Thursday, October 21, 2021

ಸೌದಿ ವಿಮಾನ ನಿಲ್ದಾಣಕ್ಕೆ ಡ್ರೋನ್ ದಾಳಿ: 8 ಜನರಿಗೆ ಗಂಭೀರ ಗಾಯ

ಅಬಾ: ಸೌದಿ ಅರೇಬಿಯಾದ ಅಬಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಮತ್ತೊಂದು ಡ್ರೋನ್ ದಾಳಿ ನಡೆಸಲಾಗಿದೆ. ಈ ದುರ್ಘಟನೆಯಲ್ಲಿ 8 ಜನರಿಗೆ ಗಂಭೀರ ಗಾಯಗಳಾಗಿದ್ದು, ಏರ್​ಪೋರ್ಟ್​ನಲ್ಲಿದ್ದ ನಾಗರಿಕ ವಿಮಾನಕ್ಕೆ ಹಾನಿಯಾಗಿದೆ.

ಅಬಾ ವಿಮಾನ ನಿಲ್ದಾಣದಲ್ಲಿ ಕಳೆದ 24 ಗಂಟೆಗಳಲ್ಲಿ ನಡೆಯುತ್ತಿರುವ ಎರಡನೇ ಡ್ರೋನ್ ದಾಳಿ ಇದಾಗಿದ್ದು, ಸೌದಿ ಅರೇಬಿಯಾದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ.


ಈ ಡ್ರೋನ್ ದಾಳಿಯ ಹಿಂದೆ ಯಾರ ಕೈವಾಡವಿದೆ ಎಂಬ ಬಗ್ಗೆ ಇನ್ನೂ ಯಾವುದೇ ಮಾಹಿತಿ ಲಭ್ಯವಾಗಿಲ್ಲ.

ಯಾವ ಸಂಘಟನೆಯೂ ಬಹಿರಂಗವಾಗಿ ಇದರ ಜವಾಬ್ದಾರಿ ಹೊರದ ಕಾರಣ ಈ ಕುರಿತು ಇನ್ನಷ್ಟೇ ತನಿಖೆಯಾಗಬೇಕಾಗಿದೆ.

ಈ ದುರಂತದಲ್ಲಿ ಯಾವುದೇ ಪ್ರಾಣಾಪಾಯವಾಗಿಲ್ಲ. ಸದ್ಯಕ್ಕೆ ಗಾಯಗೊಂಡಿರುವವರನ್ನು ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ಕೊಡಿಸಲಾಗುತ್ತಿದೆ ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ.

ಇದಕ್ಕೂ ಮೊದಲು ನೈಋತ್ಯ ಯೆಮನ್​ನಲ್ಲಿ ಸೌದಿ ಅರೇಬಿಯಾ ನೇತೃತ್ವದ ಮೈತ್ರಿ ಪಡೆಗಳ ಮೇಲೆ ಡ್ರೋನ್ ದಾಳಿ ನಡೆಸಲಾಗಿತ್ತು.

ಈ ದುರಂತದಲ್ಲಿ ಸುಮಾರು 30 ಸೈನಿಕರು ಸಾವನ್ನಪ್ಪಿ, 60ಕ್ಕೂ ಹೆಚ್ಚು ಜನರು ಗಂಭೀರವಾಗಿ ಗಾಯಗೊಂಡಿದ್ದರು.

ಸೌದಿ ಅರೇಬಿಯಾ ನೇತೃತ್ವದ ಮೈತ್ರಿ ಪಡೆ ಹಾಗೂ ಹೌಥಿಗಳ ನಡುವಿನ ಮಾತುಕತೆ ವಿಫಲವಾದ ಬೆನ್ನಲ್ಲೇ ಡ್ರೋನ್ ದಾಳಿ ನಡೆಸಲಾಗಿತ್ತು.

Hot Topics

ಸಾಲದ ಹೊರೆ ತಾಳಲಾರದೆ ವೀಡಿಯೋ ಮೂಲಕ ಗುಡ್​ಬೈ ಹೇಳಿ ಶಿಕ್ಷಕ ದಂಪತಿ ಆತ್ಮಹತ್ಯೆ

ವಿಜಯವಾಡ: ಶಾಲೆ ನಡೆಸುತ್ತಿದ್ದ ಶಿಕ್ಷಕ ದಂಪತಿ ಸಾಲದ ಹೊರೆ ತಡೆಯಲಾರದೇ ವಿಷಸೇವಿಸಿ ಆತ್ಮಹತ್ಯೆ ಹಾದಿ ಹಿಡಿರುವ ದಾರುಣ ಘಟನೆ ಆಂಧ್ರ ಪ್ರದೇಶದ ಕರ್ನೂಲ್​ ಜಿಲ್ಲೆಯಲ್ಲಿ ನಡೆದಿದೆ. ಸಾವಿಗೂ ಮುನ್ನ ಶಿಕ್ಷಕ ದಂಪತಿ ತಮ್ಮ...

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..!

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..! ಉಡುಪಿ : ಉಡುಪಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾರಿ ಮಳೆಯ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಕಾಪು ಬಳಿ...

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..!

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..! ಮಂಗಳೂರು:  ಎಂಟು ವರ್ಷದ ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಮಾಡಿರುವ ದಾರುಣ ಘಟನೆ ಹಳೆಯಂಗಡಿ ಬಳಿಯ ಕಲ್ಲಾಪು ರೈಲ್ವೇ ಗೇಟ್...