Thursday, September 29, 2022

ಮಹಿಳೆ ರಿಕ್ಷಾದಲ್ಲಿ ಬಿಟ್ಟು ಹೋಗಿದ್ದ ಬ್ಯಾಗ್‌ನ್ನು ಹಿಂತಿರುಗಿಸಿದ ಚಾಲಕ

ಬಳ್ಳಾರಿ: ಚಾಲಕನೋರ್ವ ಮಹಿಳೆಯೊಬ್ಬರು ತನ್ನ ಆಟೋರಿಕ್ಷಾದಲ್ಲಿ ಬಿಟ್ಟು ಹೋಗಿದ್ದ ಆಭರಣ ಹಾಗೂ ನಗದು ಇದ್ದ ಬ್ಯಾಗೊಂದನ್ನು ವಾಪಸ್ ನೀಡಿ ಪ್ರಾಮಾಣಿಕತೆ ಮೆರೆದ ಘಟನೆ ಬಳ್ಳಾರಿಯಲ್ಲಿ ನಡೆದಿದೆ.


ನಜ್ಮಾ ಎಂಬ ಮಹಿಳೆ ಆಟೋದಲ್ಲಿ ಪ್ರಯಾಣ ಮಾಡುವಾಗ ಬ್ಯಾಗ್ ಮರೆತು ಅದ್ರಲ್ಲೇ ಬಿಟ್ಟು ಹೋಗಿದ್ದರು.

ಇದನ್ನು ತಕ್ಷಣವೇ ಗಮನಿಸಿದ ಆಟೋ ಚಾಲಕ ಅಬ್ದುಲ್ ರಹೀಂ ಅದರಲ್ಲಿ ಒಡವೆ ಹಾಗೂ 1900 ರೂ ಹಣ ಇರುವುದು ತಿಳಿದುಬಂದಿದೆ.


ಕೂಡಲೇ ಈತ ಸಿರುಗುಪ್ಪ ಪೊಲೀಸ್ ಠಾಣೆಗೆ ಮಾಹಿತಿ ನೀಡಿದ್ದಾನೆ. ಪೊಲೀಸರ ಉಪಸ್ಥಿತಿಯಲ್ಲಿ ಆಭರಣ ಹಾಗೂ ಹಣವನ್ನು ಹಿಂತಿರುಗಿಸಿ ಪ್ರಾಮಾಣಿಕತೆ ಮೆರೆದಿದ್ದಾರೆ.

ಇವರ ಕಾರ್ಯಕ್ಕೆ ಸಾರ್ವಜನಿಕರು ಪ್ರಶಂಸೆ ವ್ಯಕ್ತಪಡಿಸಿದ್ದಾರೆ.

LEAVE A REPLY

Please enter your comment!
Please enter your name here

Hot Topics

ಉಡುಪಿ: ರಸ್ತೆ ಅವ್ಯವಸ್ಥೆ-ಕೋಣಗಳ ಜೊತೆ ಕಾಂಗ್ರೆಸ್ ಕಾರ್ಯಕರ್ತರ ವಿನೂತನ ಪ್ರತಿಭಟನೆ

ಉಡುಪಿ: ಮಲ್ಪೆಗೆ ಹೋಗುವ ರಾಷ್ಟ್ರೀಯ ಹೆದ್ದಾರಿ ಸಂಪೂರ್ಣ ಹದಗೆಟ್ಟಿದ್ದು ಪ್ರವಾಸಿಗರ ಸಂಚಾರಕ್ಕೆ ತೊಡಕು ಉಂಟಾಗುತ್ತಿದೆ. ಸದ್ಯ ಪ್ರವಾಸಿಗರ ಸಂಖ್ಯೆ ಹೆಚ್ಚಳದಿಂದ ದಿನನಿತ್ಯ ಟ್ರಾಫಿಕ್ ಜಾಮ್ ಆಗುತ್ತಿದೆ. ಪ್ರವಾಸಿಗರು ಹಾಗೂ ಸ್ಥಳೀಯರು ಅನುಭವಿಸುತ್ತಿರುವ ಕಷ್ಟವನ್ನು...

ಪುತ್ತೂರು: PFI ಪ್ರಧಾನ ಕಛೇರಿಗೆ ಬೆಳಿಗ್ಗೆಯಿಂದಲೇ ಬೀಗ-ಗುಪ್ತಸಭೆ ನಡೆಸುತ್ತಿದ್ದ ಆರೋಪ

ಪುತ್ತೂರು: ದೇಶದಾದ್ಯಂತ ಪಿಎಫ್ಐ ಹಾಗೂ ಅದರ ಬೆಂಬಲಿತ ಸಂಘಟನೆಗಳಿಗೆ ಕೇಂದ್ರ ಗೃಹ ಸಚಿವಾಲಯ ನಿಷೇಧ ಹೇರಿರುವ ಮಧ್ಯೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ನಗರದ ಹೃದಯ ಭಾಗದಲ್ಲಿ ಕಾರ್ಯಾಚರಿಸುತ್ತಿರುವ ಪಿಎಫ್ಐ ನ ಪ್ರಧಾನ...

ಬ್ರೇಕಿಂಗ್ ನ್ಯೂಸ್: PFI ಸಂಘಟನೆ ಇನ್ನು 5ವರ್ಷ ಬ್ಯಾನ್-ಕೇಂದ್ರದ ಮಹತ್ವದ ಆದೇಶ

ನವದೆಹಲಿ: ಇಂದಿನಿಂದಲೇ ಜಾರಿಗೆ ಬರುವಂತೆ ಕೇಂದ್ರ ಸರ್ಕಾರವು ಪಿಎಫ್‌ಐ ಸಂಘಟನೆ ಮತ್ತು ಅದರ ಅಂಗಸಂಸ್ಥೆಗಳನ್ನು ಮುಂದಿನ 5 ವರ್ಷಗಳ ಕಾಲ ನಿಷೇಧ ಮಾಡಿ ಮಹತ್ವದ ಆದೇಶ ಹೊರಡಿಸಿದೆ.ಈ ಸಂಘಟನೆಗಳು ಕಾನೂನುಬಾಹಿರ ಎಂದು ತಕ್ಷಣದಿಂದಲೇ...