Monday, May 17, 2021

ಚಂಡ ಮಾರುತ ಪ್ರಭಾವದಿಂದ ಮೇ 6ರವರೆಗೆ ಸುರಿಯಲಿದೆ ಭಾರೀ ವರ್ಷಧಾರೆ..!

ನವದೆಹಲಿ:ವಾಯುವ್ಯ ಮಧ್ಯಪ್ರದೇಶದ ಮೇಲೆ ಚಂಡಮಾರುತದ ಚಲನೆ ಇರುವ ಕಾರಣ ಮುಂದಿನ ನಾಲ್ಕೈದು ದಿನ ಕರ್ನಾಟಕ, ಕೇರಳ ಸೇರಿದಂತೆ ಹಲವು ರಾಜ್ಯಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಕೇಂದ್ರ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

ಚಂಡ ಮಾರುತದ ಕಾರಣ ಪಶ್ಚಿಮ ಬಂಗಾಳ, ಸಿಕ್ಕಿಂ, ಅಸ್ಸಾಂ, ಮೇಘಾಲಯದಲ್ಲಿ ಕೂಡ ಮಳೆಯಾಗಲಿದೆ. ಕೇರಳ ಹಾಗೂ ದಕ್ಷಿಣ ಕನ್ನಡದ ಭಾಗಗಳಲ್ಲಿ ಮೇ 4 ರಿಂದ 6ರವರೆಗೂ ಮಳೆಯಾಗಲಿದೆ.

ಅಂಡಮಾನ್ ನಿಕೋಬಾರ್ ದ್ವೀಪಗಳ ಪಶ್ಚಿಮ ಕರಾವಳಿಯಲ್ಲಿ ಮತ್ತು ದಕ್ಷಿಣ ತಮಿಳುನಾಡು, ಕೇರಳ, ಕರ್ನಾಟಕ ಲಕ್ಷದ್ವೀಪ ಕರಾವಳಿ ಪ್ರದೇಶಗಳಲ್ಲಿ ಅಲೆಗಳು ಹೆಚ್ಚಾಗಲಿವೆ.

ಮುಂದಿನ ಐದು ದಿನಗಳಲ್ಲಿ ಪೂರ್ವ ಹಾಗೂ ಈಶಾನ್ಯ ಭಾರತದ ಉಳಿದ ಭಾಗಗಳಿಗೆ ಮಳೆಯಾಗಲಿದೆ ಎಂದು ಹೇಳಲಾಗಿದೆ.ಇನ್ನು ಕರ್ನಾಟಕದ ದಕ್ಷಿಣ ಒಳನಾಡು, ಕರಾವಳಿ, ಉತ್ತರ ಒಳನಾಡಿನಲ್ಲಿ ಮಳೆಯಾಗಲಿದೆ.

7 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ದಕ್ಷಿಣ ತಮಿಳುನಾಡು, ನೆರೆ ಹೊರೆಯ ರಾಜ್ಯಗಳ ಮೇಲೆ ಚಂಡಮಾರುತ ಪ್ರಭಾವದಿಂದಾಗಿ ದಕ್ಷಿಣ ಭಾರತದ ಕೆಲವು ಭಾಗಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.

Hot Topics

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..!

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..! ಉಡುಪಿ : ಉಡುಪಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾರಿ ಮಳೆಯ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಕಾಪು ಬಳಿ...

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..!

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..! ಮಂಗಳೂರು:  ಎಂಟು ವರ್ಷದ ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಮಾಡಿರುವ ದಾರುಣ ಘಟನೆ ಹಳೆಯಂಗಡಿ ಬಳಿಯ ಕಲ್ಲಾಪು ರೈಲ್ವೇ ಗೇಟ್...

ಫೋನಿನಲ್ಲಿ ಮಾತಾಡುತ್ತಿದ್ದ ಯುವಕ ಮೃತ್ಯು ಕೂಪಕ್ಕೆ: ವಿಟ್ಲದಲ್ಲಿ ಹೃದಯ ವಿದ್ರಾವಕ ಘಟನೆ..! 

ಫೋನಿನಲ್ಲಿ ಮಾತಾಡುತ್ತಿದ್ದ ಯುವಕ ಮೃತ್ಯು ಕೂಪಕ್ಕೆ ವಿಟ್ಲದಲ್ಲಿ ಹೃದಯ ವಿದ್ರಾವಕ ಘಟನೆ..!  ಮಂಗಳೂರು: ಟೆರೇಸ್ ನಲ್ಲಿ ಫೋನ್ ನಲ್ಲಿ ಮಾತನಾಡುತ್ತಿದ್ದ ವೇಳೆ ಆಯತಪ್ಪಿ ಕೆಳಗೆ ಬಿದ್ದು ಯುವಕ ಸಾವನ್ನಪ್ಪಿರುವ ಘಟನೆ ವಿಟ್ಲದ ಕೇಪು ಎಂಬಲ್ಲಿ...