Connect with us

LATEST NEWS

ಮಾದಕ ವಸ್ತು ಸೇವನೆ ಪ್ರಕರಣ: 42 ವಿದ್ಯಾರ್ಥಿಗಳನ್ನು ಸಸ್ಪೆಂಡ್‌ಗೊಳಿಸಿದ ಮಾಹೆ ವಿವಿ

Published

on

ಉಡುಪಿ: ಮಾದಕ ವಸ್ತು ಸೇವನೆ ಪ್ರಕರಣಗಳಲ್ಲಿ ಆರೋಪವನ್ನು ಎದುರಿಸುತ್ತಿರುವ ಮಣಿಪಾಲ ಮಾಹೆ ವಿವಿಯ 42 ಮಂದಿ ವಿದ್ಯಾರ್ಥಿಗಳನ್ನು ವಿವಿ ಆಡಳಿತ ಮಂಡಳಿ ಒಂದು ತಿಂಗಳ ಅವಧಿಗೆ ಅಮಾನತು ಮಾಡಿ ಆದೇಶ ಹೊರಡಿಸಿದೆ.


ಮಣಿಪಾಲ ಪೊಲೀಸ್ ಠಾಣೆಯಲ್ಲಿ ದಾಖಲಾದ ಮಾದಕ ವಸ್ತು ಸೇವನೆ ಪ್ರಕರಣಗಳಲ್ಲಿ ಮಾಹೆಯ ಒಟ್ಟು 42 ವಿದ್ಯಾರ್ಥಿಗಳ ವಿರುದ್ಧ ಪ್ರಕರಣ ದಾಖಲಾಗಿದ್ದು,

ಮಾದಕ ದ್ರವ್ಯ ಸೇವನೆ ವಿರುದ್ಧ ಶೂನ್ಯ ಸಹಿಷ್ಣುತೆ ನೀತಿಯನ್ನು ಅನುಸರಿಸುತ್ತಿರುವ ಮಾಹೆ ವಿವಿ ಈ ಬಗ್ಗೆ ಆಂತರಿಕ ತನಿಖೆ ಕೈಗೊಂಡಿದ್ದು, ತನಿಖೆ ಪೂರ್ಣಗೊಳ್ಳುವವರೆಗೆ ಈ ಎಲ್ಲಾ ವಿದ್ಯಾರ್ಥಿಗಳನ್ನು ಅಮಾನತುಗೊಳಿಸಲಾಗಿದೆ ಎಂದು ಮಾಹೆ ಹೇಳಿಕೆಯಲ್ಲಿ ತಿಳಿಸಲಾಗಿದೆ.
ಈ ಕುರಿತು ಸುದ್ದಿಗಾರರಿಗೆ ಮಾಹಿತಿ ನೀಡಿದ ಉಡುಪಿ ಜಿಲ್ಲಾ ಎಸ್ಪಿ ಅಕ್ಷಯ್ ಹಾಕೆ ಮಚ್ಚೀಂದ್ರ, ಮಣಿಪಾಲ ಠಾಣಾ ವ್ಯಾಪ್ತಿಯಲ್ಲಿ ನಾವು ಹಲವಾರು ಮಾದಕ ದ್ರವ್ಯ ಸೇವನಾ ಪ್ರಕರಣಗಳನ್ನು ಪತ್ತೆ ಮಾಡಿದ್ದು, ಈ ಕಾರ್ಯಚರಣೆಯಲ್ಲಿ ಅನೇಕ ಮಂದಿ ಪೆಡ್ಲರ್‌ಗಳನ್ನು ವಶಕ್ಕೆ ಪಡೆದಿದ್ದೇವೆ.

ಈ ಪೆಡ್ಲರ್‌ಗಳ ಮೂಲಕ ಗ್ರಾಹಕರು ಯಾರು ಅನ್ನೋದು ಪತ್ತೆಯಾಗಿದ್ದು, ಕೆಲ ಗ್ರಾಹಕರಿಂದ ಪೆಡ್ಲರ್‌ಗಳು ಯಾರು ಎಂಬುದು ಸಹ ಪತ್ತೆಯಾಗಿದೆ. ಮಾಹೆಯ ಕೆಲ ವಿದ್ಯಾರ್ಥಿಗಳು ಕೂಡ ಪೆಡ್ಲರ್‌ಗಳಾಗಿರುವ ಮಾಹಿತಿ ಸಿಕ್ಕಿದ್ದು, ಅವರಿಂದ ಹೆಚ್ಚಿನ ಪ್ರಮಾಣದ ಮಾದಕ ದ್ರವ್ಯಗಳು ಪತ್ತೆಯಾಗಿತ್ತು. ಈ ಪ್ರಕರಣ ಬಗ್ಗೆ ನಾವು ವಿವಿಗೆ ವಿವರವಾದ ಮಾಹಿತಿ ನೀಡಿದ್ದೆವು ಎಂದರು.
ಕಾಲೇಜು ಮತ್ತು ಹಾಸ್ಟೆಲ್ ಆವರಣದಲ್ಲಿ ಡ್ರಗ್ಸ್ ವ್ಯವಹಾರ ನಡೆದ ಬಗ್ಗೆ ವಿದ್ಯಾರ್ಥಿಗಳನ್ನು ಗುರುತಿಸಿ ಪಟ್ಟಿ ನೀಡಿದ್ದೇವೆ. ಟೆಸ್ಟಿಂಗ್ ಮೂಲಕ ಸಾಬೀತಾಗಿರುವ ಪ್ರಕರಣಗಳ ವಿವರ ಕೂಡ ವಿವಿಗೆ ನೀಡಿದ್ದೇವೆ. ಮಣಿಪಾಲ ವಿವಿ ಈ ವಿಚಾರಗಳಲ್ಲಿ ಸಕಾರಾತ್ಮಕವಾಗಿ ಸ್ಪಂದಿಸಿದೆ. ಇದೀಗ ಮಣಿಪಾಲ ವಿವಿ 42 ಮಂದಿಯನ್ನು ಅಮಾನತು ಮಾಡಿದೆ.

ಈ ವಿಚಾರದಲ್ಲಿ ಪೊಲೀಸ್ ಇಲಾಖೆಯಾಗಲಿ ವಿವಿಯಾಗಲಿ ನಿರ್ಲಕ್ಷ್ಯ ವಹಿಸುವುದಿಲ್ಲ ಅನ್ನೋ ಸಂದೇಶ ಎಲ್ಲರಿಗೂ ರವಾನೆಯಾಗಿದೆ ಎಂದರು.
ಮಾದಕ ದ್ರವ್ಯ ಸೇವನೆ ಮಾಡಿದವರನ್ನು ಮಾಹೆ ವಿವಿ ತಾತ್ಕಾಲಿಕವಾಗಿ ಅಮಾನತು ಮಾಡಿದೆ. ಅಮಾನತು ಮಾಡಲಾದ ವಿದ್ಯಾರ್ಥೀಗಳಿಗೆ ಒಂದು ತಿಂಗಳ ಕಾಲ ತರಗತಿ ಹಾಜರಾಗಲು ಅವಕಾಶವಿಲ್ಲ.

ವಿಶ್ವವಿದ್ಯಾನಿಲಯದ ಯಾವುದೇ ಸೌಲಭ್ಯಗಳನ್ನು ಅವರು ಬಳಸುವಂತಿಲ್ಲ. ಪೆಡ್ಲರ್‌ಗಳ ಮೇಲೆ ಮತ್ತಷ್ಟು ಗಂಭೀರ ಕ್ರಮ ಕೈಗೊಳ್ಳಲಾಗುವುದು ಮಾತ್ರವಲ್ಲದೆ ಅವರ ವಿರುದ್ಧ ಪೋಲಿಸ್ ಇಲಾಖೆ ಕ್ರಿಮಿನಲ್ ಕೇಸ್ ಸಹ ಹಾಕಲಿದೆ ಎಂದರು.

ಮಾದಕ ವಸ್ತುಗಳ ಸೇವನೆಯ ವಿರುದ್ಧ ವಿದ್ಯಾರ್ಥಿಗಳಲ್ಲಿ ಜಾಗೃತಿ ಮೂಡಿಸಿ, ಮಾನಸಿಕವಾಗಿ ಧೈರ್ಯವನ್ನು ತುಂಬಲಾಗುತ್ತದೆ.

ಮಾದಕ ಸೇವನೆ ಮಾಡಿದವರನ್ನು ಕ್ರಿಮಿನಲ್‌ಗಳೆಂದು ಪರಿಗಣಿಸಲಾಗುವುದಿಲ್ಲ. ಆದರೆ ಪೆಡ್ಲರ್‌ಗಳನ್ನು ಕ್ರಿಮಿನಲ್‌ಗಳೆಂದೇ ಪರಿಗಣಿಸಿ ಕಾನೂನು ಕ್ರಮ ಕೈಗೊಳ್ಳುತ್ತೇವೆ ಎಂದು ಹಾಕೆ ತಿಳಿಸಿದರು.

FILM

ಬೆಳ್ಳಿತೆರೆಯಲ್ಲಿ ಮತ್ತೊಮ್ಮೆ ಅಬ್ಬರಿಸಲಿದೆ ‘ಪುನೀತ್’ ಸಿನೆಮಾ..! ಯಾವ ಸಿನೆಮಾ?

Published

on

ಬೆಂಗಳೂರು: ಪವರ್‌ಸ್ಟಾರ್‌ ಪುನೀತ್‌ ರಾಜ್‌ಕುಮಾರ್‌ ಅಭಿನಯದ ಫ್ಯಾಮಿಲಿ ಪ್ಯಾಕೇಜ್, ಹಿಟ್ ಮೂವಿಯೊಂದು ರಿ ರಿಲೀಸ್‌ಗೆ ರೆಡಿಯಾಗಿದೆ. ಮಾರ್ಚ್‌ ನಲ್ಲಿ ಅಪ್ಪು ಅಭಿನಯದ ಜಾಕಿ ಚಿತ್ರ ರಿ ರಲೀಸ್‌ ಆಗಿದ್ದು ಹಿಟ್‌ ಲಿಸ್ಟ್‌ಅಲ್ಲಿ ಸೇರಿಕೊಂಡಿದೆ. ಇದೀಗ ಅವರ ಅಭಿನಯದ ಮತ್ತೊಂದು ಸಿನೆಮಾ ‘ಅಂಜನಿಪುತ್ರ’ ರಿ ರಲೀಸ್‌ಗೆ ತಯಾರಾಗಿದೆ.

anjani

ರಿ ರಿಲೀಸ್ ಯಾವಾಗ?

ಪುನೀತ್‌ ರಾಜ್‌ಕುಮಾರ್, ರಶ್ಮಿಕಾ ಮಂದಣ್ಣ, ರಮ್ಯಾ ಕೃಷ್ಣನ್‌ ಮುಖ್ಯಭೂಮಿಕೆಯಲ್ಲಿ ನಟಿಸಿದ್ದ ಅಂಜನಿ ಪುತ್ರ ಸಿನಿಮಾ ಇದೀಗ ಮರು ಬಿಡುಗಡೆ ಆಗುತ್ತಿದೆ. ಹರ್ಷ ನಿರ್ದೇಶನದಲ್ಲಿ ಮೂಡಿ ಬಂದ ಈ ಚಿತ್ರ, ಎನ್‌ಎಮ್‌ಕೆ ಮೂವೀಸ್ ಲಾಂಛನದಲ್ಲಿ ಬಿಡುಗಡೆಗೊಂಡಿತ್ತು.  2017ರಲ್ಲಿ ಬಿಡುಗಡೆ ಆಗಿದ್ದ ಈ ಸಿನಿಮಾ ಈಗ ಆರು ವರ್ಷಗಳ ಬಳಿಕ ಮತ್ತೆ ಚಿತ್ರಮಂದಿರಕ್ಕೆ ಬರುತ್ತಿದೆ.  ರಾಜ್ಯದ  ಹಲವು ಚಿತ್ರಮಂದಿರಗಳಲ್ಲಿ ಮೇ.10ರಂದು ಸಿನೆಮಾ ರಿಲೀಸ್ ಆಗಲಿದೆ ಎಂದು ನಿರ್ಮಾಪಕ ಎಮ್‌ಎನ್ ಕುಮಾರ್ ತಿಳಿಸಿದ್ದಾರೆ.

 

ಮುಂದೆ ಓದಿ..; ನೇ*ಣಿಗೆ ಶರಣಾದ ಯುವ ನಟಿ..! ಸಾ*ವಿಗೂ ಮುನ್ನ ವ್ಯಾಟ್ಸಾಪ್ ಸ್ಟೇಟಸ್‌ನಲ್ಲಿ ಬರೆದಿದ್ದೇನು..!

ರವಿ ಬಸ್ರೂರು ಸಂಗೀತ ನಿರ್ದೇಶನದಲ್ಲಿ ಮೂಡಿ ಬಂದ ಈ ಚಿತ್ರ ಹಿಟ್‌ ಸಾಂಗ್‌ಗಳನ್ನು ಒಳಗೊಂಡಿದೆ. ಅದರಲ್ಲೂ’ಭಾರಿ ಖುಷಿ ಮರ್ರೆ ನನ್ನ ಹೆಂಡ್ತಿ ಕಂಡ್ರೆ’ ಸಾಂಗ್ ಎಲ್ಲರ ತುಟಿಯಂಚಿನಲ್ಲಿ ಈಗಲೂ ಗುಣುಗುಟ್ಟುವಂತಿದೆ. ಮುಂದಿನ ದಿನಗಳಲ್ಲಿ ಪುನೀತ್ ಹಲವು ಸಿನೆಮಾಗಳು ರಿ ರಿಲೀಸ್ ಆಗುವ ಸಾಧ್ಯತೆ ಹೆಚ್ಚಿದೆ ಎಂದು ಹೇಳಲಾಗಿದೆ.

Continue Reading

DAKSHINA KANNADA

ಮೇ 3 ರಂದು ಗಬ್ಬರ್ ಸಿಂಗ್ ತುಳು ಸಿನಿಮಾ ತೆರೆಗೆ

Published

on

ಮಂಗಳೂರು: ಮುತ್ತು ಗೋಪಾಲ್ ಫಿಲ್ಮ್ಸ್ ಬಾರ್ಕೂರು ಲಾಂಛನದಲ್ಲಿ ತಯಾರಾದ ಸತೀಶ್ ಬಾರ್ಕೂರು ನಿರ್ಮಾಣದ ಗಬ್ಬರ್ ಸಿಂಗ್ ತುಳು ಚಲನ ಚಿತ್ರ ಮೇ 3 ರಂದು ಕರಾವಳಿ ಜಿಲ್ಲೆಯಾದ್ಯಂತ ತೆರೆ ಕಾಣಲಿದೆ.

ಉತ್ತರ ಪ್ರದೇಶದಲ್ಲಿ ನಡೆದ ಘಟನೆಯೊಂದನ್ನು ಆಧರಿಸಿ ಗಬ್ಬರ್ ಸಿಂಗ್ ತುಳು ಸಿನಿಮಾ ಕಥೆಯನ್ನು ಹೆಣೆಯಲಾಗಿದೆ. ಸಿನಿಮಾದಲ್ಲಿ ಆರು ಹಾಡು, ನಾಲ್ಕು ಫೈಟ್ಸ್ ಇದೆ. ಈ ಚಿತ್ರವನ್ನುಸುರತ್ಕಲ್, ಚಿತ್ರಾಪುರ, ಬೈಕಂಪಾಡಿ ಮೊದಲಾದ ಪ್ರದೇಶಗಳಲ್ಲಿ ಚಿತ್ರೀಕರಣ ನಡೆಸಲಾಗಿದೆ. ನಾಯಕ ನಟನಾಗಿ ಶರಣ್ ಶೆಟ್ಟಿ ನಾಯಕಿಯಾಗಿ ವೆನ್ಸಿಟಾ ಅಭಿನಯಿಸಿದ್ದಾರೆ. ಗಬ್ಬರ್ ಸಿಂಗ್ ಸಿನಿಮಾ ಈಗಾಗಲೇ ಮಸ್ಕತ್ ಮತ್ತು ಉಡುಪಿಯಲ್ಲಿ ಸಿನಿಮಾದ ಪ್ರೀಮಿಯರ್ ಶೋ ನಡೆದಿದೆ. ಎಂದು ನಿರ್ಮಾಪಕ ಸತೀಶ್ ಬಾರ್ಕೂರು ತಿಳಿಸಿದ್ದಾರೆ.

“ಗಬ್ಬರ್ ಸಿಂಗ್” ಆ್ಯಕ್ಷನ್ ಥ್ರಿಲ್ಲರ್ ಫ್ಯಾಮಿಲಿ ಓರಿಯೆಂಟೆಡ್ ಫಿಲ್ಮ್ ಆಗಿದೆ. ಈ ಸಿನಿಮಾದ ಕಥೆ, ಚಿತ್ರಕಥೆ, ನಿರ್ಮಾಪಕರು ಸತೀಶ್ ಪೂಜಾರಿ ಬಾರ್ಕೂರ್ , ನಿರ್ದೇಶನದ ಜವಾಬ್ದಾರಿಯನ್ನು ಪ್ರದೀಪ್ ವಹಿಸಿದ್ದಾರೆ. ಮಧು ಸುರತ್ಕಲ್ ಸಂಭಾಷಣೆ ರಚಿಸಿದ್ದಾರೆ.

ಮುಖ್ಯ ಪಾತ್ರದಲ್ಲಿ ಕುಸೇಲ್ದರಸೆ ನವೀನ್ ಡಿ ಪಡೀಲ್, ಅರವಿಂದ ಬೋಳಾರ್, ಭೋಜರಾಜ ವಾಮಂಜೂರು, ಪ್ರಸನ್ನ ಶೆಟ್ಟಿ ಬೈಲೂರು, ಸಾಯಿಕೃಷ್ಣ, ಉಮೇಶ್ ಮಿಜಾರ್, ರವಿರಾಮ ಕುಂಜ, ಗಿರೀಶ್ ಎಂ. ಶೆಟ್ಟಿ ಕಟೀಲ್, ವೀಣಾ ಶೆಟ್ಟಿ ಉಡುಪಿ, ಅಥರ್ವ ಪ್ರಕಾಶ್, ಉದಯ ಆಳ್ವ ಇಡ್ಯಾ, ಸಂದೀಪ್ ಭಕ್ತ, ಕಿರಣ್ ಮಲ್ಪೆ, ಪೂರ್ಣಿಮಾ ಶೆಟ್ಟಿ, ಪವಿತ್ರ ಶೆಟ್ಟಿ,ಚಂದ್ರಹಾಸ ಶೆಟ್ಟಿ ಮಾಣಿ, ಸಂಪತ್ ಲೋಬೋ, ಆಶಾ ಶೆಟ್ಟಿ ಶಿಬರೂರು, ಲಹರಿ ಶೆಟ್ಟಿ ಪಡ್ರೆ, ಶಿಲ್ಪಾ ಶೆಟ್ಟಿ, ಭವ್ಯಾ ಶೆಟ್ಟಿ ಸುರತ್ಕಲ್ ಸಂತೋಷ್, ಚಂದ್ರಹಾಸ ಶೆಟ್ಟಿ ಕಪ್ಪೆಟ್ಟು, ಫ್ರಾಂಕಿ ಕೊಳಲಗಿರಿ, ಉಮೇಶ್ ಶೆಟ್ಟಿ ಹಾವಂಜೆ, ಬೇಬಿ ಆಧ್ಯಾ ಉಡುಪಿ ಮೊದಲಾದವರಿದ್ದಾರೆ.

ಛಾಯಾಗ್ರಹಣ: ರವಿ ಸುವರ್ಣ, ಸಂಕಲನ: ಪ್ರಜ್ವಲ್ ಸುವರ್ಣ, ಕಲೆ: ವೆಂಕಟೇಶ್ ಬೆಂಗಳೂರು, ಸಂಗೀತ: ಡೊಲ್ಪಿನ್ ಕೊಳಲಗಿರಿ. ಹಿನ್ನಲೆ ಸಂಗೀತ: ಕಾರ್ತಿಕ್ ಮುಲ್ಕಿ, ಸಾಹಸ: ಅಲ್ಟಿಮೆಟ್ ಶಿವ್ ನೃತ್ಯ: ಅವಿನಾಶ್ ಬಂಗೇರ, ಶುಭಕಿರಣ್, ಮೇಕಪ್ ಪ್ರದೀಪ್, ವಸ್ತ್ರಾಲಂಕಾರ : ಶರತ್ ಬರ್ಕೆ, ಸಹ ನಿರ್ದೇಶನ: ಪುಷ್ಪರಾಜ ರೈ, ಜಯರಾಜ್, ಸಹಾಯ: ಭಾಗ್ಯರಾಜ್ ಮಾಡಿದ್ದಾರೆ.

ಪ್ರೀಮಿಯರ್ ಶೋ

ಈಗಾಗಲೇ ಮಸ್ಕತ್, ಕತಾರ್ ಉಡುಪಿ, ಸುರತ್ಕಲ್ ನಲ್ಲಿ ಗಬ್ನರ್ ಸಿಂಗ್ ಸಿನಿಮಾದ ಪ್ರೀಮಿಯರ್ ಶೋ ನಡೆದಿದೆ. ಪ್ರೇಕ್ಷಕರಿಂದ ಉತ್ತಮ ಪ್ರತಿಕ್ರಿಯೆ ಲಭಿಸಿದೆ. ಸಾಂಸಾರಿಕ ಕತೆಯ ಜೊತೆ ಇಲ್ಲಿ ಹಾಸ್ಯವೂ ಚೆನ್ನಾಗಿ ವಕ್೯ಹೌಟ್ ಆಗಿದೆ. ನವೀನ್ ಪಡೀಲ್, ಬೋಜರಾಜ್ ವಾಮಂಜೂರು, ಅರವಿಂದ ಬೋಳಾರ್, ಸಾಯಿಕೃಷ್ಣ, ಉಮೇಶ್ ಮಿಜಾರ್, ಪ್ರಸನ್ನ ಶೆಟ್ಟಿ ಬೈಲೂರು, ರವಿರಾಮ ಕುಂಜ ಇವರ ಹಾಸ್ಯ ಸಕ್ಕತ್ತಾಗಿದೆ. ಜೊತೆಗೆ ಗಿರೀಶ್ ಶೆಟ್ಟಿ ಕಟೀಲು, ವೀಣಾ ಶೆಟ್ಟಿ ಉಡುಪಿ, ಅಥರ್ವ ಪ್ರಕಾಶ್ ಮೊದಲಾದವರ ಪಾತ್ರಗಳೂ ಕೂಡಾ ಇಲ್ಲಿ ಪ್ರಾಮುಖ್ಯತೆಯನ್ನು ಪಡೆದಿದೆ ಎಂದು ನಿರ್ಮಾಪಕ ಸತೀಶ್ ಬಾರ್ಕೂರು ತಿಳಿಸಿದ್ದಾರೆ.

ಪತ್ರಿಕಾಗೋಷ್ಠಿಯಲ್ಲಿ ಚಿತ್ರದ ನಿರ್ಮಾಪಕ ಸತೀಶ್ ಪೂಜಾರಿ ಬಾರ್ಕೂರು, ನಟ ಭೋಜರಾಜ ವಾಮಂಜೂರು, ಮಧು ಸುರತ್ಕಲ್, ಚಂದ್ರ ಶೇಖರ ನಾನಿಲ್ ಹಳೆಯಂಗಡಿ, ನಟ ಶರಣ್ ಶೆಟ್ಟಿ
ನಟಿ ವೆನ್ಸಿಟಾ ಇದ್ದರು.

Continue Reading

DAKSHINA KANNADA

ಸಾವಿನಲ್ಲೂ ಒಂದಾದ ಸಹೋದರರು! ಅಣ್ಣನ ನಿಧನದ ಸುದ್ದಿ ಕೇಳಿ ಇಹಲೋಕ ತ್ಯಜಿಸಿದ ತಮ್ಮ

Published

on

ಸುಳ್ಯ :  ಸಹೋದರರಿಬ್ಬರು ಸಾ*ವಿನಲ್ಲೂ ಒಂದಾದ ಘಟನೆ ಸುಳ್ಯದ ಅರಂತೋಡಿನಲ್ಲಿ ನಡೆದಿದೆ. ಅರಂತೋಡು ಗ್ರಾಮದ 82 ವರ್ಷದ ಎಸ್. ಇ. ಅಬ್ದುಲ್ಲಾ ಹಾಗೂ ಮಹಮ್ಮದ್ ಎಸ್. ಇ  ಮೃ*ತ ಸಹೋದರರು.

ಅಬ್ದುಲ್ಲಾ ಅವರು ಅಲ್ಪಕಾಲದ ಅಸೌಖ್ಯದಿಂದ ನಿಧ*ನರಾಗಿದ್ದಾರೆ. ಈ ವಿಚಾರ ತಿಳಿದ ಅವರ ಸಹೋದರ ಮಹಮ್ಮದ್ ಕುಸಿದು ಬಿದ್ದು ಸಾ*ವನ್ನಪ್ಪಿದ್ದಾರೆ ಎನ್ನಲಾಗಿದೆ.

ಇದನ್ನೂ ಓದಿ : ಕೋವಿಶೀಲ್ಡ್ ಲಸಿಕೆ ಅಡ್ಡ ಪರಿಣಾಮ ಬೀರಲಿದೆ; ಸತ್ಯ ಒಪ್ಪಿಕೊಂಡ ಆಸ್ಟ್ರಾಜೆನಿಕಾ! ಏನಿದರ ಪರಿಣಾಮ?

ಇಬ್ಬರನ್ನು ಕಳೆದುಕೊಂಡ ಕುಟುಂಬ ಶೋಕ ಸಾಗರದಲ್ಲಿ ಮುಳುಗಿದೆ.

Continue Reading

LATEST NEWS

Trending