Connect with us

LATEST NEWS

ಸಾಮಾಜಿಕ ಜಾಲತಾಣದಲ್ಲಿ ದುರ್ಗಾ ಪೂಜೆಯ ಪೋಸ್ಟ್; ಹೆಂಡತಿ, ಅತ್ತೆಯನ್ನು ಕೊಂ*ದ ಮಾಜಿ ಪತಿ

Published

on

ಮಂಗಳೂರು/ನವದೆಹಲಿ: ಹೆಂಡತಿಯಿಂದ ಬೇರೆಯಾಗಿ ಒಂದು ವರ್ಷದಿಂದ ಬದುಕುತ್ತಿದ್ದ ವ್ಯಕ್ತಿ, ಪರ ಪುರುಷ ಮಿತ್ರರೊಂದಿಗೆ ಅವಳ ಫೇಸ್​ಬುಕ್ ಪೋಸ್ಟ್ ನೋಡಿ ಕೋಪದಿಂದ ಆಕೆ ಮತ್ತು ಆಕೆಯ ತಾಯಿಯನ್ನು ಕೊ*ಲೆಗೈದಿರುವ ಪ್ರಕರಣ ಬೆಳಕಿಗೆ ಬಂದಿದೆ.


51 ವರ್ಷದ ಹರೆಯದ ಆರೋಪಿಯನ್ನು ಪೊಲೀಸರು ಬಂಧಿಸಿದ್ದು, ತನಿಖೆ ಆರಂಭಿಸಿದ್ದಾರೆ.

ಮಾಜಿ ಪತ್ನಿ ನಿನ್ನೆ (ಅ.13) ದುರ್ಗಾ ಪೂಜೆಯ ಸಂದರ್ಭದಲ್ಲಿ ಇಬ್ಬರು ಪುರುಷ ಸ್ನೇಹಿತರೊಂದಿಗೆ ಫೋಟೋಗಳನ್ನು ಸಾಮಾಜಿಕ ಮಾಧ್ಯಮದಲ್ಲಿ ಅಪ್‌ಲೋಡ್ ಮಾಡಿದ್ದಳು. ಅದನ್ನು ಕಂಡ ಪತಿ ಕೋಪಗೊಂಡು ಅವಳನ್ನು ಕೊ*ಲ್ಲಲು ಸಂಚು ರೂಪಿಸಿದ್ದನು.

ಪೂಜೆ ಮುಗಿಸಿಕೊಂಡು ತಾಯಿ ಮತ್ತು ಮಗಳು ಮನೆಗೆ ಹಿಂದಿರುಗುತ್ತಿದ್ದಾಗ ಆರೋಪಿ ಅವರಿಬ್ಬರ ಮೇಲೆ ಹರಿತವಾದ ಚಾ*ಕುವಿನಿಂದ ಹ*ಲ್ಲೆ ನಡೆಸಿದ್ದಾನೆ. ಪರಿಣಾಮವಾಗಿ ಇಬ್ಬರೂ ಸ್ಥಳದಲ್ಲೇ ಸಾ*ವನ್ನಪ್ಪಿದ್ದಾರೆ. ಘಟನೆ ತಿಳಿದು ಸ್ಥಳಕ್ಕೆ ಧಾವಿಸಿದ ಪೊಲೀಸರು, ಒಂದು ಗಂಟೆಯ ಒಳಗೆ ಆರೋಪಿಯನ್ನು ಹಿಡಿದು ಬಂಧಿಸಿದ್ದಾರೆ.

 

ಇದನ್ನೂ ಓದಿ: ಬಂಟ್ವಾಳ : ರೈಲ್ವೇ ಹಳಿ ಬದಿ ರುಂ*ಡ – ಮುಂ*ಡ ಬೇರ್ಪಟ್ಟ ಸ್ಥಿತಿಯಲ್ಲಿ ಮೃ*ತದೇಹ ಪ*ತ್ತೆ

 

“ಸೆಪಾಹಿಜಾಲಾ ಜಿಲ್ಲೆಯ ಮಧುಪುರ್‌ನ ಕೋಳಿ ಸಾಕಾಣಿಕೆ ಮಾಡುವ ವ್ಯಕ್ತಿ ಮಧುಪುರದಲ್ಲಿ ತನ್ನ ಇಬ್ಬರು ಗಂಡು ಮಕ್ಕಳೊಂದಿಗೆ ವಾಸಿಸುತ್ತಿದ್ದರು. ಅವರ ವಿರುದ್ಧ ವಿಚ್ಛೇದನದ ಪ್ರಕರಣವನ್ನು ದಾಖಲಿಸಿದ ಅವರ ಹೆಂಡತಿ ತನ್ನ ತಾಯಿಯೊಂದಿಗೆ ಒಂದೂವರೆ ವರ್ಷದಿಂದ ಪಶ್ಚಿಮ ತ್ರಿಪುರಾ ಜಿಲ್ಲೆಯ ನೇತಾಜಿನಗರದಲ್ಲಿ ವಾಸಿಸುತ್ತಿದ್ದಳು” ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ಈ ಘಟನೆಯ ಕುರಿತು ತನಿಖೆ ನಡೆಯುತ್ತಿದ್ದು, ಸ್ಥಳೀಯ ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.

Click to comment

Leave a Reply

Your email address will not be published. Required fields are marked *

International news

ನಿನ್ನೆಯ ಹರಾಜಿನಲ್ಲಿ ಆರ್ ಸಿಬಿ ಖರೀದಿಸಿದ ಆಟಗಾರರು ಇವರೇ !

Published

on

ಮಂಗಳೂರು/ಸೌದಿ ಅರೇಬಿಯಾ: ಐಪಿಎಲ್ ಸೀಸನ್ 18ರ ಹರಾಜು ಪ್ರಕ್ರಿಯೆ ನಿನ್ನೆಯಿಂದಲೇ ಸೌದಿ ಅರೇಬಿಯಾದ ಜಿದ್ದಾದಲ್ಲಿ ನಡೆಯುತ್ತಿದೆ. ನಿನ್ನೆ ನಡೆದ ಹರಾಜು ಪ್ರಕ್ರಿಯೆಯಲ್ಲಿ ಒಟ್ಟು 72 ಆಟಗಾರರು ಹರಾಜಾಗಿದ್ದು, ಅದರಲ್ಲಿ ಆರ್ ಸಿಬಿಗೆ ಯಾರೆಲ್ಲಾ ಆಟಗಾರರು ಬಂದಿದ್ದಾರೆ ಇಲ್ಲಿದೆ ನೋಡಿ.


ಮೆಗಾ ಹರಾಜು ಪ್ರಕ್ರಿಯೆ ಇವತ್ತು ಕೂಡ ಮುಂದುವರಿಯಲ್ಲಿದ್ದು, ನಿನ್ನೆಯ ಹರಾಜಿನಲ್ಲಿ ರಿಷಭ್ ಪಂತ್ ಮತ್ತು ಶ್ರೇಯಸ್ ಅಯ್ಯರ್ ದಾಖಲೆಯ ಮೊತ್ತಕ್ಕೆ ಮಾರಾಟವಾಗುವ ಮೂಲಕ ಇತಿಹಾಸ ನಿರ್ಮಿಸಿದ್ದಾರೆ. ಆದರೆ ಆರ್ ಸಿಬಿಯ ಅಭಿಮಾನಿಗಳಿಗೆ ಶಾಕ್ ಎದುರಾಗಿತ್ತು. ಕನ್ನಡಿಗ ಕೆ. ಎಲ್ ರಾಹುಲ್ ಈ ಬಾರಿಯಾದರು ಆರ್ ಸಿಬಿಗೆ ಬರಬಹುದು ಎಂಬ ನಿರೀಕ್ಷೆ ಈಡೆರಲಿಲ್ಲ.
ಅಲ್ಲದೆ, ಪ್ರಮುಖ ಆಟಗಾರರದ ರಿಷಭ್ ಪಂತ್, ಜೋಸ್ ಬಟ್ಲರ್, ಮಾಜಿ ಆಟಗಾರ ಯಜುವೇಂದ್ರ ಚಹಲ್ ರವರನ್ನು ಖರೀದಿಸಲು ವಿಫಲವಾಯಿತು. ಮತ್ತೊಂದೆಡೆ ಮೊಹಮ್ಮದ್ ಸಿರಾಜ್ ಅವರನ್ನು ಆರ್ ಟಿಎಂ ಬಳಸಿ ಉಳಿಸಿಕೊಳ್ಳದ ಆರ್ ಸಿಬಿ ಮ್ಯಾನೆಜ್ ಮೆಂಟ್ ನಿರ್ಧಾರಕ್ಕೆ ಅಭಿಮಾನಿಗಳು ಬೇಸರ ವ್ಯಕ್ತಪಡಿಸಿದರು.

ಇನ್ನೂ ಮೊದಲನೇ ದಿನದ ಹರಾಜು ಪ್ರಕ್ರಿಯೆಯಲ್ಲಿ ಆರ್ ಸಿಬಿ 6 ಆಟಗಾರರನ್ನು ಖರೀದಿಸಿತು. ಅದರಲ್ಲಿ ಮೂವರು ವಿದೇಶಿಯರು ಹಾಗೂ ಉಳಿದ ಮೂವರು ಭಾರತೀಯ ಆಟಗಾರರಾಗಿದ್ದಾರೆ.

ಇದನ್ನೂ ಓದಿ: ಎಲನ್ ಮಸ್ಕ್ ಗೆ ಇಷ್ಟವಾದ ಭಾರತದ ಚುನಾವಣಾ ಪ್ರಕ್ರಿಯೆ!

ಮೊದಲ ದಿನದ ಹರಾಜಿನಲ್ಲಿ ಆರ್ ಸಿಬಿ ಖರೀದಿಸಿದ ಆಟಗಾರರು ಇವರೇ :

1.ಲಿಯಾಮ್ ಲಿವಿಂಗ್ ಸ್ಟೋನ್- ರೂ 8.75 ಕೋಟಿ
2.ಫಿಲ್ ಸಾಲ್ಟ್- ರೂ. 11.5 ಕೋಟಿ
3.ಜಿತೇಶ್ ಶರ್ಮಾ- ರೂ. 11 ಕೋಟಿ
4.ಜೋಶ್ ಹ್ಯಾಜಲ್ ವುಡ್- ರೂ. 12.5 ಕೋಟಿ
5.ಅನೂಜ್ ರಾವತ್- ರೂ. 30 ಲಕ್ಷ
6.ರಾಸಿಖ್ ಸಲಾಮ್ ದಾರ್-ರೂ. 6ಕೋಟಿ
7.ಸುಯಾಶ್ ಶರ್ಮಾ-ರೂ. 2.6ಕೋಟಿ

Continue Reading

International news

ಎಲನ್ ಮಸ್ಕ್ ಗೆ ಇಷ್ಟವಾದ ಭಾರತದ ಚುನಾವಣಾ ಪ್ರಕ್ರಿಯೆ!

Published

on

ಮಂಗಳೂರು : ಎಲನ್ ಮಸ್ಕ್ ಜಗತ್ತಿನ ನಂಬರ್ ಒನ್ ಶ್ರೀಮಂತ ವ್ಯಕ್ತಿ. ಮಸ್ಕ್ ಅಮೆರಿಕಾದ ಚುನಾವಣಾ ಪ್ರಕ್ರಿಯೆಯನ್ನು ಟೀಕಿಸಿ, ಭಾರತದ ಚುನಾವಣಾ ಪ್ರಕ್ರಿಯೆಯನ್ನು ಹೊಗಳಿದ್ದಾರೆ.


ತಮ್ಮ ಎಕ್ಸ್ ಖಾತೆಯಲ್ಲಿ ಬರೆದಿರುವ ಮಸ್ಕ್, ಭಾರತದಲ್ಲಿ ಚುನಾವಣಾ ಪ್ರಕ್ರಿಯೆ ಅದ್ಬುತವಾಗಿ ನಡೆಯುತ್ತದೆ. ಒಂದೇ ಒಂದು ದಿನದಲ್ಲಿ ಇಡೀ ಲೋಕಸಭಾ ಚುನಾವಣೆಯ ಮತ ಎಣಿಕೆ ಮಾಡಿದ ಶ್ರೇಯಸ್ಸು ಭಾರತದ್ದು ಎಂದಿದ್ದಾರೆ.

ಇದನ್ನೂ ಓದಿ: ಸಾಯಿ ಪಲ್ಲವಿಯವರ ಕೈಯಲ್ಲಿದೆ ಹಲವಾರು ಸಿನಿಮಾಗಳು !
ಕ್ಯಾಲಿಫೋರ್ನಿಯಾದ ಚುನಾವಣಾ ಪ್ರಕ್ರಿಯೆಯನ್ನು ಟೀಕಿಸಿರುವ ಅವರು, ತಮ್ಮ ಎಕ್ಸ್ ಖಾತೆಯಲ್ಲಿ ಈ ಪೊಸ್ಟ್ ಹಾಕಿದ್ದಾರೆ. ಅದರ ಅಡಿಬರಹದಲ್ಲಿ, ಭಾರತದಲ್ಲಿ ಚುನಾವಣೆ ಎಂದರೆ ವಂಚನೆಯೇ ಮೊದಲ ಗುರಿ ಇರುವಲ್ಲಿ ಒಂದೇ ಒಂದು ದಿನದಲ್ಲಿ 64 ಕೋಟಿ ಮತಗಳನ್ನು ಎಣಿಕೆ ಮಾಡಿದ್ದಾರೆ. ಆದ್ರೆ ಕ್ಯಾಲಿಫೋರ್ನಿಯಾದಲ್ಲಿ ಇನ್ನೂ ಕೂಡ ಮತಗಳು ಎಣಿಕೆ ಆಗುತ್ತಲೇ ಇವೆ ಎಂದು ಬರೆದಿದ್ದಾರೆ.

ಕ್ಯಾಲಿಫೋರ್ನಿಯಾದಲ್ಲಿ ಮತ ಎಣಿಕೆ ಕಾರ್ಯ ವಿಳಂಬ ಯಾಕೆ :
ಅಮೆರಿಕಾದಲ್ಲಿ ಮೇಲ್ ಇನ್ ವೋಟಿಂಗ್ ವ್ಯವಸ್ಥೆ ಇದೆ. ಇದನ್ನು ಎಣಿಕೆ ಮಾಡುವ ಅನೇಕ ರೀತಿಯ ಪ್ರಕ್ರಿಯೆಗಳನ್ನು ಮಾಡುವ ಕಾರಣ ಚುನಾವಣಾ ಪ್ರಕ್ರಿಯೆ ವಿಳಂಬವಾಗುತ್ತಿದೆ. ಅದರಲ್ಲೂ ಕ್ಯಾಲಿಫೋರ್ನಿಯಾದಂತಹ ದೊಡ್ಡ ದೊಡ್ಡ ನಗರಗಳಲ್ಲಿ ಈ ಮೇಲ್ ಇನ್ ವೋಟಿಂಗ್ ಗಳು ತುಂಬಾ ಸಮಸ್ಯೆಗಳನ್ನು ಉಂಟು ಮಾಡುತ್ತವೆ. ಈ ವಿಳಂಬ ನೀತಿಯನ್ನು ಎಲನ್ ಮಸ್ಕ್ ಟೀಕಿಸಿ ಭಾರತವನ್ನು ಹೊಗಳಿದ್ದಾರೆ.
ಅಮೇರಿಕಾದಲ್ಲಿ ಹಿಂದಿನಿಂದಲೂ ಮೇಲ್ ಇನ್ ವೋಟಿಂಗ್ ವ್ಯವಸ್ಥೆ ಇದ್ದು, ಈಗಲೂ ಮುಂದುವರಿದುಕೊಂಡು ಬಂದಿದೆ.

Continue Reading

LATEST NEWS

ಸಾಯಿ ಪಲ್ಲವಿಯವರ ಕೈಯಲ್ಲಿದೆ ಹಲವಾರು ಸಿನಿಮಾಗಳು !

Published

on

ಮಂಗಳೂರು: ತಮಿಳಿನ ಶಿವ ಕಾರ್ತಿಕೇಯನ್ ಮತ್ತು ಸಾಯಿ ಪಲ್ಲವಿ ಅಭಿನಯದ ‘ಅಮರನ್’ ಚಿತ್ರ ಬಿಡುಗಡೆಯಾದಾಗಿನಿಂದಲೂ ಬಾಕ್ಸ್ ಆಫೀಸ್ ನಲ್ಲಿ ಸಿಕ್ಕಾಪಟ್ಟೆ ಸದ್ದು ಮಾಡುತ್ತಿದೆ. ಅದಾಗಲೇ ಸಾಯಿ ಪಲ್ಲವಿಯವರ ಮುಂದೆ ಸಾಲು ಸಾಲು ಸಿನಿಮಾಗಳು ಕಾಯುತ್ತಿದೆ.


ನಟಿ ಸಾಯಿ ಪಲ್ಲವಿಯವರು ದಕ್ಷಿಣ ಭಾರತದ ಜನಪ್ರಿಯ ನಟಿ ಹಾಗೂ ತನ್ನ ಪ್ರತಿಭೆಯಿಂದಲೇ ಅಪಾರ ಅಭಿಮಾನಿಗಳನ್ನು ಸಂಪಾದಿಸಿರುವ ನಟಿ. ಸದಾ ಒಂದಲ್ಲಾ ಒಂದು ಸಿನಿಮಾದಲ್ಲಿ ಕಾರ್ಯನಿರತರಾಗಿರುವ ಸಾಯಿ ಪಲ್ಲವಿಯವರ ಮುಂದೆ ಸಾಲು ಸಾಲು ಸಿನಿಮಾಗಳು ಕಾಯುತ್ತಿದೆ.

ಇದನ್ನೂ ಓದಿ: ಹಾಸಿಗೆ ಹಿಡಿದಿದ್ದ 80ರ ಅಜ್ಜಿ ಮೇಲೆಯೂ ವರದಕ್ಷಿಣೆ ಕೇಸ್‌: ಪ್ರಕರಣ ರದ್ದುಪಡಿಸಿದ ಹೈಕೋರ್ಟ್‌
ರಣಬೀರ್ ಕಪೂರ್, ಯಶ್ ನಟನೆಯ ಹಿಂದಿಯ ರಾಮಾಯಣ ಸಿನಿಮಾದಲ್ಲಿ ಸೀತೆಯ ಪಾತ್ರದಲ್ಲಿ ಸಾಯಿ ಪಲ್ಲವಿ ನಟಿಸುತ್ತಿದ್ದಾರೆ. ನಂತರ ಅಮೀರ್ ಖಾನ್ ನಿರ್ಮಾಣ ಮಾಡಿ ಅವರ ಮಗ ನಟಿಸುತ್ತಿರುವ ಹೊಸ ಹಿಂದಿ ಸಿನಿಮಾದಲ್ಲಿ ಸಾಯಿ ಪಲ್ಲವಿ ನಾಯಕಿಯಾಗಿ ನಟಿಸುತ್ತಿದ್ದಾರೆ.
ಈಗಾಗಲೇ, ನಟ ನಾಗಚೈತನ್ಯ ನಟಿಸಿರುವ ‘ತಾಂಡೇಲ್’ ಸಿನಿಮಾದಲ್ಲೂ ಸಾಯಿ ಪಲ್ಲವಿಯವರು ನಟಿಸಿದ್ದಾರೆ. ಇದರ ಚಿತ್ರೀಕರಣ ಮುಗಿದಿದ್ದು, ಕೆಲವೇ ತಿಂಗಳುಗಳಲ್ಲಿ ಬಿಡುಗಡೆಯಾಗಲಿದೆ. ಇನ್ನೂ ಸುಕುಮಾರ್ ನಿರ್ದೇಶನದ ಹೊಸ ಸಿನಿಮಾದಲ್ಲೂ ಸಾಯಿ ಪಲ್ಲವಿ ನಟಿಸಲಿದ್ದಾರೆ. ಇದರಲ್ಲಿ ನಾಯಕನಾಗಿ ರಾಮ್ ಚರಣ್ ಅಭಿನಯಿಸಲಿದ್ದಾರೆ.
ಅಳೆದು ತೂಗಿ ಪಾತ್ರಗಳನ್ನು ಆಯ್ಕೆ ಮಾಡಿಕೊಳ್ಳುವ ಸಾಯಿ ಪಲ್ಲವಿ, ಪಕ್ಕಾ ಫ್ಯಾಮಿಲಿ ಗರ್ಲ್ ಎಂದು ಹೇಳಿದರೆ ತಪ್ಪಾಗುವುದಿಲ್ಲ. ಈಗಾಗಿಯೇ ಅವರು ಅಪಾರ ಅಭಿಮಾನಿ ಬಳಗವನ್ನು ಹೊಂದಿದ್ದಾರೆ.

Continue Reading

LATEST NEWS

Trending

Exit mobile version