Connect with us

LATEST NEWS

ಬಾರ್​​ಗೆ ಕಳ್ಳತನ ಮಾಡಲು ಹೋಗಿ ಕಂಠಪೂರ್ತಿ ಕುಡಿದು ಅಲ್ಲೇ ಮಲಗಿದ ಕಳ್ಳ

Published

on

ತೆಲಂಗಾಣ: ಎಲ್ಲೆಡೇ ಜನರು ಹೊಸ ವರ್ಷದ ಸಂಭ್ರಮಾಚರಣೆಗೆ ತಯಾರಿಯಲ್ಲಿದ್ದಾರೆ. ಆದರೇ ಇಲ್ಲೊಬ್ಬ ವ್ಯಕ್ತಿ ಈ ಸಂಭ್ರಮಾಚರಣೆ ಮಾಡಲು ದುಡಿಲ್ಲದ ಕಾರಣ ಮದ್ಯದ ಅಂಗಡಿಗೆ ನುಗ್ಗಿ ಅಲ್ಲಿಂದ ಮದ್ಯದ ಬಾಟಲಿಗಳನ್ನು ದೋಚಿದ್ದಾನೆ. ಬಳಿಕ ಅಲ್ಲಿದ್ದ ಒಂದಿಷ್ಟು ಮದ್ಯವನ್ನು ಕುಡಿದು ಮತ್ತೆ ಹೋದುವ ಎಂದು ಪ್ಲಾನ್‌ ಮಾಡಿದ್ದಾನೆ. ಆದರೆ ಕಂಠಪೂರ್ತಿ ಕುಡಿದ ಕಳ್ಳ ಅಲ್ಲೇ ಮಲಗಿದ್ದು, ಮರುದಿನ ಬೆಳಿಗ್ಗೆ ಅಂಗಡಿ ಮಾಲೀಕನ ಕೈಗೆ ಸಿಕ್ಕಿಬಿದ್ದಿದ್ದಾನೆ. ಈ ಘಟನೆ ತೆಲಂಗಾಣದ ಮೇದಕ್ ಪ್ರದೇಶದಲ್ಲಿ ನಡೆದಿದೆ.

ಭಾನುವಾರ ರಾತ್ರಿ ‘ಕನಕದುರ್ಗಾ ವೈನ್ಸ್’ ಹೆಸರಿನ ಅಂಗಡಿಗೆ ನುಗ್ಗಿ ಛಾವಣಿಯ ಕೆಲವು ಹೆಂಚುಗಳನ್ನು ಕಿತ್ತು ಸಿಸಿಟಿವಿ ಕ್ಯಾಮೆರಾ ನಿಷ್ಕ್ರಿಯಗೊಳಿಸಿ ದುಬಾರಿ ಬೆಲೆಯ ಮದ್ಯದ ಬಾಟಲಿಗಳನ್ನು ಕದ್ದಿದ್ದ ಕಳ್ಳ, ಇನ್ನೇನು ಅಂಗಡಿಯಿಂದ ಪಾರಾಗಬೇಕು ಎನ್ನುವಷ್ಟರಲ್ಲಿ ಚಳಿಗೆ ಸ್ಪಲ್ಪ ಕುಡಿದು ಮತ್ತೆ ಹೋಗುವ ಎಂದು ಯೋಚಿಸಿದ್ದಾನೆ. ಆದರೆ ಮದ್ಯದ ಆಸೆಗೆ ಕಂಠಪೂರ್ತಿ ಕುಡಿದಿದ್ದಾನೆ. ಸೋಮವಾರ ಮುಂಜಾನೆ ಅಂಗಡಿ ಮಾಲೀಕ ಅಂಗಡಿಯ ಬಾಗಿಲು ತೆಗೆದಾಗ ಪ್ರಜ್ಞಾಹೀನ ಸ್ಥಿತಿಯಲ್ಲಿ ಬಿದ್ದಿದ್ದ ಅಪರಿಚಿತ ವ್ಯಕ್ತಿಯನ್ನು ಕಂಡು ಶಾಕ್​ ಆಗಿದ್ದಾರೆ.

ಸೋಮವಾರ ಬೆಳಗ್ಗೆ ಪೊಲೀಸರು ಸ್ಥಳಕ್ಕೆ ಬಂದ ನಂತರ ಘಟನೆಯ ದೃಶ್ಯಗಳು ಆನ್‌ಲೈನ್‌ನಲ್ಲಿ ಕಾಣಿಸಿಕೊಂಡಿವೆ. ಕಳ್ಳ ಮದ್ಯದಂಗಡಿಯಲ್ಲಿ ನೆಲದ ಮೇಲೆ ಮಲಗಿದ್ದು ನಗದು ಮತ್ತು ಮದ್ಯದ ಬಾಟಲಿಗಳು ಅವನ ಸುತ್ತಲೂ ಬಿದ್ದಿರುವುದನ್ನು ತೋರಿಸುವ ಫೋಟೋ ವೈರಲ್ ಆಗಿದೆ.

LATEST NEWS

ರಾಜ್ಯದಲ್ಲಿ ಹೆಚ್ಚಿದ ಆತ್ಮಹತ್ಯೆ ಪ್ರಕರಣ: ಬೆಂಗಳೂರೇ ನಂಬರ್ 1

Published

on

ಮಂಗಳೂರು/ಮೈಸೂರು : ರಾಜ್ಯದಲ್ಲಿ ಆತ್ಮಹತ್ಯೆ ಪ್ರಕರಣಗಳು ಹೆಚ್ಚುತ್ತಿದ್ದು, ಅದರಲ್ಲೂ ಪುರುಷರ ಆತ್ಮಹತ್ಯೆ ಪ್ರಕರಣಗಳು ಜಾಸ್ತಿಯಾಗುತ್ತಿದೆ.

ರಾಜ್ಯದಲ್ಲಿ 2021ರಿಂದ 2023ರವರೆಗೆ ಮೂರು ವರ್ಷಗಳಲ್ಲಿ 28,324 ಪುರುಷರು ಆತ್ಮಹತ್ಯೆ ಮಾಡಿಕೊಂಡಿದ್ದು, ಇದು ಮಹಿಳೆಯರ ಆತ್ಮಹತ್ಯೆ ಪ್ರಕರಣಗಳಿಗಿಂತ ಮೂರು ಪಟ್ಟಿಗೂ ಹೆಚ್ಚಿದೆ. ಈ ಅವಧಿಯಲ್ಲಿ 8,159 ಮಹಿಳೆಯರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪುರುಷ-ಮಹಿಳೆಯರ ಆತ್ಮಹತ್ಯೆಯಲ್ಲಿ ರಾಜಧಾನಿ ಬೆಂಗಳೂರೇ ಮುಂದಿದೆ.

ಬೆಂಗಳೂರು ನಗರದ ನಂತರ, ಕ್ರಮವಾಗಿ ಬೆಳಗಾವಿ, ಬೆಂಗಳೂರು ಜಿಲ್ಲೆ, ಶಿವಮೊಗ್ಗ ಮತ್ತು ತುಮಕೂರು ಜಿಲ್ಲೆಯಲ್ಲಿ ದಾಖಲಾಗಿವೆ. ಚಿಕ್ಕಮಗಳುರು, ಹಾವೇರಿ, ಉಡುಪಿ, ವಿಜಯಪುರ, ದಾವಣಗೆರೆ, ಮೈಸೂರಿನಲ್ಲೂ ಹೆಚ್ಚಿವೆ.

ಇದನ್ನೂ ಓದಿ: ಕ್ಯಾಲಿಫೋರ್ನಿಯಾದಲ್ಲಿ ವಿಮಾನ ದುರಂತ !

ಮೈಸೂರಿನ ‘ಒಡನಾಡಿ’ ಸೇವಾ ಸಂಸ್ಥೆಯು ಮಾಹಿತಿ ಹಕ್ಕು ಕಾಯ್ದೆ ಅಡಿ ಸಲ್ಲಿಸಿದ್ದ ಅರ್ಜಿಗೆ, ರಾಜ್ಯ ಅಪರಾಧ ದಾಖಲಾತಿ ವಿಭಾಗವು ಎಲ್ಲ ಜಿಲ್ಲೆಗಳು, ಪ್ರಮುಖ ನಗರಗಳು, ಕರ್ನಾಟಕ ರೈಲ್ವೆ ಮತ್ತು ಕೆಜಿಎಫ್ ಪೊಲೀಸ್ ಹಾಗೂ 38 ವಿಭಾಗಗಳ ಅಡಿ ನೀಡಿರುವ ಅಂಕಿ ಅಂಶದಲ್ಲಿ ಈ ಮಾಹಿತಿ ಇದೆ.

ಮೂರು ವರ್ಷದಲ್ಲಿ, ಪುರುಷರ ಆತ್ಮಹತ್ಯೆ ಪ್ರಕರಣಗಳು ವರ್ಷದಿಂದ ವರ್ಷಕ್ಕೆ ಹೆಚ್ಚಿದರೆ, ಮಹಿಳೆಯರ ಆತ್ಮಹತ್ಯೆ ಪ್ರಕರಣಗಳು ಕಡಿಮೆಯಾಗಿವೆ ಎಂಬುದೂ ಅಂಕಿ ಅಂಶದಿಂದ ಗೊತ್ತಾಗುತ್ತದೆ.

Continue Reading

BIG BOSS

BBK11: ಈ ವಾರ ಬಿಗ್ ಬಾಸ್‌ ಮನೆಯಿಂದ ಆಚೆ ಬರೋದು ಯಾರು? ಎಲಿಮಿನೇಷನ್‌ನಲ್ಲಿ ಬಿಗ್​ ಟ್ವಿಸ್ಟ್!

Published

on

ಕನ್ನಡದ ಬಿಗ್​ ರಿಯಾಲಿಟಿ ಶೋ ಬಿಗ್​ಬಾಸ್​ ಸೀಸನ್ 11, 96ನೇ ದಿನಕ್ಕೆ ಕಾಲಿಟ್ಟಿದೆ. ಸದ್ಯ ಬಿಗ್​ಬಾಸ್ ಮನೆಯಲ್ಲಿ ಒಟ್ಟು 9 ಸ್ಪರ್ಧಿಗಳು ಉಳಿದುಕೊಂಡಿದ್ದಾರೆ. ಈ 10 ಸ್ಪರ್ಧಿಗಳು ಯಾರು ಈ ವಾರ ಬಿಗ್​ಬಾಸ್​ ಮನೆಯಿಂದ ಆಚೆ ಹೋಗಲಿದ್ದಾರೆ ಅಂತ ಕುತೂಹಲ ಮೂಡಿದೆ.

ಕಳೆದ ವಾರ ಬಿಗ್​ಬಾಸ್​ ಮನೆಯಿಂದ ಆಚೆ ಹೋಗಲು ಒಟ್ಟು 8 ಸ್ಪರ್ಧಿಗಳು ನಾಮಿನೇಟ್ ಆಗಿದ್ದರು. ಅವರ ಪೈಕಿ ಐಶ್ವರ್ಯಾ ಸಿಂಧೋಗಿ ಬಿಗ್​ಬಾಸ್​ ಮನೆಯಿಂದ ಆಚೆ ಬಂದಿದ್ದರು. ಆದ್ರೆ ಈ ವಾರ ಬಿಗ್​ಬಾಸ್​ ಮನೆಯಿಂದ ಯಾವ ಸ್ಪರ್ಧಿಯೂ ಆಚೆ ಹೋಗುವುದಿಲ್ಲ. ಏಕೆಂದರೆ ಈ ವಾರ ಫ್ಯಾಮಿಲಿ ರೌಂಡ್​ ಆಗಿದ್ದ ಕಾರಣ ನಾಮಿನೇಷನ್​ ಪ್ರಕ್ರಿಯೆ ನಡೆದಿಲ್ಲ.

ಹೀಗಾಗಿ ಈ ವಾರ ಯಾವೊಬ್ಬ ಸ್ಪರ್ಧಿಯೂ ಬಿಗ್​ಬಾಸ್​ ಮನೆಯಿಂದ ಆಚೆ ಹೋಗುವುದಿಲ್ಲ. 9 ಸ್ಪರ್ಧಿಗಳು ಈ ವಾರ ಸೇಫ್​ ಆಗಿದ್ದಾರೆ. ಮುಂದಿನ ವಾರಕ್ಕೆ ಈ 9 ಜನರಲ್ಲಿ ಯಾರು ಬಿಗ್​ ಮನೆಯಿಂದ ಆಚೆ ಹೋಗಲಿದ್ದಾರೆ ಎಂದು ಕಾದು ನೋಡಬೇಕಿದೆ.​

ಇನ್ನೂ ಬಿಗ್​ಬಾಸ್​ ಮನೆಗೆ ಒಟ್ಟು 17 ಸ್ಪರ್ಧಿಗಳು ಎಂಟ್ರಿ ಕೊಟ್ಟಿದ್ದರು. ವಾರ ಕಳೆದಂತೆ ಬಿಗ್​ಬಾಸ್​ ಮನೆಯಿಂದ ಒಬ್ಬೊಬ್ಬರಾಗಿ ಆಚೆ ಬಂದಿದ್ದರು. ಸದ್ಯ ಈಗ ಬಿಗ್​ಬಾಸ್​ ಮನೆಗೆ ಈ 9 ಸ್ಪರ್ಧಿಗಳ ಕುಟುಂಬಸ್ಥರು ಎಂಟ್ರಿ ಕೊಟ್ಟಿದ್ದಾರೆ. ಜೊತೆಗೆ ಇನ್ನೂ ಕೆಲವೇ ದಿನಗಳು ಬಾಕಿ ಉಳಿದಿವೆ ಚೆನ್ನಾಗಿ ಆಡು ಅಂತ ಕಿವಿ ಮಾತನ್ನು ಹೇಳಿದ್ದಾರೆ. ಇನ್ಮುಂದೆ ಬಿಗ್​ಬಾಸ್​ ಮನೆಯಲ್ಲಿರೋ ಸ್ಪರ್ಧಿಗಳು ಯಾವ ರೀತಿ ಟೇಕ್ ಆಫ್ ಆಗಲಿದ್ದಾರೆ ಎಂದು ಮುಂದಿನ ದಿನಗಳಲ್ಲಿ ಗೊತ್ತಾಗಲಿದೆ.

Continue Reading

BIG BOSS

BIGG BOSS: ಬಿಗ್​​ಬಾಸ್​​ ಮನೆಯಲ್ಲಿ ಕಿಸ್ಸಿಂಗ್ ಟಾಸ್ಕ್​.. ಮೂರು ತಿಂಗಳು ಆಗಿದೆ ಪ್ರ್ಯಾಕ್ಟೀಸ್ ಇಲ್ಲವೆಂದ ಧನು..!

Published

on

ಕಿಚ್ಚ ಸುದೀಪ್ ಅವರು ನಡೆಸಿಕೊಡುವ ಬಿಗ್ ಬಾಸ್​ ಸೀಸನ್ 11 ಕೊನೆ ಹಂತಕ್ಕೆ ತಲುಪುತ್ತಿದೆ. ಕಳೆದ ವಾರ ಐಶ್ವರ್ಯ ಹೊರಗಡೆ ಬಂದಿದ್ದರು. ಈಗ ಮನೆಯಲ್ಲಿ ಕೇವಲ 9 ಸ್ಪರ್ಧಿಗಳು ಮಾತ್ರ ಉಳಿದಿದ್ದು ಇದರಲ್ಲಿ ಈ ವಾರ ಹೊರಗಡೆ ಬರುವವರು ಯಾರು ಎಂಬುದು ಕುತೂಹಲ ಇದೆ. ಇದರ ನಡುವೆ ಬಿಗ್​ಬಾಸ್​​ ಮನೆಯಲ್ಲಿ ಕಿಸ್ ಕೊಡುವ ಟಾಸ್ಕ್ ಕೊಡಲಾಗಿದ್ದು ಯಾವ್ಯಾವ ಸ್ಪರ್ಧಿ ಏನೆಲ್ಲಾ ಮಾಡಿದರು ಎನ್ನುವುದು ಇಲ್ಲಿದೆ.

ಕ್ಯಾಪ್ಟನ್ ಆಗಿರುವ ಭವ್ಯ ಮಧ್ಯೆದಲ್ಲಿ ನಿಂತು ಟಾಸ್ಕ್ ಅನ್ನು ಗಮನಿಸುತ್ತಿದ್ದಾರೆ. ತ್ರಿವಿಕ್ರಮ್- ಚೈತ್ರಾ, ಗೌತಮಿ- ಧನರಾಜ್, ಮಂಜು- ಹನುಮಂತು ಹೀಗೆ ಇಬ್ಬಿಬ್ಬರ ಟೀಮ್ ಮಾಡಲಾಗಿದೆ. ಮೂವರು ಕೋಲಿನಿಂದ ಲಿಫ್ಟ್​​ಸ್ಟಿಕ್ ಅನ್ನು ಚೈತ್ರಾ, ಧನರಾಜ್ ಹಾಗೂ ಹನುಮಂತು ತುಟಿಗೆ ಹಚ್ಚಬೇಕು. ತಕ್ಷಣ ಈ ಮೂವರು ಓಡಿ ಹೋಗಿ ವೈಟ್​ ಬೋರ್ಡ್​ ಮೇಲೆ ಕಿಸ್​ ಕೊಡಬೇಕು. ಯಾರು ಹೆಚ್ಚು ಕಿಸ್ ಕೊಡುತ್ತಾರೋ ಅವರೇ ಇದರಲ್ಲಿ ಗೆಲುವು ಸಾಧಿಸುವವರು ಎಂದು ಹೇಳಬಹುದು.

ಈ ರೀತಿ ಟಾಸ್ಕ್​​ ಆಡುವಾಗ ಧನರಾಜ್​ಗೆ ರಜತ್ ಕರೆಕ್ಟ್​ ಆಗಿ ಕಿಸ್​ಗಳು ಬರುತ್ತಿಲ್ಲ ಎಂದು ಹೇಳಿದ್ದಾರೆ. ಇದಕ್ಕೆ ಸಖತ್ ಕಾಮಿಡಿಯಾಗಿ ಉತ್ತರಿಸಿದ ಧನು, ಮೂರು ತಿಂಗಳು ಆಯಿತಾಲ್ಲ, ಕರೆಕ್ಟ್​ ಆಗಿ ಬರುತ್ತಿಲ್ಲ ಎಂದಿದ್ದಾರೆ. ಇದಾದ ಮೇಲೆ ಮುತ್ತು ಕೊಡುವುದಿಲ್ವಾ ನನಗೆ, ನೀವು ಕೊಡುತ್ತೀರಾ ಎಂದು ಧನು, ಚೈತ್ರಾರನ್ನ ಓಡಿಸಿಕೊಂಡು ಹೋಗಿದ್ದಾರೆ. ಈ ವೇಳೆ ಚೈತ್ರಾ ತಂಗಿ ಸೇರಿ ಎಲ್ಲ ಸ್ಪರ್ಧಿಗಳು ಕೂಡ ಕುಳಿತಲ್ಲೇ ನಕ್ಕಿದ್ದಾರೆ.

ಇನ್ನು ಈ ಟಾಸ್ಕ್​ನಲ್ಲಿ ಧನರಾಜ್, ಹನುಂತು ಗೆಲುವು ಸಾಧಿಸಿರಬಹುದೆಂದು ವಿಡಿಯೋದಲ್ಲಿ ಕಾಣುತ್ತೆ. ಈ ವೇಳೆ ಧನರಾಜ್, ಹನುಮಂತುನ ಹಿಡಿದು ಕಿಸ್ ಕೊಡಲು ಹೋಗಿ ತಬ್ಬಿಕೊಂಡಿದ್ದಾರೆ. ಕಿಸ್ ಕೊಡುವ ಟಾಸ್ಕ್​ನಲ್ಲಿ ರಜತ್ ಅವರು ಎಲ್ಲ ಸ್ಪರ್ಧಿಗಳನ್ನು ಕಿಚಾಯಿಸಿ, ತಮಾಷೆ ಮಾಡಿದ್ದಾರೆ. ಚೈತ್ರಾ, ಧನು, ಹನುಮಂತು ಅವರ ತಂದೆ, ತಾಯಿರಿಗೂ ಕೂಡ ರಜತ್ ಕಾಮಿಡಿ ಮಾಡಿದ್ದಾರೆ.

Continue Reading

LATEST NEWS

Trending

Exit mobile version