Connect with us

    DAKSHINA KANNADA

    ಕೆಲಸದ ವೇಳೆ ಮಣ್ಣು ಕುಸಿದು ಬಿದ್ದು ಕಾರ್ಮಿಕ ಸಾ*ವು

    Published

    on

    ಮಂಗಳೂರು : ಒಳಚರಂಡಿ ಕಾಮಗಾರಿ ನಡೆಸುತ್ತಿದ್ದಾಗ ಮಣ್ಣು ಕುಸಿದು ಅದರೊಳಗೆ ಸಿಲುಕಿ ಕಾರ್ಮಿಕನೋರ್ವ ಮೃ*ತಪಟ್ಟ ಘಟನೆ ಮಂಗಳೂರು ನಗರದ ಹೊಯಿಗೆಬೈಲ್‌ನಲ್ಲಿ ನಿನ್ನೆ ಸಂಜೆ ಸಂಭವಿಸಿದೆ.

    ಪಶ್ಚಿಮ ಬಂಗಾಳದ ಕಮಲ್‌ ಹುಸೇನ್‌ (20) ಮೃ*ತಪಟ್ಟ ಕಾರ್ಮಿಕ. ಜೆಸಿಬಿ ಸಹಿತವಾಗಿ ಮೂವರು ಕಾರ್ಮಿಕರು ಕೆಲಸದಲ್ಲಿ ನಿರತರಾಗಿದ್ದು, ಅವರಲ್ಲಿ ಒಬ್ಬರು ಸುಮಾರು ಏಳೆಂಟು ಅಡಿ ಆಳದಲ್ಲಿ ಕೆಲಸ ಮಾಡುತ್ತಿದ್ದರು.

    ಇದನ್ನೂ ಓದಿ: ಕೊಣಾಜೆ ತಿಬ್ಲಪದವು ಬಳಿ ಭೀ*ಕರ ರಸ್ತೆ ಅ*ಪಘಾತ; ಮೆಡಿಕಲ್ ಅಂಗಡಿ ಮಾಲಕ ಸಾ*ವು

    ಏಕಾಏಕಿ ಕೆಸರು ಮಣ್ಣು ಕುಸಿದು ಅದರಡಿ ಅವರು ಸಿಲುಕಿದರು. ಅವರನ್ನು ಇತರ ಕಾರ್ಮಿಕರು, ಸ್ಥಳೀಯರು ಮೇಲಕ್ಕೆತ್ತಿ ಆಸ್ಪತ್ರೆಗೆ ಸಾಗಿಸಿದ್ದರೂ ಅಷ್ಟರಲ್ಲಿ ದಾರಿ ಮಧ್ಯೆ ಮೃ*ತಪಟ್ಟಿದ್ದಾರೆ. ಉರ್ವ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

     

    DAKSHINA KANNADA

    ಉಡುಪಿ: ರಸ್ತೆ ಅಪಘಾತದಲ್ಲಿ 28 ವರ್ಷದ ಯುವಕ ಮೃ*ತ್ಯು

    Published

    on

    ಉಡುಪಿ: ರಸ್ತೆ ಅಪಘಾತದಲ್ಲಿ ಯುವಕನೊಬ್ಬ ಪ್ರಾಣ ಕಳೆದುಕೊಂಡ ದಾರುಣ ಘಟನೆ ಬೈರಂಪಳ್ಳಿ ಗ್ರಾಮದ ದೂಪದಕಟ್ಟೆ ಚೌಡೇಶ್ವರಿ ದೇವಸ್ಥಾನದ ಬಳಿ ಜ.6ರಂದು ಸಂಭವಿಸಿದೆ.

    ಮೃತರನ್ನು ಸಂತೋಷ್(28) ಎಂದು ಗುರುತಿಸಲಾಗಿದೆ.

    ಪೆರ್ಡೂರಿನಿಂದ ಹರಿಖಂಡಿಗೆ ಕಡೆಗೆ ಬೈಕ್ ನಲ್ಲಿ ತೆರಳುತ್ತಿದ್ದ ಸಂತೋಷ್ ನಿಯಂತ್ರಣ ತಪ್ಪಿ ರಸ್ತೆ ಬದಿಯ ಮರಕ್ಕೆ ಡಿಕ್ಕಿ ಹೊಡೆದಿದ್ದಾರೆ. ಪರಿಣಾಮ ಸಂತೋಷ್ ಅವರು ಗಂಭೀರ ಗಾಯಗೊಂಡಿದ್ದು, ಅವರನ್ನು ಹಿರಿಯಡ್ಕ ಆಸ್ಪತ್ರೆಗೆ ಸಾಗಿಸುವಷ್ಟರಲ್ಲಿ ಮೃತಪಟ್ಟಿದ್ದಾರೆ.

    ಈ ಕುರಿತು ಹಿರಿಯಡ್ಕ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    Continue Reading

    DAKSHINA KANNADA

    ಸರಕಾರಿ ಬಸ್ಸಿಗೆ ಡಿಕ್ಕಿ ಹೊಡೆದ ಬೈಕ್‌; ಸವಾರರಿಬ್ಬರಿಗೆ ಗಂಭೀರ ಗಾಯ

    Published

    on

    ಪುತ್ತೂರು: ಉಪ್ಪಿನಂಗಡಿ ರಸ್ತೆಯ ದಾರಂದಕುಕ್ಕು ಕೊಲ್ಯ ಎಂಬಲ್ಲಿ ಇಂದು ಬೆಳಿಗ್ಗೆ ಬೈಕ್, ಬಸ್ ಡಿಕ್ಕಿ ಹೊಡದು ಬೈಕಿನಲ್ಲಿದ್ದ ಇಬ್ಬರು ವಿದ್ಯಾರ್ಥಿಗಳು ಗಂಭೀರ ಗಾಯಗೊಂಡಿದ್ದು, ಇವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

    ಬೆಳ್ಳಿಪ್ಪಾಡಿ ನಿವಾಸಿಗಳಾಗಿರುವ ಸುಳ್ಯ ಕೆವಿಜಿ ಪಾಲಿಟೆಕ್ನಿಕ್‌ ವಿದ್ಯಾರ್ಥಿ ಬೈಕ್ ಸವಾರ ನಿಶಾಂತ್ ಮತ್ತು ಹಿಂಬದಿ ಸವಾರ ಶ್ರೀ ರಾಮಕೃಷ್ಣ ಪ್ರೌಢ ಶಾಲೆಯ ವಿದ್ಯಾರ್ಥಿ ಕಾರ್ತಿಕ್ ಗಾಯಗೊಂಡಿದ್ದಾರೆ. ಅವರು ಬೈಕ್ ನಲ್ಲಿ ಪುತ್ತೂರಿಗೆ ಬರುತ್ತಿದ್ದ ವೇಳೆ ವಿರುದ್ದ ದಿಕ್ಕಿನಿಂದ ಬಂದ ಕೆ ಎಸ್ ಆರ್ ಟಿ ಸಿ ಬಸ್ ನಡುವೆ ಡಿಕ್ಕಿ ಸಂಭವಿಸಿದೆ.

    ಗಾಯಾಳುವನ್ನು ಪುತ್ತೂರು ಖಾಸಗಿ ಆಸ್ಪತ್ರಗೆ ದಾಖಲಿಸಲಾಗಿದೆ. ಪುತ್ತೂರಿನ ಸಂಚಾರಿ ಪೊಲೀಸರು ಸ್ಥಳಕ್ಕೆ ತೆರಳಿ ವಿಚಾರಣೆ ನಡೆಸಿ ದೂರು ದಾಖಲಿಸಿದ್ದಾರೆ.

    Continue Reading

    BELTHANGADY

    ಶ್ರೀಕ್ಷೇತ್ರ ಧರ್ಮಸ್ಥಳದಲ್ಲಿ ಕ್ಯೂ ಕಾಂಪ್ಲೆಕ್ಸ್ ಉದ್ಘಾಟಿಸಿದ ಉಪರಾಷ್ಟ್ರಪತಿ

    Published

    on

    ಮಂಗಳೂರು: ಶ್ರೀಕ್ಷೇತ್ರ ಧರ್ಮಸ್ಥಳದಲ್ಲಿ ನೂತನವಾಗಿ ನಿರ್ಮಾಣಗೊಂಡ ಕ್ಯೂ ಕಾಂಪ್ಲೆಕ್ಸ್ ಶ್ರೀ ಸಾನ್ನಿಧ್ಯವನ್ನ ಉಪರಾಷ್ಟ್ರಪತಿ ಜಗದೀಪ್ ಧನ್‌ಕರ್ ಮಂಗಳವಾರ ಲೋಕಾರ್ಪಣೆ ಮಾಡಿದರು.

    ಪತ್ನಿ ಸಮೇತರಾಗಿ ಧರ್ಮಸ್ಥಳಕ್ಕೆ ಆಗಮಿಸಿದ ಧನ್‌ಕರ್, ಮಂಜುನಾಥ ಸ್ವಾಮಿಯ ದರ್ಶನ ಪಡೆದರು. ಬಳಿಕ ಕಾಂಪ್ಲೆಕ್ಸ್ ಉದ್ಘಾಟಿಸಿ ಅಮೃತವರ್ಷಿಣಿ ಸಭಾಂಗಣದಲ್ಲಿ ಸಭಾ ಕಾರ್ಯಕ್ರಮದಲ್ಲಿ ಭಾಗಿಯಾದರು.

    ವೇದಿಕೆಯಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ, ಪತ್ನಿ ಹೇಮಾವತಿ ಹೆಗ್ಗಡೆ, ಹರ್ಷೇಂದ್ರ ಕುಮಾರ್, ಸಂಸದ ಕ್ಯಾ.ಬ್ರಿಜೇಶ್ ಚೌಟ ಉಪಸ್ಥಿತರಿದ್ದರು. ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಉಪರಾಷ್ಟ್ರಪತಿ ಕ್ಷೇತ್ರ ಕೆಲಸ ಕಾರ್ಯಗಳನ್ನ ಪ್ರಶಂಸಿಸಿ, ಇನ್ನಷ್ಟು ಒಳ್ಳೆ ಕಾರ್ಯ ನಡೆಯಲಿ ಎಂದು ಹಾರೈಸಿದರು.

    ಕ್ಷೇತ್ರದ ಅಮೃತವರ್ಷಿಣಿ ಸಭಾಂಗಣದಲ್ಲಿ ಉದ್ಘಾಟನೆ ಕಾರ್ಯಕ್ರಮದಲ್ಲಿ ಭಾಷಣ ಮಾಡಿದ ಅವರು, ಮಂಜುನಾಥ ದೇವರ ದರ್ಶನಕ್ಕೆ ಬರುವ ಭಕ್ತರಿಗಾಗಿ ಕ್ಯೂ ಕಾಂಪ್ಲೆಕ್ಸ್ ಮಾಡಿದ್ದಾರೆ. ಲಕ್ಷಾಂತರ ಜನರು ಧರ್ಮಸ್ಥಳಕ್ಕೆ ಆಗಮಿಸುತ್ತಾರೆ. ಭಕ್ತರು ನಿಲ್ಲುವುದಕ್ಕಾಗಿ ಕ್ಯೂ ಕಾಂಪ್ಲೆಕ್ಸ್ ಮಾಡಲಾಗಿದೆ. ಇದು ಕೇವಲ ಕಟ್ಟಡ ಮಾತ್ರ ಅಲ್ಲ, ವೈದ್ಯಕೀಯ ಸೇರಿದಂತೆ ಎಲ್ಲ ಸೌಲಭ್ಯಗಳನ್ನು ಒಳಗೊಂಡ ಕೇಂದ್ರ ಎಲ್ಲ ಜನರಿಗೆ ಒಂದೇ ಕಡೆ ನಿಲ್ಲುವ ವ್ಯವಸ್ಥೆ ಮಾಡಿದ್ದು, ಸಮಾನತೆಯನ್ನು ತೋರಿಸುತ್ತದೆ. ಧಾರ್ಮಿಕ ಸಂಸ್ಥೆಗಳು ಈ ದೇಶದಲ್ಲಿ ಸಂಸ್ಕೃತಿ, ಶಿಕ್ಷಣ, ಆರೋಗ್ಯ ಕ್ಷೇತ್ರದಲ್ಲಿ ಕೊಡುಗೆ ನೀಡುತ್ತಿವೆ. ಧಾರ್ಮಿಕ ಸಂಸ್ಥೆಗಳೇ ಈ ದೇಶದ ಗ್ರಾಮೀಣ ಪ್ರದೇಶದ ಶಕ್ತಿ. ಶಿಕ್ಷಣವೇ ದೇಶದಲ್ಲಿ ಸಮಾನತೆ ತರುವ ಮುಖ್ಯ ಸಾಧನವಾಗಿದೆ ಎಂದು ತಿಳಿಸಿದರು.

    ನಮ್ಮ ನಾಗರಿಕ ಜೀವನ ಇನ್ನಷ್ಟು ಬೆಳಗಬೇಕು. ದೇಶದಲ್ಲಿ ಸೌಹಾರ್ದ ವಾತಾವರಣ ಬೆಳೆಸಬೇಕು. ರಾಜಕೀಯವಾಗಿ ಇನ್ನಷ್ಟು ಪ್ರಬಲರಾಗಬೇಕು, ದೇಶವನ್ನು ಮತ್ತಷ್ಟು ಎತ್ತರಕ್ಕೆ ಒಯ್ಯಲು ಒಗ್ಗೂಡಬೇಕು. ಮೆಸಪೊಟೆಮಿಯಾ, ಚೀನಾ ನಾಗರಿಕತೆ ನಾಶವಾಗಿದೆ. ನಮ್ಮ ನಾಗರಿಕತೆ ಮಾತ್ರ ಇನ್ನೂ ಬೆಳೆಯುತ್ತಿದೆ. ಪ್ರಜಾಪ್ರಭುತ್ವ ನಮಗೆ ಎಲ್ಲ ಸ್ವಾತಂತ್ರ‍್ಯ ಕೊಟ್ಟಿದೆ. ಅಭಿಪ್ರಾಯ ಹೇಳಿಕೊಳ್ಳುವ ಸ್ವಾತಂತ್ರ‍್ಯ ಇದೆ. ಸಶಕ್ತ ಪ್ರಜಾಪ್ರಭುತ್ವ ನಮ್ಮಲ್ಲಿದೆ, ಜನರ ಅಭಿಪ್ರಾಯಕ್ಕೆ ಬೆಲೆ ಇದೆ. ಜನಪ್ರತಿನಿಧಿಗಳು ಜನರ ಆದ್ಯತೆಗೆ ಬೆಲೆ ಕೊಡಬೇಕಿದೆ. ಸಂವಿಧಾನವೇ ನಮ್ಮಲ್ಲಿ ಪರಮೋಚ್ಛವಾದುದು. ಜನರ ಮತಕ್ಕೆ ಬೆಲೆ ಇದ್ದರೆ ಮಾತ್ರ ಸಶಕ್ತ ಪ್ರಜಾಪ್ರಭುತ್ವ ಸಾಧ್ಯ ಎಂದರು.

    ದೇಶ ಆಂತರಿಕವಾಗಿ ಸಶಕ್ತ ಆಗಬೇಕಿದೆ, ದೇಶದ ಸೇವೆಗಾಗಿ ಜನತೆ ಮುಂದೆ ಬರಬೇಕಿದೆ. ರಾಜಕಾರಣಿಗಳು ವಿಭಿನ್ನ ಸಿದ್ಧಾಂತ ಹೊಂದಿರಬಹುದು. ಆದರೆ ನಮ್ಮ ಸಂಸ್ಕೃತಿ, ಸಂಸ್ಕಾರ ಮರೆಯಬಾರದು. ದಿನದ 24 ಗಂಟೆಯೂ ರಾಜಕಾರಣವೇ ಮುಖ್ಯವಾಗಿರಬೇಕೇ? ದೇಶ ಸೇವೆಗೆ ಸಮಯ ವಿನಿಯೋಗ ಮಾಡುತ್ತಿದ್ದಾರೆಯೇ? ನಮ್ಮ ಸಮಾಜ ಯಾಕೆ ಧ್ರುವೀಕರಣ ಆಗುತ್ತಿದೆ, ಅತ್ಯುನ್ನತ ನಾಗರಿಕತೆ ನಮ್ಮದು. ದೇಶದಲ್ಲಿ ಸಮಗ್ರತೆ, ವೈವಿಧ್ಯತೆ, ಸೌಹಾರ್ದವನ್ನು ಉಳಿಸಿಕೊಳ್ಳಬೇಕಾಗಿದೆ. ನಾವು ಸೌಹಾರ್ದ ವಾತಾವರಣ ಉಳಿಸಿಕೊಳ್ಳುವುದು ಮುಖ್ಯ. ದೇಶದ ಜನರಲ್ಲಿ ಮೂಲಭೂತ ಕರ್ತವ್ಯದ ಬಗ್ಗೆ ಜಾಗೃತಿ ಹುಟ್ಟಬೇಕಾಗಿದೆ. ಸಾಮಾಜಿಕ ಸದ್ಭಾವ ಎಲ್ಲಿಂದ ಬರಬೇಕು, ಭಾರತ ಮಾತೆ ಒಂದೇ ಎಂದಾಗ ಈ ಭಾವನೆ ಬರುತ್ತದೆ. ನಾವು ದೇಶಕ್ಕಾಗಿ ಕೆಲಸ ಮಾಡಬೇಕಿದೆ, ದೇಶವೇ ಮೊದಲ ಆದ್ಯತೆ ಆಗಬೇಕಿದೆ ಎಂದು ಹೇಳಿದರು.

    Continue Reading

    LATEST NEWS

    Trending