DAKSHINA KANNADA
ಶಾಪಿಂಗ್ ವೇಳೆ ಕುಸಿದು ಬಿದ್ದ ಡಿ.ವಿ ಪತ್ನಿ..! ಆಸ್ಪತ್ರೆ ದಾಖಲು
ಬೆಂಗಳೂರು: ಮಾಜಿ ಮುಖ್ಯಮಂತ್ರಿ ಡಿ.ವಿ ಸದಾನಂದ ಗೌಡ ಅವರ ಪತ್ನಿ ಡಾಟಿ ಸದಾನಂದರವರು ಶಾಪಿಂಗ್ ಮಾಡುತ್ತಿದ್ದ ವೇಳೆ ಕುಸಿದು ಬಿದ್ದ ಘಟನೆ ಬೆಂಗಳೂರಿನ ನಾಗಸಂದ್ರ ಮೆಟ್ರೋ ಬಳಿಯ ಐಕಿಯಾ ಮಾಲ್ನಲ್ಲಿ ನಡೆದಿದೆ.
ಶಾಪಿಂಗ್ನಲ್ಲಿದ್ದ ಡಾಟಿರವರಿಗೆ ಹಠಾತ್ ಉಸಿರಾಟದ ತೊಂದರೆ ಕಾಣಿಸಿಕೊಂಡಿದ್ದು ಈ ಹಿನ್ನೆಲೆ ಕುಸಿದು ಬಿದ್ದಿದ್ದಾರೆ. ತಕ್ಷಣ ಅವರ ಕಾರು ಚಾಲಕ ಎಚ್ಚೆತ್ತುಕೊಂಡು ಸಮೀಪದ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಿದ್ದಾರೆ. ವಿಷಯ ತಿಳಿದ ಡಿ.ವಿ ಸದಾನಂದ ಗೌಡರವರು ಪತ್ನಿಯನ್ನು ನೋಡಲು ಆಸ್ಪತ್ರೆಗೆ ದೌಡಾಯಿಸಿದ್ದಾರೆ.
ಉಡುಪಿ ಶ್ರೀ ಕೃಷ್ಣನ ದರ್ಶನ ಪಡೆದ ಚಿತ್ರರಂಗದ ದಿಗ್ಗಜ ನಟರು..! ಸಾಥ್ ನೀಡಿದ ಕೆಜಿಎಫ್ ಡೈರೆಕ್ಟರ್
ಡಾಟಿ ಸದಾನಂದ ಗೌಡರನ್ನು ತೀವ್ರ ನಿಗಾ ಘಟಕದಲ್ಲಿರಿಸಿದ್ದು ಹೆಚ್ಚಿನ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಹೇಳಲಾಗಿದೆ. ಇನ್ನು ಆಸ್ಪತ್ರೆಗೆ ದಾಸರಹಳ್ಳಿಯ ಶಾಸಕ ಮುನಿರಾಜು ಹಾಗೂ ಸುಜಾತ ಮುನಿರಾಜು ಕೂಡಾ ಭೇಟಿ ನೀಡಿದ್ದಾರೆಂದು ಮಾಹಿತಿ ತಿಳಿದು ಬಂದಿದೆ.
DAKSHINA KANNADA
ಬ್ರೇಕ್ ಫೇಲ್ ಆಗಿ ದ್ವಿಚಕ್ರ ವಾಹನಕ್ಕೆ ಲಾರಿ ಡಿ*ಕ್ಕಿ; ಓರ್ವ ಸಾ*ವು
ಮಂಗಳೂರು/ಆನೇಕಲ್ : ದ್ವಿಚಕ್ರ ವಾಹನಕ್ಕೆ ಲಾರಿ ಡಿ*ಕ್ಕಿ ಹೊಡೆದು, ಸವಾರ ಸ್ಥಳದಲ್ಲಿಯೇ ಮೃ*ತಪಟ್ಟಿರುವ ಘಟನೆ ತಮಿಳುನಾಡು ಗಡಿ ಪ್ರದೇಶವಾದ ಹೊಸೂರು ಸಮೀಪದ ಸೂಳಗಿರಿ ಬಳಿ ನಡೆದಿದೆ. ಆನೇಕಲ್ ತಾಲೂಕಿನ ರಾಚಮಾನಹಳ್ಳಿಯ ನಿವಾಸಿ ಅರ್ಚಕ ಶ್ರೀನಿವಾಸ್ ಮೃ*ತ ದುರ್ದೈವಿ.
ದೇವಾಲಯದ ಅರ್ಚಕರಾಗಿದ್ದ ಶ್ರೀನಿವಾಸ್, ಪೂಜೆಯ ನಿಮಿತ್ತ ಬೈಕ್ ಮೂಲಕ ಆನೇಕಲ್ನಿಂದ ಹೋಗುತ್ತಿದ್ದರು. ಈ ವೇಳೆ ತಮಿಳುನಾಡಿನ ಲಾರಿಯೊಂದರ ಬ್ರೇಕ್ ಫೇಲ್ ಆಗಿ ಹೆದ್ದಾರಿಯಿಂದ ಡಿವೈಡರ್ ದಾಟಿಕೊಂಡು ಬಂದು ಸರ್ವಿಸ್ ರಸ್ತೆಯಲ್ಲಿ ಹೋಗುತ್ತಿದ್ದ ಶ್ರೀನಿವಾಸ್ ಅವರ ವಾಹನಕ್ಕೆ ಡಿ*ಕ್ಕಿ ಹೊಡೆದಿದೆ. ಪರಿಣಾಮ ಶ್ರೀನಿವಾಸ್ ಸ್ಥಳದಲ್ಲಿಯೇ ಮೃ*ತಪಟ್ಟರೆ, ರಾಘವೇಂದ್ರ ಎಂಬುವವರಿಗೆ ಗಂಭೀರ ಗಾ*ಯವಾಗಿದೆ.
ಇದನ್ನೂ ಓದಿ : ಖಾಸಗಿ ಬಾಹ್ಯಾಕಾಶ ನಡಿಗೆ ಯಶಸ್ವಿ; ಸುರಕ್ಷಿತವಾಗಿ ಭೂಮಿಗೆ ಮರಳಿದ ಗಗನಯಾತ್ರಿಗಳು
ಅಪಘಾ*ತದ ರಭಸಕ್ಕೆ ಬೈಕ್ ನಜ್ಜುಗುಜ್ಜಾಗಿದೆ. ಸ್ಥಳಕ್ಕೆ ಸೂಳಗಿರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮ*ರಣೋತ್ತರ ಪರೀಕ್ಷೆಗಾಗಿ ಮೃ*ತದೇಹವನ್ನು ಸ್ಥಳೀಯ ಆಸ್ಪತ್ರೆಗೆ ರವಾನಿಸಲಾಗಿದೆ.
DAKSHINA KANNADA
ಬಿಜೆಪಿ ಹೈಕಮಾಂಡಿಂದ ಭರ್ಜರಿ ಗಿಫ್ಟ್ ; ನಳೀನ್ ಕುಮಾರ್ ಕಟೀಲ್ ಸುತ್ತಾಟ ಮತ್ತೆ ಆರಂಭ !
ಮಂಗಳೂರು: ಬಿಜೆಪಿ ಮಾಜಿ ರಾಜ್ಯಾಧ್ಯಕ್ಷ, ದ.ಕ ಮಾಜಿ ಸಂಸದ ನಳೀನ್ ಕುಮಾರ್ ಕಟೀಲ್ ಅವರು ಎಂಪಿ ಚುನಾವಣೆಯಲ್ಲಿ ಟಿಕೆಟ್ ಸಿಗದೆ ವಂಚಿತರಾದ ಬಳಿಕ ಅಷ್ಟಾಗಿ ರಾಜಕೀಯ ವಿಚಾರದಲ್ಲಿ ಪ್ರಚಲಿತದಲ್ಲಿರಲಿಲ್ಲ. ಆದರೆ ಇದಿಗ ಕಟೀಲ್ ಮತ್ತೆ ಸುದ್ದಿಯಲ್ಲಿದ್ದಾರೆ.
ನಳೀನ್ ಕುಮಾರ್ಗೆ ಗುಡ್ ನ್ಯೂಸ್;
ಬಿಜೆಪಿಯು ನಳೀನ್ ಕುಮಾರ್ ಕಟೀಲ್ ಅವರನ್ನು ಒಡಿಶಾ ರಾಜ್ಯದ ಬಿಜೆಪಿ ಸದಸ್ಯತ್ವ ಅಭಿಯಾನದ ಉಸ್ತುವಾರಿಯಾಗಿ ನಿಯೋಜನೆ ಮಾಡಿ ಆದೇಶ ಹೊರಡಿಸಿದೆ. ಅಂದಹಾಗೆ ಒಡಿಶಾದಲ್ಲಿ ಗರಿಷ್ಠ ಸಂಖ್ಯೆಯಲ್ಲಿ ಸದಸ್ಯತ್ವದ ಗುರಿಯನ್ನು ನೀಡಿದ್ದು, ಕೇಂದ್ರ ನಾಯಕತ್ವ ನಳಿನ್ ಕುಮಾರ್ ಕಟೀಲ್ಗೆ ಈ ಜವಾಬ್ದಾರಿ ನೀಡಿದೆ ಎಂದು ಮೂಲಗಳು ತಿಳಿಸಿವೆ.
ಈ ಹಿನ್ನೆಲೆಯಲ್ಲಿ ನಳಿನ್ ಕುಮಾರ್ ಕಟೀಲ್ ಅವರು ಸೆ.17ರಂದು ಒಡಿಶಾಗೆ ತೆರಳಲಿದ್ದು, ಅಲ್ಲಿ ಒಂದು ವಾರ ಕಾಲ ಸದಸ್ಯತ್ವ ಅಭಿಯಾನದಲ್ಲಿ ತೊಡಗಿಸಿಕೊಳ್ಳಲಿದ್ದಾರೆ ಎಂದು ವರದಿಯಾಗಿದೆ.
DAKSHINA KANNADA
ಮಂಗಳೂರಿನ ಕಾಟಿಪಳ್ಳದಲ್ಲಿ ಮಸೀದಿ ಮೇಲೆ ಕಲ್ಲು ತೂರಾಟ
ಸುರತ್ಕಲ್ : ಮಂಗಳೂರು ಹೊರವಲಯದ ಸುರತ್ಕಲ್ ಕಾಟಿಪಳ್ಳ 3ನೆ ಬ್ಲಾಕ್ ನಲ್ಲಿರುವ ಬದ್ರಿಯಾ ಜುಮಾ ಮಸೀದಿಗೆ ದು*ಷ್ಕರ್ಮಿಗಳು ಕಲ್ಲು ತೂರಾಟ ನಡೆಸಿದ್ದಾರೆ. ಭಾನುವಾರ(ಸೆ.15) ರಾತ್ರಿ 11ರ ಸುಮಾರಿಗೆ ಈ ಘಟನೆ ನಡೆದಿದೆ.
ಎರಡು ಬೈಕ್ ಗಳಲ್ಲಿ ಬಂದ ನಾಲ್ಕು ಮಂದಿ ದು*ಷ್ಕರ್ಮಿಗಳು ಮಸೀದಿಗೆ ಕಲ್ಲು ತೂರಾಟ ನಡೆಸಿ ಪರಾರಿಯಾಗಿದ್ದಾರೆ. ಮಸೀದಿಯ ಕಿಟಕಿಗಳಿಗೆ ಹಾನಿಯಾಗಿದೆ.
ಸುರತ್ಕಲ್ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದು, ಮಸೀದಿಯ ಸಿಸಿಟಿವಿ ಸೇರಿದಂತೆ ಸಮೀಪದ ಸಿಸಿಟಿವಿ ಫೂಟೇಜ್ ವಶಕ್ಕೆ ಪಡೆದುಕೊಂಡು ತನಿಖೆ ನಡೆಸುತ್ತಿದ್ದಾರೆ.
ಇಂದು(ಸೆ.16) ಈದ್ ಮಿಲಾದ್ ಹಬ್ಬ. ಹಾಗಾಗಿ ಸುರತ್ಕಲ್ ಸೇರಿದಂತೆ ಮಂಗಳೂರು ನಗರದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ.
- FILM6 days ago
ಕನ್ನಡ ಬಿಗ್ ಬಾಸ್ ಸೀಸನ್ 11ಕ್ಕೆ ಮುಹೂರ್ತ ಫಿಕ್ಸ್! ಹೋಸ್ಟ್ ಕೂಡ ಕನ್ಫರ್ಮ್!
- LATEST NEWS5 days ago
ನೃತ್ಯ ಮಾಡಲು ನಿರಾಕರಿಸಿದ ನೃತ್ಯಗಾರ್ತಿಯರ ಮೇಲೆ ಸಾಮೂಹಿಕ ಅತ್ಯಾಚಾ*ರ
- FILM6 days ago
ರೇಣುಕಾಸ್ವಾಮಿ ಚಾರ್ಜ್ಶೀಟ್ನಲ್ಲಿ ಇಬ್ಬರು ನಟಿಯರ ಹೆಸರು ಉಲ್ಲೇಖ..!
- FILM5 days ago
ಶಾಂಕಿಂಗ್ ನ್ಯೂಸ್ : ಕಟ್ಟಡದಿಂದ ಹಾರಿ ನಟಿ ಮಲೈಕಾ ಅರೋರಾ ತಂದೆ ಆತ್ಮಹ*ತ್ಯೆ