Connect with us

MANGALORE

ಮಗನ ಮೇಲೆ ಶೂಟೌಟ್‌ ಪ್ರಕರಣ: ಸಮಗ್ರ ತನಿಖೆ ನಡೆಸುವಂತೆ ಡಿವೈಎಫ್‌ಐ ಆಗ್ರಹ

Published

on

ಮಂಗಳೂರು: ನಿನ್ನೆ ಮಂಗಳೂರು ನಗರದ ಮೋರ್ಗನ್ಸ್ ಗೇಟ್ ಬಳಿಯ ವೈಷ್ಣವಿ ಎಕ್ಸ್‌ಪ್ರೆಸ್‌ ಕಾರ್ಗೋ ಸಂಸ್ಥೆಯ ಮಾಲಕ ರಾಜೇಶ್ ಪ್ರಭು ತನ್ನ ಕಾರ್ಮಿಕರ ಸಂಬಳದ ವಿಚಾರದಲ್ಲಿ ನಡೆದ ಮಾತಿನ ಚಕಮಕಿ ವೇಳೆ ತಾನು ಪಿಸ್ತೂಲಿನಿಂದ ಹಾರಿಸಿದ ಗುಂಡು ಆತನ ಪುತ್ರನಿಗೆ ತಗುಲಿದ ಪ್ರಕರಣವನ್ನು ನಗರದ ಪೊಲೀಸ್ ಇಲಾಖೆ ಗಂಭೀರವಾಗಿ ಪರಿಗಣಿಸಿ ಸಮಗ್ರ ತನಿಖೆ ನಡೆಸಬೇಕೆಂದು ಡಿವೈಎಫ್ಐ ದ.ಕ ಜಿಲ್ಲಾ ಸಮಿತಿ ಆಗ್ರಹಿಸಿದೆ.


ರಾಜೇಶ್ ಪ್ರಭು ಮಾಲಕತ್ವದ ವೈಷ್ಣವಿ ಎಕ್ಸ್‌ಪ್ರೆಸ್‌ ಕಾರ್ಗೋ ಸಂಸ್ಥೆಯಲ್ಲಿ ವಾಹನ ಚಾಲಕರಾಗಿ ದುಡಿಯುತ್ತಿದ್ದ ಚಂದ್ರು ಮತ್ತು ಕ್ಲೀನರ್ ಅಶ್ರಫ್ ಎಂಬವರು ಸರಕು ಸಾಗಾಟ ಮಾಡಿದ ಕೂಲಿ ನೀಡುವಂತೆ ಕಳೆದೆರಡು

ದಿನಗಳಿಂದ ಕೇಳಿಕೊಳ್ಳುತ್ತಿದ್ದರೂ ಸಂಬಳ ನೀಡಲು ನಿರಾಕರಿಸುತ್ತಿದ್ದ ವಿಚಾರಕ್ಕೆ ಸಂಬಂಧಿಸಿ ನಡೆದ ಮಾತಿನ ಚಕಮಕಿ ಮುಂದೆ ಹೊಯ್ ಕೈ ನಡೆಯುವವರೆಗೂ ಮುಂದುವರಿದಾಗ ತನ್ನ ಕೆಲಸದಾಳುವಿಗೆ ಹಾರಿಸಿದ ಗುಂಡು ತಪ್ಪಿ ಮಾಲಕನ ಪುತ್ರನಿಗೆ ತಗುಲಿದೆ. ಪುತ್ರ ಸುಧೀಂದ್ರನ ಪರಿಸ್ಥಿತಿ ಈಗ ಚಿಂತಾಜನಕವಾಗಿದ್ದು.

ಈ ಮಧ್ಯೆ ಪ್ರಕರಣವನ್ನು ದಿಕ್ಕು ತಪ್ಪಿಸುವ ಮಾತುಗಳು ಕೇಳಿ ಬರುತ್ತಿದೆ. ಗುಂಡು ಹಾರಾಟ ನಡೆದ ಪ್ರಕರಣವನ್ನು ಕಾರ್ಮಿಕರ ತಲೆ ಮೇಲೆ ಹೊರಿಸಿ ಅವರನ್ನು ತಪ್ಪಿತಸ್ಥರನ್ನಾಗಿಸುವ ತಯಾರಿಗಳು ನಡೆಯುತ್ತಿವೆ ಎಂಬ ವಿಚಾರಗಳು ಕೇಳಿ ಬರುತ್ತಿದ್ದು,

ಮಾಲಕ ರಾಜೇಶ್ ಪ್ರಭು ಪ್ರಕರಣದಿಂದ ರಕ್ಷಿಸುವ ಪ್ರಯತ್ನಗಳು ನಡೆಯುತ್ತಿವೆ ಎಂಬ ವಿಚಾರ ಸಾರ್ವಜನಿಕ ವಲಯದಲ್ಲಿ ಕೇಳಿ ಬರುತ್ತಿದೆ. ಈ ಬಗ್ಗೆ ಮಂಗಳೂರು ನಗರ ಪೊಲೀಸ್ ಆಯುಕ್ತರು ಶೂಟೌಟ್ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಬೇಕು.

ಕಳೆದ ಹಲವಾರು ವರುಷಗಳಿಂದ ಕಾರ್ಮಿಕರನ್ನು ದುಡಿಸಿ ಸಂಬಳ ನೀಡದೆ ಸತಾಯಿಸುವಂತಹ ಕೆಲಸಗಳನ್ನು ಸಂಸ್ಥೆಯ ಮಾಲಕ ಮಾಡುತ್ತಾ ಬಂದಿದ್ದು, ಕಾರ್ಮಿಕರು ದುಡಿದ ಸಂಬಳವನ್ನು ಕೇಳಿದರೆ ಪಿಸ್ತೂಲು ತೋರಿಸಿ ಬೆದರಿಸುವಂತಹ ಘಟನೆಗಳು ಈ ಹಿಂದೆಯೂ ನಡೆದಿದೆ.
ಆದ್ದರಿಂದ ಈ ಗುಂಡು ಹಾರಾಟ ನಡೆಸಿದ ಪ್ರಕರಣವು ಯಾವುದೇ ಕಾರಣಕ್ಕೂ ದಿಕ್ಕು ತಪ್ಪದ ರೀತಿಯಲ್ಲಿ ನೋಡಿಕೊಳ್ಳಲು,

ಪ್ರಕರಣವನ್ನು ಹಿರಿಯ ಅಧಿಕಾರಿಗಳ ನೇತೃತ್ವದಲ್ಲಿ ಸಮಗ್ರ ತನಿಖೆ ನಡೆಸಬೇಕೆಂದು ಡಿವೈಎಫ್ಐ ದ.ಕ ಜಿಲ್ಲಾ ಸಮಿತಿ ಒತ್ತಾಯಿಸುತ್ತದೆ ಎಂದು ಡಿವೈಎಫ್ಐ ದ.ಕ ಜಿಲ್ಲಾ ಕಾರ್ಯದರ್ಶಿ ಸಂತೋಷ್ ಬಜಾಲ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

DAKSHINA KANNADA

ಮಂಗಳೂರು: ಮತಗಟ್ಟೆಯಲ್ಲಿ ಬಿಜೆಪಿ ಕಾರ್ಯಕರ್ತರ ಗೂಂಡಾಗಿರಿ; ಪೊಲೀಸ್ ಅಧಿಕಾರಿಗಳ ಜೊತೆಯಲ್ಲೇ ಅನುಚಿತ ವರ್ತನೆ

Published

on

ಮಂಗಳೂರು: ನಗರದ ಕಪಿತಾನಿಯೋ ಮತಗಟ್ಟೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಮತ ಚಲಾಯಿಸಿದ ಬಳಿಕ ಮಾಧ್ಯಮ ಪ್ರತಿನಿಧಿ ಜೊತೆ ಪ್ರತಿಕ್ರಿಯೆ ನೀಡುತ್ತಿದ್ದ ವೇಳೆ ಬಿಜೆಪಿ ಕಾರ್ಯಕರ್ತನೊಬ್ಬ ಪೊಲೀಸ್ ಹಾಗೂ ಪತ್ರಕರ್ತರೊಂದಿಗೆ ಅನುಚಿತವಾಗಿ ವರ್ತಿಸಿ ವಾಗ್ವಾದವುಂಟಾದ ಘಟನೆ ನಡೆಯಿತು.

ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್. ಆರ್ ಪೂಜಾರಿಯವರು ಮತದಾನ ಮಾಡಿ ಹೊರಬಂದಾಗ ಮಾಧ್ಯಮದವರು ಗೇಟಿನ ಹೊರಭಾಗದಲ್ಲಿ ಅವರ ಹೇಳಿಕೆ ತೆಗೆದುಕೊಳ್ಳುತ್ತಿದ್ದರು. ಆಗ “ಎಷ್ಟು ಹೊತ್ತು ಪ್ರತಿಕ್ರಿಯೆ ಪಡೆಯುವುದು”ಎಂದು ಸಂದೀಪ್ ಎಕ್ಕೂರು ಎಂಬಾತ ಕ್ಯಾತೆ ತೆಗೆದಿದ್ದಾನೆ. ಈ ವೇಳೆ ಅಲ್ಲಿಯೇ ಇದ್ದ ಪೊಲೀಸ್ ಇನ್ಸ್ ಪೆಕ್ಟರ್ ಟಿ.ಡಿ.ನಾಗರಾಜ್ ಸೇರಿದಂತೆ ಇತರ ಪೊಲೀಸರು ಆತನನ್ನು ತಳ್ಳಿಕೊಂಡು ಒಂದಷ್ಟು ದೂರ ಹೋಗಿದ್ದಾರೆ. ಈ ವೇಳೆ ಆತನೊಂದಿಗೆ ಇದ್ದವರು ಸಮಾಧಾನ ಮಾಡಲು ಯತ್ನಿಸಿದರೂ, ಆತ ಪೊಲೀಸರೊಂದಿಗೆ ಅನುಚಿತವಾಗಿ ವರ್ತಿಸಿ, ವಾಗ್ವಾದ ನಡೆಸಿದ್ದಾನೆ. ಆಗ ಪೊಲೀಸ್ ಇನ್ಸ್ ಪೆಕ್ಟರ್ ಟಿ.ಡಿ.ನಾಗರಾಜ್ ಎಚ್ಚರಿಕೆ ನೀಡಿ ಕಳಿಸಿದ್ದಾರೆ.

ಪೊಲೀಸರು ಅಲ್ಲಿಂದ ಹಿಂದಿರುಗಿದ ಬಳಿಕ ತಂಡದಲ್ಲಿದ್ದ ಮತ್ತೊಬ್ಬ ಘಟನೆಯ ದೃಶ್ಯ ಚಿತ್ರೀಕರಿಸುತ್ತಿದ್ದ ಮಾಧ್ಯಮ ವರದಿಗಾರರ ಮೇಲೆ ಹರಿಹಾಯ್ದಿದ್ದಾನೆ. ಈ ವೇಳೆ ಪತ್ರಕರ್ತರೊಂದಿಗೂ ತಂಡದಿಂದ ವಾಗ್ವಾದ ನಡೆದಿದೆ. ಈ ವೇಳೆ ಸ್ಥಳದಲ್ಲಿ ಸ್ವಲ್ಪ ಗೊಂದಲದ ವಾತಾವರಣ ಸೃಷ್ಟಿಯಾಗಿತ್ತು. ಸಂಜೆ ವೇಳೆ ಆತನ ಮೇಲೆ ಪ್ರಕರಣ ದಾಖಲಿಸಿ ಅರೆಸ್ಟ್ ಮಾಡುತ್ತೇನೆ ಎಂದು ಪೊಲೀಸ್ ಇನ್ಸ್ ಪೆಕ್ಟರ್ ಟಿ.ಡಿ.ನಾಗರಾಜ್ ಎಚ್ಚರಿಕೆ ನೀಡಿದ ಬಳಿಕ ಪರಿಸ್ಥಿತಿ ಶಾಂತವಾಯಿತು.

Continue Reading

DAKSHINA KANNADA

ಪತ್ನಿ ಮಗಳೊಂದಿಗೆ ಸರತಿ ಸಾಲಿನಲ್ಲಿ ನಿಂತು ಮತ ಚಲಾಯಿಸಿದ ಪದ್ಮರಾಜ್ ಪೂಜಾರಿ

Published

on

ಮಂಗಳೂರು: ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಪೂಜಾರಿ ಮಂಗಳೂರಿನಲ್ಲಿ ತಮ್ಮ ಮತ ಚಲಾಯಿಸಿದ್ದಾರೆ. ಮಂಗಳೂರಿನ ಕಪಿತಾನಿಯೋ ಶಾಲೆಯ ಮತಗಟ್ಟೆಗೆ ತನ್ನ ಪತ್ನಿ ಹಾಗೂ ಮಗಳ ಜೊತೆ ಆಗಮಿಸಿ ಮತ ಚಲಾಯಿಸಿದ್ದಾರೆ.

ಮುಂಜಾನೆ ಏಳುಗಂಟೆಗೆ ಮತಗಟ್ಟೆಗೆ ಆಗಮಿಸಿದ ಪದ್ಮರಾಜ್ ಅವರು ಬರುವ ವೇಳೆಗೆ ಜನರು ಮತದಾನಕ್ಕೆ ಸರತಿ ಸಾಲಿನಲ್ಲಿ ನಿಂತಿದ್ದರು. ಹೀಗಾಗಿ ಪದ್ಮರಾಜ್ ಹಾಗೂ ಅವರ ಪತ್ನಿ ಮತ್ತು ಮಗಳು ಸರತಿ ಸಾಲಿನಲ್ಲಿ ನಿಂತೇ ಮತ ಚಲಾಯಿಸಿದ್ದಾರೆ. ಪದ್ಮರಾಜ್ ಆಗಮಿಸುವ ವೇಳೆ ಅವರ ಸಾಕಷ್ಟು ಅಭಿಮಾನಿಗಳು ಮತಗಟ್ಟೆಯ  ಹೊರಗೆ ನಿಂತು ಅವರಿಗೆ ಶುಭ ಕೋರಿದ್ದಾರೆ.

 

ಮತದಾನ ಮಾಡಿದ ಪದ್ಮರಾಜ್ ಬಳಿಕ ಕ್ಷೇತ್ರದಲ್ಲಿ ಮತದಾನ ಪ್ರಕ್ರಿಯೆ ವೀಕ್ಷಣೆಗೆ ತೆರಳಿದ್ದಾರೆ.

Continue Reading

DAKSHINA KANNADA

ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ

Published

on

ಬೆಂಗಳೂರು: ರಾಜ್ಯದ 14 ಲೋಕಸಭಾ ಕ್ಷೇತ್ರಗಳ ಮೊದಲನೇ ಹಂತದ ಮತದಾನ ಇಂದು ಬೆಳಗ್ಗೆ 7 ಗಂಟೆಯಿಂದಲೇ ಆರಂಭಗೊಂಡಿದೆ.

ಲೋಕಸಭಾ ಚುನಾವಣೆಯ ಎರಡನೇ ಹಂತದ ಮತದಾನ ಇದಾಗಿದ್ದು, ಕರ್ನಾಟಕದಲ್ಲಿ ಇಂದು ಮೊದಲ ಹಂತದ ಮತದಾನವಾಗಿದೆ. ಮತದಾರರು ತಮ್ಮ ತಮ್ಮ ಮತ ಕ್ಷೇತ್ರಗಳಲ್ಲಿ ಬೆಳಿಗ್ಗೆಯಿಂದಲೇ ಸರತಿ ಸಾಲಿನಲ್ಲಿ ನಿಂತು ಶಾಂತಿಯುತವಾಗಿ ಮತದಾನ ಮಾಡುತ್ತಿದ್ದಾರೆ.

ಅದರಂತೆ ಬೆಂಗಳೂರು ಉತ್ತರ, ಬೆಂಗಳೂರು ದಕ್ಷಿಣ, ಬೆಂಗಳೂರು ಸೆಂಟ್ರಲ್, ಬೆಂಗಳೂರು ಗ್ರಾಮಾಂತರ, ಮೈಸೂರು-ಕೊಡಗು, ಚಾಮರಾಜನಗರ, ಮಂಡ್ಯ, ತುಮಕೂರು, ಕೋಲಾರ, ಹಾಸನ, ಉಡುಪಿ-ಚಿಕ್ಕಮಗಳೂರು, ಚಿಕ್ಕಬಳ್ಳಾಪುರ, ದಕ್ಷಿಣ ಕನ್ನಡ, ಚಿತ್ರದುರ್ಗ ಕ್ಷೇತ್ರಗಳಲ್ಲಿ ಬೆಳಿಗ್ಗೆಯಿಂದಲೇ ಮತದಾನ ಆರಂಭವಾಗಿದ್ದು ಸಂಜೆ 6 ಗಂಟೆಯವರೆಗೆ ಮತದಾನ ಪ್ರಕ್ರಿಯೆ ನಡೆಯಲಿದೆ.

Continue Reading

LATEST NEWS

Trending