮಾರ್ ಅವರಿಗೆ ಈಗಾಗಲೇ ಸಂದಿದೆ.

    ಇದೀಗ ರಾಜೇಂದ್ರ ಕುಮಾರ್ ಆಯ್ಕೆಗೊಂಡಿರುವ” ಮೈಲ್‌ಸ್ಟೋನ್ ಗ್ಲೋಬಲ್ ಅವಾರ್ಡ್ ” ಜಾಗತಿಕ ಸಾಧಕರ ಗುರುತಿಸುವಿಕೆಯ ಪ್ರಶಸ್ತಿ ಆಗಿದೆ.

    ಪ್ರಪಂಚದಾದ್ಯಂತ ಸಾಮಾಜಿಕ ಮತ್ತು ಆರ್ಥಿಕ ಅಭಿವೃದ್ಧಿಯಲ್ಲಿ ಕಾರ್ಪೊರೇಟ್ ವಲಯ ಹೇಗೆ ಕೆಲಸ ಮಾಡುತ್ತಿದೆ ಎನ್ನುವ ನೆಟ್‌ವರ್ಕಿಂಗ್ ನಿಂದ ಮೈಲ್‌ಸ್ಟೋನ್ ಗ್ಲೋಬಲ್ ಅಚೀವರ್ಸ್ ಫೋರಮ್‌ ಈ ಪ್ರತಿಷ್ಠಿತ ಪ್ರಶಸ್ತಿಗೆ ಸಾಧಕರನ್ನು ಆಯ್ಕೆ ಮಾಡಿಕೊಂಡಿದೆ.

    DAKSHINA KANNADA

    ಕುಳಾಯಿ ಜೆಟ್ಟಿಯ ಬ್ರೇಕ್ ವಾಟರ್ ಮರು ವಿನ್ಯಾಸಕ್ಕೆ ಶಾಸಕ ಡಾ.ಭರತ್ ಶೆಟ್ಟಿ ವೈ ಮನವಿ

    Published

    on

    ಕುಳಾಯಿ : ಮಂಗಳೂರು ನಗರ ಉತ್ತರ ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯ ಕುಳಾಯಿಯಲ್ಲಿ ನಿರ್ಮಾಣಗೊಳ್ಳುತ್ತಿರುವ ಮೀನುಗಾರಿಕಾ ಬಂದರಿನ ವಿನ್ಯಾಸವನ್ನು ಪರಿಷ್ಕರಿಸಿ ಸರ್ವ ಋತು ಬಂದರು ಹಾಗೂ ಸುರಕ್ಷತೆಯ ಮೀನುಗಾರಿಕೆಗೆ ಅವಕಾಶ ಕಲ್ಪಿಸಬೇಕು ಎಂದು ಶಾಸಕ ಡಾ.ಭರತ್ ಶೆಟ್ಟಿ ವೈ ಅವರು ಮೀನುಗಾರಿಕಾ ಸಚಿವ ಮಂಕಾಳ್ ವೈದ್ಯ ಅವರಿಗೆ ಮನವಿ ಸಲ್ಲಿಸಿದರು.


    ಉತ್ತರದ ಬ್ರೇಕ್ ವಾಟರ್ 831 ಮೀಟ‌ರ್ ಮತ್ತು ದಕ್ಷಿಣದ ಬ್ರೇಕ್ ವಾಟರ್ 262 ಮೀಟರ್ ಮಾಡಲಾಗುತ್ತಿದೆ. ಇದು ಸುರಕ್ಷತೆಯ ಮೀನುಗಾರಿಕೆಗೆ ಪೂರಕವಾಗಿಲ್ಲ. ಸಮುದ್ರದ ನೀರಿನ ರಭಸವನ್ನು ಪರಿಣಾಮಕಾರಿಯಾಗಿ ತಡೆಯಲು ಸಾಧ್ಯವಾಗದೆ ನಾಡದೋಣಿ ಮೀನುಗಾರರಿಗೆ ತಮ್ಮ ದೋಣಿಯನ್ನು ದಡಕ್ಕೆ ತರಲು ಪೂರಕ ವಾತಾವರಣವಿಲ್ಲ.

    ಇದನ್ನೂ ಓದಿ : WATCH : ಸೀಟಿಗಾಗಿ ಕಿಟಕಿಯಿಂದ ಬಸ್ ಹತ್ತಿದ ವಿದ್ಯಾರ್ಥಿ! ಆಮೇಲೇನಾಯ್ತು ಗೊತ್ತಾ!?
    ಪ್ರಸ್ತುತ ಇರುವ ಉತ್ತರದ ಬ್ರೇಕ್ ವಾಟೆರ್‌ನ ಉದ್ದವನ್ನು 831 ರಿಂದ ಸರಾರಸರಿ 250 ಮೀಟರ್ ಹೆಚ್ಚಿಸಿ ಒಟ್ಟು ಉದ್ದ 1081 ಮೀಟರ್‌ಗೆ ನಿಗದಿಪಡಿಸಿ, ದಕ್ಷಿಣದ ಬ್ರೇಕ್ ವಾಟರ್ ಉದ್ದ 262 ಮೀಟರ್‌ನಿಂದ 719 ಮೀಟರ್ ಹೆಚ್ಚಿಸಿ ಒಟ್ಟು ಉದ್ದ 981(ಅಳಿವೆ ಬಾಗಿಲಿನ ಅಗಲ ಅಂತರ 100 ಮೀಟರ್ ಮಾತ್ರ ಇರುವಂತೆ) ವಿನ್ಯಾಸವನ್ನು ಮರು ವಿನ್ಯಾಸಗೊಳಿಸಿ ಕಾಮಗಾರಿ ನಡೆಸಬೇಕು ಎಂದು ಮನವಿ ಮಾಡಿದ್ದಾರೆ. ಈ ವೇಳೆ ಉಡುಪಿ ಶಾಸಕ ಯಶಪಾಲ್ ಸುವರ್ಣ ಉಪಸ್ಥಿತರಿದ್ದರು.

    Continue Reading

    DAKSHINA KANNADA

    ವಿದೇಶಿ ಹಡಗಿನಲ್ಲಿ ಬೆಂಕಿ ಅವಘಡ; ಕರ್ನಾಟಕ ಕರಾವಳಿಯಲ್ಲಿ ಲಂಗರು ಹಾಕಿದ ಕಾರ್ಗೋ ಹಡಗು

    Published

    on

    ಮಂಗಳೂರು: ಗುಜರಾತ್‌ನಿಂದ ಕೊಲಂಬೋಕ್ಕೆ ವಿವಿಧ ಸರಕುಗಳನ್ನು ಸಾಗಾಟ ಮಾಡುತ್ತಿದ್ದ ವಿದೇಶಿ ಮೂಲದ ಸರಕು ಸಾಗಾಟ ಹಡಗಿನಲ್ಲಿ ಅಗ್ನಿ ಆಕಸ್ಮಿಕ ನಡೆದ ಘಟನೆ ಬೆಳಕಿಗೆ ಬಂದಿದೆ.

     

     

    ಜುಲೈ 19 ರಂದು ಕರ್ನಾಟಕ ಕರಾವಳಿಯ ಸಮುದ್ರದಲ್ಲಿ ಈ ದುರ್ಘಟನೆ ನಡೆದಿದ್ದು, ಕೋಸ್ಟ್‌ ಗಾರ್ಡ್‌ ತಂಡ ಹೆಲಿಕಾಪ್ಟರ್‌ ಹಾಗೂ ರಕ್ಷಣಾ ಹಡಗಿನ ಮೂಲಕ ಸತತ ನಲುವತ್ತು ಘಂಟೆಗಳ ಕಾರ್ಯಾಚರಣೆ ನಡೆಸಿ ಬೆಂಕಿ ನಂದಿಸಿದೆ. ಹಡಗಿನಲ್ಲಿ ಒಟ್ಟು 21 ಸಿಬ್ಬಂದಿ ಇದ್ದು ಒಬ್ಬ ನಾಪತ್ತೆಯಾಗಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ.

    ಹಡಗಿನ ಬೆಂಕಿ ನಂದಿಸಿ ಸಿಬ್ಬಂದಿಗಳ ರಕ್ಷಣೆ ಮಾಡಿದ ಬಳಿಕ ಹಡಗನ್ನು ಕರ್ನಾಟಕ ಕರಾವಳಿ ಭಾಗಕ್ಕೆ ತೆಗೆದುಕೊಂಡು ಬರಲಾಗಿದೆ. ಸದ್ಯ ಸುರತ್ಕಲ್ ಕಡಲ ಕಿನಾರೆಯಿಂದ ಸುಮಾರು 33 ನಾಟಿಕಲ್ ಮೈಲ್‌ ದೂರದಲ್ಲಿ ಹಡಗು ಲಂಗರು ಹಾಕಲಾಗಿದೆ. ಗುಜಾರಾತ್‌ನ ಮುಂದ್ರಾ ಬಂದರಿನಿಂದ ಹೊರಟಿದ್ದ ಈ ಹಡಗು ಪನಾಮ ದೇಶಕ್ಕೆ ಸೇರಿದ್ದಾಗಿ ಮಾಹಿತಿ ಲಭ್ಯವಾಗಿದೆ.

    ಬೆಂಕಿ ಅವಘಡದಿಂದ ಸಂಪೂರ್ಣ ಹಾನಿಯಾಗಿರುವ ಹಡಗು ಅಪಾಯಕಾರಿ ಪರಿಸ್ಥಿತಿಯಲ್ಲಿದ್ದು, ಕೋಸ್ಟ್‌ ಗಾರ್ಡ್‌ ಸಿಬ್ಬಂದಿ ಹಡಗಿನ ಮೇಲೆ ನಿಗಾ ಇರಿಸಿದ್ದಾರೆ. ಹಡಗು ಮುಳುಗಡೆಯಾಗುವ ಸಾದ್ಯತೆಯ ಜೊತೆಗೆ ಹಡಗಿನಲ್ಲಿ ಮತ್ತೆ ಬೆಂಕಿ ಕಾಣಿಸಿಕೊಳ್ಳುವ ಸಂಭವ ಕೂಡಾ ಇದೆ. ಹೀಗಾಗಿ ಹಡಗು ಮುಳುಗಡೆಯಾದಲ್ಲಿ ಸಮುದ್ರಕ್ಕೆ ತೈಲ ಸೋರಿಕೆಯ ಆತಂಕ ಕೂಡಾ ಎದುರಾಗಿದೆ. ಹೀಗಾಗಿ ಹಡಗಿನ ಮೇಲೆ ನಿಗಾ ವಹಿಸಿರುವ ಕೋಸ್ಟ್‌ ಗಾರ್ಡ್‌ ಮುನ್ನೆಚ್ಚರಿಕಾ ಕ್ರಮ ಕೈಗೊಂಡಿದೆ.

    Continue Reading

    DAKSHINA KANNADA

    ದಕ್ಷಿಣ ಕನ್ನಡ ಜಿಲ್ಲೆಯ ಮಹಾಪ್ರವಾಹಕ್ಕೆ 50 ವರ್ಷ; ಮರುಕಳಿಸದಿರಲಿ ‘ಆ ಶುಕ್ರವಾರ’ ಎನ್ನುತ್ತಿದ್ದಾರೆ ಕರಾವಳಿಗರು!

    Published

    on

    ಮಂಗಳೂರು: 1974 ಜುಲೈ 26ರ ಶುಕ್ರವಾರ ರಾತ್ರಿ ಇಡೀ ಸುರಿದ ಭಾರೀ ಮಳೆ ಮುಂಜಾನೆಯ ವೇಳೆಗೆ ನೆರೆ ರೌದ್ರಾವತಾರ ತಾಳಿತ್ತು.

    ಹಿಂದೆ ಎಂದೂ ಕಾಣದ ರೀತಿ ನೇತ್ರಾವತಿ ನದಿ ಉಕ್ಕಿ ಹರಿದಿತ್ತು. ನಸುಕಿನ ಜಾವ ನೇತ್ರಾವತಿ ನದಿ ಮನೆಯೊಳಗೆಯೇ ಪ್ರವೇಶಿಸಿತ್ತು.

    ಬಂಟ್ವಾಳ ಪೇಟೆ, ಪಕ್ಕದೂರುಗಳಿಗೆ ಸಂಪರ್ಕಿಸುವ ರಸ್ತೆಗಳೆಲ್ಲವೂ ಕ್ಷಣಮಾತ್ರದಲ್ಲೆ ಜಲಮಯ. ಎಲ್ಲಿಗೆ ಹೋಗೋದು? ಏನು ಮಾಡೋದು ಅನ್ನೋದನ್ನು ಯೋಚಿಸುವಷ್ಟರಲ್ಲೇ ಊರಿಗೆ ಊರೇ ಮುಳುಗಿತ್ತು. ಬಂಟ್ವಾಳ ಮತ್ತು ಉಪ್ಪಿನಂಗಡಿ ಪೇಟೆಯಲ್ಲಿ ವಾಹನಗಳ ಬದಲು ದೋಣಿಗಳು ಸಂಚರಿಸಿದ್ದವು. ಆ ಕಾಲದಲ್ಲಿಯೇ ಐವತ್ತು ಲಕ್ಷ ರೂಪಾಯಿ ನಷ್ಟ ಉಂಟಾಗಿತ್ತು.

    ಆ ಸಮಯದಲ್ಲಿ ಜಿಲ್ಲೆಯ ಬಹುತೇಕ ಪ್ರದೇಶಗಳು ನೆರೆ ನೀರಿನಿಂದ ಆವರಿಸಿದ್ದವು, ಆವತ್ತಿನ ಕಾಲದಲ್ಲಿ ಮಣ್ಣಿನಿಂದ ನಿರ್ಮಿಸಿದ್ದ ನೂರಾರು ಮನೆ ಅಂಗಡಿ ನೆರೆ ನೀರಿಗೆ ಕೊಚ್ಚಿಕೊಂಡು ಹೋಗಿದ್ದವು. ಈಗಲೂ ಕೂಡಾ ಆ ಭೀಕರ ನೆರೆಯು ನಮ್ಮ ಹಿರಿಯರ ಬಾಯಲ್ಲಿ (ಎಲ್ಪತ್ತ ನಾಲೆತ್ತ ಬೊಲ್ಲ) ಎಂದು ಪ್ರಖ್ಯಾತಿ ಹೊಂದಿದೆ.

    ಕಾಕತಾಳೀಯ ಎಂಬಂತೇ ಪ್ರವಾಹದ ಆ ದಿನ, ವಾರ ಎಲ್ಲವೂ ಸೇಮ್ ಆಗಿದ್ದು, ಮತ್ತೆ ಅದೇ ರೀತಿಯ ಪ್ರವಾಹ ಪರಿಸ್ಥಿತಿಯೂ ನೇತ್ರಾವತಿ ತಟದಲ್ಲಿದೆ. ಈಗಾಗಲೇ ನೇತ್ರಾವತಿ ಅಪಾಯ ಮಟ್ಟ ಮೀರಿದ್ದು, ಈ ಆತಂಕಕ್ಕೆ ಕಾರಣವೂ ಆಗಿದೆ.

    Continue Reading

    LATEST NEWS

    Trending