Wednesday, October 5, 2022

ಬಂಟ್ವಾಳ ನೂತನ ತಹಶೀಲ್ದಾರ್ ಆಗಿ ಡಾ. ಸ್ಮಿತಾ ರಾಮು ನೇಮಕ

ಬಂಟ್ವಾಳ: ಮಂಡ್ಯ ಜಿಲ್ಲೆಯ ಚುನಾವಣಾ ಶಾಖೆಯ ತಹಶೀಲ್ದಾರ್, 2015ನೇ ಬ್ಯಾಚ್‌ನ ಕೆಎಎಸ್ ಅಧಿಕಾರಿ ಡಾ. ಸ್ಮಿತಾ ರಾಮು ಅವರನ್ನು ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಹಶೀಲ್ದಾರ್ ಆಗಿ ನಿಯೋಜಿಸಿ ರಾಜ್ಯ ಸರಕಾರ ಆದೇಶ ನೀಡಿದೆ.

ಈ ಹಿಂದೆ ರಶ್ಮಿ ಎಸ್.ಆರ್.ಅವರು ಬಂಟ್ವಾಳ ತಹಶೀಲ್ದಾರ್ ಆಗಿದ್ದು, ಅವರನ್ನು ಹಿಂದುಳಿದ ವರ್ಗಗಳ ಇಲಾಖೆಯ ಜಿಲ್ಲಾ ಅಧಿಕಾರಿಯಾಗಿ ವರ್ಗಾವಣೆ ಮಾಡಿದ ಬಳಿಕ ಬಂಟ್ವಾಳ ತಹಶೀಲ್ದಾರ್ ಹುದ್ದೆ ಖಾಲಿಯಾಗಿತ್ತು.


ನಟ-ಮಾಜಿ ಸಚಿವ ದಿ. ಅಂಬರೀಶ್ ಅವರ ಕಟ್ಟಾ ಅಭಿಮಾನಿ, ಮಂಡ್ಯ ಜಿಲ್ಲೆಯ ಕೆರೆಗೋಡು ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಎಚ್.ಬಿ.ರಾಮು ಅವರ ಪುತ್ರಿಯಾಗಿರುವ ಡಾ. ಸ್ಮಿತಾ ಅವರು ಮೂಲದಲ್ಲಿ ದಂತ ವೈದ್ಯೆಯಾಗಿದ್ದಾರೆ.

ಮಂಗಳೂರಿನ ಯೆನೆಪೋಯ ದಂತ ವೈದ್ಯಕೀಯ ಕಾಲೇಜಿನಲ್ಲಿ ಬಿಡಿಎಸ್ ಪದವಿ ಪಡೆದಿರುವ ಅವರು ಬಳಿಕ ಸುಮಾರು 14 ವರ್ಷಗಳ ಕಾಲ ಮಂಡ್ಯ ಇನ್‌ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸ್‌ ನಲ್ಲಿ ವೈದ್ಯೆಯಾಗಿ ಕರ್ತವ್ಯ ನಿರ್ವಹಿಸಿದ್ದರು.

LEAVE A REPLY

Please enter your comment!
Please enter your name here

Hot Topics

ಎಲ್‌ಇಡಿ ಟಿ.ವಿ ಬ್ಲಾಸ್ಟ್‌..! : ಬಾಲಕ ಸಾವು-ಮನೆ ಗೋಡೆ ಕುಸಿತ

ಲಕ್ನೋ: ಎಲ್‌ಇಡಿ ಟಿ.ವಿ ಸ್ಪೋಟಗೊಂಡ ಪರಿಣಾಮ ಬಾಲಕನೊಬ್ಬ ಸಾವನಪ್ಪಿರುವ ಘಟನೆ ಉತ್ತರ ಪ್ರದೇಶದ ಗಾಜಿಯಾಬಾದ್‌ನಲ್ಲಿ ನಡೆದಿದೆ.ಮೃತ ಬಾಲಕನನ್ನು ಓಮೇಂದ್ರ (16) ಎಂದು ಗುರುತಿಸಲಾಗಿದೆ. ಮನೆಯಲ್ಲಿ ಟಿವಿ ನೋಡುತ್ತಿದ್ದ ಸಂದರ್ಭ ಎಲ್ ಐಡಿ ಟಿವಿ...

‘ಮಂಗಳೂರು ದಸರಾ’ ವೈಭವದ ಶೋಭಾಯಾತ್ರೆಗೆ ಕ್ಷಣಗಣನೆ ಆರಂಭ

ಮಂಗಳೂರು: ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ಶರನ್ನವರಾತ್ರಿ ಅಂಗವಾಗಿ ಕಳೆದ 9 ದಿನಗಳಿಂದ ಪೂಜಿಸಲ್ಪಟ್ಟ ಶಾರದೆ ಹಾಗೂ ನವ ದುರ್ಗೆಯರ ವೈಭವದ ಶೋಭಾ ಯಾತ್ರೆ ಇಂದು ಸಂಜೆ ನಡೆಯಲಿದೆ.ಸಂಜೆ 4 ಗಂಟೆಗೆ ಶಾರದಾ...

ಉಡುಪಿಯಲ್ಲಿ ಬೋನಿಗೆ ಬಿದ್ದ ಚಿರತೆ: ಮತ್ತೆ ಕಾಡಿಗೆ ಬಿಟ್ಟ ಅರಣ್ಯ ಸಿಬ್ಬಂದಿ

ಉಡುಪಿ: ಜಿಲ್ಲೆಯ ಮಟಪಾಡಿ ಗ್ರಾಮದಲ್ಲಿ ಊರಿನ ಜನರು ಅರಣ್ಯ ಇಲಾಖೆ ಮೂಲಕ ಇರಿಸಿದ್ದ ಬೋನಿಗೆ ಚಿರತೆ ಬಿದ್ದಿದೆ.ಮಟಪಾಡಿ ಗ್ರಾಮದಲ್ಲಿ ಬಹಳಷ್ಟು ದಿನಗಳಿಂದ ಚಿರತೆ ಹಾವಳಿ ಹೆಚ್ಚಾಗಿದ್ದರಿಂದ ಗ್ರಾಮಸ್ಥರು ಅರಣ್ಯ ಇಲಾಖೆ ಮೂಲಕ ಬೋನನ್ನು...