Sunday, July 3, 2022

ರಾಷ್ಟ್ರಕವಿ ಗೋವಿಂದ ಪೈ ಪ್ರಶಸ್ತಿಗೆ ಡಾ. ಬಿ.ಎ. ವಿವೇಕ ರೈ ಆಯ್ಕೆ

ಉಡುಪಿ: ಒಂದು ಲಕ್ಷ ರೂ. ನಗದು ಹಾಗೂ ಪ್ರಶಸ್ತಿ ಪತ್ರವನ್ನೊಳಗೊಂಡ ಪ್ರತಿಷ್ಠಿತ ರಾಷ್ಟ್ರಕವಿ ಗೋವಿಂದ ಪೈ ಪ್ರಶಸ್ತಿಗೆ ಜಾಗತಿಕ ಜಾನಪದ ವಿದ್ವಾಂಸ, ಕನ್ನಡ ಮತ್ತು ತುಳು ಸಂಶೋಧಕ, ನಿವೃತ್ತ ಕುಲಪತಿ ಡಾ. ಬಿ.ಎ. ವಿವೇಕ ರೈ ಆಯ್ಕೆಯಾಗಿದ್ದಾರೆ.


ಉಡುಪಿಯ ರಾಷ್ಟ್ರಕವಿ ಗೋವಿಂದ ಪೈ ಸಂಶೋಧನಾ ಕೇಂದ್ರದ ಮೂಲಕ ನೀಡಲಾಗುವ ಟಿ. ವಿಮಲಾ ವಿ.ಪೈ ಪ್ರಾಯೋಜಿತ 2022ನೇ ಸಾಲಿನ ಪ್ರಶಸ್ತಿಗೆ ರಾಷ್ಟ್ರಕವಿ ಗೋವಿಂದ ಪೈ ಪ್ರಶಸ್ತಿ ಆಯ್ಕೆ ಸಮಿತಿಯು ಪ್ರಾಚೀನ ಕನ್ನಡ ಕಾವ್ಯಗಳ ಇಂಗ್ಲಿಷ್ ಅನುವಾದಕ ಹಾಗೂ ಅಂಕಣಕಾರರೂ ಆಗಿರುವ ಡಾ. ವಿವೇಕ ರೈ ಅವರನ್ನು ಅಯ್ಕೆ ಮಾಡಿದೆ.

ಈ ಪ್ರಶಸ್ತಿಯನ್ನು ಖ್ಯಾತ ಉದ್ಯಮಿಯಾಗಿರುವ ಟಿ.ಮೋಹನ್‌ದಾಸ್ ಪೈ ಅವರು ತಮ್ಮ ತಾಯಿಯ ಹೆಸರಿನಲ್ಲಿ ಸ್ಥಾಪಿಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ಸಮೀಪದ ಪುಣಚ ಗ್ರಾಮದಲ್ಲಿ 1946ರಲ್ಲಿ ಜನಿಸಿದ ಡಾ. ಬಿ.ಎ ವಿವೇಕ ರೈ ಅವರು ಮೈಸೂರು ವಿಶ್ವವಿದ್ಯಾನಿಲಯದ ಮಂಗಳೂರು ಸ್ನಾತಕೋತ್ತರ ಕೇಂದ್ರದಲ್ಲಿ ಕನ್ನಡ ಎಂ.ಎ. ಪದವಿ ಪಡೆದಿದ್ದಾರೆ.

ಮಂಗಳೂರು ಸ್ನಾತಕೋತ್ತರ ಕೇಂದ್ರ ಮತ್ತು ಮಂಗಳೂರು ವಿವಿಯ ಕನ್ನಡ ವಿಭಾಗದಲ್ಲಿ ಸುಮಾರು 34 ವರ್ಷಗಳ ಕಾಲ ಪ್ರಾಧ್ಯಾಪಕರಾಗಿ, ಅದರಲ್ಲಿ 18 ವರ್ಷಗಳ ಕಾಲ ವಿಭಾಗ ಮುಖ್ಯಸ್ಥರಾಗಿ ಕಾರ್ಯ ನಿರ್ವಹಿಸಿದ್ದಾರೆ.

ಕನ್ನಡ ವಿಶ್ವವಿದ್ಯಾಲಯ ಹಂಪಿ ಮತ್ತು ಕರ್ನಾಟಕ ರಾಜ್ಯಮುಕ್ತ ವಿಶ್ವವಿದ್ಯಾನಿಲಯದ ಕುಲಪತಿಗಳಾಗಿ ಸಂಸ್ಥೆಗಳನ್ನು ಮುನ್ನಡೆಸಿದ್ದಾರೆ.

ಜರ್ಮನಿಯ ವ್ಯೆತ್ಸ್‌ಬುರ್ಗ್ ವಿಶ್ವವಿದ್ಯಾಲಯದ ಇಂಡಾಲಜಿ ವಿಭಾಗದಲ್ಲಿ ಅತಿಥಿ ಪ್ರಾಧ್ಯಾಪಕರಾಗಿ ಯುರೋಪಿಯನ್ ವಿದ್ಯಾರ್ಥಿಗಳಿಗೆ ಕನ್ನಡ ಭಾಷೆ ಮತ್ತು ಸಾಹಿತ್ಯ ಮತ್ತು ಸಂಸ್ಕೃತಿಯನ್ನು ಬೋಧಿಸಿದವರು.

ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಸ್ಥಾಪಕ ಅಧ್ಯಕ್ಷರೂ ಆಗಿದ್ದಾರೆ. ಕನ್ನಡದಲ್ಲಿ ಇವರು 24 ಸ್ವತಂತ್ರ ಕೃತಿಗಳನ್ನು ರಚಿಸಿದ್ದಾರೆ.

18ಕ್ಕೂ ಹೆಚ್ಚು ಕೃತಿಗಳನ್ನು ಸಂಪಾದಕರಾಗಿ ಹೊರತಂದಿದ್ದಾರೆ. ತುಳುವಿನಲ್ಲಿ ಇವರ 2 ಕೃತಿಗಳು ಪ್ರಕಟವಾಗಿವೆ. ಇಂಗ್ಲೀಷ್ ನಲ್ಲಿ ಇತರರೊಂದಿಗೆ 6 ಕೃತಿಗಳನ್ನು ರಚಿಸಿದ್ದಾರೆ.

ಮತ್ತು ರಾಜ್ಯ, ರಾಷ್ಟ್ರ ಮತ್ತು ಅಂತರಾಷ್ಟ್ರೀಯ ಮಟ್ಟದ ಅನೇಕ ಪ್ರತಿಷ್ಟಿತ ಪ್ರಶಸ್ತಿ- ಪುರಸ್ಕಾರಗಳು ವಿವೇಕ ರೈಗೆ ಲಭಿಸಿವೆ.

LEAVE A REPLY

Please enter your comment!
Please enter your name here

Hot Topics

ವಿಟ್ಲದಲ್ಲಿ ನಿರಂತರ ಮಳೆಗೆ ನೀರುಪಾಲಾದ ತೋಡು-ಮನೆ ಕುಸಿಯುವ ಭೀತಿ

ವಿಟ್ಲ: ವಿಟ್ಲ ಮುಡ್ನೂರು ಗ್ರಾಮದ ಪಿಲಿಂಜ ಎಂಬಲ್ಲಿ ನಿರಂತರವಾಗಿ ಸುರಿಯುತ್ತಿರುವ ಮಳೆಗೆ ತೋಡಿನ ಬದಿ ಕುಸಿದು ಮನೆ ಅಪಾಯದಂಚಿನಲ್ಲಿದೆ.ವಿಟ್ಲ ಮುಡ್ನೂರು ಗ್ರಾಮದ ಪಿಲಿಂಜ ನಿವಾಸಿ ರಾಮಣ್ಣ ಪಿಲಿಂಜ ಅವರಿಗೆ ಸೇರಿದ ಮನೆಯ ಪಕ್ಕದಲ್ಲಿ...

ಮರವಂತೆಯಲ್ಲಿ ಸಮುದ್ರಪಾಲಾದ ಕಾರು: ಓರ್ವ ಸ್ಪಾಟ್ ಡೆತ್-ಓರ್ವ ನಾಪತ್ತೆ

ಕುಂದಾಪುರ: ಚಲಿಸುತ್ತಿದ್ದ ಕಾರೊಂದು ಚಾಲಕನ‌ ನಿಯಂತ್ರಣ ತಪ್ಪಿ ಪಲ್ಟಿಯಾಗಿ ಸಮುದ್ರ ಪಾಲಾಗಿ ಕಾರಿನೊಳಗಿದ್ದ ನಾಲ್ವರ ಪೈಕಿ ಚಾಲಕ ಸಾವನ್ನಪ್ಪಿದ್ದು, ಓರ್ವ ನಾಪತ್ತೆಯಾಗಿ ಇಬ್ಬರು ಪ್ರಯಾಣಿಕರು ಗಾಯಾಳುಗಳಾಗಿ ಆಸ್ಪತ್ರೆಗೆ ಸೇರಿದಂತಹ ದಾರುಣ ಘಟನೆ ಉಡುಪಿ...

ಕುವೈಟ್‌-ಮಂಗಳೂರು ಪ್ರಯಾಣಿಕನ ಜೊತೆ ಸಿಬ್ಬಂದಿ ಉದ್ಧಟತನ: ಕ್ಷಮೆ ಕೇಳಿದ ಏರ್‌ಇಂಡಿಯಾ

ಮಂಗಳೂರು: ಕುವೈಟ್‌ನಿಂದ ಮಂಗಳೂರಿಗೆ ಹೊರಡುವ ವೇಳೆ ಕುವೈಟ್‌ನ ಏರ್‌ಇಂಡಿಯಾ ಕೌಂಟರ್‌ನ ವ್ಯವಸ್ಥಾಪಕ ಉದ್ಧಟತನದ ವರ್ತನೆ ಬಗ್ಗೆ ದೂರಿದ ಮಂಗಳೂರಿಗರೊಬ್ಬರಿಗೆ ಏರ್‌ಇಂಡಿಯಾ ಎಕ್ಸ್‌ಪ್ರೆಸ್‌ ಸಂಸ್ಥೆ ಕ್ಷಮೆ ಕೋರಿದ ಘಟನೆ ನಿನ್ನೆ ನಡೆದಿದೆ.ಕುವೈತ್‌ನ ಅನಿವಾಸಿ ಭಾರತೀಯ,...