ಬೆಳಗಾವಿ: ಗ್ರಾಮಲೆಕ್ಕಾಧಿಕಾರಿ ಒಬ್ಬರು ಕರ್ತವ್ಯದ ವೇಳೆ ಪಾನಮತ್ತರಾಗಿ ತಾಲೂಕು ಕಚೇರಿಯ ಮುಂದೆ ಹೊರಳಾಡುತ್ತಿರುವ ಘಟನೆ ಬೆಳಗಾವಿಯ ಸವದತ್ತಿ ತಹಶೀಲ್ದಾರ್ ಕಚೇರಿ ಎದುರು ನಡೆದಿದೆ.
ಗ್ರಾಮಲೆಕ್ಕಾಧಿಕಾರಿ ಸಂಜು ಬೆಣ್ಣಿ ಅವರು ತಹಶೀಲ್ದಾರ್ ಕಚೇರಿಯಲ್ಲಿ ಕರ್ತವ್ಯಕ್ಕೆ ನಿಯೋಜಿಸಲಾಗಿತ್ತು.
ಆದರೆ ಇವರು ಕರ್ತವ್ಯದ ಸಮಯದಲ್ಲಿ ಕಂಠಪೂರ್ತಿ ಕುಡಿದು ಕಚೇರಿಯ ಎದುರಿಗೇ ಬಿದ್ದುಕೊಂಡು ಅಮಲಿನಲ್ಲಿ ಹೊರಳಾಡುತ್ತಿರುವ ವೀಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಗ್ರಾಮ ಲೆಕ್ಕಾಧಿಕಾರಿ ಸಂಜು ಬೆಣ್ಣಿ ವಿರುದ್ಧ ತಹಶೀಲ್ದಾರ್ ಪ್ರಶಾಂತ್ ಪಾಟೀಲ್ ಏನೂ ಕ್ರಮ ಕೈಗೊಳ್ಳದ ಹಿನ್ನೆಲೆಯಲ್ಲಿ ಭಾರೀ ಆಕ್ರೋಶ ವ್ಯಕ್ತವಾಗಿದೆ.