Saturday, September 18, 2021

ದುಬೈ ಬಂದರ್‌ ನಲ್ಲಿ ಭಾರೀ ಸ್ಪೋಟ

ದುಬೈ: ಇಲ್ಲಿನ ಜಬಲ್‌ ಅಲಿಯ ಮುಖ್ಯ ಬಂದರಿನಲ್ಲಿ ಸರಕು ಸಾಗಾಟ ಹಡಗಿನಲ್ಲಿ ಸ್ಫೋಟ ಮತ್ತು ಬೆಂಕಿ ಅನಾಹುತ ಸಂಭವಿಸಿದೆ. ಆದರೆ ಯಾವುದೇ ಸಾವುನೋವಾದ ಬಗ್ಗೆ ವರದಿಯಾಗಿಲ್ಲ.


ಹಡಗಿನಲ್ಲಿ ಭಾರಿ ಸ್ಫೋಟದ ಸದ್ದು ಕೇಳಿಬಂದಿದ್ದು, ಸುತ್ತಮುತ್ತಲು ವಾಸಿಸುತ್ತಿದ್ದವರ ಮೂರು ಮನೆಗಳ ಬಾಗಿಲು ಹಾಗೂ ಕಿಟಕಿಗಳು ಕಂಪಿಸಿದವು ಎಂದು ತಿಳಿದುಬಂದಿದೆ.
ಜೆಬೆಲ್ ಅಲಿ ಬಂದರಿನಲ್ಲಿ ಹಡಗೊಂದರಲ್ಲಿ ಈ ಸ್ಫೋಟ ಸಂಭವಿಸಿದ ಬಳಿಕ ಕಂಟೈನರ್‌ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಇದನ್ನು ನಿಯಂತ್ರಣಕ್ಕೆ ತರಲಾಗಿದೆ. ಸ್ಫೋಟಕ್ಕೆ ಕಾರಣ ತಿಳಿದುಬಂದಿಲ್ಲ. ಈ ಹಡಗು ನಿಲುಗಡೆಗೆ ಸಜ್ಜಾಗುತ್ತಿತ್ತು ಎಂದು ವಿವರಿಸಲಾಗಿದೆ.
ಅಗ್ನಿಶಾಮಕ ಸಿಬ್ಬಂದಿ ಬೆಂಕಿಯನ್ನು ನಂದಿಸಲು ಕಾರ್ಯಾಚರಣೆಯಲ್ಲಿ ತೊಡಗಿರುವ ವಿಡಿಯೊವನ್ನು ಕೂಡಾ ಟ್ವೀಟ್ ಮಾಡಲಾಗಿದೆ. ಹೆಲಿಕಾಪ್ಟರ್ ಒಂದನ್ನು ಕೂಡಾ ಕಾರ್ಯಾಚರಣೆಗೆ ನಿಯೋಜಿಸಲಾಗಿದೆ.

Hot Topics

ಸಾಲದ ಹೊರೆ ತಾಳಲಾರದೆ ವೀಡಿಯೋ ಮೂಲಕ ಗುಡ್​ಬೈ ಹೇಳಿ ಶಿಕ್ಷಕ ದಂಪತಿ ಆತ್ಮಹತ್ಯೆ

ವಿಜಯವಾಡ: ಶಾಲೆ ನಡೆಸುತ್ತಿದ್ದ ಶಿಕ್ಷಕ ದಂಪತಿ ಸಾಲದ ಹೊರೆ ತಡೆಯಲಾರದೇ ವಿಷಸೇವಿಸಿ ಆತ್ಮಹತ್ಯೆ ಹಾದಿ ಹಿಡಿರುವ ದಾರುಣ ಘಟನೆ ಆಂಧ್ರ ಪ್ರದೇಶದ ಕರ್ನೂಲ್​ ಜಿಲ್ಲೆಯಲ್ಲಿ ನಡೆದಿದೆ. ಸಾವಿಗೂ ಮುನ್ನ ಶಿಕ್ಷಕ ದಂಪತಿ ತಮ್ಮ...

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..!

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..! ಉಡುಪಿ : ಉಡುಪಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾರಿ ಮಳೆಯ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಕಾಪು ಬಳಿ...

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..!

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..! ಮಂಗಳೂರು:  ಎಂಟು ವರ್ಷದ ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಮಾಡಿರುವ ದಾರುಣ ಘಟನೆ ಹಳೆಯಂಗಡಿ ಬಳಿಯ ಕಲ್ಲಾಪು ರೈಲ್ವೇ ಗೇಟ್...