Wednesday, December 1, 2021

ರಾಮಾಯಣ ಎಕ್ಸ್‌ಪ್ರೆಸ್‌ನ ವೇಟರ್‌ಗಳ ಕೇಸರಿ ಉಡುಪು ಬದಲಾವಣೆ

ಭೋಪಾಲ್: ರಾಮಾಯಣ ಎಕ್ಸ್‌ಪ್ರೆಸ್‌ನಲ್ಲಿ ವೇಟರ್‌ಗಳಿಗೆ ಕೇಸರಿ ಉಡುಪನ್ನು ಸಮವಸ್ತ್ರವಾಗಿ ನೀಡಿರುವ ಬಗ್ಗೆ ಉಜ್ಜಯಿನಿಯ ದಾರ್ಶನಿಕರು ಆಕ್ಷೇಪ ವ್ಯಕ್ತಪಡಿಸಿದ ಕೆಲವೇ ಗಂಟೆಗಳಲ್ಲಿ ಭಾರತೀಯ ರೈಲ್ವೇ ಸೋಮವಾರ ತಮ್ಮ ಸಿಬ್ಬಂದಿಯ ಸಮವಸ್ತ್ರವನ್ನು ಬದಲಾಯಿಸಿದೆ.


“ಸೇವಾ ಸಿಬ್ಬಂದಿಗೆ ವೃತ್ತಿಪರ ಉಡುಪನ್ನು ನೀಡಲಾಗಿದ್ದು, ಸಿಬ್ಬಂದಿಯ ಉಡುಗೆಯನ್ನು ಸಂಪೂರ್ಣವಾಗಿ ಬದಲಾಯಿಸಲಾಗಿದೆ ಎಂದು ತಿಳಿಸುತ್ತಿದ್ದೇವೆ.

ಸಾರ್ವಜನಿಕರಿಗೆ ಉಂಟಾದ ಅನನುಕೂಲತೆಗಾಗಿ ನಾವು ವಿಷಾದಿಸುತ್ತೇವೆ,” ಎಂದು ಭಾರತೀಯ ರೈಲ್ವೆ ಹೇಳಿಕೆಯಲ್ಲಿ ತಿಳಿಸಿದೆ.

ರಾಮಾಯಣ ಎಕ್ಸ್ ಪ್ರೆಸ್ ರೈಲಿನಲ್ಲಿ ಸೇವಾ ಸಿಬ್ಬಂದಿಗೆ ಕೇಸರಿ ಉಡುಪನ್ನು ನೀಡಿರುವ ಬಗ್ಗೆ ಪ್ರಯಾಣಿಕರು ಆಕ್ರೋಶ ವ್ಯಕ್ತಪಡಿಸಿದ್ದರು.

ಇದು ಹಿಂದೂ ಧರ್ಮಕ್ಕೆ ಮಾಡಿದ ಅವಮಾನ ಎಂದು ಆಕ್ಷೇಪಿಸಿದ ಬೆನ್ನಲ್ಲೇ ಈ ಡ್ರೆಸ್ ಕೋಡ್ ಹಿಂಪಡೆಯದಿದ್ದರೆ ಡಿಸೆಂಬರ್ 12ರಂದು ದೆಹಲಿಯಲ್ಲಿ ರೈಲನ್ನು ತಡೆದು ನಿಲ್ಲಿಸುವುದಾಗಿ ಬೆದರಿಕೆ ಹಾಕಿದ್ದರು.


ರಾಮಾಯಣ ಎಕ್ಸ್‌ಪ್ರೆಸ್‌ನಲ್ಲಿ ಇಲಾಖೆಯ ಸಿಬ್ಬಂದಿಯು ಸಾಧುವಿನಂತಹ ಶಿರಸ್ತ್ರಾಣದೊಂದಿಗೆ ಕೇಸರಿ ಉಡುಪನ್ನು ಧರಿಸುವುದು.

‘ರುದ್ರಾಕ್ಷ’ (ಪವಿತ್ರ ಬೀಜಗಳು) ‘ಮಾಲೆ’ (ಹಾರ) ಧರಿಸುವುದು ಹಿಂದೂ ಧರ್ಮ ಮತ್ತು ಅದರ ದಾರ್ಶನಿಕರಿಗೆ ಮಾಡಿದ ಅವಮಾನ ಆಗಿರುತ್ತದೆ,”

ಎಂದು ಉಜ್ಜಯಿನಿ ಅಖಾಡ ಪರಿಷತ್ತಿನ ಮಾಜಿ ಪ್ರಧಾನ ಕಾರ್ಯದರ್ಶಿ ಅವದೇಶಪುರಿ ಆರೋಪಿಸಿದ್ದಾರೆ.

ವೇಟರ್‌ಗಳ ಕೇಸರಿ ಡ್ರೆಸ್ ಕೋಡ್ ಅನ್ನು ಬದಲಾಯಿಸದಿದ್ದರೆ ದೆಹಲಿಯ ಸಫ್ದರ್‌ಜಂಗ್ ರೈಲು ನಿಲ್ದಾಣದಲ್ಲಿ ರೈಲನ್ನು ನಿಲ್ಲಿಸುವುದಾಗಿ ಅವರು ಹೇಳಿದರು. ಹಿಂದೂ ಧರ್ಮದ ರಕ್ಷಣೆಗೆ ಇದು ಅಗತ್ಯ ಎಂದು ತಿಳಿಸಿದ್ದರು.

Hot Topics

ಸಾಲದ ಹೊರೆ ತಾಳಲಾರದೆ ವೀಡಿಯೋ ಮೂಲಕ ಗುಡ್​ಬೈ ಹೇಳಿ ಶಿಕ್ಷಕ ದಂಪತಿ ಆತ್ಮಹತ್ಯೆ

ವಿಜಯವಾಡ: ಶಾಲೆ ನಡೆಸುತ್ತಿದ್ದ ಶಿಕ್ಷಕ ದಂಪತಿ ಸಾಲದ ಹೊರೆ ತಡೆಯಲಾರದೇ ವಿಷಸೇವಿಸಿ ಆತ್ಮಹತ್ಯೆ ಹಾದಿ ಹಿಡಿರುವ ದಾರುಣ ಘಟನೆ ಆಂಧ್ರ ಪ್ರದೇಶದ ಕರ್ನೂಲ್​ ಜಿಲ್ಲೆಯಲ್ಲಿ ನಡೆದಿದೆ. ಸಾವಿಗೂ ಮುನ್ನ ಶಿಕ್ಷಕ ದಂಪತಿ ತಮ್ಮ...

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..!

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..! ಉಡುಪಿ : ಉಡುಪಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾರಿ ಮಳೆಯ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಕಾಪು ಬಳಿ...

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..!

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..! ಮಂಗಳೂರು:  ಎಂಟು ವರ್ಷದ ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಮಾಡಿರುವ ದಾರುಣ ಘಟನೆ ಹಳೆಯಂಗಡಿ ಬಳಿಯ ಕಲ್ಲಾಪು ರೈಲ್ವೇ ಗೇಟ್...