ಮಂಗಳೂರು: ಬಜಪೆ ವಿಮಾನ ನಿಲ್ದಾಣಕ್ಕೆ ಸಂಪರ್ಕ ಕಲ್ಪಿಸುವ ಪ್ರಮುಖ ಮರವೂರು ಸೇತುವೆ ಹಾನಿಗೊಳಗಾಗಲು ಜಿಲ್ಲಾಡಳಿತದ ನಿರ್ಲಕ್ಷ್ಯ ಹಾಗೂ ಮರಳು ಮಾಫಿಯಾವೇ ಮುಖ್ಯ ಕಾರಣ ಎಂದು ಮಾಜಿ ಸಚಿವ ಅಭಯಚಂದ್ರ ಜೈನ್ ಆರೋಪಿಸಿದ್ದಾರೆ.
ಕಾಂಗ್ರೆಸ್ ಕಛೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ ‘ಮೂಲಕ ಸೇತುವೆ ಸುತ್ತಮುತ್ತ ಹೂಳೆತ್ತುವ ನೆಪದಲ್ಲಿ ಇಲ್ಲಿ ಅವ್ಯಾಹತವಾಗಿ ಮರಳು ಮಾಫಿಯಾ ನಡೆಯುತ್ತಿದೆ. ಜಿಲ್ಲಾಡಳಿತ ಹಾಗೂ ಜನಪ್ರತಿನಿಧಿಗಳು ಈ ಬಗ್ಗೆ ಮೌನ ವಹಿಸಿರುವುದು ಈ ದುರಂತಕ್ಕೆ ಕಾರಣ’ ಎಂದರು.
ರಾಜಕಾರಣಿಗಳ ಕೃಪಕಟಾಕ್ಷದಡಿಯಲ್ಲಿ ನಡೆಯುವ ಮರುಳು ಮಾಫಿಯಾದಿಂದ ಇಂತಹ ಆತಂಕದ ಪರಿಸ್ಥಿತಿ ನಿರ್ಮಾಣವಾಗಿದ್ದು, ಗಣಿಗಾರಿಕೆ ಇಲಾಖೆಯ ಭ್ರಷ್ಟ ಅಧಿಕಾರಿಗಳೂ ಇದಕ್ಕೆ ಕಾರಣ. ನಾನು ಶಾಸಕನಾಗಿದ್ದಾಗ ಇದಕ್ಕೆ ಅವಕಾಶ ನೀಡಿರಲಿಲ್ಲ ಎಂದರು.
ಯುವ ಕಾಂಗ್ರೆಸ್ ಮಾಜಿ ಜಿಲ್ಲಾಧ್ಯಕ್ಷ ಮಿಥುನ್ ರೈ ಮಾತನಾಡಿ, . ಹಳೆ ಸೇತುವೆ ಕುಸಿಯಲು ಕಾರಣದ ಬಗ್ಗೆ ನಿಷ್ಪಕ್ಷಪಾತವಾದ ತನಿಖೆ ಜಿಲ್ಲಾಧಿಕಾರಿ ನೇತೃತ್ವದಲ್ಲಿ ನಡೆಯಬೇಕು ಎಂದು ಅವರು ಒತ್ತಾಯಿಸಿ, ಡ್ರೆಜ್ಜಿಂಗ್ ನೆಪದಲ್ಲಿ ಇಲ್ಲಿ ಪ್ರತಿನಿತ್ಯ ಮರುಳುಗಾರಿಕೆ ನಡೆಯುತ್ತಿರುವುದರಿಂದ ಈ ದುರಂತ ಸಂಭವಿಸಿದೆ ಎಂದು ಹೇಳಿದರು. ಈ ವೇಳೆ ವಿನಯರಾಜ್, ಶಾಲೆಟ್ ಪಿಂಟೋ, ಅನಿಲ್ ಕುಮಾರ್, ಮೆರಿಲ್ ರೇಗೋ, ಸವದ್ ಸುಳ್ಯ, ಸಿರಾಜ್, ಹನೀಫ್ ಉಪಸ್ಥಿತರಿದ್ದರು.