Thursday, September 29, 2022

ಆ.14 ರಂದು ಮಂಗಳೂರು ಪುರಭವನದಲ್ಲಿ ನಾಟಕ ಪ್ರದರ್ಶನ ಮತ್ತು ಮೆಗಾ ಮ್ಯಾಜಿಕ್

ಮಂಗಳೂರು: ಭಾರತ ಸ್ವಾತಂತ್ರ್ಯದ ಅಮೃತ ಮಹೋತ್ಸವದ ಅಂಗವಾಗಿ ಆ.14 ರ ಭಾನುವಾರ ಸಂಜೆ 5 ಗಂಟೆಗೆ ನಗರದ ಕುದ್ಮುಲ್ ರಂಗರಾವ್ ಪುರಭವನದಲ್ಲಿ ಜಿಲ್ಲಾಡಳಿತ,

ಜಿಲ್ಲಾ ಪಂಚಾಯತ್, ಮಂಗಳೂರು ಮಹಾನಗರ ಪಾಲಿಕೆ ಮತ್ತು ಕನ್ನಡ ಮತ್ತು ಸಂಸ್ಕೃತಿ ಇಲಾಖೆ,

ಸಹಯೋಗದಲ್ಲಿ ಯಕ್ಷ ರಂಗಾಯಣ ಕಾರ್ಕಳ ಅಭಿನಯಿಸುವ ಅಮರಕ್ರಾಂತಿ ಸ್ವಾತಂತ್ರ್ಯ ಹೋರಾಟ-1837 ನಾಟಕ ಪ್ರದರ್ಶನ ಮತ್ತು ಮೆಗಾ ಮ್ಯಾಜಿಕ್ ಕುದ್ರೋಳಿ ಗಣೇಶ್ ಇವರಿಂದ ರಾಷ್ಟ್ರ ಪ್ರೇಮ ಮೂಡಿಸುವ ಜಾದೂ ಪ್ರದರ್ಶನವನ್ನು ಏರ್ಪಡಿಸಲಾಗಿದೆ.


ಹಿರಿಯ ಸಾಹಿತಿ ಡಾ. ಪ್ರಭಾಕರ ಶಿಶಿಲ ರಚಿಸಿರುವ ಅಮರಕ್ರಾಂತಿ ನಾಟಕವನ್ನು ರಂಗಮಾಂತ್ರಿಕ ಜೀವನ್ ರಾಂ ಸುಳ್ಯ ನಿರ್ದೇಶಿಸಿದ್ದಾರೆ.

ನೀನಾಸಂನ ಆರು ಜನ ಪ್ರಬುದ್ಧ ಕಲಾವಿದರು, ಆಳ್ವಾಸ್ ರಂಗ ತಂಡ ಹಾಗೂ ಸ್ಥಳೀಯ ಕಲಾವಿದರನ್ನೊಳಗೊಂಡ ಈ ನಾಟಕ ಸ್ವಾತಂತ್ರ್ಯ ಅಮೃತ ಮಹೋತ್ಸವಕ್ಕಾಗಿಯೇ ಸಿದ್ಧಗೊಂಡ ವಿಶೇಷ ಪ್ರಯೋಗವಾಗಿದೆ.

1857 ರ ಸಿಪಾಯಿ ದಂಗೆಗಿಂತಲೂ ಎರಡು ದಶಕಗಳ ಮೊದಲೇ ಅಮರ ಸುಳ್ಯದಲ್ಲಿ ಹಿರಿಯ ಜಮೀನ್ದಾರ ಕೆದಂಬಾಡಿ ರಾಮೇಗೌಡರ ನಾಯಕತ್ವದಲ್ಲಿ, ಕಲ್ಯಾಣಸ್ವಾಮಿ, ಹುಲಿಕಡಿದ ನಂಜಯ್ಯ ಮುಂತಾದವರ ಸಹಕಾರದೊಂದಿಗೆ ಬ್ರಿಟಿಷರ ವಿರುದ್ಧ ಸ್ವಾತಂತ್ರ್ಯಕ್ಕಾಗಿ

ನಡೆಸಿದ ರೋಮಾಂಚಕಾರಿ ಘಟನೆಗಳನ್ನು ಯಕ್ಷ ರಂಗಾಯಣದ ಕಲಾವಿದರು ಅತ್ಯಂತ ಮನೋಜ್ಞವಾಗಿ ಪ್ರಸ್ತುತ ಪಡಿಸಲಿದ್ದಾರೆ ಹಾಗೂ ಈ ಕಾರ್ಯಕ್ರಮಕ್ಕೆ ಮುಕ್ತ ಪ್ರವೇಶ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

Hot Topics

ಉಡುಪಿ: ಮೊಬೈಲ್‌ ಶಾಪ್‌ನಲ್ಲಿ 1 ಲಕ್ಷ ರೂ ಮೌಲ್ಯದ ಸೊತ್ತು ಕದ್ದ ಕಳ್ಳ-ಪ್ರಕರಣ ದಾಖಲು

ಉಡುಪಿ: ಮೊಬೈಲ್ ಅಂಗಡಿಗೆ ರಾತ್ರಿ ವೇಳೆ ನುಗ್ಗಿದ ಕಳ್ಳನೊಬ್ಬ ಮೊಬೈಲ್ ಮತ್ತಿತರ ವಸ್ತುಗಳನ್ನು ಕಳವುಗೈದ ಘಟನೆ ಉಡುಪಿಯ ಮಲ್ಪೆಯ ಬಸ್ ನಿಲ್ದಾಣ ಸಮೀಪದ ಅಂಗಡಿಯಲ್ಲಿ ನಡೆದಿದೆ.ಇತ್ತೀಚಿನ ದಿನಗಳಲ್ಲಿ ಉಡುಪಿಯಲ್ಲಿ ಕಳ್ಳಕಾಕರ ಹಾವಳಿ ಮತ್ತೆ...

ಮಂಗಳೂರು: ಲೋಕಕಂಟಕ ನಿವೃತ್ತಿಗಾಗಿ ವೆಂಕಟರಮಣ ದೇಗುಲದಲ್ಲಿ ಸಹಸ್ರ ಚಂಡಿಕಾ ಮಹಾಯಾಗ ಪ್ರಾರಂಭ

ಮಂಗಳೂರು: ಶಾರದಾ ಮಹೋತ್ಸವದ 100ನೇ ವರ್ಷದ ಶತಮಾನೋತ್ಸವ ಆಚರಣೆಯ ಸಂದರ್ಭದಲ್ಲಿ ಮಂಗಳೂರಿನ ಶ್ರೀ ವೆಂಕಟರಮಣ ದೇವಸ್ಥಾನದ ರಾಜಾಂಗಣದಲ್ಲಿ ಶ್ರೀ ಸಹಸ್ರ ಚಂಡಿಕಾ ಮಹಾಯಾಗ ಇಂದು ಪ್ರಾರಂಭಗೊಂಡಿತು.ಲೋಕ ಕಂಟಕ ನಿವೃತ್ತಿಗಾಗಿ ಲೋಕದಲ್ಲಿ ಉಂಟಾದ ಕ್ಷೋಭೆಯ...

ಉಳ್ಳಾಲ: ಫ್ಲೆಕ್ಸ್‌ನಲ್ಲಿ ಅನುಮತಿಯಿಲ್ಲದೆ ಗರ್ಭಿಣಿ ಭಾವಚಿತ್ರ ಅಳವಡಿಕೆ: ಕೆರಳಿದ ಭಜರಂಗದಳ

ಉಳ್ಳಾಲ: ಕಾರ್ಯಕ್ರಮವೊಂದರ ಫ್ಲೆಕ್ಸ್ ನಲ್ಲಿ ಮಹಿಳೆಯ ಅನುಮತಿ ಇಲ್ಲದೆ ಫೊಟೋ ಅಳವಡಿಸಿದ ಕುರಿತಾಗಿ ಕೆರಳಿದ ಬಜರಂಗದಳದ ಕಾರ್ಯಕರ್ತರು ಕಾರ್ಯಕ್ರಮ ಆಯೋಜಕರನ್ನು ತರಾಟೆಗೆ ತೆಗೆದುಕೊಂಡ ಘಟನೆ ಉಳ್ಳಾಲದ ಕೊಲ್ಯ ನಾರಾಯಣಗುರು ಸಭಾಭವನದಲ್ಲಿ ಬುಧವಾರ ನಡೆಯಿತು.ದಕ್ಷಿಣ...