Friday, May 27, 2022

ದೇವಸ್ಥಾನದ ಮೇಲೆ ದಾಳಿ ಮಾಡಿದವರ ವಿರುದ್ಧ ಕಠಿಣ ಕ್ರಮ: ಬಾಂಗ್ಲಾ ಪ್ರಧಾನಿ ಶೇಖ್ ಹಸೀನಾ ಎಚ್ಚರಿಕೆ

ಢಾಕಾ: ಬಾಂಗ್ಲಾದೇಶದಲ್ಲಿ ದುರ್ಗಾ ಪೂಜೆ ವೇಳೆ ಹಿಂದೂ ದೇವಸ್ಥಾನದ ಮೇಲೆ ಗೂಂಡಾಗಳು ದಾಳಿ ನಡೆಸಿ ಗುರುವಾರ ನಾಲ್ಕು ಜನರನ್ನು ಹತ್ಯೆ ಮಾಡಿದ್ದರು. ಇದಕ್ಕೆ ಹಿಂದೂಗಳಿಂದ ಆಕ್ರೋಶ ವ್ಯಕ್ತವಾಗಿತ್ತು.

ಈ ಹಿನ್ನೆಲೆಯಲ್ಲಿ ಪ್ರತಿಕ್ರಿಯೆ ನೀಡಿರುವ ಬಾಂಗ್ಲಾದೇಶದ ಪ್ರಧಾನಿ ಶೇಖ್ ಹಸೀನಾ, ದುರ್ಗಾ ಪೂಜೆ ನಡೆಯುವ ಸ್ಥಳ ಮತ್ತು ಹಿಂದೂ ದೇವಸ್ಥಾನಗಳ ಮೇಲೆ ದಾಳಿ ಮಾಡಿರುವವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.


ಬಾಂಗ್ಲಾದೇಶದಲ್ಲಿ ಕೋಮು ಗಲಭೆಗೆ ಕಾರಣರಾದ ಆರೋಪಿಗಳನ್ನು ಹುಡುಕಿ ಅವರಿಗೆ ತಕ್ಕ ಶಿಕ್ಷೆ ನೀಡಲಾಗುವುದು.

ಈ ಹಿಂಸಾಚಾರವನ್ನು ನಮ್ಮ ಸರ್ಕಾರ ಎಂದಿಗೂ ಸಮರ್ಥಿಸಿಕೊಳ್ಳುವುದಿಲ್ಲ. ಆರೋಪಿಗಳಿಗೆ ಆದಷ್ಟು ಬೇಗ ಶಿಕ್ಷೆ ನೀಡಲಾಗುವುದು ಎಂಬ ಭರವಸೆಯನ್ನು ನಾನು ನೀಡುತ್ತೇನೆ.

ತಪ್ಪು ಮಾಡಿದವರು ಯಾವುದೇ ಧರ್ಮದವರಾದರೂ ದೇಶದ ಶಾಂತಿ ಕದಡುವ ಪ್ರಯತ್ನ ಮಾಡಿದವರಿಗೆ ಶಿಕ್ಷೆ ನೀಡದೆ ಬಿಡುವುದಿಲ್ಲ ಎಂದು ಬಾಂಗ್ಲಾ ಪ್ರಧಾನಿ ಶೇಖ್ ಹಸೀನಾ ಹೇಳಿದ್ದಾರೆ.
ತಂತ್ರಜ್ಞಾನದ ಈ ಯುಗದಲ್ಲಿ ತಪ್ಪು ಮಾಡಿದವರು ತಪ್ಪಿಸಿಕೊಳ್ಳಲು ಸಾಧ್ಯವೇ ಇಲ್ಲ.

ದುರ್ಗಾ ಪೂಜೆ ವೇಳೆ ನಡೆದ ಹಿಂಸಾಚಾರದ ಬಗ್ಗೆ ಈಗಾಗಲೇ ಸಾಕಷ್ಟು ಮಾಹಿತಿಗಳನ್ನು ಕಲೆ ಹಾಕಲಾಗಿದೆ. ಆರೋಪಿಗಳನ್ನು ಆದಷ್ಟು ಬೇಗ ಸೆರೆ ಹಿಡಿದು, ಶಿಕ್ಷೆ ವಿಧಿಸಲಾಗುವುದು ಎಂದು ಶೇಖ್ ಹಸೀನಾ ಹೇಳಿದ್ದಾರೆ.

LEAVE A REPLY

Please enter your comment!
Please enter your name here

Hot Topics