Home ಪ್ರಮುಖ ಸುದ್ದಿ ಲಾಕ್ ಡೌನ್ ನಡುವೆಯೂ ಸರಾಗವಾಗಿ ನಡೆದ ನಿಖಿಲ್-ರೇವತಿ ವಿವಾಹ ಮಹೋತ್ಸವ.!

ಲಾಕ್ ಡೌನ್ ನಡುವೆಯೂ ಸರಾಗವಾಗಿ ನಡೆದ ನಿಖಿಲ್-ರೇವತಿ ವಿವಾಹ ಮಹೋತ್ಸವ.!

ಲಾಕ್ ಡೌನ್ ನಡುವೆಯೂ ಸರಾಗವಾಗಿ ನಡೆದ ನಿಖಿಲ್-ರೇವತಿ ವಿವಾಹ ಮಹೋತ್ಸವ.!

ರಾಮನಗರ: ಕೊರೋನಾ ವೈರಸ್ ಲಾಕ್ ಡೌನ್ ನಡುವೆಯೇ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರ ಸುಪುತ್ರ ನಿಖಿಲ್ ಕುಮಾರಸ್ವಾಮಿ ಹಾಗೂ ರೇವತಿ ಅವರ ವಿವಾಹ ಮಹೋತ್ಸವ ಇಂದು (ಎಪ್ರಿಲ್ 17) ಸರಳವಾಗಿ ನೆರವೇರಿದೆ.

ಬೆಳಗ್ಗೆ 9.15 ರಿಂದ 9.45ರ ಶುಭ ಲಗ್ನದಲ್ಲಿ ನಿಖಿಲ್, ರೇವತಿಗೆ ಮಾಂಗಲ್ಯ ಧಾರಣೆ ಮಾಡಿದ್ದಾರೆ.

ಸಂಪ್ರದಾಯಬದ್ದವಾಗಿ ನಡೆದ ಮದುವೆ ಸಮಾರಂಭದಲ್ಲಿ ಕುಟುಂಬಂಸ್ಥರು ಮಾತ್ರ ಹಾಜರಿದ್ದು ವಧುವರರಿಗೆ ಆಶೀರ್ವದಿಸಿದರು.

ನಿಖಿಲ್ ಬಿಳಿ ಬಣ್ಣದ ಪಂಚೆ ಶೈಲ್ಯ ಧರಿಸಿ ದೇಸಿ ಸ್ಟೈಲ್ ನಲ್ಲಿ ಮಿಂಚಿದ್ರೆ, ರೇವತಿ ಗೋಲ್ಡನ್ ಬಣ್ಣದ ಸೀರೆಗೆ ಕೆಂಪು ಬಣ್ಣದ ಬಾರ್ಡರ್ ನ ರೇಶ್ಮೆ ಸೀರಿಯಲ್ಲಿ ಕಂಗೊಳಿಸುತ್ತಿದ್ದರು.

ರಾಮನಗರ ಜಿಲ್ಲೆಯ ಕೇತಗಾನಹಳ್ಳಿಯ ಫಾರ್ಮ್ ಹೌಸ್‌ನಲ್ಲಿ ಶುಕ್ರವಾರ ಬೆಳಗ್ಗೆ ಕುಟುಂಬ ಸದಸ್ಯರ ನಡುವೆ ನಿಖಿಲ್ ಕುಮಾರಸ್ವಾಮಿ ಮತ್ತು ರೇವತಿ ಅವರ ವಿವಾಹ ಮಹೋತ್ಸವ ನಡೆಯಿತು.

ಮದುವೆಗೆಂದೇ ಮನೆಯ ಮುಂಭಾಗ ವಿಶೇಷವಾಗಿ ನಿರ್ಮಿಸಲಾಗಿದ್ದ ಅದ್ಧೂರಿ ಮಂಟಪದಲ್ಲಿ ವರ ನಿಖಿಲ್ ಕುಮಾರಸ್ವಾಮಿ, ವಧು ರೇವತಿ ಅವರ ಕತ್ತಿಗೆ ಅಗ್ನಿಸಾಕ್ಷಿಯಾಗಿ ತಾಳಿಕಟ್ಟುವ ಮೂಲಕ ಬಾಳಸಂಗಾತಿಯಾಗಿ ವರಿಸಿದರು.

ಎಚ್.ಡಿ. ಕುಮಾರಸ್ವಾಮಿ ಕುಟುಂಬದ ಹಿರಿಯರಾದ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಹಾಗೂ ಚನ್ನಮ್ಮ ದಂಪತಿ ಧಾರೆ‌ ಎರೆಯುವ ಕಾರ್ಯ ನಡೆಸಿಕೊಟ್ಟರು.

ಇನ್ನು ಮದುವೆ ಕಾರ್ಯಕ್ರಮದಲ್ಲಿ ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿ-ಅನಿತಾ ಕುಮಾರಸ್ವಾಮಿ, ಅವರ ಬೀಗರಾದ ಮಂಜುನಾಥ ದಂಪತಿ ಹಾಗೂ ಎರಡೂ ಕುಟುಂಬದ ಆಪ್ತರಷ್ಟೇ ಪಾಲ್ಗೊಂಡಿದ್ದರು.

ಅಲ್ಲದೆ ಶಾಸಕ ಎಚ್.ಡಿ. ರೇವಣ್ಣ, ಭವಾನಿ ದಂಪತಿ, ಸಂಸದ ಪ್ರಜ್ವಲ್ ರೇವಣ್ಣ ಕೂಡ ಪಾಲ್ಗೊಂಡರು.

42 ವಾಹನಗಳಿಗೆ ಪೊಲೀಸರ ಅನುಮತಿ

ಇನ್ನು ರಾಜ್ಯದಲ್ಲಿ ಕೊರೋನಾ ವೈರಸ್ ಲಾಕ್ ಡೌನ್ ಜಾರಿಯಲ್ಲಿರುವುದರಿಂದ ನಿಖಿಲ್ ಮದುವೆಗೆ ಪೊಲೀಸರು ಷರತ್ತು ಬದ್ಧ ಅನುಮತಿ ನೀಡಿದ್ದರು.

ಮದುವೆ ಕಾರ್ಯಕ್ರಮದಲ್ಲಿ ಒಟ್ಟು 42 ವಾಹನಗಳ ಓಡಾಟಕ್ಕೆ ಮಾತ್ರವಷ್ಟೇ ಪೊಲೀಸರು ಅನುಮತಿ ನೀಡಿದ್ದರು.

ಇನ್ನು ಲಾಕ್‌ಡೌನ್ ಕಾರಣದಿಂದ ಮದುವೆಗೆ ಹೆಚ್ಚು ಜನರು ಸೇರುವ ಹಾಗಿಲ್ಲ. ಅನೇಕ ಮದುವೆ ಸಮಾರಂಭಗಳಲ್ಲಿ ಕೇವಲ 10-15 ಜನರು ಭಾಗಿಯಾದ ಉದಾಹರಣೆಗಳಿವೆ.

ವಿಪತ್ತು ನಿರ್ವಹಣಾ ಕಾಯ್ದೆ 2005ರ ಪ್ರಕಾರ ಜಿಲ್ಲಾ ಮ್ಯಾಜಿಸ್ಟ್ರೇಟ್ ನಿಯಂತ್ರಣದ ನಡುವೆ ಮದುವೆ ನಡೆಯಬೇಕು. ಗೃಹ ಇಲಾಖೆ ಮಾರ್ಗಸೂಚಿಗಳಿಗೆ ಅನುಗುಣವಾಗಿ ನಡೆಯಬೇಕು.

ಆದರೆ ಕುಮಾರಸ್ವಾಮಿ ಅವರ ಮಗನ ಮದುವೆಯಲ್ಲಿ ಕೇಂದ್ರ ಸರ್ಕಾರ ಹೊರಡಿಸಿರುವ ಮಾರ್ಗಸೂಚಿಗಳನ್ನು ಉಲ್ಲಂಘನೆ ಮಾಡಲಾಗಿದೆ ಎಂಬ ಆರೋಪ ಕೇಳಿಬಂದಿದೆ.

ನಿಖಿಲ್ ಮದುವೆಯಲ್ಲಿ ನಿಗಮಕ್ಕೂ ಮೀರಿ ಹೆಚ್ಚಿನ ಸಂಖ್ಯೆಯಲ್ಲಿ ಜನರು ಸೇರಿದ್ದಾರೆ. ಇಲ್ಲಿ ಸಾಮಾಜಿಕ ಅಂತರ ಕಾಯ್ದುಕೊಂಡಿಲ್ಲ ಎಂದು ಇದೀಗ ಆರೋಪಿಸಲಾಗಿದೆ.

ನಿಖಿಲ್-ರೇವತಿ ಮದುವೆ ಚಿತ್ರಗಳು:

- Advertisment -

RECENT NEWS

ದಕ್ಷಿಣ ಅಸ್ಸಾಂನ ಬರಾಕ್ ಕಣಿವೆಯಲ್ಲಿ ಭೂಕುಸಿತ: 20ಕ್ಕೂ ಅಧಿಕ ಮಂದಿ ಜೀವಂತ ಸಮಾಧಿ..

ದಕ್ಷಿಣ ಅಸ್ಸಾಂನ ಬರಾಕ್ ಕಣಿವೆಯಲ್ಲಿ ಭೂಕುಸಿತ: 20ಕ್ಕೂ ಅಧಿಕ ಮಂದಿ ಜೀವಂತ ಸಮಾಧಿ.. ಗುವಾಹಟಿ: ದಕ್ಷಿಣ ಅಸ್ಸಾಂನ ಬರಾಕ್​ ಕಣಿವೆಯಲ್ಲಿ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಭೂಕುಸಿತ ಉಂಟಾಗಿದ್ದು, ಮಹಿಳೆಯರು, ಮಕ್ಕಳು ಸೇರಿ 20ಕ್ಕೂ ಹೆಚ್ಚು ಜನ...

ಲಾಕ್ ಡೌನ್ ನಿಯಮ ಗಾಳಿಗೆ ತೂರಿ ಸೈಂಟ್ ಮೇರಿಸ್ ದ್ವೀಪದಲ್ಲಿ ಪಾರ್ಟಿ ಮಾಡಿದವರ ವಿರುದ್ಧ ತನಿಖೆ..

ಲಾಕ್ ಡೌನ್ ನಿಯಮ ಗಾಳಿಗೆ ತೂರಿ ಸೈಂಟ್ ಮೇರಿಸ್ ದ್ವೀಪದಲ್ಲಿ ಪಾರ್ಟಿ ಮಾಡಿದವರ ವಿರುದ್ಧ ತನಿಖೆ.. ಉಡುಪಿ: ಕೋವಿಡ್- 19 ಲಾಕ್ ಡೌನ್ ನಿಯಮ ಉಲ್ಲಂಘಿಸಿ, ಮಲ್ಪೆ ಸೈಂಟ್ ಮೇರಿಸ್ ದ್ವೀಪದಲ್ಲಿ ಮೇ 9ರಂದು...

ಕರ್ನಾಟಕ ಕಲ್ಚರಲ್ ಫೌಂಡೇಶನ್ ಸೌದಿ ಅರೇಬಿಯ ವತಿಯಿಂದ ನೂತನ ಮನೆ ಹಸ್ತಾಂತರ

ಕರ್ನಾಟಕ ಕಲ್ಚರಲ್ ಫೌಂಡೇಶನ್ ಸೌದಿ ಅರೇಬಿಯ ವತಿಯಿಂದ ನೂತನ ಮನೆ ಹಸ್ತಾಂತರ ಬೆಳ್ತಂಗಡಿ: ಕರ್ನಾಟಕ ಕಲ್ಚರಲ್ ಫೌಂಡೇಶನ್ ಸೌದಿ ಅರೇಬಿಯ ಇದರ ವತಿಯಿಂದ ಬೆಳ್ತಂಗಡಿ ತಾಲೂಕಿನ ಬೆದ್ರಬೆಟ್ಟುವಿನಲ್ಲಿ ನಿರ್ಮಿಸಲಾದ ಮನೆಯ ಕೀಲಿ ಕೈ ಹಸ್ತಾಂತರ...

ದಿಟ್ಟ ಕ್ರಮಗಳಿಂದ ಸರಕಾರವನ್ನು ತಟ್ಟಿ ಕೇಳಿದ್ದ ಹಿರಿಯ ಕೆಎಎಸ್ ಅಧಿಕಾರಿ ಕೆ.ಮಥಾಯಿ ಸೇವೆಯಿಂದ ನಿವೃತ್ತಿ

ದಿಟ್ಟ ಕ್ರಮಗಳಿಂದ ಸರಕಾರವನ್ನು ತಟ್ಟಿ ಕೇಳಿದ್ದ ಹಿರಿಯ ಕೆಎಎಸ್ ಅಧಿಕಾರಿ ಕೆ.ಮಥಾಯಿ ಸೇವೆಯಿಂದ ನಿವೃತ್ತಿ ಬೆಂಗಳೂರು: ಹಲವಾರು ದಿಟ್ಟ ಕ್ರಮಗಳಿಂದ ಸರಕಾರವನ್ನು ಹಲವು ಬಾರಿ ಎದುರು ಹಾಕಿಕೊಂಡಿದ್ದ ಹಿರಿಯ ಕೆಎಎಸ್ ಅಧಿಕಾರಿ ಕೆ.ಮಥಾಯಿ ಅವರು...