DAKSHINA KANNADA
ಮಾದಕ ವಸ್ತು ಸಾಗಾಟ; ನೈಜೀರಿಯಾ ಪ್ರಜೆ ಸಹಿತ ಇಬ್ಬರು ಆರೋಪಿಗಳ ಬಂಧನ
Published
5 days agoon
ಮಂಗಳೂರು: ಬೆಂಗಳೂರಿನಿಂದ ಮಂಗಳೂರಿಗೆ ನಿಷೇಧಿತ ಮಾದಕ ವಸ್ತು ಎಂಡಿಎಂಎ ಸಾಗಾಟ/ಮಾರಾಟ ಮಾಡುತ್ತಿದ್ದ ನೈಜೀರಿಯಾ ಪ್ರಜೆ ಸಹಿತ ಇಬ್ಬರು ಡ್ರಗ್ ಪೆಡ್ಲರ್ಗಳನ್ನು ಬಂಧಿಸಿರುವ ಮಂಗಳೂರು ಸಿಸಿಬಿ ಪೊಲೀಸರು 200 ಗ್ರಾಂ ಎಂಡಿಎಂಎ ವಶಪಡಿಸಿಕೊಂಡಿದ್ದಾರೆ.
ನೈಜೀರಿಯಾದ ಚಿಕ ಜೋಸೆಫ್ ಇಝಿ (26) ಮತ್ತು ಮೂಲತಃ ಬೆಂಗಳೂರಿನ ಪ್ರಸಕ್ತ ಮೈಸೂರಿನ ದರ್ಶನ್ ಕೆ.ಜಿ (25) ಬಂಧಿತ ಆರೋಪಿಗಳು. ಬಜ್ಪೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮಾದಕ ವಸ್ತು ಮಾರಾಟ ಮಾಡುತ್ತಿದ್ದ ಇಕ್ಬಾಲ್ ಎಂಬಾತನನ್ನು ಪೊಲೀಸರು ಬಂಧಿಸಿ ವಿಚಾರಣೆ ನಡೆಸಿದಾಗ ಈತನಿಗೆ ಮಾದಕ ವಸ್ತು ಎಂಡಿಎಂಎ ಪೂರೈಕೆ ಮಾಡುತ್ತಿದ್ದ ಡ್ರಗ್ ಪೆಡ್ಲರ್ಗಳ ಬಗ್ಗೆ ಮಾಹಿತಿ ನೀಡಿದ್ದ. ಅದರಂತೆ ಕಾರ್ಯಾಚರಣೆ ನಡೆಸಿದ್ದ ಸಿಸಿಬಿ ಪೊಲೀಸರು ಬೆಂಗಳೂರಿನಿಂದ ಮಂಗಳೂರಿಗೆ ಮಾದಕ ವಸ್ತುವನ್ನು ಸಾಗಾಟ ಮಾಡುತ್ತಿದ್ದ ಈ ಇಬ್ಬರು ಆರೋಪಿಗಳನ್ನು ಬಂಧಿಸಿದರು.
ಆರೋಪಿಗಳಿಂದ 10,00,000 ರೂ.ಮೌಲ್ಯದ 200 ಗ್ರಾಂ ನಿಷೇಧಿತ ಮಾದಕ ವಸ್ತು ಎಂಡಿಎಂಎ, ಕಾರು, 5 ಮೊಬೈಲ್ ಫೋನ್ಗಳು, ವಿವಿಧ ಬ್ಯಾಂಕ್ಗಳ 5 ಡೆಬಿಟ್ ಕಾರ್ಡ್ಗಳು, 7 ಸಿಮ್ ಕಾರ್ಡ್ಗಳು, ಡಿಜಿಟಲ್ ತೂಕ ಮಾಪಕವನ್ನು ಸ್ವಾಧೀನಪಡಿಸಿಕೊಳ್ಳಲಾಗಿದೆ. ವಶಪಡಿಸಿಕೊಂಡ ಸೊತ್ತಿನ ಒಟ್ಟು ಮೌಲ್ಯ 18,25,500 ರೂ. ಆಗಬಹುದು ಎಂದು ಅಂದಾಜಿಸಲಾಗಿದೆ. ಆರೋಪಿಗಳನ್ನು ಹಾಗೂ ವಶಪಡಿಸಿಕೊಂಡ ಸೊತ್ತನ್ನು ಮುಂದಿನ ಕ್ರಮಕ್ಕಾಗಿ ಬಜ್ಪೆಪೊಲೀಸ್ ಠಾಣೆಗೆ ಹಸ್ತಾಂತರಿಸಲಾಗಿದೆ. ಆರೋಪಿ ಚಿಕ ಜೋಸೆಫ್ ಇಝಿ ಎಂಬಾತನು 2023ರ ಮೇ ತಿಂಗಳಲ್ಲಿ ಭಾರತಕ್ಕೆ ಉದ್ಯೋಗ ವೀಸಾದಲ್ಲಿ ಬಂದಿದ್ದನು.
ಬೆಂಗಳೂರಿನ ಯಲಹಂಕದಲ್ಲಿ ನೈಜೀರಿಯಾ ಪ್ರಜೆಯ ಹೇರ್ ಕಟ್ಟಿಂಗ್ ಉದ್ಯೋಗ ಮಾಡುತ್ತಿದ್ದು, ಈ ಸಮಯ ಈತನ ವಿರುದ್ಧ ಮಾದಕ ವಸ್ತು ಮಾರಾಟ ಮಾಡುತ್ತಿದ್ದ ಬಗ್ಗೆ ಬೆಂಗಳೂರು ಯಲಹಂಕ ನ್ಯೂ ಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಸುಮಾರು 4 ತಿಂಗಳ ಹಿಂದೆ ಜಾಮೀನಿನಲ್ಲಿ ಬಿಡುಗಡೆಗೊಂಡಿದ್ದ.
DAKSHINA KANNADA
ತುಳುವರ ಬದುಕು, ಸಂಸ್ಕೃತಿ, ಸಂಘರ್ಷದ ಕಥಾನಕದ ದಸ್ಕತ್ ಚಲನಚಿತ್ರ ತೆರೆಗೆ !!
Published
14 hours agoon
11/12/2024ಉಡುಪಿ: ಮಾಜಿ ಸಚಿವ ಕೃಷ್ಣ ಜೆ ಪಾಲೇಮಾರ್ ಅರ್ಪಿಸುವ ತುಳು ಚಲನಚಿತ್ರ ‘ದಸ್ಕತ್’ ಡಿಸೆಂಬರ್ 13ರಂದು ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳ ಚಿತ್ರಮಂದಿರಗಳಲ್ಲಿ ಬಿಡುಗಡೆಗೊಳ್ಳಲಿದೆ ಎಂದು ಚಿತ್ರದ ನಿರ್ದೇಶಕ ಕಾಮಿಡಿ ಕಿಲಾಡಿಗಳು ಖ್ಯಾತಿಯ ಅನೀಶ್ ಪೂಜಾರಿ ವೇಣೂರು ತಿಳಿಸಿದ್ದಾರೆ.
ಉಡುಪಿ ನಗರದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು ತುಳುವರ ಬದುಕು, ಸಂಸ್ಕೃತಿ, ಸಂಘರ್ಷದ ಕಥಾನಕವನ್ನು ಚಿತ್ರಿಸುವ ‘ದಸ್ಕತ್’ ನೈಜ ಘಟನೆಯನ್ನಾಧರಿಸಿದ ಚಿತ್ರವಾಗಿದ್ದು, ಬೆಳ್ತಂಗಡಿ ತಾಲೂಕಿನ ವೇಣೂರು, ನಾರಾವಿ, ಅಂಡಿಂಜೆ, ಕೊಕ್ರಾಡಿ ಮುಂತಾದ ಪ್ರದೇಶಗಳಲ್ಲಿ ಚಿತ್ರಿತವಾಗಿದೆ ಎಂದು ಚಿತ್ರಕಥೆಯನ್ನು ಬರೆದಿರುವ ಅನೀಶ್ ಪೂಜಾರಿ ತಿಳಿಸಿದರು. ರಾಘವೇಂದ್ರ ಕುಡ್ವ ಚಿತ್ರದ ನಿರ್ಮಾಪಕರಾಗಿದ್ದು, ಸಂತೋಷ್ ಆಚಾರ್ಯ ಗುಂಪಲಾಜಿ ಅವರ ಛಾಯಾಗ್ರಹಣವಿದೆ. ಸಮರ್ಥನ ಎಸ್.ರಾವ್ ಚಿತ್ರದ ಸಂಗೀತ ನಿರ್ದೇಶಕರಾಗಿದ್ದಾರೆ.
ಚಿತ್ರದ ತಾರಾಗಣದಲ್ಲಿ ದೀಕ್ಷಿತ್ ಕೆ.ಅಂಡಿಂಜೆ, ನೀರಜ್ ಕುಂಜರ್ಪ, ಮೋಹನ್ ಶೇಣಿ, ಮಿಥುನ್ ರಾಜ್, ಭವ್ಯ ಪೂಜಾರಿ, ಚಂದ್ರಹಾಸ ಉಲ್ಲಾಳ್, ನವೀನ್ ಬೋಂದೇಲ್, ಯೋಗೀಶ್ ಶೆಟ್ಟಿ ಚೇತನ್ ಪೀಲಾರ್, ತಿಮ್ಮಪ್ಪ ಕುಲಾಲ್ ಮುಂತಾದವರು ನಟಿಸಿದ್ದಾರೆ ಎಂದರು. ಡಿ.13ರಂದು ಉಡುಪಿ, ಮಂಗಳೂರು, ಪುತ್ತೂರು, ಕಾರ್ಕಳ, ಬೆಳ್ತಂಗಡಿಗಳ ಸುಮಾರು 15 ಸಿಂಗಲ್ ಥಿಯೇಟರ್ ಹಾಗೂ ಮಲ್ಟಿಫ್ಲೆಕ್ಸ್ ಗಳಲ್ಲಿ ಚಿತ್ರ ಬಿಡುಗಡೆಯಾಗಲಿದೆ ಎಂದರು. ಪತ್ರಿಕಾಗೋಷ್ಠಿಯಲ್ಲಿ ನಟ ಅರ್ಜುನ್ ಕಾಪಿಕಾಡ್, ಚಿತ್ರ ವಿತರಕ ಸಚಿನ್ ಉಪ್ಪಿನಂಗಡಿ, ನಿರ್ಮಾಫಕ ರಾಘವೇಂದ್ರ ಪುತ್ರ ರಾಹುಲ್ ಕುಡ್ವ, ನಟ ದೀಕ್ಷಿತ್ , ನಟಿ ಭವ್ಯಾ ಪೂಜಾರಿ, ಕಾರ್ಯಕಾರಿ ನಿರ್ಮಾಪಕ ಪ್ರಜ್ಞೇಶ್ ಶೆಟ್ಟಿ ಮೊದಲಾದವರಿದ್ದರು.
DAKSHINA KANNADA
ಅನುಪಮ್ ಅಗರ್ವಾಲ್ ವರ್ಗಾವಣೆಗೆ ಒತ್ತಾಯಿಸಿ ಕಾವೂರಿನಲ್ಲಿ ಪ್ರತಿಭಟನೆ !!
Published
16 hours agoon
11/12/2024ಕಾವೂರು: ಜನಪರ ಹೋರಾಟಗಳಿಗೆ ಅವಕಾಶ ನಿರಾಕರಣೆ, ಪ್ರತಿಭಟನಕಾರರ ಮೇಲೆ ಕೇಸು ದಾಖಲಿಸುವ ಸರ್ವಾಧಿಕಾರಿ ಪ್ರವೃತ್ತಿಯ ಪೊಲೀಸ್ ಆಯುಕ್ತ ಅನುಪಮ್ ಅಗರ್ವಾಲ್ ರನ್ನು ವರ್ಗಾಯಿಸಬೇಕೆಂದು ಒತ್ತಾಯಿಸಿ ಕಾವೂರು ಜಂಕ್ಷಣ್ನಲ್ಲಿ ಸಮಾನ ಮನಸ್ಕ ಸಂಘಟನೆಗಳ ವೇದಿಕೆಯಿಂದ ಪ್ರತಿಭಟನಾ ಪ್ರದರ್ಶನ ನಡೆಯಿತು.
ಸಭೆಯನ್ನು ಉದ್ದೇಶಿಸಿ ಸುರತ್ಕಲ್ ಟೋಲ್ಗೇಟ್ ವಿರೋಧಿ ಹೋರಾಟ ಸಮಿತಿ ಸಂಚಾಲಕರಾದ ಮಾಜಿ ಉಪಮೇಯರ್ ಕೆ. ಮಹಮ್ಮದ್ ಮಾತನಾಡಿ ಪೋಲಿಸ್ ಆಯುಕ್ತ ಅನುಪಮ್ ಅಗರ್ವಾಲ್ಗೆ ಜನಸಾಮಾನ್ಯರ ಸಮಸ್ಯೆಗಳ ಬಗ್ಗೆ ಹೋರಾಡುವವರ ಬಗ್ಗೆ ಅಲರ್ಜಿ ಇದೆ. ಒಬ್ಬ ಉನ್ನತ ಮಟ್ಟದ ಪೋಲೀಸ್ ಅಧಿಕಾರಿಗೆ ಇಂತಹ ಮನಸ್ಥಿತಿ ಸರಿಯಲ್ಲ, ಜನಪರ ಹೋರಾಟಗಳಿಗೆ ಕಡಿವಾಣ ಹಾಕುವ ಹೊಸ ಸಂಪ್ರದಾಯ ಪೋಲೀಸ್ ಇಲಾಖೆ ಸೃಷ್ಟಿಸುತ್ತಿರುವುದು ಖಂಡನೀಯ ಕಮಿಷನರ್ ವರ್ಗಾವಣೆ ಆಗುವವರೆಗೆ ಸಮಾನ ಮನಸ್ಕ ಹೋರಾಟಗಾರರು ನಿರಂತರ ಪ್ರತಿಭಟನೆ ಮುಂದುವರಿಸುವುದಾಗಿ ಎಚ್ಚರಿಸಿದರು.
ಮಾಜಿ ಕಾರ್ಪೊರೇಟರ್ ದಯಾನಂದ ಶೆಟ್ಟಿ ಮಾತನಾಡಿ ಬಂಡವಾಳಶಾಹಿ ಆಡಳಿತ ವ್ಯವಸ್ಥೆಯಲ್ಲಿ ಜನಸಾಮಾನ್ಯರ ಸಮಸ್ಯೆಗಳು ಹೆಚ್ಚಳವಾಗುತ್ತಿವೆ. ಇವುಗಳ ಪರಿಹಾರಕ್ಕೆ ಹೋರಾಟವಲ್ಲದೆ ಬೇರೆ ದಾರಿಯಿಲ್ಲ. ಪೋಲೀಸ್ ಆಯುಕ್ತರು ಇಂತಹ ಅನಿವಾರ್ಯ ಹೋರಾಟಗಳಿಗೆ ಕಡಿವಾಣ ಹಾಕಲು ಹೊರಟಿರಿವುದು ಸಂವಿಧಾನ ಬದ್ದ ಹಕ್ಕನ್ನು ಕಿತ್ತುಕೊಂಡಂತೆ.ಆಯುಕ್ತರ ಗೊಡ್ಡು ಬೆದರಿಕೆಗಳಿಗೆ ನಾವು ಹಿಂಜರಿಯುವುದಿಲ್ಲ. ಜೈಲಿಗೆ ಹೋದರೂ ಸರಿ ಹೋರಾಟ ನಿಲ್ಲುವುದಿಲ್ಲ ಎಂದು ಹೇಳಿದರು.
ಸಿಪಿಐಎಂ ಜಿಲ್ಲಾ ಮುಖಂಡ ಸುನೀಲ್ ಕುಮಾರ್ ಬಜಾಲ್, ಡಿವೈಎಫ್ಐ ಮುಖಂಡರಾದ ನವೀನ್ ಕೊಂಚಾಡಿ, ಸಾಮಾಜಿಕ ಮುಂದಾಳು ರಿಯಾಝ್ ಹುಸೈನ್ ಮಾತನಾಡಿದರು. ಅನಿಲ್ ಡಿಸೋಜ, ನೌಶಾದ್, ರೆಹೆಮಾನ್ ಕುಂಜತ್ತಬೈಲ್, ಮುಸ್ತಾಫ, ಪ್ರಮೀಳಾ, ಆಶಾ ಗಣೇಶ್, ಚರಣ್ ಶೆಟ್ಟಿ, ಸೌಮ್ಯ ಮುಂತಾದವರು ಹೋರಾಟದ ಸಮಯ ಉಪಸ್ಥಿತರಿದ್ದರು.
DAKSHINA KANNADA
ಕಡಬ: ಪ್ಯಾಚ್ ವರ್ಕ್ ಮಾಡಿ ಜನತೆ ಕಣ್ಣಿಗೆ ಮಣ್ಣೆರೆಚುವ ತಂತ್ರ
Published
17 hours agoon
11/12/2024ಕಡಬ: ಬರೇ ಪ್ಯಾಚ್ ವರ್ಕ್ ಮಾಡಿ ಜನರ ಕಣ್ಣೀಗೆ ಮಣ್ಣೇರೆಚುತ್ತಿರುವ, ಹಲವಾರು ವರ್ಷಗಳಿಂದ ಕುಂಟು ನೆಪ ಹೇಳಿ ರಸ್ತೆ ದುರಸ್ತಿ ಮಾಡದಿರುವ ಲೋಕೋಪಯೋಗಿ ಇಲಾಖೆ ವಿರುದ್ಧ ಸಾರ್ವಜನಿಕರು ತಮ್ಮ ಆಕ್ರೋಶವನ್ನು ಬಹಿರಂಗವಾಗಿ ಹೊರಹಾಕಿದ್ದಾರೆ.
ಕಡಬ – ಕೋಡಿಂಬಾಳ ರಾಜ್ಯ ಹೆದ್ದಾರಿಗೆ ರಸ್ತೆ ತೇಪೆ ಹಚ್ಚುವ ಕಾಮಗಾರಿಯನ್ನು ಗ್ರಾಮಸ್ಥರು ತಡೆದಿದ್ದಾರೆ. ಕಳೆದ ವರ್ಷವೂ ಬರೇ ಪ್ಯಾಚ್ವರ್ಕ್ ಕಾಮಗಾರಿಯನ್ನು ನಡೆಸಲಾಗಿತ್ತು. ಆದರೆ ಆ ಕಾಮಗಾರಿ ಅದೇ ವರ್ಷ ಕಿತ್ತು ಹೋಗಿದೆ. ಈ ವರ್ಷವೂ ಮತ್ತೆ ಕಳಪೆ ಕಾಮಗಾರಿ ನಡೆಸಲಾಗುತ್ತಿದೆ. ದಿನಂಪ್ರತಿ ಸುಳ್ಯ ಎಂಎಲ್ಎ ಸಂಚರಿಸುವ ಪ್ರಮುಖ ರಸ್ತೆ ಇದಾಗಿದ್ದು, ಕಡಬ ತಾಲೂಕಿನ ಕೋಡಿಂಬಾಳ ಕಲ್ಲಂತಡ್ಕ ಎಂಬಲ್ಲಿ ರಸ್ತೆಯನ್ನು ದುರಸ್ತಿ ಪಡಿಸಲಾಗಿದೆ.
ಸ್ಥಳಕ್ಕೆ ಲೋಕೋಪಯೋಗಿ ಇಂಜಿನಿಯರ್, ಗುತ್ತಿಗೆದಾರರು ಬರಬೇಕೆಂದು ಗ್ರಾಮಸ್ಥರು ಪಟ್ಟು ಹಿಡಿದರು.
LATEST NEWS
ಆರ್ಬಿಐ ಹೊಸ ಗವರ್ನರ್ ಆಗಿ ಸಂಜಯ್ ಮಲ್ಹೋತ್ರಾ ನೇಮಕ !!
ದಂಡ ತಪ್ಪಿಸಿಕೊಳ್ಳಲು ವಾಹನ ಸವಾರರ ಹೊಸ ಪ್ಲಾನ್: ಸ್ಪೂನ್ ಅಸ್ತ್ರ !
ವಿಚ್ಛೇದನ ನೀಡದೆ ಎರಡನೇ ಮದುವೆ; ಮಂಟಪದಲ್ಲೇ ಮೊದಲ ಪತ್ನಿ ಕೈಗೆ ಸಿಕ್ಕಿಬಿದ್ದ ಪತಿ
ಅನುಪಮ್ ಅಗರ್ವಾಲ್ ವರ್ಗಾವಣೆಗೆ ಒತ್ತಾಯಿಸಿ ಕಾವೂರಿನಲ್ಲಿ ಪ್ರತಿಭಟನೆ !!
ಕಡಬ: ಪ್ಯಾಚ್ ವರ್ಕ್ ಮಾಡಿ ಜನತೆ ಕಣ್ಣಿಗೆ ಮಣ್ಣೆರೆಚುವ ತಂತ್ರ
ಭಾರತದಲ್ಲಿ ಮನರಂಜನೆ ಮತ್ತು ಮಾಧ್ಯಮ ಉದ್ಯಮ ಭಾರೀ ಬೆಳವಣಿಗೆ !!
Trending
- BIG BOSS4 days ago
ಚೈತ್ರಾ ಕಣ್ಣೀರು, ಐಶ್ವರ್ಯ ಆಕ್ಟಿವಿಟಿ ರೂಮ್….ಎಲಿಮಿನೆಟ್ ಆಗಿದ್ದು ?
- BIG BOSS5 days ago
BBK11: ಈ ವಾರ ಬಿಗ್ಬಾಸ್ ಮನೆಯಲ್ಲಿ ಕಾದಿದ್ಯಾ ಬಿಗ್ ಟ್ವಿಸ್ಟ್; ಎಲಿಮಿನೇಷನ್ ಇರೋದು ಡೌಟ್
- BIG BOSS5 days ago
ಬಿಗ್ಬಾಸ್ ನಿರ್ಧಾರಗಳಿಗೆ ರೆಸ್ಪೆಕ್ಟೇ ಇಲ್ಲ -ಇಬ್ಬರು ಸ್ಪರ್ಧಿಗಳಿಗೆ ಕಿಚ್ಚ ಖಡಕ್ ಕ್ಲಾಸ್
- BANTWAL6 days ago
ಬಂಟ್ವಾಳ: ಕೆ.ಎಸ್. ಆರ್.ಟಿ.ಬಸ್ ನಿರ್ವಾಹಕನ ಮೇಲೆ ಪ್ರಯಾಣಿಕನಿಂದ ಹಲ್ಲೆ