Connect with us

BELTHANGADY

ಅಡಿಕೆ ಅಕ್ರಮ ಪ್ರವೇಶ ತಡೆಗೆ ಡಾ. ಹೆಗ್ಗಡೆಯವರಿಂದ ಪ್ರಧಾನಿಗೆ ಪತ್ರ

Published

on

ಬೆಳ್ತಂಗಡಿ: ದೇಶದೊಳಗೆ ಅಡಿಕೆಯ ಅಕ್ರಮ ಪ್ರವೇಶವನ್ನು ತಡೆಯುವಂತೆ ಅಡಿಕೆ ಸಂಶೋಧನೆ ಮತ್ತು ಅಭಿವೃದ್ಧಿ ಪ್ರತಿಷ್ಠಾನದ ಅಧ್ಯಕ್ಷ ಡಾ.ಡಿ ವೀರೇಂದ್ರ ಹೆಗ್ಗಡೆ ಅವರು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರನ್ನು ಆಗ್ರಹಿಸಿದ್ದಾರೆ.


ಭಾರತವು ಪ್ರತೀ ವರ್ಷ 15.63 ಲಕ್ಷ ಟನ್ ಅಡಿಕೆಯನ್ನು ಉತ್ಪಾದಿಸುತ್ತದೆ ಮತ್ತು ನಮ್ಮ ದೇಶದ ಸುಮಾರು 16 ಮಿಲಿಯನ್ ಜನರ ಬೆನ್ನೆಲುಬಾಗಿದೆ.

ಭಾರತವು ಅಡಿಕೆ ಉತ್ಪಾದನೆಯಲ್ಲಿ ಸ್ವಾವಲಂಬಿಯಾಗಿದ್ದರೂ ಪ್ರತೀ ವರ್ಷ ಸುಮಾರು 24000ಟನ್ ಅಡಿಕೆಯನ್ನು ಕಾನೂನುಬದ್ಧವಾಗಿ ಆಮದು ಮಾಡಿಕೊಳ್ಳಲಾಗುತ್ತಿದೆ. ಬೆಳೆಗಾರರರಿಗೂ ಸರ್ಕಾರಕ್ಕೂ ನಷ್ಟ ಇತ್ತೀಚೆಗೆ ಹಣಕಾಸು ರಾಜ್ಯ ಸಚಿವ ಪಂಕಜ್ ಚೌಧರಿ ಅಡಿಕೆ ಕಳ್ಳಸಾಗಣೆ ಇನ್ನೂ ಅಸ್ತಿತ್ವದಲ್ಲಿದೆ ಎಂದಿರುತ್ತಾರೆ.

ತೆರಿಗೆ ಜಾಲದ ಹೊರಗೆ ವ್ಯಾಪಾರ ಮಾಡುವ ಅಡಿಕೆಯ ಪ್ರಮಾಣವೂ ಲಭ್ಯವಿಲ್ಲ ಎಂದು ಹೇಳಿದ್ದರು. ಕೃಷಿ ಮತ್ತು ರೈತರ ಕಲ್ಯಾಣ ಸಚಿವಾಲಯದ ಅಡಿಯಲ್ಲಿ ಬರುವ ಅಡಿಕೆ ಮತ್ತು ಮಸಾಲೆ ಅಭಿವೃದ್ಧಿ ನಿರ್ದೇಶನಾಲಯದ ಪ್ರಕಾರ ಶೇ15 ಅಡಿಕೆಯನ್ನು ಮಾತ್ರ ಕ್ಯಾಂಪ್ಕೊ ಮಂಗಳೂರು ಸೇರಿದಂತೆ ಸಹಕಾರಿ ಸಂಸ್ಥೆಗಳು ವ್ಯಾಪಾರ ಮಾಡುತ್ತದೆ. ಮತ್ತು ಶೇ.85ನ್ನು ಖಾಸಗಿ ವ್ಯಾಪಾರಿಗಳು ಖರೀದಿಸುತ್ತಾರೆ.

ಹೀಗಿರುವಾಗ ಕಳ್ಳಸಾಗಾಣಿಕೆದಾರರ ಅಕ್ರಮ ಚಟುವಟಿಕೆಗಳು ಸ್ಥಳೀಯವಾಗಿ ಬೆಳೆದ ಅಡಿಕೆಯ ಬೆಲೆಯನ್ನು ಅಸ್ಥಿರಗೊಳಿಸುವುದಲ್ಲದೆ ಲಕ್ಷಾಂತರ ಅಡಿಕೆ ರೈತರ ಜೀವನ ಮತ್ತು ಆರ್ಥಿಕ ಸ್ಥಿತಿಯ ಮೇಲೆ, ಜಿಎಸ್‌ಟಿ ರೂಪದಲ್ಲಿ ಉತ್ಪತ್ತಿಯಾಗುವ ಆದಾಯದ ಮೇಲೆ ದುಷ್ಪರಿಣಾಮ ಬೀರುತ್ತದೆ ಎಂದು ಡಾ. ಹೆಗ್ಗಡೆ ಅಭಿಪ್ರಾಯಪಟ್ಟಿದ್ದಾರೆ.

ಅಡಿಕೆಯ ಸರಕು ಪಟ್ಟಿಯಲ್ಲಿ ಕಡಿಮೆ ದರವನ್ನು ನಮೂದಿಸಿ ಮಾರಾಟ ಮಾಡುವುದನ್ನು ತಡೆಯಲು, ನಮ್ಮ ದೇಶದ ಬಿಳಿ ಮತ್ತು ಕೆಂಪು ಅಡಿಕೆಗಳೆರಡರಲ್ಲೂ ಪರಿಣಿತರಾಗಿರುವ ಸಹಕಾರಿ ವಲಯದ ಸಮರ್ಥ ನೋಡಲ್ ಏಜೆನ್ಸಿ ಕ್ಯಾಂಪ್ಕೊ ಅಥವಾ ಎಡಿಆರ್‌ಎಫ್‌ ಅನ್ನು ಅಂತಹ ಸರಕುಗಳ ಮೌಲ್ಯಮಾಪನ ಮತ್ತು ವರದಿಗಳನ್ನು ನೀಡಲು ಗುರುತಿಸಬಹುದು ಎಂದು ಸಲಹೆ ನೀಡಿರುವ ಅವರು, ಈ ವಿಷಯಗಳ ಬಗ್ಗೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲು ಸಂಬಂಧಪಟ್ಟ ಸಚಿವಾಲಯಗಳಿಗೆ ಸೂಚನೆ ನೀಡಬೇಕೆಂದು ಪ್ರಧಾನಿ ಅವರಿಗೆ ಸ್ವತಃ ಅಡಿಕೆ ಬೆಳೆಗಾರರಾಗಿರುವ ಡಾ. ಹೆಗ್ಗಡೆ ಅವರು ಆಗ್ರಹಿಸಿದ್ದಾರೆ.

BELTHANGADY

Belthangady: ಕಾರಿನ ಮೇಲೆ ಕಾಡಾನೆ ದಾಳಿ- 6 ಮಂದಿಗೆ ಗಾಯ..!

Published

on

ಬೆಳ್ತಂಗಡಿ: ಕಾರಿನ ಮೇಲೆ ಕಾಡಾನೆ ದಾಳಿ ನಡೆಸಿ ಪ್ರಯಾಣಿಕರಿಗೆ ಗಾಯವಾಗಿರುವ ಘಟನೆ ದ.ಕ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ನೆರಿಯಾ ಎಂಬಲ್ಲಿ ನಡೆದಿದ್ದು, ಅಲ್ಟೋ ಕಾರಿನ ಮೇಲೆ ಏಕಾಏಕಿ ದಾಳಿ ನಡೆಸಿದ ಪರಿಣಾಮ ಆರು ಮಂದಿಗೆ ಗಾಯವಾಗಿದೆ.

ಈ ಘಟನೆ ನೆರಿಯಾದ ಪೋಸ್ಟ್ ಆಫೀಸ್ ಬಳಿ ನಡೆದಿದೆ. ನೆರಿಯಾ ಗ್ರಾಮ ಕಾಡಿನ ಅಂಚಿನಲ್ಲಿರೋ ಕಾರಣ ಕಾಡಾನೆ ಆತಂಕ ಹೆಚ್ಚಾಗಿದೆ. ಕಾಡಾನೆ ದಾಳಿಯಿಂದ ಕಾರಿಗೆ ಹಾನಿಯಾಗಿದ್ದು, ಗಾಯಗೊಂಡವರಿಗೆ ಬೆಳ್ತಂಗಡಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

Continue Reading

BELTHANGADY

Belthangady: ಮನೆಯ ಶೆಡ್‌ ನಲ್ಲಿ ನಿಲ್ಲಿಸಿದ್ದ ಕಾರು ಕಳವು- ನಾಲ್ವರು ಅರೆಸ್ಟ್..!

Published

on

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನ ಕಕ್ಕಿಂಜೆಯಲ್ಲಿ ಮನೆಯ ಶೆಡ್‌ನ‌ಲ್ಲಿ ನಿಲ್ಲಿಸಿದ್ದ ಇನ್ನೋವಾ ಕಾರನ್ನು ಕಳ್ಳತನ ಮಾಡಿದ ಪ್ರಕರಣವನ್ನು ಧರ್ಮಸ್ಥಳ ಪೊಲೀಸರು ಭೇದಿಸಿದ್ದು, ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ.

ಕಿನ್ನಿಗೋಳಿಯ ತಾಳಿಪಾಡಿ ಗ್ರಾಮದ ಉಮಾ ಅಜಯ್‌ ಶೆಟ್ಟಿ(32), ಬೆಳ್ತಂಗಡಿ ತಾಲೂಕಿನ ಸೋಣಂದೂರು ಗ್ರಾಮದ ಗಾಣದಬೆಟ್ಟು ನಿವಾಸಿ ಸೂರಜ್‌ ಶೆಟ್ಟಿ(23), ಇಳಂತಿಲ ಗ್ರಾಮದ ಎನ್ಮಾಡಿ ನಿವಾಸಿ ಮಂಜುನಾಥ ಪೂಜಾರಿ (30) ಮತ್ತು ಬಂಟ್ವಾಳ ತಾಲೂಕು ಶಂಭೂರು ಗ್ರಾಮದ ಪರೆಕಲ್‌ ನಿವಾಸಿ ಕಿಶೋರ್‌ ಟಿ.(32) ಬಂಧಿತ ಆರೋಪಿಗಳು.

ಚಾರ್ಮಾಡಿ ಗ್ರಾಮದ ಕಕ್ಕಿಂಜೆಯಲ್ಲಿ ನ. 9 ರಂದು ರಾತ್ರಿ 10 ಗಂಟೆ ವೇಳೆಗೆ ಇಸಾಕ್‌ ಅವರ ಅಕ್ಕನ ಮಗ ನೌಫಾಲ್‌ ತನ್ನ ಕಾರ್‌ಶೆಡ್ಡಿನಲ್ಲಿ ನಿಲ್ಲಿಸಿದ್ದ ಇನ್ನೋವಾ ಕಾರನ್ನು ಗೆಳೆಯ ಸೈಫ‌ುದ್ದಿನ್‌ನ ಸ್ನೇಹಿತ ಸೂರಜ್‌ ಶೆಟ್ಟಿ ಮತ್ತು ಅಜಯ್‌ ಶೆಟ್ಟಿ ಅವರು ಬಾಡಿಗೆಗೆ ನೀಡುವಂತೆ ಕೇಳಿದ್ದರು. ಆದರೆ ಕಾರನ್ನು ನೀಡದ ಕಾರಣ ಅವರೇ ಕಳವು ಮಾಡಿರುವ ಬಗ್ಗೆ ಸಂಶಯ ವ್ಯಕ್ತಪಡಿಸಿ ಪೊಲೀಸರಿಗೆ ದೂರು ನೀಡಲಾಗಿತ್ತು. ಬೆಳ್ತಂಗಡಿ ಪೊಲೀಸ್‌ ಇನ್ಸ್ ಪೆಕ್ಟರ್‌ ನಾಗೇಶ್‌ ಕದ್ರಿ ಅವರ ಮಾರ್ಗದರ್ಶನದಲ್ಲಿ ಧರ್ಮಸ್ಥಳ ಠಾಣೆಯ ಸಬ್‌ ಇನ್‌ಸ್ಪೆಕ್ಟರ್‌ ಅನಿಲ್‌ ಕುಮಾರ್‌ ಡಿ. ಮತ್ತು ಸಬ್‌ ಇನ್‌ಸ್ಪೆಕ್ಟರ್‌ ಸಮರ್ಥ ರವೀಂದ್ರ ಗಾಣಿಗೇರ, ಎಎಸ್‌ಐಗಳಾದ ಸಾಮ್ಯುವೆಲ್‌ ಮತ್ತು ಪೌಲೋಸ್‌ ಹಾಗೂ ಸಿಬಂದಿ ರಾಜೇಶ್‌ ಎನ್‌., ಪ್ರಶಾಂತ್‌, ಮಂಜುನಾಥ್‌, ಮಲ್ಲಿಕಾರ್ಜುನ್‌ ಅವರು ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಬಂಧಿಸಿದ್ದಾರೆ. ಆರೋಪಿಗಳನ್ನು ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಲಯ ಅವರಿಗೆ 14 ದಿನಗಳವರೆಗೆ ನ್ಯಾಯಾಂಗ ಬಂಧನ ವಿಧಿಸಿದೆ.

 

Continue Reading

BELTHANGADY

ಜನ್ಮ ದಿನಾಚರಣೆಯ ಸಂಭ್ರಮದಲ್ಲಿ ಧರ್ಮಸ್ಥಳದ ಖಾವಂದರು

Published

on

ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆ ಅವರು 76ನೇ ವರ್ಷಕ್ಕೆ ನ. 25ರಂದು ಪಾದಾರ್ಪಣೆ ಮಾಡುತ್ತಿದ್ದಾರೆ.

ಈ ಹಿನ್ನಲೆಯಲ್ಲಿ ವೀರೇಂದ್ರ ಹೆಗ್ಗಡೆ ಅವರಿಗೆ ವಿವಿಧ ಕ್ಷೇತ್ರಗಳ ಗಣ್ಯರು ಶುಭಾಶಯ ಕೋರಿದ್ದಾರೆ. 1948ರ ನವೆಂಬರ್ 25ರಂದು ಜನಿಸಿದ್ದ ಹೆಗ್ಗಡೆ ಅವರು 1964ರ ಅ. 24ರಂದು ಕ್ಷೇತ್ರದ 21ನೇ ಧರ್ಮಾಧಿಕಾರಿಯಾಗಿ ಪಟ್ಟಾಭಿಷಿಕ್ತರಾಗಿದ್ದರು. ಹೆಗ್ಗಡೆ ಅವರು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಸ್ವ ಉದ್ಯೋಗ ತರಬೇತಿ ಕೇಂದ್ರಗಳು, ಸಿರಿ ಸಂಸ್ಥೆಗಳು, ಎಲ್ಲ ಬಗೆಯ ಶಿಕ್ಷಣ ಸಂಸ್ಥೆಗಳನ್ನು ಸ್ಥಾಪಿಸಿ,  ವಿದ್ಯಾ ಕ್ಷೇತ್ರಕ್ಕೆ ದೊಡ್ಡ ಕೊಡುಗೆ ನೀಡಿದ್ದಾರೆ. ಉಜಿರೆ ಸೇರಿದಂತೆ ಮಂಗಳೂರು, ಮೈಸೂರು, ಧಾರವಾಡ, ಬೆಂಗಳೂರು, ಉಡುಪಿ ಮೊದಲಾದ ಕಡೆ ಎಸ್‌ಡಿಎಂ ಶಿಕ್ಷಣ ಸಂಸ್ಥೆಗಳ ನಡೆಸುತ್ತಿದ್ದಾರೆ. ಇವರ ಹುಟ್ಟುಹಬ್ಬಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳ ದೇವಸ್ಥಾನದ ನೌಕರರು, ಊರಿನ ನಾಗರಿಕರು, ಕ್ಷೇತ್ರದ ಶಿಕ್ಷಣ ಸಂಸ್ಥೆಗಳು ಸೇರಿದಂತೆ ಎಲ್ಲ ಸಂಸ್ಥೆಗಳ ಸಿಬಂದಿಯಿಂದ ವಿಶೇಷ ಗೌರವ ಸಲ್ಲಿಸಿದ್ದಾರೆ.

 

Continue Reading

LATEST NEWS

Trending