DAKSHINA KANNADA
ಉಳ್ಳಾಲದಲ್ಲಿ ವ್ಯಕ್ತಿ ಸಮುದ್ರಪಾಲು: ಓರ್ವನ ರಕ್ಷಣೆ- ರಕ್ಷಣೆಗಿಳಿದವನ ಪರ್ಸ್ ನಾಪತ್ತೆ
ಉಳ್ಳಾಲ: ಇಲ್ಲಿನ ದರ್ಗಾಕ್ಕೆ ಬಂದಿದ್ದ ವ್ಯಕ್ತಿಯೋರ್ವರು ಸಮುದ್ರದಲ್ಲಿ ಮಕ್ಕಳೊಂದಿಗೆ ನೀರಿನಲ್ಲಿ ಆಟವಾಡುತ್ತಿದ್ದ ವೇಳೆ ನೀರುಪಾಲಾಗಿದ್ದು, ಆತನ ಮಗನನ್ನ ಸ್ಥಳೀಯ ಈಜುಗಾರರು ರಕ್ಷಿಸಿದ್ದಾರೆ.
ಮಳಲಿ ನಿವಾಸಿ ಖಾಲಿದ್(51) ಸಮುದ್ರ ಪಾಲಾದ ವ್ಯಕ್ತಿ.
ಘಟನೆ ವಿವರ
ಖಾಲಿದ್ ಅವರು ಹಬ್ಬದ ನಿಮಿತ್ತ ತನ್ನ ಪತ್ನಿ, ಮಗ ಹಾಗೂ ಸಂಬಂಧಿ ಮಕ್ಕಳ ಜೊತೆ ಉಳ್ಳಾಲ ದರ್ಗಾಕ್ಕೆ ಭೇಟಿ ನೀಡಿದ್ದರು. ಬಳಿಕ ಉಳ್ಳಾಲ ಬೀಚ್ ಗೆ ತೆರಳಿದ್ದರು.ಈ ವೇಳೆ ಖಾಲಿದ್ ಮಗನೊಂದಿಗೆ ನೀರಾಟವಾಡುತ್ತಿದ್ದ ವೇಳೆ ಅಬ್ಬರದ ಅಲೆಯು ಎಳೆದೊಯ್ದಿದೆ. ತಕ್ಷಣ ಸ್ಥಳದಲ್ಲಿದ್ದ ಈಜುಗಾರರು ಖಾಲಿದ್ ಅವರ ಮಗನನ್ನು ರಕ್ಷಿಸಿ ದೇರಳಕಟ್ಟೆ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ.
ಸಂಜೆ ವೇಳೆ ಖಾಲಿದ್ ಅವರ ಮೃತದೇಹ ಸಮುದ್ರ ತೀರದಲ್ಲಿ ಸಿಕ್ಕಿದ್ದು ಉಳ್ಳಾಲ ಠಾಣಾ ಪೊಲೀಸರು ಮೃತದೇಹವನ್ನ ಮರಣೋತ್ತರ ಪರೀಕ್ಷೆಗೆ ರವಾಣಿಸಿದ್ದಾರೆ.
ರಕ್ಷಣೆಗಿಳಿದವನ ಪಸ್೯ ನಾಪತ್ತೆ !
ಖಾಲಿದ್ ಮುಳುಗುತ್ತಿದ್ದಂತೆ ಕುಟುಂಬಸ್ಥರು ರಕ್ಷಣೆಗಾಗಿ ಬೊಬ್ಬಿರಿದಿದ್ದು, ಈ ವೇಳೆ ಸಮೀಪದಲ್ಲೇ ಇದ್ದ ಕೋಡಿ ನಿವಾಸಿಗಳಾದ ಜಬ್ಬಾರ್, ಅಶ್ರಫ್, ಇಮ್ತಿಯಾಝ್, ಮಹಮ್ಮದ್ ಎಂಬವರು ಧಾವಿಸಿ ಖಾಲಿದ್ ಅವರ ಪುತ್ರನನ್ನು ರಕ್ಷಿಸುವಲ್ಲಿ ಯಶಸ್ವಿಯಾದರು.
ಆದರೆ ಖಾಲಿದ್ ಅವರನ್ನು ಸಮುದ್ರ ದೂರಕ್ಕೆ ಎಳೆದಿದ್ದು, ಹಲವು ಗಂಟೆಗಳ ಕಾರ್ಯಾಚರಣೆ ನಂತರ ಮೃತದೇಹ ಪತ್ತೆಹಚ್ಚಿದ್ದಾರೆ. ಸಮುದ್ರಕ್ಕೆ ಹಾರುವ ಸಂದರ್ಭ ಜಬ್ಬಾರ್ ಅವರು ಪರಿಚಿತರ ಕೈಯಲ್ಲಿ ತಮ್ಮ ಪಸ್೯, ವಾಚ್ ಎಲ್ಲವನ್ನೂ ನೀಡಿದ್ದರು .
ಅವರಂತೆ ಇತರರೂ ನೀಡಿದಾಗ ಯುವಕನ ಕೈಯಲ್ಲಿ ವಸ್ತುಗಳು ತುಂಬಿ ಜಬ್ಬಾರ್ ಅವರ ಪಸ್೯ ಕೆಳಗೆ ಬಿದ್ದಿರುವ ಸಾಧ್ಯತೆಗಳಿವೆ. ಕಳೆದುಹೋದ ಪಸ್೯ನಲ್ಲಿ ದಾಖಲೆಗಳು, ರೂ. 8,000 ನಗದು ಇದ್ದು ಸಿಕ್ಕಿದವರು ವಾಪಸ್ಸು ಹಿಂತಿರುಗಿಸುವಂತೆ ಸಾಮಾಜಿಕ ತಾಣಗಳ ಮೂಲಕ ಮನವಿ ಮಾಡಿದ್ದಾರೆ.
DAKSHINA KANNADA
ಮಂಗಳೂರು – ಕಟೀಲಮ್ಮನ ಮಡಿಲಲ್ಲಿ ಹಲವಾರು ಬಣ್ಣದ ವೇಷಗಳ ವೈಭವ
ಮಂಗಳೂರು: ನಂದಿನಿ ನದಿಯ ಮಧ್ಯದಲ್ಲಿ ರಾರಾಜಿಸುತ್ತಿರುವ ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಾಲಯದಲ್ಲಿ ಅದ್ದೂರಿಯಾಗಿ ನಡೆಯುವ ಶರನ್ನವರಾತ್ರಿ ಉತ್ಸವದ ವೈಭವ ಒಂದು ಕಡೆಯಾದರೆ ಹುಲಿ, ಸಿಂಹ ಸೇರಿದಂತೆ ಸಾವಿರಾರು ಬಣ್ಣದ ವೇಷಗಳು ಸೇವೆ ಸಲ್ಲಿಸುವ ಸೊಬಗು ಇನ್ನೊಂದು ಕಡೆ.
ಹಲವಾರು ತಂಡಗಳು ಹುಲಿ ವೇಷ ಹಾಕಿ ತಿರುಗಾಟ ನಡೆಸಿ ಅಂತಿಮವಾಗಿ ಕಟೀಲಿಗೆ ಬಂದು ದೇವಾಲಯದ ಆವರಣದಲ್ಲಿ ನರ್ತಿಸಿ ವೇಷ ಕಳಚಿ ನಂದಿನಿ ನೀರಿನಲ್ಲಿ ಮಿಂದು ಹೋಗುವುದು ರೂಢಿ. ವೇಷ ಹಾಕುವಾಗಲೇ ಕಟೀಲಿನಲ್ಲಿ ವೇಷ ಬಿಚ್ಚುತ್ತೇವೆ ಎಂದು ಹರಕೆ ಹೊತ್ತವರು ಒಂದೆಡೆಯಾದರೆ, ಕಟೀಲು ಕ್ಷೇತ್ರದಲ್ಲೇ ಸೇವೆ ಸಲ್ಲಿಸಿ ಮರಳಿ ಅಲ್ಲೇ ವೇಷ ಬಿಚ್ಚುತ್ತೇವೆ ಎನ್ನುವವರು ಇನ್ನೊಂದೆಡೆ ಇದ್ದಾರೆ. ಇದು ತಲತಲಾಂತರಗಳಿಂದ ಪಾಲಿಸಿಕೊಂಡು ಬರುತ್ತಿರುವ ಸಂಪ್ರದಾಯವಾಗಿದೆ.
ಶರನ್ನವರಾತ್ರಿ ಸಮಯದಲ್ಲಿ ಕಟೀಲು ದೇವಾಲಯದ ಆವರಣದಲ್ಲಿ ನಿತ್ಯವೂ ಹತ್ತಾರು ತಂಡಗಳ ಹುಲಿ ವೇಷ ನರ್ತನ ಇರುತ್ತದೆ. ಒಟ್ಟಾರೆಯಾಗಿ 2000 ಕ್ಕೂ ಅಧಿಕ ವೇಷಗಳು , 70 ರಿಂದ 80 ತಂಡಗಳು ಕಟೀಲು ಸನ್ನಿಧಿಗೆ ಬಂದು ಸೇವೆ ಸಲ್ಲಿಸುತ್ತವೆ ಎಂದು ಹೇಳಬಹುದು.
DAKSHINA KANNADA
ಮುಂದಿನ ಐದು ದಿನ ಉತ್ತರ ಒಳನಾಡು, ಕರಾವಳಿಯಲ್ಲಿ ಭಾರೀ ಮಳೆ ಸಾಧ್ಯತೆ
ಬೆಂಗಳೂರು: ಈ ಬಾರಿಯ ದಸರಾ ಸಂಭ್ರಮಕ್ಕೆ ಮಳೆ ಅಡ್ಡಿಯಾಗುವ ಸಾಧ್ಯತೆಯಿದೆ. ಮುಂದಿನ ಐದು ದಿನಗಳಲ್ಲಿ ಉತ್ತರ ಒಳನಾಡು ಮತ್ತು ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ.
ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದಾಗಿ ರಾಜ್ಯದಲ್ಲಿ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮಳೆಯಾಗಲಿದೆ. ಬೆಂಗಳೂರಿನಲ್ಲಿ ಹಗುರದಿಂದ ಸಾಧಾರಣ ಮಳೆಯಾಗಲಿದೆ ಎಂದು ಐಎಂಡಿ ಹೇಳಿದೆ.
ಉತ್ತರ ಕರ್ನಾಟಕ ಮತ್ತು ಮಧ್ಯ ಕರ್ನಾಟಕದಲ್ಲಿ ಕಳೆದ ಮೂರು ದಿನಗಳಿಂದ ಮಳೆಯಾಗುತ್ತಿದೆ. ಕರಾವಳಿ ಭಾಗದಲ್ಲಿ ಕಳೆದ ಎರಡು ದಿನಗಳಿಂದ ಭಾರೀ ಮಳೆ ಸುರಿಯುತ್ತಿದೆ. ಚಾರ್ಮಾಡಿ ಘಾಟ್‌ನಲ್ಲಿ ರಸ್ತೆಯಲ್ಲಿ ನೀರು ರಭಸದಿಂದ ಹರಿದು ಹೋಗುತ್ತಿರುವ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
DAKSHINA KANNADA
ಮಂಗಳೂರು – ರೌಡಿಗಳಂತೆ ಫೈಟ್ ಮಾಡಿಕೊಂಡ ಬಸ್ ಸಿಬ್ಬಂದಿ; ವಿಡಿಯೋ ವೈರಲ್
ಮಂಗಳೂರು: ವಿಟ್ಲ-ಮಂಗಳೂರು ಹಾಗೂ ಪುತ್ತೂರು-ಮಂಗಳೂರು ಮಧ್ಯೆ ಸಂಚರಿಸುವ ಖಾಸಗಿ ಬಸ್ಸಿನ ಸಿಬ್ಬಂದಿ ಪ್ರಯಾಣಿಕರ ಕಣ್ಮುಂದೆಯೇ ಪರಸ್ಪರ ಬಡಿದಾಡುತ್ತಾ ಭೀತಿಯ ವಾತಾವರಣ ಸೃಷ್ಟಿಸಿದ ಘಟನೆ ಬೆಳಕಿಗೆ ಬಂದಿದೆ.
ಒಂದು ಬಸ್ ಚಾಲಕ ಉಗುಳುವಾಗ ಇನ್ನೊಂದು ಬಸ್ ಚಾಲಕನ ಮೈಗೆ ಬಿತ್ತೆಂಬ ನೆಪದಲ್ಲಿ ಪರಸ್ಪರ ಹೊಡೆದಾಡಿಕೊಂಡಿದ್ದಾರೆ ಎಂದು ಪ್ರತ್ಯಕ್ಷದರ್ಶಿ ಪ್ರಯಾಣಿಕರು ತಿಳಿಸಿದ್ದಾರೆ.
ಇತ್ತೀಚಿನ ದಿನಗಳಲ್ಲಿ ಪ್ರತಿನಿತ್ಯ ಖಾಸಗಿ ಬಸ್‌ಗಳ ಸಿಬ್ಬಂದಿಯ ಅಟ್ಟಹಾಸ ಮಿತಿಮೀರಿದ್ದು ಸಭ್ಯ ಪ್ರಯಾಣಿಕರು ಓಡಾಡಲು ಹಿಂಜರಿಯುತ್ತಿದ್ದಾರೆ. ಪೊಲೀಸರು, ಆರ್‌ಟಿಒ ಅಧಿಕಾರಿಗಳ ನಿರ್ಲಕ್ಷ್ಯದಿಂದಾಗಿಯೇ ಖಾಸಗಿ ಬನ್ ಸಿಬ್ಬಂದಿಗಳು ಅನಾಗರಿಕರಾಗಿದ್ದಾರೆಂಬ ಆರೋಪ ಸಾರ್ವಜನಿಕರಿಂದ ವ್ಯಕ್ತವಾಗಿದೆ.
ಬಸ್ ವ್ಯವಸ್ಥೆ ಸಾರ್ವಜನಿಕ ಸೇವೆಯೆಂಬುದು ಇಂದಿನವರಿಗೆ ತಿಳಿದಿಲ್ಲವಾಗಿದೆ. ತಮ್ಮದೇ ಸಾಮ್ರಾಜ್ಯ, ತಾವು ಮಾಡಿದ್ದೇ ಆಟ, ನಾವು ನಡೆದಿದ್ದೇ ದಾರಿ ಎಂಬುದನ್ನು ತಿಳಿದಿರುವ ಇಂತಹ ಸಿಬ್ಬಂದಿಯ ಸಮಾಜ ಕಂಟಕ ವರ್ತನೆ ಸಾರ್ವಜನಿಕರ ಆತಂಕಕ್ಕೆ ಕಾರಣವಾಗಿದೆ.
‘ಇಂತಹ ಅನಾಗರಿಕ ವರ್ತನೆಯಿಂದ ಮಹಿಳೆಯರು , ಪುಟ್ಟ ಮಕ್ಕಳು ಬಸ್ಸಿನಲ್ಲಿ ಹೋಗಲು ಹಿಂದೇಟು ಹಾಕುವಂತಾಗಿದೆ. ಅಲ್ಲದೆ ಬಸ್ಸಿನ ಸಿಬ್ಬಂದಿಗಳನ್ನು ಅರ್ಧದಾರಿಯಲ್ಲೇ ಇಳಿಸಿ ಅವರನ್ನು ಅತಂತ್ರರನ್ನಾಗಿಸುವ ಕ್ರಮ ಸರಿಯಲ್ಲ. ಬೇರೆ ಬಸ್ಸು ಇಲ್ಲದೇ ಅವರು ಕಂಗೆಡುವ ಪರಿಸ್ಥಿತಿ ಕೂಡಾ ಇರುವ ಕಾರಣ ಇಂತಹ ಬಸ್ಸು ಸಿಬ್ಬಂದಿಗಳ ವಿರುದ್ದ ಕ್ರಮ ಕೈಗೊಳ್ಳಬೇಕು’ ಎಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.
ಈ ಕುರಿತ ವಿಡಿಯೋ ಫುಲ್ ವೈರಲ್ ಆಗುತ್ತಿದ್ದು, ಸಾರ್ವಜನಿಕರು ಸಿಬ್ಬಂದಿ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಆಕ್ರೋಶಿಸುತ್ತಿದ್ದಾರೆ.
ವಿಡಿಯೋ ನೋಡಿ :
- BIG BOSS7 days ago
ಕನ್ನಡ ಬಿಗ್ಬಾಸ್ನಿಂದ ಲಾಯರ್ ಜಗದೀಶ್ ಎಲಿಮಿನೇಷನ್..!
- LATEST NEWS5 days ago
ಶಿಕ್ಷಕಿಯ ಅ*ಶ್ಲೀಲ ವಿಡಿಯೋ ಹಂಚಿಕೆ; ನಾಲ್ವರು ವಿದ್ಯಾರ್ಥಿಗಳ ಬಂಧನ
- BIG BOSS7 days ago
BBK11: ಬಿಗ್ಬಾಸ್ ಮನೆಯಲ್ಲಿರೋ ಮಹಿಳಾ ಸ್ಪರ್ಧಿಗಳ ಖಾಸಗಿತನಕ್ಕೆ ಧಕ್ಕೆ; ಶೋ ವಿರುದ್ಧ ದೂರು ದಾಖಲು
- FILM3 days ago
ಎರಡನೇ ಮದುವೆಯಾಗುತ್ತಿರುವ ಬಿಗ್ಬಾಸ್ ಕಂಟೆಸ್ಟೆಂಟ್