Connect with us

    ಕೊರೋನಾದ ಬಗ್ಗೆ ಉಡುಪಿಯಲ್ಲಿ ಕಟ್ಟೆಚ್ಚರ: ಡಿಎಚ್‍ಒ ಸೂಡ 

    Published

    on

    ಕೊರೋನಾದ ಬಗ್ಗೆ ಉಡುಪಿಯಲ್ಲಿ ಕಟ್ಟೆಚ್ಚರ: ಡಿಎಚ್‍ಒ ಸೂಡ 

    ಉಡುಪಿ: ಇಡೀ ವಿಶ್ವಕ್ಕೆ ಕಿಲ್ಲರ್ ಕೊರೊನಾ ವೈರಸ್ ಕಿರುಕುಳ ಕೊಡುತ್ತಿದ್ದರೆ, ಉಡುಪಿ ಜಿಲ್ಲೆಯಲ್ಲಿ ಫೇಕ್ ಆಫೀಸರ್ಸ್ ಹುಟ್ಟಿಕೊಂಡಿದ್ದಾರೆ. ನಾವು ಕೊರೊನಾ ವೈರಸ್ ಪತ್ತೆ ಮಾಡುವವರು ಮತ್ತು ಅಂಕಿ ಅಂಶವನ್ನು ಸಂಗ್ರಹ ಮಾಡುವವರು ಎಂದು ಉಡುಪಿ ನಗರದ ಕೆಲ ವಾರ್ಡ್ ಗಳ ಮನೆಗಳಿಗೆ ನಕಲಿ ಆಫೀಸರ್ ಗಳು ಹೋಗುತ್ತಿದ್ದಾರೆ.

    ಮನೆಗಳಿಗೆ ಬಂದು ನಾವು ಆರೋಗ್ಯ ಇಲಾಖೆಯಿಂದ ನೇಮಿಸಲ್ಪಟ್ಟ ಸಿಬ್ಬಂದಿ ಎಂದು ಸುಳ್ಳು ಹೇಳಿ ಜನರಿಂದ ಮಾಹಿತಿಯನ್ನು ಸಂಗ್ರಹ ಮಾಡುತ್ತಿದ್ದಾರೆ. ಉಡುಪಿ ಡಿಹೆಚ್‍ಒ ಡಾಕ್ಟರ್ ಸುಧೀರ್ ಚಂದ್ರ ಸೂರಿಗೂ ಈ ಬಗ್ಗೆ ದೂರುಗಳು ಬಂದಿದೆ. ಕೊರೊನಾ ತಪಾಸಣೆಯ ಹೆಸರಲ್ಲಿ ಅಪರಿಚಿತರಿಂದ ಮಾಹಿತಿ ಸಂಗ್ರಹ ಮಾಡುತ್ತಿದ್ದಾರೆ.

    ಅಪರಿಚಿತರು ಮನೆಗೆ ಬಂದ್ರೆ ಮಾಹಿತಿ ಕೊಡಬೇಡಿ. ಉಡುಪಿಯ ಬನ್ನಂಜೆಯಲ್ಲಿ ಆರೋಗ್ಯ ಇಲಾಖೆ ಕಾರ್ಯಕರ್ತರು ಅಂತ ಯಾರೋ ಬಂದಿದ್ರು. ಆರೋಗ್ಯ ಇಲಾಖೆಯ ಐಡಿ, ಧೃಡೀಕರಣ ಪತ್ರ ಇದ್ದರೆ ಮಾತ್ರ ಮಾಹಿತಿ ಕೊಡಿ ಎಂದರು.

    ನಮ್ಮ ಸಿಬ್ಬಂದಿ ಯೂನಿಫಾರ್ಮ್ ನಲ್ಲಿ ಇರುತ್ತಾರೆ. ಅಪರಿಚಿತರಿಗೆ ಯಾವ ಮಾಹಿತಿ ಕೊಡುವ ಅಗತ್ಯ ಇಲ್ಲ ಎಂದು ಡಿ.ಎಚ್.ಒ ಮಾಹಿತಿ ನೀಡಿದ್ದಾರೆ. ಇನ್ನು ಉಡುಪಿ ಜಿಲ್ಲೆಗೆ ಮಾರಾಣಾಂತಿಕ ಕೊರೋನಾ ಸೋಂಕು ಸುಳಿಯದಂತೆ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದ್ದೇವೆ. ಉಡುಪಿಯಲ್ಲಿ ಫೆಬ್ರವರಿ 29 ರಿಂದ ಕೊರೋನಾ ಬಗ್ಗೆ ನಿಗಾ ವಹಿಸಲಾಗಿದೆ.

    ವಿದೇಶದಿಂದ ಬಂದ 90 ಜನರ ಮೇಲೆ ನಿಗಾ ಇಟ್ಟಿದ್ದೇವೆ. ಕುವೈಟ್, ಜರ್ಮನಿ, ಇಸ್ರೇಲ್, ಇಟಲಿಯಿಂದ ಜಾಸ್ತಿ ಜನ ಬಂದಿದ್ದಾರೆ. ಅವರವರ ಮನೆಯಲ್ಲೇ ನಿಗಾ ವಹಿಸಿದ್ದೇವೆ. ಪ್ರತಿದಿನ ಕರೆ ಮಾಡಿ ಅವರನ್ನು ವಿಚಾರಣೆ ಮಾಡುತ್ತಿದ್ದೇವೆ. ಜಿಲ್ಲೆಯ 10 ಶಂಕಿತ ಕೇಸ್ ನೆಗೆಟಿವ್ ರಿಪೋರ್ಟ್ ಬಂದಿದೆ ಅಂತ ಹೇಳಿದರು.

     

    Click to comment

    Leave a Reply

    Your email address will not be published. Required fields are marked *

    LATEST NEWS

    ಯಕ್ಷಧ್ರುವ ಪಟ್ಲ ಫೌಂಡೇಶನ್ ದಶಮಾನೋತ್ಸವದ ಸಮಾಲೋಚನಾ ಸಭೆ

    Published

    on

    ಮಂಗಳೂರು: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಮಂಗಳೂರು ಇದರ ದಶಮಾನೋತ್ಸವದ ಕುರಿತು ಸಮಾಲೋಚನಾ ಸಭೆಯು ನಗರದ ಗೋಲ್ಡ್ ಫಿಂಚ್ ಹೋಟೆಲ್ ನಲ್ಲಿ ಜರುಗಿತು.

    ಸಭೆಯನ್ನು ಉದ್ದೇಶಿಸಿ ಮಾತಾಡಿದ ಎಂ.ಆರ್.ಜಿ. ಗ್ರೂಫ್ ಚೇರ್ ಮೆನ್ ಡಾ.ಕೆ.ಪ್ರಕಾಶ್ ಶೆಟ್ಟಿ ಅವರು, “ಕರಾವಳಿಗೆ ಮಾತ್ರ ಸೀಮಿತವಾಗಿದ್ದ ಯಕ್ಷಗಾನದ ಕಂಪನ್ನು ದೇಶ ವಿದೇಶಗಳಲ್ಲಿ ಪಸರಿಸುವಂತೆ ಮಾಡಿದ ಕೀರ್ತಿ ಪಟ್ಲ ಸತೀಶ್ ಶೆಟ್ಟಿಯವರದ್ದಾಗಿದೆ. ಯಕ್ಷಗಾನ ಕಲಾವಿದರಿಗೆ ಸದಾ ಬೆಂಬಲ ನೀಡುತ್ತಿರುವ ಪಟ್ಲರ ಕಾರ್ಯಕ್ರಮಕ್ಕೆ ನಾವೆಲ್ಲರೂ ಸಹಾಯ ಸಹಕಾರ ನೀಡಬೇಕು. ಜೂನ್ 1ರಂದು ನಡೆಯಲಿರುವ ದಶಮಾನೋತ್ಸವ ಕಾರ್ಯಕ್ರಮ ಅವಿಸ್ಮರಣೀಯವಾಗಿಸಲು ನಾವೆಲ್ಲರೂ ಒಗ್ಗೂಡಿ ದುಡಿಯಬೇಕು“ ಎಂದರು.

    ಟ್ರಸ್ಟ್ ನ ಮಹಾದಾನಿ, ಮುಂಬೈನ ಹೇರಂಭ ಇಂಡಸ್ಟ್ರಿಸ್ ಕಾರ್ಯ ನಿರ್ವಹಣಾಧಿಕಾರಿ ಕನ್ಯಾನ ಸದಾಶಿವ ಶೆಟ್ಟಿ ಮಾತಾಡಿ, “ನೂರಾರು ವರ್ಷಗಳ ಇತಿಹಾಸವಿರುವ ಯಕ್ಷಗಾನ ಕಲೆಗೆ ಕಳೆದ 10 ವರ್ಷಗಳಲ್ಲಿ ಪಟ್ಲ ಫೌಂಡೇಶನ್ ಟ್ರಸ್ಟ್ ಸ್ಥಾನಮಾನವನ್ನು ನೀಡಿದೆ. ನಮ್ಮೆಲ್ಲರನ್ನು ಒಗ್ಗೂಡಿಸಿಕೊಂಡು ಭಾಗವತ ಪಟ್ಲರು ಪ್ರತೀವರ್ಷ ಕಲಾವಿದರ ನೆರವಿಗಾಗಿ ಕಾರ್ಯಕ್ರಮ ಆಯೋಜನೆ ಮಾಡುತ್ತಿರುವುದು ಹೆಮ್ಮೆಯ ವಿಚಾರ. ಈ ಬಾರಿಯ ದಶಮಾನೋತ್ಸವ ಕಾರ್ಯಕ್ರಮಕ್ಕೆ ಪ್ರತ್ಯೇಕ ಕಮಿಟಿ ರಚಿಸಿಕೊಂಡು ಕೆಲಸ ಮಾಡಬೇಕು. ಈಗಿನ 9 ವರ್ಷಗಳಲ್ಲಿ ಮಾಡಿರುವ ಶ್ಲಾಘನೀಯ ಕಾರ್ಯ ಮುಂದೆಯೂ ನಡೆಯಲಿ“ ಎಂದರು.

    ಪ್ರಾಸ್ತಾವಿಕ ಮಾತನ್ನಾಡಿದ ಟ್ರಸ್ಟ್ ಪ್ರಧಾನ ಸಂಚಾಲಕ ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿ ಅವರು, “ಪಟ್ಲ ಫೌಂಡೇಶನ್ ನ ಕಳೆದ 9 ವರ್ಷಗಳ ಕಾರ್ಯಕ್ರಮಗಳಲ್ಲಿ ನಾನು ಪಾಲ್ಗೊಂಡಿದ್ದೇನೆ. ನನಗೆ ಕಟೀಲು ದೇವಿ ನೀಡಿರುವ ಅನುಗ್ರಹದಿಂದ ಸಾಧ್ಯವಾಗಿದೆ. ಸಮಾಜದ ಬಡವರ, ನೊಂದವರ ನೆರವಿಗಾಗಿ ಕಟೀಲು ಕ್ಷೇತ್ರದಲ್ಲಿ 9 ವರ್ಷಗಳ ಹಿಂದೆ ಪಟ್ಲ ಫೌಂಡೇಶನ್ ಸ್ಥಾಪನೆಯಾಯಿತು. ಕೇವಲ ಯಕ್ಷಗಾನ ಕಲಾವಿದರ ಹಿತರಕ್ಷಣೆಗಾಗಿ ಪ್ರಾರಂಭವಾಗಿದ್ದ ಈ ಸಂಘಟನೆಯು ಇಂದು ಸಮಾಜದ ಎಲ್ಲ ವರ್ಗದ ಜನರ ಕಣ್ಣೀರು ಒರೆಸುವಲ್ಲಿ ಯಶಸ್ವಿಯಾಗಿದೆ. ಟ್ರಸ್ಟ್ ದಶಮಾನೋತ್ಸವ ಕಾರ್ಯಕ್ರಮ ವಿಭಿನ್ನ ರೀತಿಯಲ್ಲಿ ನಡೆಯಬೇಕು. ಜನಮಾನಸದಲ್ಲಿ ಮರೆಯದ ರೀತಿಯಲ್ಲಿ ಸಮಾಜಮುಖಿ ಕಾರ್ಯಕ್ರಮ ಹಮ್ಮಿಕೊಳ್ಳುವ ಮೂಲಕ ಅರ್ಥಪೂರ್ಣವಾಗಿಸಬೇಕು“ ಎಂದರು.

    ಟ್ರಸ್ಟ್ ನ ಪ್ರಧಾನ ಸಂಚಾಲಕ ಶಶಿಧರ್ ಶೆಟ್ಟಿ ಬರೋಡ ಮಾತಾಡಿ, “ಪಟ್ಲ ಸತೀಶ್ ಶೆಟ್ಟಿಯವರು ಬಹಳಷ್ಟು ಕಷ್ಟಪಟ್ಟು ಯಕ್ಷಗಾನ ಕಲಾವಿದರಿಗಾಗಿ ಸಂಘಟನೆ ಕಟ್ಟಿದ್ದು ಅದೀಗ ದಶಮಾನೋತ್ಸವದ ಸಂಭ್ರಮದಲ್ಲಿದೆ. ಈ ಬಾರಿ ದಾನಿಗಳ ನೆರವಿನಿಂದ 10 ಕೋಟಿ ರೂ. ಒಟ್ಟುಮಾಡಿ ಅದನ್ನು ಎಫ್ ಡಿ ಇಟ್ಟು ಅದರಿಂದ ಬರುವ ಬಡ್ಡಿಯಲ್ಲಿ ಪ್ರತೀವರ್ಷ ಕಲಾವಿದರ ಅಭ್ಯುದಯಕ್ಕಾಗಿ ಕಾರ್ಯಕ್ರಮ ಆಯೋಜಿಸುವಂತಾಗಬೇಕು. ಇದಕ್ಕಾಗಿ ದಾನಿಗಳು ಒಂದೇ ಮನಸ್ಸಿನಿಂದ ಕೆಲಸ ಮಾಡಬೇಕು ಎಂದರು.

    ಯಕ್ಷಧ್ರುವ ಪಟ್ಲ ಫೌಂಡೇಶನ್ ಸಂಸ್ಥಾಪಕ ಪಟ್ಲ ಸತೀಶ್ ಶೆಟ್ಟಿಯವರು ಮಾತಾಡಿ, “ದಾನಿಗಳು ನೀಡಿರುವ ಸಹಕಾರದಿಂದ ನಮ್ಮ ಟ್ರಸ್ಟ್ ಯಶಸ್ವಿಯಾಗಿ ನಡೆಯುತ್ತಿದೆ. ಪಟ್ಲ ಟ್ರಸ್ಟ್ ನ ಯಕ್ಷ ಶಿಕ್ಷಣ ಅಭಿಯಾನದಡಿಯಲ್ಲಿ 6 ಜಿಲ್ಲೆಗಳ ಮಕ್ಕಳಿಗೆ ಕಳೆದ 4 ವರ್ಷಗಳಲ್ಲಿ ಸುಮಾರು 9000 ಮಕ್ಕಳಿಗೆ ಯಕ್ಷ ಶಿಕ್ಷಣ ನೀಡುತ್ತಿದೆ. ಇದೇ ತಿಂಗಳ 31ರಂದು 21 ಶಾಲೆಗಳ ಒಟ್ಟು 929 ಮಕ್ಕಳು ಬೆಳಗ್ಗೆ 9 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಒಡ್ಡೂರು ಫಾರ್ಮ್ ನಲ್ಲಿ ಯಕ್ಷಗಾನ ರಂಗಪ್ರವೇಶ ಮಾಡಲಿದ್ದಾರೆ. ಮಂಗಳೂರು ಉತ್ತರ ಕ್ಷೇತ್ರದ ಶಾಸಕ ಡಾ.ಭರತ್ ಶೆಟ್ಟಿ ವೈ. ಹಾಗೂ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಈ ಕಾರ್ಯಕ್ರಮದ ನೇತೃತ್ವವನ್ನು ವಹಿಸಲಿದ್ದಾರೆ“ ಎಂದರು.

    ಟ್ರಸ್ಟ್ ನ ಪುರುಷೋತ್ತಮ ಭಂಡಾರಿ ಅವರು ಮಾತಾಡಿ, “ಪಟ್ಲ ಫೌಂಡೇಶನ್ 9 ವರ್ಷಗಳಲ್ಲಿ ಟ್ರಸ್ಟ್ 15 ಕೋಟಿ ರೂ.ನಷ್ಟು ಹಣವನ್ನು ಕಲ್ಯಾಣ ಕಾರ್ಯಕ್ರಮಗಳಿಗೆ ವಿನಿಯೋಗ ಮಾಡಿದೆ. ಕನ್ಯಾನ ಸದಾಶಿವ ಶೆಟ್ಟಿಯವರು ಟ್ರಸ್ಟ್ ಗೌರವ ಅಧ್ಯಕ್ಷತೆಯನ್ನು ವಹಿಸಿಕೊಂಡ ಬಳಿಕ ದೇಶ ವಿದೇಶಗಳಲ್ಲಿ ಟ್ರಸ್ಟ್ ವಿಸ್ತರಿಸಿದೆ. ಶೀಘ್ರದಲ್ಲೇ ಕೆನಡಾ ಘಟಕ ಆರಂಭಗೊಳ್ಳಲಿದೆ“ ಎಂದರು.

    ವೇದಿಕೆಯಲ್ಲಿ ವಿಕೆ ಸಮೂಹ ಸಂಸ್ಥೆಗಳ ಸ್ಥಾಪಕ ಉದ್ಯಮಿ ಮಧ್ಯಗುತ್ತು ಕರುಣಾಕರ ಎಂ ಶೆಟ್ಟಿ, ತೋನ್ಸೆ ಆನಂದ ಶೆಟ್ಟಿ, ಬಿಲ್ಲಾಡಿ ಅಶೋಕ್ ಶೆಟ್ಟಿ, ಪೂನಾ ಬಂಟರ ಸಂಘದ ಅಧ್ಯಕ್ಷ ಸಂತೋಷ್ ಶೆಟ್ಟಿ, ಮುಂಬೈ ಹೋಟೆಲ್ ಉದ್ಯಮಿ ಕರ್ನಿರೆ ವಿಶ್ವನಾಥ್ ಶೆಟ್ಟಿ, ಸೀತಾರಾಮ್ ರೈ ಸವಣೂರು, ಪಟ್ಲ ಫೌಂಡೇಶನ್ ಟ್ರಸ್ಟ್ ನ ಕೋಶಾಧಿಕಾರಿ ಸಿಎ ಸುದೇಶ್ ಕುಮಾರ್ ಮತ್ತಿತರರು ಉಪಸ್ಥಿತರಿದ್ದರು. ಟ್ರಸ್ಟ್ ನ ಪ್ರಧಾನ ಕಾರ್ಯದರ್ಶಿ ಪುರುಷೋತ್ತಮ ಭಂಡಾರಿ ಅಡ್ಯಾರ್ ಕಾರ್ಯಕ್ರಮ‌ ನಿರ್ವಹಿಸಿದರು. ಸಂಘಟನಾ ಕಾರ್ಯದರ್ಶಿ ಕದ್ರಿ ನವನೀತ ಶೆಟ್ಟಿ ವಂದಿಸಿದರು.

    Continue Reading

    LATEST NEWS

    ಪತ್ನಿ, ಮಗುವನ್ನು ಕೊಂ*ದು ಪತಿ ಕ*ತ್ತು ಸೀ*ಳಿ ಆ*ತ್ಮಹ*ತ್ಯೆಗೆ ಯತ್ನ

    Published

    on

    ಮಂಗಳೂರು/ಗುಜರಾತ್ : ವ್ಯಕ್ತಿಯೊಬ್ಬ ಹೆಂಡತಿ, ಮಗುವನ್ನು ಕೊಂದು ಹೆತ್ತವರ ಮೇಲೆ ಹ*ಲ್ಲೆ ನಡೆಸಿ ತಾನೂ ಕ*ತ್ತು ಸೀ*ಳಿಕೊಂಡು ಆ*ತ್ಮಹ*ತ್ಯೆಗೆ ಯತ್ನಿಸಿರುವ ಘಟನೆ ಗುಜರಾತ್​ ಸೂರತ್‌ನ ಸರ್ತಾನಾ ಪ್ರದೇಶದಲ್ಲಿ ನಡೆದಿದ್ದು, ಈ ಭೀ*ಕರ ಸಾಮೂಹಿಕ ಹ*ತ್ಯೆ ಘಟನೆ ಇಡೀ ನಗರವನ್ನು ಬೆ*ಚ್ಚಿ ಬೀಳಿಸಿದೆ.

    ಸ್ಮಿತ್ ಜಿಯಾನಿ ಆರೋಪಿ ಎಂದು ಗುರುತಿಸಲಾಗಿದೆ.

    ಸ್ಮಿತ್ ತನ್ನ ಇಡೀ ಕುಟುಂಬಕ್ಕೆ ಚಾ*ಕುವಿನಿಂದ *ಹಲ್ಲೆ ನಡೆಸಿ, ಪತ್ನಿ ಮತ್ತು ಮಗುವನ್ನು ಕೊಂ*ದು, ಪೋಷಕರನ್ನು ಗಂ*ಭೀರವಾಗಿ ಗಾ*ಯಗೊಳಿಸಿದ್ದಾನೆ. ನಂತರ ತನ್ನ ಕು*ತ್ತಿಗೆಯನ್ನು ಸೀ*ಳಿಕೊಂಡು ತನ್ನ ಜೀವನವನ್ನು ಅಂ*ತ್ಯಗೊಳಿಸಲು ಪ್ರಯತ್ನಿಸಿದ್ದಾನೆ. ಸ್ಮಿತ್ ನ ಪೋಷಕರು ತಮ್ಮ ಗಾ*ಯಗಳಿಗೆ ಚಿಕಿತ್ಸೆ ಪಡೆಯುತ್ತಿದ್ದಾರೆ. ಪತ್ನಿ ಮತ್ತು ಮಗು ಸಾ*ವನ್ನಪ್ಪಿದ್ದಾರೆ. ಘಟನೆಯ ಕುರಿತು ಸಾರ್ಥನಾ ಪೊಲೀಸರು ತನಿಖೆ ಆರಂಭಿಸಿದ್ದು, ಈ ದು*ರಂತ ಕೃ*ತ್ಯಕ್ಕೆ ಕಾರಣವೇನು ಎಂಬುದರ ಕುರಿತು ತನಿಖೆ ನಡೆಸುತ್ತಿದ್ದಾರೆ.

    Continue Reading

    LATEST NEWS

    ಹುಬ್ಬಳ್ಳಿ ಸಿಲಿಂಡರ್ ಸ್ಪೋಟ ಕೇಸ್: ಮತ್ತೋರ್ವ ಅಯ್ಯಪ್ಪ ಮಾಲಾಧಾರಿ ಸಾವು, ಮೃತರ ಸಂಖ್ಯೆ 3ಕ್ಕೆ ಏರಿಕೆ

    Published

    on

    ಹುಬ್ಬಳ್ಳಿ: ನಗರದಲ್ಲಿ ಡಿ.22ರಂದು ನಡೆದಿದ್ದಂತ ಸಿಲಿಂಡರ್ ಸ್ಪೋಟ ಘಟನೆಯಲ್ಲಿ 9 ಅಯ್ಯಪ್ಪ ಮಾಲಾಧಾರಿಗಳು ಗಾಯಗೊಂಡು ಕಿಮ್ಸ್ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಾಗಿದ್ದರು. ಇವರಲ್ಲಿ ಈಗಾಗಲೇ ಇಬ್ಬರು ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದರು. ಇಂದು ಮತ್ತೋರ್ವ ಅಯ್ಯಪ್ಪ ಮಾಲಾಧಾರಿ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದು, ಸಾವಿನ ಸಂಖ್ಯೆ 3ಕ್ಕೆ ಏರಿಕೆಯಾಗಿದೆ.

    ಹುಬ್ಬಳ್ಳಿಯ ಸಾಯಿ ನಗರದ ಈಶ್ವರದೇವಸ್ಥಾನದಲ್ಲಿ ಅಡುಗೆ ಮಾಡುತ್ತಿದ್ದಂತ ಸಂದರ್ಭದಲ್ಲಿ ಡಿಸೆಂಬರ್.22ರಂದು ಸಿಲಿಂಡರ್ ಸ್ಪೋಟಗೊಂಡು 9 ಅಯ್ಯಪ್ಪ ಮಾಲಾಧಾರಿಗಳು ಗಾಯಗೊಂಡಿದ್ದರು. ಅವರನ್ನು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿತ್ತು. ಇವರಲ್ಲಿ ಈಗಾಗಲೇ ಇಬ್ಬರು ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾರೆ.

    ಇಂದು ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಂತ ಅಯ್ಯಪ್ಪ ಮಾಲಾಧಾರಿ ರಾಜು ಅರ್ಲಾಪೂರ ಎಂಬುವರು ಚಿಕಿತ್ಸೆ ಫಲಿಸದೇ ಕೊನೆಯುಸಿರೆಳೆದಿದ್ದಾರೆ. ಹೀಗಾಗಿ ಮೃತರ ಸಂಖ್ಯೆ 3ಕ್ಕೆ ಏರಿಕೆಯಾದಂತೆ ಆಗಿದೆ.

    ಅಂದಹಾಗೇ ಈಗಾಗಲೇ ಮೃತ ಅಯ್ಯಪ್ಪ ಮಾಲಾಧಾರಿಗಳ ಕುಟುಂಬಕ್ಕೆ ರಾಜ್ಯ ಸರ್ಕಾರದಿಂದ ತಲಾ 5 ಲಕ್ಷ ಪರಿಹಾರವನ್ನು ಘೋಷಣೆ ಮಾಡಲಾಗಿದೆ.

    Continue Reading

    LATEST NEWS

    Trending