Connect with us

    DAKSHINA KANNADA

    ಕರಾವಳಿಯಲ್ಲಿ ದಸರಾ ಸಂಭ್ರಮ; ಜಗಮಗಿಸುತ್ತಿರುವ ಮಂಗಳೂರು

    Published

    on

    ಮಂಗಳೂರು: ಕುದ್ರೋಳಿ ಶ್ರೀ ಗೋಕರ್ಣನಾಥೇಶ್ವರ ದೇವಸ್ಥಾನದಲ್ಲಿ ಮುಖ್ಯವಾಗಿ ಮಂಗಳೂರು ದಸರಾವನ್ನು ಆಚರಿಸುತ್ತಾರೆ. ನವರಾತ್ರಿ ಹಬ್ಬ, ವಿಜಯದಶಮಿ ಎಂಬುವುದಾಗಿಯೂ ಕರೆಯುತ್ತಾರೆ. ಈ ಹಬ್ಬದ ಸಮಯದಲ್ಲಿ ಹುಲಿ ನೃತ್ಯ, ಸಿಂಹ ನೃತ್ಯ ಮತ್ತು ಕರಡಿ ನೃತ್ಯ ಬಹು ಆಕರಷಣೀಯವಾಗಿರುತ್ತದೆ. 10 ದಿನಗಳ ಕಾಲ ಮಂಗಳೂರಿನ ಬಹುತೇಕ ರಸ್ತೆಗಳಲ್ಲಿ ದಸರಾ ಮೆರವಣಿಗೆಗಾಗಿ ದೀಪಗಳು ಮತ್ತು ವಿದ್ಯುತ್ ದೀಪಗಳಿಂದ ಅಲಂಕೃತಗೊಂಡಿರುವುದನ್ನು ಕಾಣಬಹುದು. . ಮಂಗಳೂರು ದಸರಾವನ್ನು ಬಿ.ಆರ್.ಕರ್ಕೇರ ಮೊದಲು ಪ್ರಾರಂಭಿಸಿದರು.

    ಹುಲಿವೇಷದ ಅಬ್ಬರ:
    ಹುಲಿವೇಷ ದಸರಾ ಸಂದರ್ಭದಲ್ಲಿ ಮಾಡುವ ಜಾನಪದ ನೃತ್ಯವಾಗಿದೆ. ವಿಶಿಷ್ಟವಾಗಿ ಯುವ ಪುರುಷರು ಪಡೆ ರಚಿಸಿಕೊಂಡು ಹುಲಿಗಳಂತೆ ಬಣ್ಣ ಹಚ್ಚಿ ವೇಷಭೂಷಣವನ್ನು ಧರಿಸುತ್ತಾರೆ. ತುಳುವಿನಲ್ಲಿ ಇದನ್ನು ತಾಸೆ ತಂಡ ಎಂದು ಕರೆಯುತ್ತಾರೆ.


    ಈ ಪಡೆಗಳು ತಮ್ಮ ಬ್ಯಾಂಡ್‌ಗಳ ಡ್ರಮ್ ಬೀಟ್‌ಗಳೊಂದಿಗೆ ಪಟ್ಟಣಗಳ ಬೀದಿಗಳಲ್ಲಿ ಸಂಚರಿಸುತ್ತಾರೆ. ಅವರು ಸುಮಾರು ಹತ್ತು ನಿಮಿಷಗಳ ಕಾಲ ಬಿಡುವಿಲ್ಲದೆ ಪ್ರದರ್ಶನವನ್ನು ನೀಡುತ್ತಾರೆ. ದೇವಿಯ ನೆಚ್ಚಿನ ಪ್ರಾಣಿ ಹುಲಿಯಾದ್ದರಿಂದ ಪಿಲಿನಲಿಕೆ ಶಾರದಾ ದೇವಿಯನ್ನು ಗೌರವಿಸಲು ನಡೆಸಲಾಗುತ್ತದೆ.
    ಗೋಕರ್ಣನಾಥೇಶ್ವರ ದೇವಾಲಯದ ದೇವಿ ವಿಗ್ರಹಗಳು:
    ನವರಾತ್ರಿಯ ಸಮಯದಲ್ಲಿ ಶಾರದಾ ದೇವಿಯೊಂದಿಗೆ ವಿವಿಧ ಮೂರ್ತಿಗಳನ್ನು ಸ್ವರ್ಣ ಕಲಾಮಂಟಪದಲ್ಲಿ ಸ್ತೋತ್ರಗಳ ಪಠಣ ಹಾಗೂ ವೈದಿಕ ಆಚರಣೆಗಳ ನಡುವೆ ಪ್ರತಿಷ್ಠಾಪಿಸುತ್ತಾರೆ. ಒಂಬತ್ತು ದಿನಗಳ ಆಚರಣೆಗಳಲ್ಲಿ, ಮಹಾಗಣಪತಿ ಮತ್ತು ನವದುರ್ಗೆಯರ ಜೊತೆಗೆ ಶಾರದಾ ದೇವಿಯ ಅಲಂಕೃತ ವಿಗ್ರಹಗಳನ್ನು ಪೂಜಿಸಲಾಗುತ್ತದೆ.


    ನವರಾತ್ರಿ ನವದುರ್ಗೆಯರು:
    ಶಾರದಾ ದೇವಿಯ, ಮಹಾಗಣಪತಿ, ಆದಿ ಶಕ್ತಿ ದೇವಿಯನ್ನು ವಿಶೇಷವಾಗಿ ಪ್ರತಿಷ್ಠಾಪಿಸಲಾಗುತ್ತದೆ. ಜೊತೆಗೆ ನವದರ್ಗೆಯರಾದ ಶೈಲಪುತ್ರಿ, ಬ್ರಹ್ಮಚಾರಿಣಿ, ಚಂದ್ರಘಂಟಾ, ಕೂಷ್ಮಾಂಡಾಯಿನಿ, ಸ್ಕಂದಮಾತಾ, ಕಾತ್ಯಾಯಿನಿ, ಕಾಳರಾತ್ರಿ, ಮಹಾಗೌರಿ ಹಾಗೂ ಸಿದ್ಧಿದಾತ್ರಿ ಯನ್ನು ಪ್ರತಿಷ್ಠಾಪಿಸಿರುತ್ತಾರೆ,

    ಸಂಭ್ರಮದ ಮೆರವಣಿಗೆ:
    ವಿಜಯ ದಶಮಿ ದಿನ ಸಂಜೆ ಕುದ್ರೋಳಿ ಶ್ರೀ ಗೋಕರ್ಣನಾಥೇಶ್ವರ ದೇವಸ್ಥಾನದಿಂದ ಮೆರವಣಿಗೆ ಪ್ರಾರಂಭವಾಗಿ ಮರುದಿನ ಮುಂಜಾನೆ ನಡೆಯುತ್ತದೆ. ಮಹಾಗಣಪತಿ ಮತ್ತು ಶಾರದೆಯ ಜೊತೆಗೆ ನವದುರ್ಗೆಯರ ವಿಗ್ರಹಗಳನ್ನು ಮೆರವಣಿಗೆಯಲ್ಲಿ ಕೊಂಡೊಯ್ಯಲಾಗುತ್ತದೆ. ಈ ಮೆರವಣಿಗೆಯಲ್ಲಿ ಪುಷ್ಪಗಳು, ಅಲಂಕಾರಿಕ ಛತ್ರಿಗಳು, ಬ್ಯಾಂಡ್‍ಗಳು, ಚೆಂಡೆ ಮತ್ತು ಸಾಂಪ್ರದಾಯಿಕ ನೃತ್ಯ, ಜಾನಪದ ನೃತ್ಯಳ, ಯಕ್ಷಗಾನ ಪಾತ್ರಗಳು, ಡೊಳ್ಳು ಕುಣಿತ, ಪಿಲಿನಲಿಕೆ ಮತ್ತು ಇತರ ಸಾಂಪ್ರದಾಯಿಕ ಕಲಾ ಪ್ರಕಾರಗಳು ಇರುತ್ತದೆ. ಕುದ್ರೋಳಿ, ಮಣ್ಣಗುಡ್ಡ, ಲೇಡಿಹಿಲ್, ಲಾಲ್‌ಬಾಗ್, ಕೆಎಸ್ ರಾವ್ ರಸ್ತೆ, ಹಂಪನಕಟ್ಟೆ, ಕಾರ್ ಸ್ಟ್ರೀಟ್ ಸೇರಿದಂತೆ ನಗರದ ಪ್ರಮುಖ ರಸ್ತೆಗಳಲ್ಲಿ ಈ ಮೆರವಣಿಗೆ ಸಾಗುತ್ತದೆ.
    ದಸರಾ ಸಂಭ್ರಮದ ಇತರ ಸ್ಥಳಗಳು:
    ಮಂಗಳೂರು ದಸರಾವನ್ನು ಮಂಗಳಾದೇವಿ ದೇವಸ್ಥಾನ, ಪೊಳಲಿ ರಾಜರಾಜೇಶ್ವರಿ ದೇವದ್ಥಾನ, ಕಟೀಲು ದುರ್ಗಾಪರಮೇಶ್ವರಿ ದೇವಸ್ಥಾನ, ಮುಲ್ಕಿ ಬಪ್ಪನಾಡು ದೇವಸ್ಥಾನ, ಉರ್ವ ಮಾರಿಯಮ್ಮ ದೇವಸ್ಥಾನ, ಶ್ರೀ ವೆಂಕಟ್ರಮಣ ದೇವಸ್ಥಾನ, ಶ್ರೀ ಜೋಡುಮುತ್ತು ಮುಂತಾದ ದೇವಸ್ಥಾನಗಳಲ್ಲಿ ಆಚರಣೆಯನ್ನುಆಯೋಜಿಸುತ್ತಾರೆ.


    ಬಹು ವಿಶೇಷ ಮಂಗಳಾದೇವಿ ದಸರಾ:
    ಮಂಗಳಾದೇವಿ ದೇವಸ್ಥಾನ, ಬೋಳಾರ್ ಭಾರತದಾದ್ಯಂತ ಇರುವ ಭಕ್ತರನ್ನು ಆಕರ್ಷಿಸುತ್ತದೆ. ಮಂಗಳೂರು ಎಂಬ ಹೆಸರು ಮಂಗಳಾದೇವಿಯಿಂದ ಬಂದಿದೆ. ಮಂಗಳಾದೇವಿ ದೇವಸ್ಥಾನವು ಜಾನಪದ, ಸಂಗೀತ, ನಾಟಕ, ವಿವಿಧ ವಿಷಯಗಳ ನಾಟಕಗಳು, ಮತ್ತು ಭಕ್ತಿಗೀತೆಗಳಂತಹ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಏರ್ಪಡಿಸುತ್ತದೆ. ಮಹಾನವಮಿ ಎಂದು ಕರೆಯಲ್ಪಡುವ ಒಂಬತ್ತನೇ ದಿನದಂದು ಭಕ್ತರು ರಥೋತ್ಸವದಲ್ಲಿ ಭಾಗವಹಿಸುತ್ತಾರೆ. ಅಲಂಕೃತ ದೇವಿಯನ್ನು ಭವ್ಯ ರಥದ ಮೇಲೆ ಕೂರಿಸಿದ ನಂತರ ರಥವನ್ನು ಎಳೆಯಲಾಗುತ್ತದೆ.

    Click to comment

    Leave a Reply

    Your email address will not be published. Required fields are marked *

    DAKSHINA KANNADA

    ಮಂಗಳೂರು: ಟ್ರಾಯ್‌ನಿಂದ ಕರೆ; 1.71 ಕೋ.ರೂ ವಂಚನೆ

    Published

    on

    ಮಂಗಳೂರು: ಭಾರತೀಯ ದೂರ ಸಂಪರ್ಕ ನಿಯಂತ್ರಣ ಪ್ರಾಧಿಕಾರದಿಂದ ಕರೆ ಮಾಡುವುದಾಗಿ ತಿಳಿಸಿ, ಮೊಬೈಲ್‌ ಸಿಮ್‌ ಖರೀದಿಸಿ ಕಾನೂನು ಬಾಹಿರ ಚಟುವಟಿಕೆ ಕುರಿತು ಆರೋಪಿಸಿ 1.71 ಕೋ.ರೂ ವಂಚಿಸಿರುವ ಕುರಿತು ಸೆನ್‌ ಠಾಣೆಯಲ್ಲಿ ಪ್ರಕರಣ ದಾಖಲಾಗದೆ.

    ನ.11 ರಂದು ಅಪರಿಚಿತ ವ್ಯಕ್ತಿಯೋರ್ವರು ಟ್ರಾಯ್‌ ಪ್ರತಿನಿಧಿ ಎಂದು ಕರೆ ಮಾಡಿದ್ದು, ‘ನಿಮ್ಮ ಹೆಸರಿನಲ್ಲಿ ಇನ್ನೊಂದು ಮೊಬೈಲ್‌ ನಂಬರ್‌ ರಿಜಿಸ್ಟರ್‌ ಆಗಿದೆ, ಮುಂಬೈನ ಅಂಧೇರಿ ಯ ಮೂಲಕ ಕಾನೂನು ಬಾಹಿರ ಚಟುವಟಿಕೆ ನಡೆದಿದೆ . ಮಾರ್ಕೆಟಿಂಗ್‌ ನೆಪದಲ್ಲಿ ಈ ನಂಬರ್‌ ಮೂಲಕ ಕರೆ ಮಾಡಿ ಕಿರುಕುಳ ನೀಡುತ್ತಿರುವ ಕುರಿತು ಎಫ್‌ಐಆರ್‌ ದಾಖಲಾಗಿದೆ. ಈಗಲೇ ನೀವು ಅಂಧೇರಿ ಠಾಣೆಯನ್ನು ಸಂಪರ್ಕ ಮಾಡಬೇಕು. ಇಲ್ಲದಿದ್ದರೆ ನಿಮ್ಮ ಎರಡು ಮೊಬೈಲ್‌ ಸೇವೆಯನ್ನು ಕೊನೆಗಳಿಸಲಾಗುವುದು’ ಎಂದು ಹೇಳಿದ್ದಾರೆ.

    ಅನಂತರ ವಾಟ್ಸಪ್‌ ಮೂಲಕ ವೀಡಿಯೋ ಕರೆ ಮಾಡಿದ್ದು, ನ.13 ರಿಂದ 19 ರ ನಡುವೆ 53 ಲಕ್ಷ, 74 ಲಕ್ಷ ರೂ, 44 ಲಕ್ಷ ರೂ, ಹೀಗೆ ಒಟ್ಟು 1.71 ಕೋ.ರೂ ವರ್ಗಾಯಿಸಿಕೊಂಡು ಮೋಸ ಮಾಡಿದ್ದಾನೆ. ದೂರುದಾರರು ಅಮೆರಿಕಾದ ಐಟಿ ಸಂಸ್ಥೆಯಲ್ಲಿ ಕೆಲಸ ಮಾಡುತ್ತಿದ್ದು, ವಾಪಾಸಾದ ಬಳಿಕ ಮಂಗಳೂರಿನಲ್ಲಿ ಫ್ಲ್ಯಾಟ್‌ ಒಂದನ್ನು ಖರೀದಿ ಮಾಡಿದ್ದರು. ಅವರು ಅವಿವಾಹಿತರಾಗಿದ್ದು, ಒಬ್ಬರೇ ವಾಸ ಮಾಡುತ್ತಿದ್ದರು. ಉದ್ಯೋಗದ ಮೂಲಕ ಉಳಿತಾಯ ಮಾಡಿದ ಸಂಪಾದನೆಯನ್ನು ಈ ಮೂಲಕ ಕಳೆದುಕೊಂಡಿದ್ದಾರೆ.

    Continue Reading

    DAKSHINA KANNADA

    ಆಶ್ರಮದ ಸ್ವಾಮಿಜಿಗೆ ಮೆಣಸಿನ ಪುಡಿಯಿಂದ ಅಭಿಷೇಕ; ಏನಿದು ಸುದ್ಧಿ !?

    Published

    on

    ಮಂಗಳೂರು/ಆಂಧ್ರಪ್ರದೇಶ: ಭಕ್ತರು ದೇವರಿಗೆ ಹಾಲಿನ ಅಭಿಷೇಕ, ಹೂವಿನ ಅಭಿಷೇಕ ನೀರು, ಚಂದನ ಅಥವಾ ಗಂಧದ ಅಭಿಷೇಕ ಮುಂತಾದವುಗಳನ್ನು ಅರ್ಪಿಸುವುದು ಸಾಮಾನ್ಯವಾಗಿದೆ. ಆದರೆ, ಆಂಧ್ರಪ್ರದೇಶದ ಏಲೂರು ಜಿಲ್ಲೆಯ ಶ್ರೀ ಶಿವದತ್ತ ಸ್ವಾಮಿಜಿ ಭಕ್ತರಿಂದ ಮೆಣಸಿನ ಪುಡಿ ಅಭಿಷೇಕ ಮಾಡಿಸಿಕೊಂಡಿರುವ ಸುದ್ಧಿ ಫುಲ್ ವೈರಲ್ ಆಗುತ್ತಿದೆ.


    ಆಂಧ್ರಪ್ರದೇಶದ ಪ್ರತ್ಯಂಗಿರ ಆಶ್ರಮದಲ್ಲಿ ಈ ವಿಶಿಷ್ಟವಾದ ಅಭಿಷೇಕ ನಡೆದಿದ್ದು, ಸುಮಾರು 100 ಕೆಜಿ ಮೆನಸಿನಕಾಯಿಯನ್ನು ಬಳಸಲಾಗಿದ್ದು, ಇದನ್ನು ಮಾಡುವುದರಿಂದ ಭಕ್ತರ ಕಷ್ಟಗಳು ದೂವಾಗುತ್ತದೆ ಎಂಬ ನಂಬಿಕೆ ಇದೆ. ಪ್ರತ್ಯಂಗಿರಿ ದೇವಿಗೆ ಮೆಣಸಿನಕಾಯಿ ಎಂದರೆ ತುಂಬಾ ಇಷ್ಟ. ದೇವಿಯ ಕೊರಳಿಗೆ ಕೆಂಪು ಮೆಣಸಿನಕಾಯಿ ಮಾಲೆ ಹಾಕಿ ಪೂಜಿಸಲಾಗಿದ್ದು, ಇದನ್ನು ‘ಕರಂ ಅಭಿಷೇಕ’ ಎಂದು ಕೂಡ ಕರೆಯಲಾಗುತ್ತದೆ.

    ಇದನ್ನು ಓದಿ:ಯೂಟ್ಯೂಬ್​ನಲ್ಲಿ ಸಿನಿಮಾ ವಿಮರ್ಶೆ ಮಾಡುವುದರ ಮೇಲೆ ಬಿತ್ತು ನಿಷೇಧ

    ಕಳೆದ 14 ವರ್ಷಗಳಿಂದ ಪ್ರತ್ಯಂಗಿರ ಆಶ್ರಮದಲ್ಲಿ ಮೆಣಸಿನಕಾಯಿಯಿಂದ ಅಭಿಷೇಕ ನಡೆಸಿಕೊಂಡು ಬರುತ್ತಿದೆ. ಪ್ರತೀ ವರ್ಷ ಈ ಅಭಿಷೇಕದಲ್ಲಿ ಸಾವಿರಾರು ಭಕ್ತರು ಪಾಲ್ಗೊಂಡು ಮೆಣಸಿನ ಪುಡಿ ಸಮರ್ಪಿಸುತ್ತಾರೆ. ಈ ಕ್ರಮ ಭಕ್ತರ ನಂಬಿಕೆಯೋ, ದೇವರ ಪವಾಡವೋ ಗೋತ್ತಿಲ್ಲ, ಆದರೆ ಇಂತಹ ಆಚರಣೆ ಆಧುನಿಕ ಯುಗದಲ್ಲಿ ಎಷ್ಟು ಸರಿ ಎಂಬುವುದು ಚಿಂತಾದಾಯಕ ವಿಷಯವಾಗಿದೆ.

    Continue Reading

    bangalore

    ಯಜಮಾನಿಯರಿಗೆ ಸ್ಟಾಪ್ ಆಗುತ್ತಾ ಗೃಹಲಕ್ಷ್ಮಿ ಹಣ ?

    Published

    on

    ಮಂಗಳೂರು/ಬೆಂಗಳೂರು: ಕಾಂಗ್ರೇಸ್ ಸರ್ಕಾರದ ಮಹತ್ವಕಾಂಕ್ಷೆ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆ ಹಣ ಸ್ಟಾಪ್ ಆಗುತ್ತಾ ಅನ್ನುವಂತಹ ಭಯ ಯಜಮಾನಿಯರಲ್ಲಿ ಕಾಡುತ್ತಿದೆ. ಇದಕ್ಕೆ ಕಾರಣ ಇತ್ತೀಚೆಗೆ, ರಾಜ್ಯದಲ್ಲಿ ಕೆಲವು ದಿನಗಳಿಂದ ಚರ್ಚೆಯಲ್ಲಿರುವ ಅಕ್ರಮ ಬಿಪಿಎಲ್ ಕಾರ್ಡ್ ರದ್ದತಿ ವಿಚಾರ.


    ರಾಜ್ಯದಲ್ಲಿ ಅಕ್ರಮ ಬಿಪಿಎಲ್ ಕಾರ್ಡ್ ರದ್ದತಿ ವಿಚಾರ ಬಾರಿ ಸದ್ದು ಮಾಡುತ್ತಿದೆ. ಇದರ ನಡುವೆ ಮಹಿಳೆಯರಿಗೆ ಬಿಪಿಎಲ್ ಕಾರ್ಡ್ ರದ್ದಾದರೆ ಅಥವಾ ಬಿಪಿಎಲ್ ಕಾರ್ಡ್ ನಿಂದ ಎಪಿಎಲ್ ಗೆ ವರ್ಗಾವಣೆಯಾದರೆ 2000 ರೂ. ಬರುತ್ತೋ, ಇಲ್ಲವೋ ಎಂಬುವುದು ರಾಜ್ಯದ ಮಹಿಳೆಯರ ತಲೆನೋವಿಗೆ ಕಾರಣವಾಗಿದೆ.

    ಇದನ್ನು ಓದಿ :ನಾಯಕನಾಗಿ ಕಾಣಿಸಿಕೊಳ್ಳಲಿರುವ ರಜತ್ ಪಾಟಿದಾರ್

    ಈ ಬಗ್ಗೆ ಸ್ಪಷ್ಟನೆ ನೀಡಿರುವ ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಸಚಿವೆ ಲಕ್ಮೀ ಹೆಬ್ಬಾಳ್ಕರ್, ರಾಜ್ಯದಲ್ಲಿ ಬಿಪಿಎಲ್ ಗೆ ಅರ್ಹವಲ್ಲದ ಸುಮಾರು 80,000 ಕಾರ್ಡುಗಳನ್ನು ಎಪಿಎಲ್ ಗೆ ವರ್ಗಾವಣೆ ಮಾಡಲಾಗಿದೆ. ಇದರಿಂದಾಗಿ ಮಹಿಳೆಯರು ಯಾವುದೇ ರೀತಿಯ ಗೊಂದಲ ಪಡುವುದು ಬೇಡ. ಅಕ್ರಮ ಬಿಪಿಎಲ್ ಕಾರ್ಡ್ ರದ್ದಾದ ಕೂಡಲೇ ಗೃಹಲಕ್ಷ್ಮಿಯರ ಖಾತೆಗೆ 2000 ರೂ. ಹಣ ಜಮೆ ಆಗುವುದು. ತೆರಿಗೆ ಪಾವತಿಸುವವರಿಗೆ ಮಾತ್ರ 2000 ರೂ. ಹಣ ಬರುವುದಿಲ್ಲ. ಬಿಪಿಎಲ್ ಕಾರ್ಡ್ ಎಪಿಎಲ್ ಆಗಿ ಬದಲಾದರೂ ಹಣ ಬರುತ್ತದೆ, ಆದರೆ ಅಂತವರು ತೆರಿಗೆ ಪಾವತಿಸದಿದ್ದರೆ ಮಾತ್ರ ಬರುವುದು ಎಂದು ಹೇಳಿದ್ದಾರೆ.

    Continue Reading

    LATEST NEWS

    Trending