Connect with us

    DAKSHINA KANNADA

    ಜೂಜುಕೇಂದ್ರಗಳು ಮುಚ್ಚುವವರೆಗೆ ಹಲವು ಹಂತದ ಹೋರಾಟ ಸಂಘಟಿಸಲು ತೀರ್ಮಾನ- ಡಿವೈಎಫ್ಐ

    Published

    on

    ಮಂಗಳೂರು ನಗರದಾದ್ಯಂತ ರಾಜಾರೋಷವಾಗಿ ನಡೆಸುತ್ತಿರುವ ಸ್ಕಿಲ್ ಗೇಮ್, ವಿಡಿಯೋ ಗೇಮ್, ಇಸ್ಪೀಟ್ ಕ್ಲಬ್ ಸೇರಿ ಇನ್ನಿತರ ಜೂಜು ಕೇಂದ್ರಗಳನ್ನು ಶಾಶ್ವತವಾಗಿ ಮುಚ್ಚಬೇಕೆಂದು ಒತ್ತಾಯಿಸಿ ಡಿವೈಎಫ್ಐ ಇದೀಗ ಹೋರಾಟ ಆರಂಭಿಸಿದೆ.

    ಮಂಗಳೂರು : ಮಂಗಳೂರು ನಗರದಾದ್ಯಂತ ರಾಜಾರೋಷವಾಗಿ ನಡೆಸುತ್ತಿರುವ ಸ್ಕಿಲ್ ಗೇಮ್, ವಿಡಿಯೋ ಗೇಮ್, ಇಸ್ಪೀಟ್ ಕ್ಲಬ್ ಸೇರಿ ಇನ್ನಿತರ ಜೂಜು ಕೇಂದ್ರಗಳನ್ನು ಶಾಶ್ವತವಾಗಿ ಮುಚ್ಚಬೇಕೆಂದು ಒತ್ತಾಯಿಸಿ ಡಿವೈಎಫ್ಐ ಇದೀಗ ಹೋರಾಟ ಆರಂಭಿಸಿದೆ.

    2 ದಿನಗಳ ಹಿಂದೆ ಇಂತಹ ಜೂಜುಕೇಂದ್ರಗಳ ಮುಂದೆ ಸಾಂಕೇತಿಕ ಮುತ್ತಿಗೆ ಹಾಕುವ ಮೂಲಕ ಜಿಲ್ಲಾಡಳಿತ, ಪೊಲೀಸ್ ಇಲಾಖೆಯ ಗಮನಕ್ಕೆ ತಂದರೂ ಜೂಜುಕೇಂದ್ರಗಳ ವಿರುದ್ದ ಕ್ರಮಕೈಗೊಳ್ಳುವಲ್ಲಿ ಪೊಲೀಸ್ ಇಲಾಖೆ ವಿಫಲಗೊಂಡಿದೆ.

    ಈಗ ಮತ್ತೆ ಜೂಜುಕೇಂದ್ರಗಳು ಎಂದಿನಂತೆ ಪ್ರಾರಂಭಗೊಂಡ ಹಿನ್ನಲೆಯಲ್ಲಿ ಜೂಜುಕೇಂದ್ರಗಳು ಶಾಶ್ವತವಾಗಿ ಮುಚ್ಚುವವರೆಗೆ ಹಲವು ಹಂತದ ಹೋರಾಟ ಸಂಘಟಿಸಲು ಡಿವೈಎಫ್ಐ ದ.ಕ ಜಿಲ್ಲಾ ಸಮಿತಿಯು ತೀರ್ಮಾನಿಸಿದೆ.

    ರಿಕ್ರಿಯೇಶನ್ ಕ್ಲಬ್ ನ ಹೆಸರಲ್ಲಿ ಕಾರ್ಯಾಚರಿಸುತ್ತಿರುವ ಈ ಜುಗಾರಿ ಅಡ್ಡೆಗಳು ಕಾನೂನುಬಾಹಿರ ಚಟುವಟಿಕೆಯಾಗಿದ್ದು ನಗರದ ದುಡಿದು ತಿನ್ನುವ ಬೀದಿಬದಿ ವ್ಯಾಪಾರಿಗಳನ್ನು, ದಿನಕೂಲಿ ನೌಕರರನ್ನು, ರಿಕ್ಷಾ ಚಾಲಕ ಇನ್ನಿತರ ಸಣ್ಣ ಆದಾಯಕ್ಕೆ ದುಡಿಯುವ ಜನಸಾಮಾನ್ಯರನ್ನು ಮತ್ತು ವಿದ್ಯಾರ್ಥಿಗಳನ್ನು ಬಲಿಪಡೆಯುತ್ತಿದೆ.

    ಇಂತಹ ಜುಗಾರಿ ಕೇಂದ್ರಗಳಿಂದ ಈಗಾಗಲೇ ಬಹುತೇಕ ಕುಟುಂಬಗಳು ಬೀದಿಪಾಲಾಗಿದ್ದು ಇವುಗಳ ವಿರುದ್ದ ಪ್ರಾರಂಭದಿಂದಲೇ ಸಾರ್ವಜನಿಕ ವಲಯಗಳಲ್ಲಿ ಬಾರಿ ವಿರೋಧ ವ್ಯಕ್ತವಾಗುತ್ತ ಬಂದಿದೆ.

    ಆ ಸಂದರ್ಭದಲ್ಲಿ ಪೊಲೀಸ್ ಆಯುಕ್ತರಾಗಿ ಸೇವೆ ಸಲ್ಲಿಸಿದ್ದ ಹಿತೇಂದ್ರ ಮತ್ತು ಚಂದ್ರಶೇಖರ್ ರಂತಹ ಅಧಿಕಾರಿಗಳು ಸಾರ್ವಜನಿಕರ ಯಾವುದೇ ದೂರುಗಳಿಗೆ ಕಾಯದೆ ಸ್ವಯಂ ಪ್ರೇರಿತರಾಗಿ ಇಂತಹ ಜನರನ್ನು ಬಲಿಪಡೆಯುವ ಜೂಜುಕೇಂದ್ರಗಳು ಇನ್ಯಾವತ್ತೂ ಬಾಗಿಲು ತೆರೆಯದಂತೆ ಶಾಶ್ವತವಾಗಿ ಮುಚ್ಚಿಸುವ ಕ್ರಮವನ್ನು ಕೈಗೊಂಡಿದ್ದರು.

    ಆದರೆ ಸದ್ರಿ ಸೇವೆ ಸಲ್ಲಿಸುತ್ತಿರುವ ಪೊಲೀಸ್ ಆಯುಕ್ತರು ಇಂತಹ ಯಾವುದೇ ಜನಪರ ನೀತಿಗಳನ್ನು ಕೈಗೊಳ್ಳದೆ ಇರುವ ವರ್ತನೆ ಅವರ ಮೇಲಿದ್ದ ಭರವಸೆಗಳನ್ನು ಹುಸಿಗೊಳಿಸಿದೆ.

    ಜಿಲ್ಲಾಡಳಿತ, ಪೊಲೀಸ್ ಇಲಾಖೆಯ ಮೌನ ಜುಗಾರಿ ಅಡ್ಡೆಗಳನ್ನು ನಡೆಸುವ ಕ್ರಿಮಿನಲ್ ಗಳನ್ನು ಮೆರೆಸುವಂತಾಗಿದೆ.

    ನಗರದ ಕಾನೂನು ಸುವ್ಯವಸ್ಥೆ ಹದಗೆಡದೆ, ಸ್ವಾಸ್ಥ್ಯ ಸಮಾಜವನ್ನು ಕಾಪಾಡಲು ಇಂತಹ ಜನವಿರೋಧಿ ಜುಗಾರಿ ಕೇಂದ್ರಗಳನ್ನು ಮಟ್ಟಹಾಕಲು ಕೂಡಲೇ ಕ್ರಮವನ್ನು ಕೈಗೊಳ್ಳಲು ಪೊಲೀಸ್ ಇಲಾಖೆ ಮುಂದಾಗಬೇಕು.

    ಬಡವರ ಮನೆಯ ಅನ್ನವನ್ನು ಕಸಿಯುವ ಗ್ಯಾಂಬ್ಲಿಂಗ್ ಸೆಂಟರ್ ಗಳಿಗೆ ಶಾಶ್ವತವಾಗಿ ಬೀಗ ಜಡಿಯಬೇಕಾಗಿದೆ.

    ಈ ಹಿನ್ನಲೆಯಲ್ಲಿ ಡಿವೈಎಫ್ಐ ದಕ್ಷಿಣ ಕನ್ನಡ ಜಿಲ್ಲಾ ಸಮಿತಿಯು ಸ್ಕಿಲ್ ಗೇಮ್, ವಿಡಿಯೋ ಗೇಮ್, ಇಸ್ಪೀಟ್ ಕ್ಲಬ್, ಜುಗಾರಿ ಕೇಂದ್ರಗಳನ್ನು ಶಾಶ್ವತವಾಗಿ ಮುಚ್ಚುವವರೆಗೆ, ಹಾಗೂ ಜಿಲ್ಲಾಡಳಿತ ಮತ್ತು ಪೊಲೀಸ್ ಇಲಾಖೆಯ ನೀತಿಗಳ ವಿರುದ್ಧ ಹಲವು ಹಂತದ ಹೋರಾಟಗಳನ್ನು ಸಂಘಟಿಸಲು ತೀರ್ಮಾನಿಸಿದೆ.

    ಡಿವೈಎಫ್ಐ ದ.ಕ ಜಿಲ್ಲಾ ಅಧ್ಯಕ್ಷರಾದ ಬಿ.ಕೆ ಇಮ್ತಿಯಾಝ್ ಮತ್ತು ಜಿಲ್ಲಾ ಕಾರ್ಯದರ್ಶಿ ಸಂತೋಷ್ ಬಜಾಲ್ ಅವರು ಜಂಟಿ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿರುತ್ತಾರೆ.

     

    Click to comment

    Leave a Reply

    Your email address will not be published. Required fields are marked *

    DAKSHINA KANNADA

    ಮಂಗಳೂರು: ಟ್ರಾಯ್‌ನಿಂದ ಕರೆ; 1.71 ಕೋ.ರೂ ವಂಚನೆ

    Published

    on

    ಮಂಗಳೂರು: ಭಾರತೀಯ ದೂರ ಸಂಪರ್ಕ ನಿಯಂತ್ರಣ ಪ್ರಾಧಿಕಾರದಿಂದ ಕರೆ ಮಾಡುವುದಾಗಿ ತಿಳಿಸಿ, ಮೊಬೈಲ್‌ ಸಿಮ್‌ ಖರೀದಿಸಿ ಕಾನೂನು ಬಾಹಿರ ಚಟುವಟಿಕೆ ಕುರಿತು ಆರೋಪಿಸಿ 1.71 ಕೋ.ರೂ ವಂಚಿಸಿರುವ ಕುರಿತು ಸೆನ್‌ ಠಾಣೆಯಲ್ಲಿ ಪ್ರಕರಣ ದಾಖಲಾಗದೆ.

    ನ.11 ರಂದು ಅಪರಿಚಿತ ವ್ಯಕ್ತಿಯೋರ್ವರು ಟ್ರಾಯ್‌ ಪ್ರತಿನಿಧಿ ಎಂದು ಕರೆ ಮಾಡಿದ್ದು, ‘ನಿಮ್ಮ ಹೆಸರಿನಲ್ಲಿ ಇನ್ನೊಂದು ಮೊಬೈಲ್‌ ನಂಬರ್‌ ರಿಜಿಸ್ಟರ್‌ ಆಗಿದೆ, ಮುಂಬೈನ ಅಂಧೇರಿ ಯ ಮೂಲಕ ಕಾನೂನು ಬಾಹಿರ ಚಟುವಟಿಕೆ ನಡೆದಿದೆ . ಮಾರ್ಕೆಟಿಂಗ್‌ ನೆಪದಲ್ಲಿ ಈ ನಂಬರ್‌ ಮೂಲಕ ಕರೆ ಮಾಡಿ ಕಿರುಕುಳ ನೀಡುತ್ತಿರುವ ಕುರಿತು ಎಫ್‌ಐಆರ್‌ ದಾಖಲಾಗಿದೆ. ಈಗಲೇ ನೀವು ಅಂಧೇರಿ ಠಾಣೆಯನ್ನು ಸಂಪರ್ಕ ಮಾಡಬೇಕು. ಇಲ್ಲದಿದ್ದರೆ ನಿಮ್ಮ ಎರಡು ಮೊಬೈಲ್‌ ಸೇವೆಯನ್ನು ಕೊನೆಗಳಿಸಲಾಗುವುದು’ ಎಂದು ಹೇಳಿದ್ದಾರೆ.

    ಅನಂತರ ವಾಟ್ಸಪ್‌ ಮೂಲಕ ವೀಡಿಯೋ ಕರೆ ಮಾಡಿದ್ದು, ನ.13 ರಿಂದ 19 ರ ನಡುವೆ 53 ಲಕ್ಷ, 74 ಲಕ್ಷ ರೂ, 44 ಲಕ್ಷ ರೂ, ಹೀಗೆ ಒಟ್ಟು 1.71 ಕೋ.ರೂ ವರ್ಗಾಯಿಸಿಕೊಂಡು ಮೋಸ ಮಾಡಿದ್ದಾನೆ. ದೂರುದಾರರು ಅಮೆರಿಕಾದ ಐಟಿ ಸಂಸ್ಥೆಯಲ್ಲಿ ಕೆಲಸ ಮಾಡುತ್ತಿದ್ದು, ವಾಪಾಸಾದ ಬಳಿಕ ಮಂಗಳೂರಿನಲ್ಲಿ ಫ್ಲ್ಯಾಟ್‌ ಒಂದನ್ನು ಖರೀದಿ ಮಾಡಿದ್ದರು. ಅವರು ಅವಿವಾಹಿತರಾಗಿದ್ದು, ಒಬ್ಬರೇ ವಾಸ ಮಾಡುತ್ತಿದ್ದರು. ಉದ್ಯೋಗದ ಮೂಲಕ ಉಳಿತಾಯ ಮಾಡಿದ ಸಂಪಾದನೆಯನ್ನು ಈ ಮೂಲಕ ಕಳೆದುಕೊಂಡಿದ್ದಾರೆ.

    Continue Reading

    DAKSHINA KANNADA

    ಆಶ್ರಮದ ಸ್ವಾಮಿಜಿಗೆ ಮೆಣಸಿನ ಪುಡಿಯಿಂದ ಅಭಿಷೇಕ; ಏನಿದು ಸುದ್ಧಿ !?

    Published

    on

    ಮಂಗಳೂರು/ಆಂಧ್ರಪ್ರದೇಶ: ಭಕ್ತರು ದೇವರಿಗೆ ಹಾಲಿನ ಅಭಿಷೇಕ, ಹೂವಿನ ಅಭಿಷೇಕ ನೀರು, ಚಂದನ ಅಥವಾ ಗಂಧದ ಅಭಿಷೇಕ ಮುಂತಾದವುಗಳನ್ನು ಅರ್ಪಿಸುವುದು ಸಾಮಾನ್ಯವಾಗಿದೆ. ಆದರೆ, ಆಂಧ್ರಪ್ರದೇಶದ ಏಲೂರು ಜಿಲ್ಲೆಯ ಶ್ರೀ ಶಿವದತ್ತ ಸ್ವಾಮಿಜಿ ಭಕ್ತರಿಂದ ಮೆಣಸಿನ ಪುಡಿ ಅಭಿಷೇಕ ಮಾಡಿಸಿಕೊಂಡಿರುವ ಸುದ್ಧಿ ಫುಲ್ ವೈರಲ್ ಆಗುತ್ತಿದೆ.


    ಆಂಧ್ರಪ್ರದೇಶದ ಪ್ರತ್ಯಂಗಿರ ಆಶ್ರಮದಲ್ಲಿ ಈ ವಿಶಿಷ್ಟವಾದ ಅಭಿಷೇಕ ನಡೆದಿದ್ದು, ಸುಮಾರು 100 ಕೆಜಿ ಮೆನಸಿನಕಾಯಿಯನ್ನು ಬಳಸಲಾಗಿದ್ದು, ಇದನ್ನು ಮಾಡುವುದರಿಂದ ಭಕ್ತರ ಕಷ್ಟಗಳು ದೂವಾಗುತ್ತದೆ ಎಂಬ ನಂಬಿಕೆ ಇದೆ. ಪ್ರತ್ಯಂಗಿರಿ ದೇವಿಗೆ ಮೆಣಸಿನಕಾಯಿ ಎಂದರೆ ತುಂಬಾ ಇಷ್ಟ. ದೇವಿಯ ಕೊರಳಿಗೆ ಕೆಂಪು ಮೆಣಸಿನಕಾಯಿ ಮಾಲೆ ಹಾಕಿ ಪೂಜಿಸಲಾಗಿದ್ದು, ಇದನ್ನು ‘ಕರಂ ಅಭಿಷೇಕ’ ಎಂದು ಕೂಡ ಕರೆಯಲಾಗುತ್ತದೆ.

    ಇದನ್ನು ಓದಿ:ಯೂಟ್ಯೂಬ್​ನಲ್ಲಿ ಸಿನಿಮಾ ವಿಮರ್ಶೆ ಮಾಡುವುದರ ಮೇಲೆ ಬಿತ್ತು ನಿಷೇಧ

    ಕಳೆದ 14 ವರ್ಷಗಳಿಂದ ಪ್ರತ್ಯಂಗಿರ ಆಶ್ರಮದಲ್ಲಿ ಮೆಣಸಿನಕಾಯಿಯಿಂದ ಅಭಿಷೇಕ ನಡೆಸಿಕೊಂಡು ಬರುತ್ತಿದೆ. ಪ್ರತೀ ವರ್ಷ ಈ ಅಭಿಷೇಕದಲ್ಲಿ ಸಾವಿರಾರು ಭಕ್ತರು ಪಾಲ್ಗೊಂಡು ಮೆಣಸಿನ ಪುಡಿ ಸಮರ್ಪಿಸುತ್ತಾರೆ. ಈ ಕ್ರಮ ಭಕ್ತರ ನಂಬಿಕೆಯೋ, ದೇವರ ಪವಾಡವೋ ಗೋತ್ತಿಲ್ಲ, ಆದರೆ ಇಂತಹ ಆಚರಣೆ ಆಧುನಿಕ ಯುಗದಲ್ಲಿ ಎಷ್ಟು ಸರಿ ಎಂಬುವುದು ಚಿಂತಾದಾಯಕ ವಿಷಯವಾಗಿದೆ.

    Continue Reading

    bangalore

    ಯಜಮಾನಿಯರಿಗೆ ಸ್ಟಾಪ್ ಆಗುತ್ತಾ ಗೃಹಲಕ್ಷ್ಮಿ ಹಣ ?

    Published

    on

    ಮಂಗಳೂರು/ಬೆಂಗಳೂರು: ಕಾಂಗ್ರೇಸ್ ಸರ್ಕಾರದ ಮಹತ್ವಕಾಂಕ್ಷೆ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆ ಹಣ ಸ್ಟಾಪ್ ಆಗುತ್ತಾ ಅನ್ನುವಂತಹ ಭಯ ಯಜಮಾನಿಯರಲ್ಲಿ ಕಾಡುತ್ತಿದೆ. ಇದಕ್ಕೆ ಕಾರಣ ಇತ್ತೀಚೆಗೆ, ರಾಜ್ಯದಲ್ಲಿ ಕೆಲವು ದಿನಗಳಿಂದ ಚರ್ಚೆಯಲ್ಲಿರುವ ಅಕ್ರಮ ಬಿಪಿಎಲ್ ಕಾರ್ಡ್ ರದ್ದತಿ ವಿಚಾರ.


    ರಾಜ್ಯದಲ್ಲಿ ಅಕ್ರಮ ಬಿಪಿಎಲ್ ಕಾರ್ಡ್ ರದ್ದತಿ ವಿಚಾರ ಬಾರಿ ಸದ್ದು ಮಾಡುತ್ತಿದೆ. ಇದರ ನಡುವೆ ಮಹಿಳೆಯರಿಗೆ ಬಿಪಿಎಲ್ ಕಾರ್ಡ್ ರದ್ದಾದರೆ ಅಥವಾ ಬಿಪಿಎಲ್ ಕಾರ್ಡ್ ನಿಂದ ಎಪಿಎಲ್ ಗೆ ವರ್ಗಾವಣೆಯಾದರೆ 2000 ರೂ. ಬರುತ್ತೋ, ಇಲ್ಲವೋ ಎಂಬುವುದು ರಾಜ್ಯದ ಮಹಿಳೆಯರ ತಲೆನೋವಿಗೆ ಕಾರಣವಾಗಿದೆ.

    ಇದನ್ನು ಓದಿ :ನಾಯಕನಾಗಿ ಕಾಣಿಸಿಕೊಳ್ಳಲಿರುವ ರಜತ್ ಪಾಟಿದಾರ್

    ಈ ಬಗ್ಗೆ ಸ್ಪಷ್ಟನೆ ನೀಡಿರುವ ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಸಚಿವೆ ಲಕ್ಮೀ ಹೆಬ್ಬಾಳ್ಕರ್, ರಾಜ್ಯದಲ್ಲಿ ಬಿಪಿಎಲ್ ಗೆ ಅರ್ಹವಲ್ಲದ ಸುಮಾರು 80,000 ಕಾರ್ಡುಗಳನ್ನು ಎಪಿಎಲ್ ಗೆ ವರ್ಗಾವಣೆ ಮಾಡಲಾಗಿದೆ. ಇದರಿಂದಾಗಿ ಮಹಿಳೆಯರು ಯಾವುದೇ ರೀತಿಯ ಗೊಂದಲ ಪಡುವುದು ಬೇಡ. ಅಕ್ರಮ ಬಿಪಿಎಲ್ ಕಾರ್ಡ್ ರದ್ದಾದ ಕೂಡಲೇ ಗೃಹಲಕ್ಷ್ಮಿಯರ ಖಾತೆಗೆ 2000 ರೂ. ಹಣ ಜಮೆ ಆಗುವುದು. ತೆರಿಗೆ ಪಾವತಿಸುವವರಿಗೆ ಮಾತ್ರ 2000 ರೂ. ಹಣ ಬರುವುದಿಲ್ಲ. ಬಿಪಿಎಲ್ ಕಾರ್ಡ್ ಎಪಿಎಲ್ ಆಗಿ ಬದಲಾದರೂ ಹಣ ಬರುತ್ತದೆ, ಆದರೆ ಅಂತವರು ತೆರಿಗೆ ಪಾವತಿಸದಿದ್ದರೆ ಮಾತ್ರ ಬರುವುದು ಎಂದು ಹೇಳಿದ್ದಾರೆ.

    Continue Reading

    LATEST NEWS

    Trending