Friday, August 19, 2022

ಉಳ್ಳಾಲದಲ್ಲಿ ಕುಡಿತದ ನಶೆಯಲ್ಲಿ ಮನೆ ಬಾಗಿಲು ಬಡಿದ ಪ್ರವಾಸಿ: ಸ್ಥಳೀಯರಿಂದ ಧರ್ಮದೇಟು

ಉಳ್ಳಾಲ: ಬೆಂಗಳೂರಿನಿಂದ ಪ್ರವಾಸಕ್ಕೆಂದು ರೆಸಾರ್ಟ್‌ಗೆ ಬಂದಿದ್ದ ತಂಡವೊಂದರ ಯುವಕ ಕುಡಿದು ನಶೆಯಲ್ಲಿ ರೆಸಾರ್ಟ್‌ ಪಕ್ಕದ ಮನೆಗೆ ನುಗ್ಗಲು ಯತ್ನಿಸಿದ ಘಟನೆ ಉಳ್ಳಾಲ ಠಾಣಾ ವ್ಯಾಪ್ತಿಯ ಉಚ್ಚಿಲದ ಬಟ್ಟಪ್ಪಾಡಿಯಲ್ಲಿ ನಡೆದಿದೆ.


ಘಟನೆ ವಿವರ
ಬೆಂಗಳೂರಿನಿಂದ ಎರಡು ಬಸ್‌ಗಳಲ್ಲಿ ಉಳ್ಳಾಲದ ಬಟ್ಟಪ್ಪಾಡಿಯ ರೆಸಾರ್ಟ್‌ಗೆ ಆಗಮಿಸಿದ್ದ 60 ಜನರ ತಂಡ ಖಾಸಗಿ ಗೆಸ್ಟ್‌ ಹೌಸ್ ನಲ್ಲಿ ಪಾರ್ಟಿ ನಡೆಸಿದ್ದರು.

ತಡರಾತ್ರಿವರೆಗೆ ಪಾರ್ಟಿ ನಡೆಸಿದ ತಂಡದಲ್ಲಿದ್ದ ಬೀದರ್‌ ಮೂಲದ ಶರಣಪ್ಪ ಎಂಬಾತ ಕುಡಿತದ ಅಮಲಿನಲ್ಲಿ ಹತ್ತಿರದಲ್ಲೇ ಇದ್ದ ರಾಮಪ್ಪ ಎಂಬುವವರ ಮನೆ ಅಂಗಳಕ್ಕೆ ಬಂದು ಮನೆ ಬಾಗಿಲು ತಟ್ಟಿದ್ದಾನೆ.

ಈ ವೇಳೆ ರಾಮಪ್ಪ ಅವರ ಮಗಳು ಭಯದಿಂದ ಕಿರುಚಾಡಿದ್ದಾಳೆ. ತಕ್ಷಣವೇ ಸ್ಥಳದಲ್ಲಿ ಜಮಾಯಿಸಿದ ಸ್ಥಳೀಯರು ಶರಣಪ್ಪನಿಗೆ ಥಳಿಸಿದ್ದಾರೆ.


ತಕ್ಷಣವೇ ಉಳ್ಳಾಲ ಪೊಲೀಸರು ಸ್ಥಳಕ್ಕೇ ಧಾವಿಸಿ ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ. ಈ ವೇಳೆ ಆರೋಪಿಯ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಪ್ರತಿಭಟನೆ ನಡೆಸಿದ್ದಾರೆ.

LEAVE A REPLY

Please enter your comment!
Please enter your name here

Hot Topics

ಸಿದ್ದರಾಮಯ್ಯಗೆ ಮೊಟ್ಟೆ ಎಸೆತ ಪ್ರಕರಣ: 9 ಮಂದಿಯ ಬಂಧನ

ಕುಶಾಲನಗರ: ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರ ಕಾರಿನ ಮೇಲೆ ಕೋಳಿ ಮೊಟ್ಟೆ ಎಸೆದ ಘಟನೆ ಕುರಿತು ವಶಕ್ಕೆ ತೆಗೆದುಕೊಳ್ಳಲಾದ 9 ಮಂದಿಯ ವಿರುದ್ಧ ಪ್ರಕರಣ ದಾಖಲಿಸಿರುವ ಕುಶಾಲನಗರ ಗ್ರಾಮಾಂತರ ಠಾಣೆ ಪೊಲೀಸರು...

ಚಿಕ್ಕಮಗಳೂರಿನಲ್ಲೂ ಸಿದ್ದರಾಮಯ್ಯ ವಾಹನಕ್ಕೆ ಕಪ್ಪು ಬಟ್ಟೆ ಪ್ರದರ್ಶನ

ಚಿಕ್ಕಮಗಳೂರು: ಜಿಲ್ಲೆಯ ಶೃಂಗೇರಿ ತಾಲ್ಲೂಕಿನ ಮೆಣಸೆಯ ಕೇಂದ್ರೀಯ ಸಂಸ್ಕೃತ ವಿಶ್ವವಿದ್ಯಾಲಯ ಸಮೀಪ ಬಿಜೆಪಿಯವರು ಸಿದ್ದರಾಮಯ್ಯ ವಾಹನಕ್ಕೆ ಕಪ್ಪು ಬಟ್ಟೆ ಪ್ರದರ್ಶಿಸಿದರು.ಪ್ರತಿಯಾಗಿ ಕಾಂಗ್ರೆಸ್‌ನವರು ಪ್ರತಿಭಟನೆ ನಡೆಸಿದರು. ಕಾಂಗ್ರೆಸ್ ಬಾವುಟ ಪ್ರದರ್ಶಿಸಿದರು. ಕಾಂಗ್ರೆಸ್ ಮತ್ತು ಬಿಜೆಪಿ ಗುಂಪುಗಳ...

ಬಿಸಿಯೂಟ ಅಡುಗೆ ತಯಾರಕರು ಕನಿಷ್ಠ ವೇತನ ಕಾಯ್ದೆಯಡಿ ವೇತನ ಪಡೆಯಲು ಅರ್ಹರಲ್ಲ: ಹೈಕೋರ್ಟ್

ಬೆಂಗಳೂರು: ರಾಜ್ಯ ಸರ್ಕಾರ ನಡೆಸುತ್ತಿರುವ ಮಧ್ಯಾಹ್ನ ಬಿಸಿಯೂಟ ಯೋಜನೆಯಡಿ ಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುತ್ತಿರುವ ಮುಖ್ಯ ಅಡುಗೆ ತಯಾರಕರು ಮತ್ತು ಅಡುಗೆ ತಯಾರಕರು ಕನಿಷ್ಠ ವೇತನ ಕಾಯಿದೆಯಡಿ ವೇತನ ಪಡೆಯಲು ಅರ್ಹರಾಗಿಲ್ಲ...