Connect with us

    BANTWAL

    ವಿಟ್ಲ ಪೆರುವಾಯಿ ಜಂಕ್ಷನ್‌ನಲ್ಲಿ ಕಂಠಪೂರ್ತಿ ಕುಡಿದು ಸೀನ್‌ ಕ್ರಿಯೇಟ್ ಮಾಡಿದ ಕುಡುಕ

    Published

    on

    ವಿಟ್ಲ: ವಿಟ್ಲದ ಪೆರುವಾಯಿ ಜಂಕ್ಷನ್ ನಲ್ಲಿ ಮದ್ಯ ವ್ಯಸನಿ ಶಿರಂಕಲ್ಲು ಶಿವಪ್ರಸಾದ ಎಂಬಾತ ಕಂಠ ಪೂರ್ತಿ ಕುಡಿದು ತೂರಾಡಿಕೊಂಡು ಪೇಟೆಯಲ್ಲಿ ಅವಾಂತರ ಸೃಷ್ಟಿಸಿದ್ದಾನೆ.

    ಸದ್ಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಕುಡಿದು ಅಮಲಿನಲ್ಲಿದ್ದ ಶಿವಪ್ರಸಾದನಿಗೆ ನೆಟ್ಟಗೆ ನಿಲ್ಲಲೂ ಆಗದೇ ವಾಲಿಕೊಂಡು ಬಂದು ಎಲ್ಲರ ಮೈಮೇಲೆ ಬೀಳುತ್ತಿದ್ದ.

    ಈ ವೇಳೆ ಮೈಮೇಲೆ ಬೀಳಲು ಬಂದಾತನನ್ನು ಅಲ್ಲಿದ್ದ ವ್ಯಕ್ತಿಯೊಬ್ಬರು ದೂಡಿದ್ದು ಪ್ರಸಾದ ರಸ್ತೆ ಮೇಲೆ ಬಿದ್ದಿದ್ದಾನೆ.

    ಬಳಿಕ ರಸ್ತೆಯ ಮಧ್ಯೆ ಬಿದ್ದುಕೊಂಡಿದ್ದ ಶಿವಪ್ರಸಾದ ಅವರನ್ನು ಪೆರುವಾಯಿ ಯುವಕರಾದ ಅನ್ಸಾರ್ ಮತ್ತು ರಫೀಕ್ ಆಸ್ಪತ್ರೆಗೆ ಕಳೆದುಕೊಂಡು ಹೋಗಿ ಚಿಕಿತ್ಸೆ ಕೊಡಿಸಿ ಮನೆಗೆ ತಲುಪಿಸಿದ್ದಾರೆ.

    ಸದ್ಯ ಪೇಟೆಯಲ್ಲಿ ಕುಡುಕ ಶಿವಪ್ರಸಾದನ ವಿಡಿಯೋ ಅವಾಂತರ ಸೃಷ್ಟಿಸಿದೆ.

     

     

     

    BANTWAL

    ಪೊಲೀಸರ ರ್ಯಾಪಿಡ್ ಆಕ್ಷನ್ ಫೋರ್ಸ್ ಲಾರಿ ಪಲ್ಟಿ ; ಇಬ್ಬರಿಗೆ ಗಾಯ

    Published

    on

    ಪುಂಜಾಲಕಟ್ಟೆ; ಬಂಟ್ವಾಳ ಬೆಳ್ತಂಗಡಿ ರಾಷ್ಟ್ರೀಯ ಹೆದ್ದಾರಿ ಮೂರ್ಜೆ ಸಮೀಪದ ಕುದ್ರೋಟಿಕಟ್ಟೆಯಲ್ಲಿ ಪೊಲೀಸರ ರ್ಯಾಪಿಡ್ ಆಕ್ಷನ್ ಫೋರ್ಸ್ ಲಾರಿ ಮುಗುಚಿ ಕೆಳಗೆ ಬಿದ್ದಿದೆ.


    ಚಾಲಕನ ನಿಯಂತ್ರಣ ತಪ್ಪಿದ ಕಾರಣದಿಂದಾಗಿ ಆರ್‌ಎಎಫ್ ನ ಲಗೇಜು ತುಂಬಿದ ಲಾರಿ ಭದ್ರಾವತಿಯಿಂದ ಬಿ.ಸಿ.ರೋಡ್‌ ಗೆ ಬರುತ್ತಿರುವಾಗ ಪಲ್ಟಿಯಾಗಿದೆ. ಚಾಲಕನಿಗೆ ಸಣ್ಣ ಪುಟ್ಟ ಗಾಯಗಳಾಗಿವೆ ಹಾಗೂ ಮತ್ತೋರ್ವ ಸಿಬ್ಬಂದಿ ಸಾಂತಪ್ಪ ನಾಯಕ್‌ರನ್ನು ಮಂಗಳೂರಿನ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.
    ಈ ಬಗ್ಗೆ ಪ್ರಕರಣ ದಾಖಲಾಗಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.

    Continue Reading

    BANTWAL

    ಬಂಟ್ವಾಳ: ಈದ್ ಮಿಲಾದ್ ಮೆರವಣಿಗೆಯಲ್ಲಿ ಸಿಹಿ ಹಂಚಿ ಸೌಹಾರ್ದತೆ ಮೆರೆದ ಹಿಂದೂ ಬಾಂಧವರು.!

    Published

    on

    ಬಂಟ್ವಾಳ: ಸಂಘಪರಿವಾರದ ವಿವಾದದ ನಡುವೆಯೂ ಹಿಂದೂ ಬಾಂಧವರು ಈದ್ ಮಿಲಾದ್ ಮೆರವಣಿಗೆಯಲ್ಲಿ ಸಾಗಿ ಬಂದು ಮುಸ್ಲಿಮರಿಗೆ ಸಿಹಿ ಹಂಚಿ ಸೌಹಾರ್ದತೆ ಮೆರೆದ ಘಟನೆ ಬಂಟ್ವಾಳ ತಾಲೂಕಿನ ಮಾಣಿಯಲ್ಲಿ ನಡೆದಿದೆ.

    ಸೋಮವಾರ ಕರ್ನಾಟಕದಾದ್ಯಂತ ಮುಸ್ಲಿಂ ಬಾಂಧವರು ಈದ್ ಮಿಲಾದ್ ಅದ್ದೂರಿಯಾಗಿ ಆಚರಿಸಿದರು. ಪ್ರಚೋದನಕಾರಿ ಹೇಳಿಕೆಯಿಂದ ಸಂಘಪರಿವಾರದ ಕಾರ್ಯಕರ್ತರು ಬಿಸಿ ರೋಡಿನಲ್ಲಿ ಜಮಾಯಿಸಿ ಘೋಷಣೆಗಳನ್ನು ಕೂಗಿ ಪ್ರತಿಭಟನೆ ಮಾಡಿದರು. ಕೆಲಕಾಲ ಬಿಗುವಿನ ವಾತಾವರಣ ಕಂಡುಬಂತು.

    ಇದೆಲ್ಲದರ ನಡುವೆ ಮಾಣಿಯಲ್ಲಿ ಹಿಂದೂ ಬಾಂಧವರು ಮೆರವಣಿಗೆಯಲ್ಲಿ ಸಾಗಿ ಬಂದ ಮಸ್ಲಿಮರಿಗೆ ಸಿಹಿತಿಂಡಿ ವಿತರಿಸಿ ಸೌಹಾರ್ದತೆಗೆ ಪಾತ್ರರಾದರು.

    ಅಲ್ಲದೆ ಅಂತ್ಯದಿನದವರೆಗೂ ನಮ್ಮ ಊರಲ್ಲಿ ಶಾಂತಿ ಸೌಹಾರ್ದತೆ ನೆಲೆ ನಿಲ್ಲಲಿ ಎಂದು ಹಾರೈಸಿದರು.

    Continue Reading

    BANTWAL

    ಬಿ.ಸಿ.ರೋಡ್‍ನಲ್ಲಿ ಜಮಾಯಿಸಿದ ಸಂಘಪರಿವಾರದ ಕಾರ್ಯಕರ್ತರು: ಸದ್ಯ ಪರಿಸ್ಥಿತಿ ಶಾಂತ

    Published

    on

    ಬಂಟ್ವಾಳ: ಸಂಘಪರಿವಾರದ ಮುಖಂಡ ಶರಣ್ ಪಂಪ್ ವೆಲ್ ಮತ್ತು ಬಂಟ್ವಾಳ ಪುರಸಭಾ ಮಾಜಿ ಅಧ್ಯಕ್ಷ ಮಹಮ್ಮದ್ ಶರೀಫ್ ರ ಪ್ರಚೋದನಕಾರಿ ಹೇಳಿಕೆಗಳ ಹಿನ್ನೆಲೆಯಲ್ಲಿ ಸೋಮವಾರ ಬಿಸಿರೋಡ್‌ನಲ್ಲಿ ಭಾರೀ ಸಂಖ್ಯೆಯಲ್ಲಿ ಸಂಘಪರಿವಾರದ ಕಾರ್ಯಕರ್ತರು ಜಮಾಯಿಸಿ ಘೋಷಣೆಗಳನ್ನು ಕೂಗಿದ್ದಾರೆ.

    ಪೊಲೀಸರು ಬಿ.ಸಿ.ರೋಡ್​ನಲ್ಲಿ ಬಿಗಿ ಬಂದೋಬಸ್ತ್ ಮಾಡಿದ್ದಾರೆ. ನಿಗದಿಕ್ಕಿಂತ ಹೆಚ್ಚುವರಿ ಪೊಲೀಸರನ್ನು ನಿಯೋಜನೆ ಮಾಡಲಾಗಿದೆ. ಎಸ್​​ಪಿ ಯತೀಶ್ ನೇತೃತ್ವದಲ್ಲಿ ಜಿಲ್ಲೆಯಲ್ಲಿ ಬಂದೋಬಸ್ತ್ ಮಾಡಲಾಗಿದೆ.

    ಬಿ.ಸಿ.ರೋಡ್ ರಕ್ತೇಶ್ವರಿ ದೇವಸ್ಥಾನದ ಮುಂಭಾಗದಲ್ಲಿ ಸಂಘ ಪರಿವಾರದ ನೂರಾರು ಕಾರ್ಯಕರ್ತರು ಜಮಾಯಿಸಿದ್ದಾರೆ. ಗುಂಪು ಜಮಾಯಿಸಿರುವ ಹಿನ್ನೆಲೆಯಲ್ಲಿ ಸ್ಥಳದಲ್ಲಿ ಪೊಲೀಸರು ಬಿಗು ಬಂದೋಬಸ್ತ್ ಕಲ್ಪಿಸಿದ್ದಾರೆ. ಸದ್ಯ ಪರಿಸ್ಥಿತಿ ಶಾಂತವಾಗಿದೆ‌.

    Continue Reading

    LATEST NEWS

    Trending