Home ಪ್ರಮುಖ ಸುದ್ದಿ ಡಾ. ರಾಜೇಶ್ವರಿ ದೇವಿ ಕೊನೆಗೂ ವೆನ್ಲಾಕ್‌ನಿಂದ ಎತ್ತಂಗಡಿ..! 

ಡಾ. ರಾಜೇಶ್ವರಿ ದೇವಿ ಕೊನೆಗೂ ವೆನ್ಲಾಕ್‌ನಿಂದ ಎತ್ತಂಗಡಿ..! 

ಡಾ. ರಾಜೇಶ್ವರಿ ದೇವಿ ಕೊನೆಗೂ ವೆನ್ಲಾಕ್‌ನಿಂದ ಎತ್ತಂಗಡಿ..! 

ಮಂಗಳೂರು : ವೆನ್ಲಾಕ್ ಆಸ್ಪತ್ರೆ ಡಿ.ಎಂ.ಓ ಡಾ.ರಾಜೇಶ್ವರಿದೇವಿಯನ್ನು ಸರ್ಕಾರ ಕೊನೇಗೂ ವರ್ಗಾವಣೆ ಮಾಡಿದೆ.
ಬಂಟ್ವಾಳ ತಾಲೂಕು ಆಸ್ಪತ್ರೆ ಮುಖ್ಯ ವೈದ್ಯಾಧಿಕಾರಿಯಾಗಿ ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಬಂಟ್ವಾಳ ತಾಲೂಕು ಆಸ್ಪತ್ರೆ ಮುಖ್ಯ ವೈದ್ಯಾಧಿಕಾರಿಯಾಗಿದ್ದ ಡಾ.ಸದಾಶಿವ ಅವರನ್ನು ವೆನ್ಲಾಕ್ ನ ಮುಖ್ಯ ಡಿ.ಎಂ.ಓ ಆಗಿ ನೇಮಕ ಮಾಡಲಾಗಿದೆ.

ಕೊರೋನಾ ಸೋಂಕಿತರ ವಿಷಯದಲ್ಲಿ ನಿರ್ಲಕ್ಷ್ಯ ವಹಿಸಿದ್ದ ಆರೋಪದಲ್ಲಿ ಡಾ. ರಾಜೇಶ್ವರಿ ದೇವಿಯನ್ನು ವರ್ಗಾವಣೆ ಮಾಡಲಾಗಿದೆ ಎಂದು ತಿಳಿದು ಬಂದಿದ್ದು ,ಸಾರ್ವಜನಿಕ ಹಿತದೃಷ್ಟಿಯಿಂದ ವರ್ಗಾವಣೆ ಅಂತಾ ನಮೂದಿಸಲಾಗಿದೆ.

ದಕ್ಷಿಣ ಕನ್ನಡದಲ್ಲಿ ಮಹಾಮಾರಿ ಕೊರೋನಾ ಸೋಂಕು ಹರಡುತ್ತಿರುವ ಹಿನ್ನೆಲೆಯಲ್ಲಿ ವೆನ್ಲಾಕ್‌ ಆಸ್ಪತ್ರೆಯನ್ನು ಕೊರೋನಾ ಆಸ್ಪತ್ರೆಯನ್ನಾಗಿ ಮಾರ್ಪಾಡು ಗೊಳಿಸಿದ ರಾಜ್ಯ ಸರ್ಕಾರ ಹಿರಿಯ ದಕ್ಷ ಅಧಿಕಾರಿ ಪೊನ್ನುರಾಜ್‌ ಅವರನ್ನು ನೇಮಕ ಮಾಡಿದ ಕೆಲವೇ ಗಂಟೆಗಳಲ್ಲಿ ಡಾ, ರಾಜೇಶ್ವರಿ ದೇವಿಯ ಎತ್ತಂಗಡಿ ಆಗಿದೆ.

ಕಳೆದ ಏಳು ವರ್ಷಗಳಂದ ರಾಜೇಶ್ವರಿ ದೇವಿ ವೆನ್ಲಾಕ್‌ ಆಸ್ಪತ್ರೆಯ ಅಧಿಕ್ಷಕಿಯಾಗಿದ್ದರು.

ಕೋರೋನಾ ಚಿಕಿತ್ಸೆ ಸಂಬಂಧ ಇತ್ತೀಚೆಗೆ ವೆನ್ಲಾಕ್ ಆಸ್ಪತ್ರೆಯ ಎನ್ನಲಾಗಿದ್ದ ಆಡಿಯೋ ಒಂದು ಭಾರಿ ಸುದ್ದಿ ಆಗಿ ಡಾ . ರಾಜೇಶ್ವರಿ ದೇವಿ ಚರ್ಚೆಗೆ ಗ್ರಾಸವಾಗಿದ್ದರು.ಕೊರೋನಾ ರೋಗಿಗಳ ಬಗ್ಗೆ ನಿರ್ಲಕ್ಷ್ಯ ತೋರಿದ್ದರು ಎಂದು ಆಡಿಯೋದಲ್ಲಿ ನಮೂದು ಆಗಿತ್ತು.

- Advertisment -

RECENT NEWS

ಕೇರಳ-ಕರ್ನಾಟಕ ಬಾರ್ಡರ್ ಸಮಸ್ಯೆ ಪರಿಹಾರಕ್ಕೆ ಪತ್ರದ ಮೂಲಕ ದೇವೇಗೌಡ ಮನವಿ

ಕೇರಳ-ಕರ್ನಾಟಕ ಬಾರ್ಡರ್ ಸಮಸ್ಯೆ ಪರಿಹಾರಕ್ಕೆ ಪತ್ರದ ಮೂಲಕ ದೇವೇಗೌಡ ಮನವಿ ಮಂಗಳೂರು: ಸದ್ಯ ಕೊರೊನಾ ವೈರಸ್ ಹಿನ್ನಲೆ ಕೇರಳ ಹಾಗೂ ಕರ್ನಾಟಕ ಗಡಿ ಸಮಸ್ಯೆ ತಾರಕಕ್ಕೇರಿದ್ದು, ಇದೀಗ ಈ ಸಮಸ್ಯೆ ಪರಿಹರಿಸಲು ಮಾಜಿ ಪ್ರಧಾನಿ...

ಎಂಅರ್ ಜಿ ಗ್ರೂಪ್ ನ‌ ಕೆ.ಪ್ರಕಾಶ್ ಶೆಟ್ಟಿಯರಿಂದ 1 ಕೋಟಿ.ರೂ.ವೆಚ್ಚದ ದಿನಸಿ ಕಿಟ್ ವಿತರಣೆ

ಎಂಅರ್ ಜಿ ಗ್ರೂಪ್ ನ‌ ಕೆ.ಪ್ರಕಾಶ್ ಶೆಟ್ಟಿಯರಿಂದ 1 ಕೋಟಿ.ರೂ.ವೆಚ್ಚದ ದಿನಸಿ ಕಿಟ್ ವಿತರಣೆ ಮಂಗಳೂರು: ಎಮ್ ರ್ ಜಿ ಗ್ರೂಪ್ ನ ಆಡಳಿತ ನಿರ್ದೇಶಕ ಕೊರಂಗ್ರಪಾಡಿ ಪ್ರಕಾಶ್ ಶೆಟ್ಟಿ ಅವರ ಉದಾರ ದಾನವಾಗಿ...

ಕೊರೊನಾ ವಿರುದ್ದದ ಸಮರಕ್ಕೆ ತನ್ನ ಪಾಕೆಟ್‌ ಮನಿಯನ್ನೇ ದೇಣಿಗೆ ನೀಡಿದ 5 ವರ್ಷದ ಬಾಲಕ..!

ಕೊರೊನಾ ವಿರುದ್ದದ ಸಮರಕ್ಕೆ ತನ್ನ ಪಾಕೆಟ್‌ ಮನಿಯನ್ನೇ ದೇಣಿಗೆ ನೀಡಿದ 5 ವರ್ಷದ ಬಾಲಕ..! ಮಂಗಳೂರು : ಇಂದು ಐದು ವರ್ಷದ ಬಾಲಕನೊಬ್ಬ ಸಿಎಂ ಪರಿಹಾರ ನಿಧಿಗೆ ತನ್ನ ಪಾಕೆಟ್ ಮನಿಯನ್ನೇ ದೇಣಿಗೆ ನೀಡಿ...

ದೆಹಲಿ ತಬ್ಲಿಘಿ ಜಮಾತ್ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ 11 ಮಂದಿಗೆ ಕೊರೊನಾ ಪಾಸಿಟಿವ್

ತಬ್ಲಿಘಿ ಜಮಾತ್ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ 11 ಮಂದಿಗೆ ಕೊರೊನಾ ಪಾಸಿಟಿವ್ ಬೀದರ್: ಬೀದರ್‌ನಲ್ಲಿ 11 ಮಂದಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಈ 11 ಮಂದಿಯೂ ತಬ್ಲಿಘಿ ಜಮಾತ್ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದವರಾಗಿದ್ದಾರೆ. ಬೀದರ್‌ನಿಂದ ದೆಹಲಿಗೆ ತೆರಳಿದ್ದ...