ನೂತನ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಆಯುಕ್ತರಾಗಿ ಬೆಂಗಳೂರಿನಲ್ಲಿ ಡಾ. ಪಿ.ಎಸ್ ಹರ್ಷ ಅಧಿಕಾರ ಸ್ವೀಕಾರ..
ಬೆಂಗಳೂರು: ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಆಯುಕ್ತರಾಗಿ ಮಂಗಳೂರು ಪೊಲೀಸ್ ಕಮಿಷನರ್ ಆಗಿದ್ದ ಹಿರಿಯ ಐಪಿಎಸ್ ಅಧಿಕಾರಿ ಡಾ. ಪಿ.ಎಸ್.ಹರ್ಷ ಇಂದು (ಜೂನ್ 29) ಅಧಿಕಾರ ಸ್ವೀಕರಿಸಿದ್ದಾರೆ.
ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೂಗುಚ್ಚ ನೀಡಿ ಹರ್ಷಗೆ ಸ್ವಾಗತ ಕೋರಿದರು. ಹರ್ಷ ಈ ಹಿಂದೆಯೂ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಆಯುಕ್ತರಾಗಿ ಸೇವೆ ಸಲ್ಲಿಸಿದ್ದರು.
ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ನಿರ್ಗಮನ ಆಯುಕ್ತರಾದ ಎಸ್.ಎನ್ ಸಿದ್ದರಾಮಪ್ಪ ಅವರು ಡಾ. ಪಿ.ಎಸ್. ಹರ್ಷ ಅವರಿಗೆ ಅಧಿಕಾರ ಹಸ್ತಾಂತರಿಸಿ ಶುಭ ಹಾರೈಸಿದರು.
ಇನ್ನು ಎಸ್.ಎನ್ ಸಿದ್ದರಾಮಪ್ಪ ಅವರು ಸಿಐಡಿಯ ಆರ್ಥಿಕ ಅಪರಾಧಗಳ ವಿಭಾಗದ ಡೆಪ್ಯುಟಿ ಇನ್ಸ್‌ಪೆಕ್ಟರ್ ಜನರಲ್ ಆಫ್ ಪೊಲೀಸ್ ಆಗಿ ಅಧಿಕಾರ ಸ್ವೀಕರಿಸಿದ್ದಾರೆ.
ಇನ್ನು ಮಂಗಳೂರು ನಗರ ಕಮಿಷನರೇಟ್ ವ್ಯಾಪ್ತಿಯ ನೂತನ ಕಮಿಷನರ್ ಆಗಿ ವಿಕಾಸ್ ಕುಮಾರ್ ವಿಕಾಸ್ ಅಧಿಕಾರ ಸ್ವೀಕರಿಸಿದ್ದಾರೆ.