Connect with us

BELTHANGADY

ಡೀಕಯ್ಯ ಸಾವು ಅಸಹಜ ಎಂದ ಕುಟುಂಬಸ್ಥರು: ಶವ ಮೇಲೆತ್ತಿ ಮತ್ತೆ ಮರಣೋತ್ತರ ಪರೀಕ್ಷೆ

Published

on

ಬೆಳ್ತಂಗಡಿ: ಚಿಂತಕ, ಅಂಬೇಡ್ಕರ್ ವಾದಿ ದಲಿತ ಮುಖಂಡ ಪಿ.ಡೀಕಯ್ಯ ಅವರ ಸಾವು ಅಸಹಜ ಎಂದು ಕುಟುಂಬಸ್ಥರು ಅನುಮಾನ ವ್ಯಕ್ತಪಡಿಸಿ ದೂರು ನೀಡಿದ ಹಿನ್ನೆಲೆಯಲ್ಲಿ ಮರಣೋತ್ತರ ಪರೀಕ್ಷೆಗಾಗಿ ಇಂದು ತಹಶೀಲ್ದಾರ್‌ ಹಾಗೂ ಪೊಲೀಸ್‌ ಸಮ್ಮುಖದಲ್ಲಿ ಮೃತ ದೇಹವನ್ನು ಹೊರತೆಗೆಯುವ ಪ್ರಕ್ರಿಯೆ ಬೆಳ್ತಂಗಡಿ ತಾಲೂಕಿನ ಪದ್ಮುಂಜದಲ್ಲಿ ಇಂದು ನಡೆದಿದೆ.

ಜು. 8 ರಂದು ಮಿದುಳಿನ ರಕ್ತಸ್ರಾವದಿಂದ ಅವರು ಮೃತಪಟ್ಟಿದ್ದಾರೆ ಎಂದು ಹೇಳಲಾಗಿತ್ತು. ಕುಟುಂಬಸ್ಥರು ಈ ಬಗ್ಗೆ ಅನುಮಾನ ವ್ಯಕ್ತಪಡಿಸಿ ಈ ಬಗ್ಗೆ ದೂರು ನೀಡಿರುವ ಹಿನ್ನೆಲೆಯಲ್ಲಿ ಪೊಲೀಸ್ ಇಲಾಖೆ, ತನಿಖೆಗೆ ಮುಂದಾಗಿದೆ.

 

BELTHANGADY

ಬೆಳ್ತಂಗಡಿ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷನ ಬಂಧನ..! ಶಾಸಕ ಪೂಂಜಾ ಪ್ರತಿಭಟನೆ

Published

on

ಬೆಳ್ತಂಗಡಿ : ಅಕ್ರಮ ಕಲ್ಲಿನ ಗಣಿಗಾರಿಕೆ ನಡೆಸುತ್ತಿದ್ದ ಆರೋಪದಲ್ಲಿ ಬೆಳ್ತಂಗಡಿ ತಹಶೀಲ್ದಾರ್ ಹಾಗೂ ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿದ್ದಾರೆ. ಅಕ್ರಮ ಗಣಿಗಾರಿಕೆ ನಡೆಸುತ್ತಿದ್ದ ಆರೋಪದಲ್ಲಿ ಬೆಳ್ತಂಗಡಿ ಬಿಜೆಪಿ ಯುವ ಮೋರ್ಚಾದ ಅಧ್ಯಕ್ಷ ಶಶಿರಾಜ್ ಶೆಟ್ಟಿ ಅವರನ್ನು ರಾತೋರಾತ್ರಿ ಬಂಧಿಸಿದ್ದಾರೆ. ಆದ್ರೆ, ಈ ಬಂಧನವನ್ನು ವಿರೋಧಿಸಿದ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಇಡೀ ರಾತ್ರಿ ಪೊಲೀಸ್ ಠಾಣೆಯ ಮುಂದೆ ಪ್ರತಿಭಟನೆ ನಡೆಸಿದ್ದಾರೆ.

ಬೆಳ್ತಂಗಡಿಯ ಮೆಲಂತಬೆಟ್ಟು ಗ್ರಾಮದ ಮೂಡಲ ನಿವಾಸಿ ಸೂರಪ್ಪ ಪೂಜಾರಿ ಎಂಬವರ ಜಾಗಕ್ಕೆ ಮೇ 18 ರ ಸಂಜೆ ತಹಶೀಲ್ದಾರ್‌ ಅವರ ನೇತೃತ್ವದಲ್ಲಿ ದಾಳಿ ನಡೆಸಲಾಗಿತ್ತು. ಅಕ್ರಮ ಗಣಿಗಾರಿಕೆಯ ಬಗ್ಗೆ ದೂರುಗಳು ಬಂದ ಹಿನ್ನೆಲೆಯಲ್ಲಿ ಪೊಲೀಸರ ಜೊತೆಯಲ್ಲಿ ದಾಳಿಯನ್ನು ನಡೆಸಲಾಗಿತ್ತು. ಈ ವೇಳೆ ಸ್ಥಳದಲ್ಲಿ ಅಕ್ರಮ ಗಣಿಗಾರಿಕೆ ನಡೆಸುತ್ತಿದ್ದ ವಿಚಾರ ಪತ್ತೆಯಾಗಿದ್ದು, ಸ್ಥಳದಿಂದ ಒಂದು ಹಿಟಾಚಿ, ಕಂಪ್ರೆಸರ್, ಕಾರು ಹಾಗೂ ಸ್ಫೋಟಕಗಳನ್ನು ವಶಪಡಿಸಿಕೊಳ್ಳಲಾಗಿತ್ತು. ವಿಚಾರಣೆಯ ವೇಳೆ ಈ ಅಕ್ರಮ ಗಣಿಗಾರಿಕೆ ಬಿಜೆಪಿ ಮುಖಂಡ ಪ್ರಮೋದ್ ದಿಡುಪೆ ಹಾಗೂ ಯುವ ಮೋರ್ಚಾದ ತಾಲೂಕು ಅಧ್ಯಕ್ಷ ಶಶಿರಾಜ್ ಶೆಟ್ಟಿ ಅವರದ್ದು ಎಂದು ಗೊತ್ತಾಗಿತ್ತು.

ಅಕ್ರಮ ಗಣಿಗಾರಿಕೆ ಸಾಬೀತಾದ ಹಿನ್ನೆಲೆಯಲ್ಲಿ ರಾತೋ ರಾತ್ರಿ ಶಶಿರಾಜ್ ಶೆಟ್ಟಿ ಅವರ ಮನೆಗೆ ನುಗ್ಗಿ ಅವರನ್ನು ಬಂಧಿಸಿದ್ದರು. ಈ ವಿಚಾರ ತಿಳಿದು ಠಾಣೆಗೆ ಆಗಮಿಸಿದ ಶಾಸಕ ಹರೀಶ್ ಪೂಂಜಾ, ಶಶಿರಾಜ್ ಶೆಟ್ಟಿಯನ್ನು ತಕ್ಷಣ ಬಿಡುಗಡೆ ಮಾಡುವಂತೆ ಒತ್ತಾಯಿಸಿದ್ರು. ಆದ್ರೆ, ಶಾಸಕರ ಮಾತಿಗೆ ಒಪ್ಪದ ಪೊಲೀಸರು ಆರೋಪಿಯ ವಿರುದ್ಧ ಎಫ್‌ ಐ ಆರ್ ದಾಖಲಿಸಿಕೊಂಡಿದ್ದಾರೆ. ಇದರಿಂದ ಆಕ್ರೋಶಿತರಾದ ಶಾಸಕ ಪೂಂಜಾ ಠಾಣೆಯ ಮುಂದೆ ಪ್ರತಿಭಟನೆ ನಡೆಸಿದ್ದಾರೆ.

ಇದನ್ನೂ ಓದಿ : KARKALA: ಕಲ್ಲು ಸಾಗಾಟದ ಲಾರಿ ಪಲ್ಟಿ; ಇಬ್ಬರು ಕಾರ್ಮಿಕರು ಸಾ*ವು

ಪೊಲೀಸರ ಮೇಲೆ ಕಾಂಗ್ರೆಸ್ ಏಜೆಂಟರ ಆರೋಪ :

ರಾತೋರಾತ್ರಿ ಮನೆಗೆ ನುಗ್ಗಿದ ಪೊಲೀಸರು ಅಕ್ರಮದಲ್ಲಿ ಭಾಗಿಯಾಗದ ಬಿಜೆಪಿ ನಾಯಕರನ್ನು ಟಾರ್ಗೆಟ್ ಮಾಡಿದ್ದಾರೆ ಅಂತ ಶಾಸಕ ಪೂಂಜಾ ಆರೋಪಿಸಿದ್ದಾರೆ. ಪೊಲೀಸರು ಕಾಂಗ್ರೆಸ್ ಏಜೆಂಟರಂತೆ ವರ್ತಿಸುತ್ತಿದ್ದಾರೆ ಎಂದು ಆರೋಪಿಸಿ ಸರ್ಕಾರದ ವಿರುದ್ಧ ಹರಿಹಾಯ್ದಿದ್ದಾರೆ. ನಮ್ಮ ಸರ್ಕಾರ ಬಂದಾಗ ನೋಡಿಕೊಳ್ಳುವುದಾಗಿ ಪೊಲೀಸರಿಗೆ ಎಚ್ಚರಿಕೆ ನೀಡಿದ್ದಾರೆ. ಮಾಧ್ಯಮಗಳ ಮುಂದೆ ತಮ್ಮ ಆಕ್ರೋಶ ವ್ಯಕ್ತಪಡಿಸಿ ಪೊಲೀಸರ ಕ್ರಮವನ್ನು ಖಂಡಿಸಿದ್ದಾರೆ.

Continue Reading

BELTHANGADY

ಪಶುವೈದ್ಯರಿಂದ ಹ*ಲ್ಲೆ ಆರೋಪ; ರೀಲ್ಸ್ ಮೂಲಕ ಫೇಮಸ್ ಆಗಿದ್ದ ವ್ಯಕ್ತಿ ಸಾ*ವು

Published

on

ಕೊಕ್ಕಡ  : ಜ್ವರದಿಂದ ಬಳಲುತ್ತಿದ್ದ ವ್ಯಕ್ತಿಯೊಬ್ಬನಿಗೆ ಹ*ಲ್ಲೆ ನಡೆಸಿ ಆತನ ಸಾ*ವಿಗೆ ಕಾರಣರಾಗಿದ್ದಾರೆ ಎಂಬ ಆರೋಪದಲ್ಲಿ ಪಶುವೈದ್ಯರೊಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಕೊಕ್ಕಡ ತಾಲೂಕಿನಲ್ಲಿ ಈ ಘಟನೆ ನಡೆದಿದ್ದು, 58 ವರ್ಷ ಪ್ರಾಯದ ಕಿಟ್ಟಿ ಯಾನೆ ಕೃಷ್ಣ ಮೃ*ತ ವ್ಯಕ್ತಿಯಾಗಿದ್ದಾರೆ.

ಕೊಕ್ಕಡ ಪಶುವೈದ್ಯಾಧಿಕಾರಿ ಕುಮಾರ್ ಅವರ ಮೇಲೆ ಕೊ*ಲೆ ಆರೋಪ ಕೇಳಿ ಬಂದಿದ್ದು, ಅವರನ್ನು ಧರ್ಮಸ್ಥಳ ಪೊಲೀಸರು ಬಂಧಿಸಿದ್ದಾರೆ.

ಪತ್ನಿಯಿಂದ ದೂರು ದಾಖಲು :

ವಿಪರೀತ ಕುಡಿತದ ಚಟ ಹೊಂದಿದ್ದ ಕೃಷ್ಣ ಇತ್ತೀಚೆಗೆ ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದರು. ಆರೋಗ್ಯ ಸುಧಾರಿಸುವ ಮೊದಲೇ ಆಸ್ಪತ್ರೆಯಿಂದ ಡಿಸ್ಚಾರ್ಜ್‌ ಆಗಿ ನಿನ್ನೆ ಕೊಕ್ಕಡಕ್ಕೆ ಬಂದು ಇಳಿದಿದ್ದರು. ಈ ವೇಳೆ ಕೃಷ್ಣರ ಪರಿಚಿತ ವ್ಯಕ್ತಿ ಹಾಗೂ ಸ್ಥಳೀಯ ಪಶುವೈದ್ಯಾಧಿಕಾರಿ ಕುಮಾರ್ ಅವರು ಆತನ ಆರೋಗ್ಯ ವಿಚಾರಿಸಿದ್ದಾರೆ.

ಈ ವೇಳೆ ಇಷ್ಟು ಬೇಗ ಯಾಕೆ ಡಿಸ್ಚಾರ್ಜ್ ಆಗಿ ಬಂದಿದ್ದು? ಎಂದು ಪ್ರಶ್ನೆ ಮಾಡಿದ್ದಾರೆ. ಈ ರೀತಿ ಮಾತುಕತೆ ನಡೆಯುತ್ತಿದ್ದಾಗ ಕೃಷ್ಣ ಕುಸಿದು ಬಿದ್ದು ಸಾ*ವನ್ನಪ್ಪಿದ್ದಾರೆ. ಆದರೆ ಮಾತನಾಡುತ್ತಿದ್ದ ಪಶು ವೈದ್ಯಾಧಿಕಾರಿ ಕುಮಾರ್ ಅವರು ತನ್ನ ಪತಿಗೆ ಹ*ಲ್ಲೆ ನಡೆಸಿದ್ದಾರೆ ಎಂದು ಪತ್ನಿ ಭಾರತಿ ಪೊಲೀಸರಿಗೆ ದೂರು ನೀಡಿದ್ದಾರೆ.

ಇದನ್ನೂ ಓದಿ : ಕಳ್ಳತನ ಮಾಡಲೆಂದೇ ವರ್ಷದಲ್ಲಿ ಸುಮಾರು 200 ಬಾರಿ ವಿಮಾನದಲ್ಲಿ ಪ್ರಯಾಣಿಸುತ್ತಿದ್ದ ವ್ಯಕ್ತಿ

ಈ ಹಿನ್ನಲೆಯಲ್ಲಿ ಪೊಲೀಸರು ಪಶುವೈದ್ಯಾಧಿಕಾರಿಯನ್ನು ಬಂಧಿಸಿದ್ದಾರೆ. ಆದ್ರೆ, ಕೃಷ್ಣ ಸಾ*ವಿನ ಬಗ್ಗೆ ಅನುಮಾನ ಮೂಡಿರುವ ಹಿನ್ನಲೆಯಲ್ಲಿ ಮರಣೋತ್ತರ ಪರೀಕ್ಷೆಗೆ ಮೃ*ತದೇಹವನ್ನು ಕೆ.ಎಸ್‌.ಹೆಗ್ಡೆ ಆಸ್ಪತ್ರೆಗೆ ರವಾನಿಸಲಾಗಿದೆ. ವರದಿ ಬಂದ ಬಳಿಕ ಕೃಷ್ಣ ಸಾ*ವಿನ ನಿಖರ ಕಾರಣ ತಿಳಿದು ಬರಲಿದೆ.

ಮೃ*ತ ಕೃಷ್ಣ ಅವರು ಕೊಕ್ಕಡ ಭಾಗದಲ್ಲಿ ರೀಲ್ಸ್ ನಲ್ಲಿ ಹೆಚ್ಚಾಗಿ ಜನಜನಿತರಾಗಿದ್ದರು. ಇತ್ತೀಚೆಗೂ ಒಂದು ಕನ್ನಡ ಸಿನೆಮಾದ ಡೈಲಾಗ್ ನ್ನ ರೀಲ್ಸ್ ಮಾಡಿದ್ದರು.

Continue Reading

BANTWAL

ಕಡಬ : ಸಿಡಿಲು ಬಡಿದು ಓರ್ವ ಸಾವು; ಇಬ್ಬರಿಗೆ ಗಾಯ

Published

on

ಕಡಬ : ದಕ್ಷಿಣ ಕನ್ನಡ ಜಿಲ್ಲೆಯ ಕೆಲವೆಡೆ ವರುಣ ಕೃಪೆ ತೋರಿದ್ದಾನೆ. ಇನ್ನೊಂದೆಡೆ ಸಿಡಿಲಾರ್ಭಟಕ್ಕೆ ವ್ಯಕ್ತಿ ಬಲಿಯಾಗಿದ್ದಾರೆ.. ಕಡಬ ತಾಲೂಕಿನಲ್ಲಿ ಸಿಡಿಲು ಬಡಿದು ಓರ್ವ ಸಾವನ್ನಪ್ಪಿದ್ದು, ಇಬ್ಬರಿಗೆ ಗಾಯಗಳಾಗಿವೆ. ಉತ್ತರ ಪ್ರದೇಶ,ಚೈನ್‌ಪುರ್ ಮೂಲದ ಶ್ರೀಕಿಶುನ್ ಮೃತ ವ್ಯಕ್ತಿ.

ಇದನ್ನು ಓದಿ:ಪುತ್ತೂರಿನಲ್ಲಿ ಅನುಮಾನಾಸ್ಪದವಾಗಿ ಸಾವನ್ನಪ್ಪಿದ ಯುವಕ! 

ಕಡಬ ತಾಲೂಕಿನ ಇಚ್ಲಂಪಾಡಿಯಲ್ಲಿ ಈ ದುರ್ಘಟನೆ ಸಂಭವಿಸಿದೆ. ನದಿ ಬದಿಯ ಶೆಡ್ ನಲ್ಲಿದ್ದ ವೇಳೆ ಶೆಡ್ ಗೇ ಸಿಡಿಲು ಬಡಿದಿದೆ. ಪರಿಣಾಮ ಮರಳು ತೆಗೆಯುವ ಉತ್ತರ ಪ್ರದೇಶ ಮೂಲದ ಕಾರ್ಮಿಕ ಸಾವನ್ನಪ್ಪಿದ್ದಾನೆ.
ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರು ಆಸ್ಪತ್ರೆಗೆ ರವಾನಿಸಲಾಗಿದೆ.

Continue Reading

LATEST NEWS

Trending