LATEST NEWS
ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನದಲ್ಲಿ ದಸರಾ ವೈಭವ; ಅ. 3ರಿಂದ 12ರ ವರೆಗೆ ವಿವಿಧ ಕಾರ್ಯಕ್ರಮಗಳು
ಕಾಪು: ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಭಕ್ತಾಭಿಮಾನಿಗಳ ಸಹಕಾರದೊಂದಿಗೆ ಮೂರನೇ ವರ್ಷದ ಉಡುಪಿ ಉಚ್ಚಿಲ ದಸರಾ-2024 ಕಾರ್ಯಕ್ರಮವನ್ನು ಅ. 3ರಿಂದ 12ರ ವರೆಗೆ ಹಮ್ಮಿಕೊಳ್ಳಲಾಗಿದೆ.
ದಸರಾ ಉತ್ಸವವು ಶ್ರೀಮತಿ ಶಾಲಿನಿ ಡಾ| ಜಿ. ಶಂಕರ್ ಸಭಾಂಗಣದಲ್ಲಿ ಜರಗಲಿದೆ ಎಂದು ದ.ಕ. ಮೊಗವೀರ ಮಹಾಜನ ಸಂಘದ ಗೌರವ ಸಲಹೆಗಾರ ನಾಡೋಜ ಡಾ| ಜಿ. ಶಂಕರ್ ತಿಳಿಸಿದ್ದಾರೆ.
ಈಗಾಗಲೇ ದಸರಾ ಮಹೋತ್ಸವಕ್ಕೆ ಸಿದ್ಧತೆ ನಡೆಸಲಾಗುತ್ತಿದ್ದು, ಆಕರ್ಷಕ ಮಂಟಪದಲ್ಲಿ ನವದುರ್ಗೆಯರು ಮತ್ತು ಶಾರದಾ ಮಾತೆಯ ವಿಗ್ರಹಗಳನ್ನು ಪ್ರತಿಷ್ಠಾಪಿಸಿ 10 ದಿನಗಳ ಕಾಲ ಶಾಸ್ರೋಕ್ತವಾಗಿ ಪೂಜಿಸಲಾಗುವುದು. ಅ. 12ರಂದು ವೈಭವದ ಶೋಭಾಯಾತ್ರೆಯೊಂದಿಗೆ ಜಲಸ್ತಂಭನ ನಡೆಯಲಿದೆ ಎಂದರು. ಇನ್ನು ಅ.2ರಂದು ಸಂಜೆ 6.30ಕ್ಕೆ ಎಂಆರ್‌ಜಿ ಗ್ರೂಫ್ ಅಧ್ಯಕ್ಷ ಡಾ| ಕೆ. ಪ್ರಕಾಶ್ ಶೆಟ್ಟಿ ಬಂಜಾರ ಅವರ ಪ್ರಾಯೋಜಕತ್ವದಲ್ಲಿ ಪಡುಬಿದ್ರಿಯಿಂದ ಕಾಪು ಸಮುದ್ರ ತೀರದ ದೀಪಸ್ತಂಭದವರೆಗೆ ನಡೆಸಲಾಗುವ ವಿದುದ್ದೀಪಾಲಂಕಾರವು ಗಣ್ಯರ ಉಪಸ್ಥಿತಿಯಲ್ಲಿ ಉದ್ಘಾಟನೆಗೊಳ್ಳಲಿದೆ.
ಅ.3ರಂದು ಬೆಳಗ್ಗೆ 9ಕ್ಕೆ ನವದುರ್ಗೆಯರು ಮತ್ತು ಶಾರದಾ ಮಾತೆಯ ವಿಗ್ರಹಗಳನ್ನು ಕ್ಷೇತ್ರದ ತಂತ್ರಿ ಕುಕ್ಕಿಕಟ್ಟೆ ರಾಘವೇಂದ್ರ ತಂತ್ರಿ ಮತ್ತು ಪ್ರಧಾನ ಅರ್ಚಕ ರಾಘವೇಂದ್ರ ಉಪಾಧ್ಯಾಯರ ನೇತೃತ್ವದಲ್ಲಿ ಪ್ರತಿಷ್ಠಾಪನೆಗೊಳ್ಳಲಿದೆ. 10 ಗಂಟೆಗೆ ಜಿಲ್ಲಾಧಿಕಾರಿ ಸಹಿತ ಗಣ್ಯರು ಮತ್ತು ದಾನಿಗಳ ಉಪಸ್ಥಿತಿಯಲ್ಲಿ ಉಚ್ಚಿಲ ದಸರಾ ಉದ್ಘಾಟಿಸಲಾಗುವುದು. ಬಳಿಕ ಫಲಪುಷ್ಪ ಪದರ್ಶನ, ಗುಡಿ ಕೈಗಾರಿಕೆ ಪ್ರಾತ್ಯಕ್ಷಿಕೆ, ಜೀವಂತ ಮೀನುಗಳ ಪ್ರದರ್ಶನ, ಕೇಂದ್ರ ಮತ್ತು ರಾಜ್ಯ ಸರಕಾರಗಳಲ್ಲಿ ಲಭ್ಯವಿರುವ ಮೀನುಗಾರಿಕೆ ಯೋಜನೆಗಳ ಮಾಹಿತಿ ಮತ್ತು ಮೀನುಗಾರಿಕೆ ಪರಿಕರಗಳ ಪ್ರದರ್ಶನ ಮುಂತಾದವುಗಳ ಪ್ರದರ್ಶನ ಉದ್ಘಾಟನೆ, ದ.ಕ. ಮೊಗವೀರ ಮಹಾಜನ ಸಂಘದ 100ನೇ ವರ್ಷದ ನೆನಪಿಗೆ ನವೀಕರಿಸಲ್ಪಟ್ಟ ನೂತನ ಆಡಳಿತ ಕಛೇರಿಯ ಶುಭಾರಂಭಗೊಳ್ಳಲಿದೆ. ಸಂಜೆ 5ಕ್ಕೆ 10 ದಿನಗಳ ಕಾಲ ನಡೆಯುವ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ, ಭಜನೆ, ಧಾರ್ಮಿಕ ಸಭಾ ಕಾರ್ಯಕ್ರಮಗಳ ಉದ್ಘಾಟನೆ ನಡೆಯಲಿದೆ.
ಶ್ರೀ ಶರನ್ನವರಾತ್ರಿ ಮಹೋತ್ಸವ ಮತ್ತು ದಸರಾ ಉತ್ಸವ ಪ್ರಯುಕ್ತ ಶ್ರೀ ಕ್ಷೇತ್ರದಲ್ಲಿ ಪ್ರತೀ ದಿನ ಬೆಳ್ಳಿಗೆ ಚಂಡಿಕಾಹೋಮ, ಭಜನೆ, ಮಧ್ಯಾಹ್ನ ಅನ್ನಸಂತರ್ಪಣೆ, ಸಂಜೆ ಲಘು ಉಪಾಹಾರ, ಸುಮಂಗಲೆಯರಿಂದ ಸಾಮೂಹಿಕ ಕುಂಕುಮಾರ್ಚನೆ, ಧಾರ್ಮಿಕ ಪ್ರಚವನ, ಕಲೋಕ್ತ ಪೂಜೆ, ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು, ಉಚ್ಚಿಲ ದಸರಾ ಮಹೋತ್ಸವದ ಮಹತ್ವದ ಬಗ್ಗೆ ವಿಶೇಷ ಲೇಸರ್ ಶೋ ನಡೆಯಲಿದೆ.
ಅ. 12ರಂದು ವಿಜಯ ದಶಮಿಯಂದು ಸಾಮೂಹಿಕ ಮಹಾಚಂಡಿಕಾಯಾಗ ಹಾಗೂ ಪೂರ್ಣಾಹುತಿ ನಡೆಯಲಿದೆ. ಅ. 12ರಂದು ಮಧ್ಯಾಹ್ನ 2.30ಕ್ಕೆ ವಿಸರ್ಜನಾ ಪೂಜೆ, ಮಧ್ಯಾಹ್ನ 3ಕ್ಕೆ ಶೋಭಾಯಾತ್ರೆಗೆ ಚಾಲನೆ, ಸಂಜೆ 5 ಗಂಟೆಗೆ ಶೋಭಾಯಾತ್ರೆ ಹೊರಟು ಕಾಪು ದೀಪಸ್ತಂಭದ ಬಳಿಯಲ್ಲಿ ವಿಸರ್ಜನೆಗೊಳ್ಳಲಿದೆ.
LATEST NEWS
ಲಾರಿ ಪಲ್ಟಿಯಾಗಿ ಚಾಲಕನ ಎದೆಗೆ ಹೊಕ್ಕ ಕಬ್ಬಿಣದ ರಾಡ್
ಹುಬ್ಬಳ್ಳಿ: ಲಾರಿ ಪಲ್ಟಿಯಾಗಿ ಕಬ್ಬಿಣದ ರಾಡ್ ಚಾಲಕನ ಎದೆ ಸೀಳಿ ಒಳ ಹೊಕ್ಕ ಘಟನೆ ಹುಬ್ಬಳ್ಳಿಯ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ನಡೆದಿದೆ. ಚಾಲಕನ ನಿಯಂತ್ರಣ ತಪ್ಪಿ ಲಾರಿ ಪಲ್ಟಿಯಾದ ಪರಿಣಾಮ ಈ ದುರ್ಘಟನೆ ಸಂಭವಿಸಿದೆ.
ರಸ್ತೆ ಡಿವೈಡರಗೆ ಹಾಕಿದ್ದ ಕಬ್ಬಿಣ್ಣದ ಪೈಪ್ ಚಾಲಕನ ಬೆನ್ನ ಹಿಂಭಾಗದಿಂದ ಎದೆ ಸೀಳಿದ ಹೊರಕ್ಕೆ ಬಂದಿದೆ.
ಎದೆಯ ಭಾಗದಿಂದ ಕಬಿಣ್ಣದ ಫೈಪ್ ತೆಗೆಯಲು ಅಗ್ನಿ ಶಾಮಕ ಸಿಬ್ಬಂದಿ ಹರಸಾಹಸ ಪಟ್ಟಿದ್ದಾರೆ.
ಫೈಪ್ ಕತ್ತರಿಸಿ ಚಾಲಕರನ್ನು ಕಿಮ್ಸ್ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಚಾಲಕ ಸಧ್ಯ ಸಾವು ಬದುಕಿನ ಮಧ್ಯೆ ಹೋರಾಟ ನಡೆಸುತ್ತಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ ಶಿರಶಿ ಮೂಲದ ಚಾಲಕನ ಶಿವಾನಂದ ಬಡಗಿಗೆ ಕಿಮ್ಸ್ ನಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ.
BELTHANGADY
ಬೆಳ್ತಂಗಡಿ: ದನಗಳ ಅಕ್ರಮ ಸಾಗಾಟ ಪತ್ತೆ: ನಾಲ್ವರ ಬಂಧನ
ಬೆಳ್ತಂಗಡಿ: ತಾಲೂಕಿನ ಮಲವಂತಿಗೆಯಲ್ಲಿ ಅಕ್ರಮವಾಗಿ ನಡೆಯುತ್ತಿದ್ದ ಗೋ ಸಾಗಾಟವನ್ನು ಸ್ಥಳೀಯರ ಸಹಕಾರದೊಂದಿಗೆ ಪತ್ತೆ ಹಚ್ಚಿರುವ ಬೆಳ್ತಂಗಡಿ ಪೊಲೀಸರು ನಾಲ್ವರು ಆರೋಪಿಗಳನ್ನು ಗುರುವಾರ ರಾತ್ರಿ ಬಂಧಿಸಿದ್ದಾರೆ. ಎರಡು ಪಿಕಪ್ ವಾಹನಗಳು ಹಾಗೂ ಐದು ದನಗಳನ್ನು ವಶಪಡಿಸಿಕೊಂಡಿದ್ದಾರೆ.
ಚಿಬಿದ್ರೆ ಗ್ರಾಮದ ಪೆರಿಯಡ್ಕ ನಿವಾಸಿ ಯತೀಂದ್ರ(24), ತೋಟತ್ತಾಡಿ ಗ್ರಾಮದ ಬೆಂದ್ರಾಳ ನಿವಾಸಿ ಅರವಿಂದ(30), ಚಾರ್ಮಾಡಿ ಗ್ರಾಮದ ನಿವಾಸಿ ಉಸ್ಮಾನ್ ( 36) ಹಾಗೂ ಚಿಬಿದ್ರೆ ಗ್ರಾಮದ ನಿವಾಸಿ ಆರಿಫ್ (27) ಬಂಧಿತ ಆರೋಪಿಗಳು ಎಂದು ಪೊಲೀಸರು ತಿಳಿಸಿದ್ದಾರೆ.
ಮಲವಂತಿಗೆ ಗ್ರಾಮದ ಎಳನೀರು ದಿಡುಪೆ ರಸ್ತೆಯಲ್ಲಿ ಪಿಕಪ್ ವಾಹನದಲ್ಲಿ ಅಕ್ರಮವಾಗಿ ದನಗಳನ್ನು ಸಾಗಾಟ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿಯ ಆಧಾರದಲ್ಲಿ ಬೆಳ್ತಂಗಡಿ ಪೊಲೀಸರು ಈ ಕಾರ್ಯಾಚರಣೆ ನಡೆಸಿದ್ದಾರೆ.
ಮಲವಂತಿಗೆ ಗ್ರಾಮದ ಕಜಕೆ ಎಂಬಲ್ಲಿ ಎಳನೀರು ಕಡೆಯಿಂದ ಬರುತ್ತಿದ್ದ ಎರಡು ಪಿಕಪ್ ವಾಹನಗಳನ್ನು ತಡೆದು ಪರಿಶೀಲಿಸಿದಾಗ ಐದು ದನಗಳನ್ನು ಸಾಗಾಟ ಮಾಡುತ್ತಿರುವುದು ಕಂಡು ಬಂದಿದೆ. ವಾಹನದಲ್ಲಿ ಇದ್ದವರ ಬಳಿ ದನಗಳ ಸಾಗಾಟಕ್ಕೆ ಯಾವುದೇ ಪರವಾನಿಗೆಗಳು ಇಲ್ಲದಿರುವುದು ಕಂಡು ಬಂದಿದೆ. ಈ ಹಿನ್ನೆಲೆಯಲ್ಲಿ ಆರೋಪಿಗಳನ್ನು ಬಂಧಿಸಿರುವ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
BELTHANGADY
ಗಾಂಜಾ ಸಾಗಾಟ ಪ್ರಕರಣ: ಓರ್ವ ಆರೋಪಿ ಸೆರೆ
ಮಂಗಳೂರು ನಗರಕ್ಕೆ ಗಾಂಜಾ ಸಾಗಿಸಿ ಮಾರಾಟ ಮಾಡುತ್ತಿದ್ದ ಪ್ರಕರಣವನ್ನು ಗುರುವಾರ ಪತ್ತೆ ಹಚ್ಚಿರುವ ಮಂಗಳೂರು ಸಿಸಿಬಿ ಪೊಲೀಸರು, ಈ ಸಂಬಂಧ ಓರ್ವನನ್ನು ಬಂಧಿಸಿ ಆತನಿಂದ 1 ಲಕ್ಷ ರೂ. ಮೌಲ್ಯದ 4 ಕೆ.ಜಿ. ಗಾಂಜಾ, ದ್ವಿಚಕ್ರ ವಾಹನ ಮತ್ತು ಮೊಬೈಲ್ ಫೋನ್ ಸಹಿತ ಒಟ್ಟು 1,75,000 ರೂಪಾಯಿ ಮೌಲ್ಯದ ಸೊತ್ತುಗಳನ್ನು ವಶ ಪಡಿಸಿಕೊಂಡಿದ್ದಾರೆ.
ಬೆಳ್ತಂಗಡಿಯ ಕುಕ್ಕೇಡಿಯ ಗೋಳಿಯಂಗಡಿ ನಿವಾಸಿ ಅಬುತಾಹಿರ್ ಯಾನೆ ಅನ್ವರ್ (25) ಬಂಧಿತ ಆರೋಪಿ. ಮಂಗಳೂರು ಸಿಸಿಬಿ ಪೊಲೀಸರು ಕಂಕನಾಡಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಪಡೀಲ್‌ನಲ್ಲಿ ಈ ಪ್ರಕರಣವನ್ನು ಪತ್ತೆ ಹಚ್ಚಿದ್ದಾರೆ.
ಸಿಸಿಬಿ ಘಟಕದ ಎಸಿಪಿ ಮನೋಜ್ ಕುಮಾರ್ ನಾಯ್ಕ್ ನೇತೃತ್ವದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಪೊಲೀಸ್ ನಿರೀಕ್ಷಕರಾದ ಶ್ಯಾಮ್ ಸುಂದರ್ ಎಚ್ ಎಂ, ಪಿಎಸ್‌ಐ ನರೇಂದ್ರ, ಎಎಸ್‌ಐ ಯವರಾದ ಮೋಹನ್ ಕೆ ವಿ, ರಾಮ ಪೂಜಾರಿ, ಸುಜನ್ ಶೆಟ್ಟಿ, ಮತ್ತು ಸಿಸಿಬಿ ಸಿಬ್ಬಂದಿ ಪಾಲ್ಗೊಂಡಿದ್ದರು.
- DAKSHINA KANNADA7 days ago
ಕೆಬಿಬಿಯಲ್ಲಿ ಮಿಂಚಿದ ಮಂಗಳೂರು ಬೆಡಗಿ; ಕೊನೆಗೂ ನನಸಾದ ಅಪೂರ್ವ ಶೆಟ್ಟಿ ಕನಸು
- BIG BOSS4 days ago
BBK11 ವೇದಿಕೆಗೆ ಬರುತ್ತಿದ್ದಂತೆ ರೀಲ್ಸ್ ಸ್ಟಾರ್ ಮೇಲೆ ಕೋಪಗೊಂಡ ಕಿಚ್ಚ: ಇಂತವರನ್ನ ಏಕೆ ಕರೆಸಿದ್ರಿ ಎಂದು ಗರಂ?
- BIG BOSS4 days ago
ಭ್ರಷ್ಟರ ವಿರುದ್ಧ ಗುಡುಗಿದ ಸ್ಪರ್ಧಿ ಲಾಯರ್ ಜಗದೀಶ್ಗೆ ಕಿಚ್ಚ ವಾರ್ನಿಂಗ್..!
- BIG BOSS4 days ago
ಚೈತ್ರಾ ಕುಂದಾಪುರಗೆ ಮೊದಲ ದಿನವೇ ಹೊಸ ಬಿರುದು ಕೊಟ್ಟ ಲಾಯರ್ ಜಗದೀಶ್