Connect with us

DAKSHINA KANNADA

ಉಳ್ಳಾಲದಲ್ಲಿ ಕೊರಗಜ್ಜ – ಗುಳಿಗಜ್ಜ ದೈವಗಳ ಕಾಣಿಕೆ ಹುಂಡಿ ಅಪವಿತ್ರಗೊಳಿಸಿದ ಕಿಡಿಗೇಡಿಗಳ ವಿರುದ್ಧ ಕಠಿಣ ಕ್ರಮಕ್ಕೆ ಡಿವೈಎಫ್ಐ ಒತ್ತಾಯ

Published

on

ಉಳ್ಳಾಲದಲ್ಲಿ ಕೊರಗಜ್ಜ – ಗುಳಿಗಜ್ಜ ದೈವಗಳ ಕಾಣಿಕೆ ಹುಂಡಿ ಅಪವಿತ್ರಗೊಳಿಸಿದ ಕಿಡಿಗೇಡಿಗಳ ವಿರುದ್ಧ ಕಠಿಣ ಕ್ರಮಕ್ಕೆ ಡಿವೈಎಫ್ಐ ಒತ್ತಾಯ

ಮಂಗಳೂರು : ಉಳ್ಳಾಲ ಪ್ಯಾರಿಸ್ ಜಂಕ್ಷನ್ ಬಳಿ ಇರುವ ಕಾರಣಿಕ ದೈವಗಳಾದ ಕೊರಗಜ್ಜ ಮತ್ತು ಗುಳಿಗಜ್ಜನ ಕಟ್ಟೆಯ ಕಾಣಿಕೆ ಹುಂಡಿಯಲ್ಲಿ ಅಶ್ಲೀಲ ವಸ್ತುಗಳನ್ನು ಹಾಕಿ ವಿಕೃತಿ ಮೆರೆದು ಧಾರ್ಮಿಕ ಭಾವನೆಗಳನ್ನು ಘಾಸಿಗೊಳಿಸಿದ ಪ್ರಕರಣ ಖಂಡನೀಯವಾಗಿದ್ದು ಈ ಕೃತ್ಯವೆಸಗಿದ ಕಿಡಿಗೇಡಿಗಳನ್ನು ಕೂಡಲೇ ಬಂಧಿಸಿ ಅವರ ವಿರುದ್ಧ ಕಠಿಣ ಕ್ರಮಕೈಗೊಳ್ಳುವಂತೆ ಡಿವೈಎಫ್ಐ ಉಳ್ಳಾಲ ವಲಯ ಸಮಿತಿಯ ನಿಯೋಗ ಇಂದು ಉಳ್ಳಾಲ ಪೊಲೀಸ್ ಠಾಣೆಗೆ ತೆರಳಿ ಮನವಿ ಸಲ್ಲಿಸಿ ಒತ್ತಾಯಿಸಿತು.

ಕಿಡಿಗೇಡಿಗಳ ಈ ಕೃತ್ಯದಿಂದ ಕೊರಗಜ್ಜ , ಗುಳಿಗಜ್ಜ ದೈವಗಳನ್ನು ಆರಾಧಿಸುವ ಭಕ್ತರ ಮನಸ್ಸಿಗೆ ಮತ್ತು ಧಾರ್ಮಿಕ ನಂಬಿಕೆಗಳನ್ನು ಗೌರವಿಸುವ ಜನಗಳ ಭಾವನೆಗಳಿಗೆ ಧಕ್ಕೆಯಾಗಿದೆ. ಕಿಡಿಗೇಡಿಗಳು ಸಮಾಜದಲ್ಲಿ ಧಾರ್ಮಿಕ ಸಂಘರ್ಷವನ್ನು ಹುಟ್ಟು ಹಾಕುವ ಉದ್ದೇಶದಿಂದ ಈ ಕೃತ್ಯವೆಸಗಿದ್ದಾರೆ. ಪೊಲೀಸ್ ಇಲಾಖೆ ಈ ಪ್ರದೇಶದಲ್ಲಿ ಕೋಮು ಉದ್ವಿಗ್ನತೆಗೆ ಕಾರವಾಗುತ್ತಿರುವ ವ್ಯಕ್ತಿಗಳು ಮತ್ತು ಸಂಘಟನೆಗಳ ಮೇಲೆ ನಿಗಾ ವಹಿಸುವಂತೆಯೂ ನಿಯೋಗ ಒತ್ತಾಯಿಸಿತು.

ನಿಯೋಗದಲ್ಲಿ ಡಿವೈಎಫ್ಐ ಉಳ್ಳಾಲ ವಲಯ ಸಮಿತಿಯ ಅಧ್ಯಕ್ಷ ಅಶ್ರಫ್ ಕೆಸಿ ರೋಡ್, ಕಾರ್ಯದರ್ಶಿ ಸುನಿಲ್ ತೇವುಲ, ಉಪಾಧ್ಯಕ್ಷ ರಝಾಕ್ ಮೊಂಟೆಪದವು, ಜೊತೆ ಕಾರ್ಯದರ್ಶಿ ಅಡ್ವಕೇಟ್ ನಿತಿನ್ ಕುತ್ತಾರ್, ಡಿವೈಎಫ್ಐ ಮುಡಿಪು ಘಟಕದ ಅಧ್ಯಕ್ಷ ರಝಾಕ್ ಮುಡಿಪು, ದೇರಳಕಟ್ಟೆ ಘಟಕದ ಅಧ್ಯಕ್ಷ ನವಾಜ್ ಉರುಮಣೆ ಉಪಸ್ಥಿತರಿದ್ದರು.

DAKSHINA KANNADA

ಡಿ. 14ರಿಂದ 17 ರವರೆಗೆ “ಆಳ್ವಾಸ್ ವಿರಾಸತ್”

Published

on

ಮೂಡಬಿದಿರೆ: ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ನಡೆಸುವ ರಾಷ್ಟ್ರೀಯ ಸಾಂಸ್ಕೃತಿಕ ಉತ್ಸವ, 29ನೇ ವರ್ಷದ ‘ಆಳ್ವಾಸ್ ವಿರಾಸತ್ 2023’ ಡಿ.14ರಿಂದ 17ರವರೆಗೆ ಮೂಡಬಿದಿರೆಯ ಪುತ್ತಿಗೆ ಗ್ರಾಮದ ವಿವೇಕಾನಂದ ನಗರದ  ವನಜಾಕ್ಷಿ ಕೆ. ಶ್ರೀಪತಿ ಭಟ್ ಬಯಲು ರಂಗಮಂದಿರದಲ್ಲಿ ನಡೆಯಲಿದೆ.

ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆ ಶುಭಾಶೀರ್ವಾದೊಂದಿಗೆ ನಡೆಯುವ ವಿರಾಸತ್ ಅನ್ನು ದೇಶಕ್ಕಾಗಿ ದೇಹತ್ಯಾಗ ಮಾಡಿದ ವೀರಯೋಧ ಕ್ಯಾಪ್ಟನ್ ಎಂ.ವಿ. ಪ್ರಾಂಜಲ್ ಅವರಿಗೆ ಅರ್ಪಣೆ ಮಾಡಲಾಗಿದೆ ಎಂದು ಆಳ್ವಾಸ್ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ. ಮೋಹನ್ ಆಳ್ವ ಅವರು ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು.

ಡಿ.14ರಂದು ರಾಜ್ಯಪಾಲರಾದ ಥಾವರ್‌ ಚಂದ್ ಗೆಹ್ಲೋಟ್ ವಿರಾಸತ್ ಉದ್ಘಾಟಿಸಲಿದ್ದು,ಈ ಬಾರಿಯ ವಿರಾಸತ್ ನಲ್ಲಿ ಬೆನ್ನಿದಯಾಲ್, ವಿಜಯಪ್ರಕಾಶ್, ಶ್ರೇಯಾ ಘೋಷಾಲ್ ಸ್ವರ ಮಾಧುರ್ಯ, ಪ್ರತಿನಿತ್ಯ 13 ಗಂಟೆಗಳ ಕಾಲ 750 ಮಳಿಗೆಗಳಲ್ಲಿ ಪ್ರದರ್ಶನ ಹಾಗೂ ಮಾರಾಟಗಳು ನಡೆಯಲಿವೆ. ಭವ್ಯ ಸಾಂಸ್ಕೃತಿಕ ಮೆರವಣಿಗೆ ಬಳಿಕ ಸಾಂಸ್ಕೃತಿಕ ರಥ ಸಂಚಲನ ಮತ್ತು ರಥಾರತಿ, ಕೃಷಿ ಮೇಳ, ಆಹಾರ ಮೇಳ, ಫಲಪುಷ್ಪ ಮೇಳ, ಕರಕುಶಲ ಮತ್ತು ಪ್ರಾಚ್ಯವಸ್ತು ಪದರ್ಶನ ಮೇಳ, ಚಿತ್ರಕಲಾ ಮೇಳಗಳು ಕಲಾಕೃತಿಗಳ ಪ್ರದರ್ಶನ ನಡೆಯಲಿದೆ. ಸ್ಕೌಟ್ಸ್ ಗೈಡ್ಸ್ ಸಾಹಸಮಯ ಚಟುವಟಿಕೆ ಕೇಂದ್ರವನ್ನು ಸ್ಥಾಪಿಸಲಾಗಿದೆ ಎಂದು ಅವರು ಮಾಹಿತಿ ನೀಡಿದರು. ಪತ್ರಿಕಾ ಗೋಷ್ಠಿಯಲ್ಲಿ ಪತ್ರಿಕೋದ್ಯಮ ವಿಭಾಗದ ಮುಖ್ಯಸ್ಥ ಪ್ರಸಾದ್ ಶೆಟ್ಟಿ ಉಪಸ್ಥಿತರಿದ್ದರು.

Continue Reading

BELTHANGADY

ಬೆಳ್ತಂಗಡಿ ತಾಲೂಕು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ಪದಾಧಿಕಾರಿಗಳ ಆಯ್ಕೆ

Published

on

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ ಯುವ ವೇದಿಕೆ ಬೆಳ್ತಂಗಡಿ ಇದರ 2023-25ನೇ ಸಾಲಿನ ನೂತನ ಪದಾಧಿಕಾರಿಗಳ ಆಯ್ಕೆಯು ವಾಣಿ ಶಿಕ್ಷಣ ಸಂಸ್ಥೆಯ ಸಭಾಂಗಣದಲ್ಲಿ ನಡೆಯಿತು.


ಅಧ್ಯಕ್ಷರಾಗಿ ಚಂದ್ರಕಾಂತ್ ನಿಡ್ಡಾಜೆ, ಕಾರ್ಯದರ್ಶಿಯಾಗಿ ಸುರೇಶ್ ಕೌಡಂಗೆ, ಕೋಶಾಧಿಕಾರಿಯಾಗಿ ರಂಜಿತ್ ಕಳೆಂಜ, ಜೊತೆ ಕಾರ್ಯದರ್ಶಿಯಾಗಿ ತೀಕ್ಷಿತ್ ಕೆ.ಕಲ್ಬೆಟ್ಟು ದಿಡುಪೆ, ಉಪಾಧ್ಯಕ್ಷರುಗಳಾಗಿ ನಿತಿನ್ ಕಲ್ಮಂಜ ಮತ್ತು ಪ್ರಶಾಂತ್ ಅಂತರ ಕಡಿರುದ್ಯಾವರ, ಸಂಘಟನಾ ಕಾರ್ಯದರ್ಶಿಯಾಗಿ ಪ್ರಮೋದ್ ದಿಡುಪೆ, ಕಾನೂನು ಸಲಹೆಗಾರರಾಗಿ ನವೀನ್ ಬಿ.ಕೆ.ಕಲ್ಮಂಜ, ಯಶವಂತ್ ಬನಂದೂರು ಮತ್ತು ಜಯಾನಂದ ಗೌಡ ಬೆಳ್ತಂಗಡಿ ಆಯ್ಕೆಯಾದರು.

ಕಾರ್ಯಕಾರಿ ಸಮಿತಿ ಸದಸ್ಯರುಗಳಾಗಿ ಯಶವಂತ ಗೌಡ ಪುದುವೆಟ್ಟು, ಮಂಜುನಾಥ ಗೌಡ ಚಾರ್ಮಾಡಿ, ವಿಕ್ರಮ್ ಧರ್ಮಸ್ಥಳ, ಸತೀಶ್ ಬೆಳಾಲು, ಪ್ರಸಾದ್ ಅಡಿಮಾರ್ ಚಾರ್ಮಾಡಿ, ಹೇಮಂತ್ ಕಳಿಯ, ದಿನೇಶ್ ದೇಂತ್ಯಾರು ಕೊಯ್ಯೂರು, ಪ್ರದೀಪ್ ನಾಗಾಜೆ ನಾವೂರು, ಭರತ್ ಗೌಡ ಪುದುವೆಟ್ಟು, ನಿತೇಶ್ ಬೆಳ್ತಂಗಡಿ, ಅಕ್ಷಯ್ ಕುಮಾರ್ ಮಾಚಾರ್, ಕರುಣಾಕರ ಗೌಡ ಉಜಿರೆ, ಗಿರೀಶ್ ನಿಡ್ಲೆ ಮತ್ತು ಕಿಶಾನ್ ಗೌಡ ಸವಣಾಲು ಇವರನ್ನು ಆಯ್ಕೆ ಮಾಡಲಾಯಿತು. ಈ ಸಂಧರ್ಭದಲ್ಲಿ ತಾಲೂಕು ಸಂಘದ ನಿಕಟ ಪೂರ್ವ ಕಾರ್ಯದರ್ಶಿ ಮೋಹನ್ ಗೌಡ ಕೊಯ್ಯೂರು ಉಪಸ್ಥಿತರಿದ್ದರು. ಯಶವಂತ್ ಬನಂದೂರು ಸ್ವಾಗತಿಸಿದರು.ಕಾರ್ಯದರ್ಶಿ ಸುರೇಶ್ ಕೌಡಂಗೆ ವಂದಿಸಿದರು.

Continue Reading

BELTHANGADY

ಖೋಟ ನೋಟು ಪ್ರಕರಣ: 7 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಗಳ ಬಂಧನ..!

Published

on

ಧರ್ಮಸ್ಥಳ: ಖೋಟ ನೋಟು ಪ್ರಕರಣದಲ್ಲಿ ಕಳೆದ ಏಳು ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಮೋಹನ ಕುಮಾ‌ರ್ ಎಂಬಾತನನ್ನು ಬೆಂಗಳೂರು ಗೊಲ್ಲಹಳ್ಳಿ ಬಸ್ಸು ತಂಗುದಾಣದ ಬಳಿ ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರು ಪಡಿಸಿರುವ ಘಟನೆ ನಡೆದಿದೆ.

ಖೋಟಾ ನೋಟು ಪ್ರಕರಣಕ್ಕೆ ಸಂಬಂಧಿಸಿದಂತೆ ಕಳೆದ ಸುಮಾರು 4 ವರ್ಷದಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಪ್ಪಿಸಿಕೊಂಡಿದ್ದ ಆರೋಪಿ ಕೆಂಪೆರಾಜ್ ಎಂಬಾತನನ್ನು ಚಿಕ್ಕನಾಯಕನಹಳ್ಳಿ ತಾಲೂಕು ಮುಳಬಾಗಿಲು ಬಸ್ಸು ತಂಗುದಾಣದ ಬಳಿಯಿಂದ ಧರ್ಮಸ್ಥಳ ಠಾಣಾ ಪಿ.ಎಸ್.ಐ ಸಮರ್ಥ ಆರ್ ಗಾಣಿಗೇ‌ರ್, ಹೆಚ್ ಸಿ 607 ರಾಜೇಶ್ ಎನ್, ಪಿ.ಸಿ 2406 ವಿನಯ ಕುಮಾರ್ ರವರುಗಳ ತಂಡ ವಶಕ್ಕೆ ಪಡೆದು ನ್ಯಾಯಾಧೀಶರ ಮುಂದೆ ಹಾಜರುಪಡಿಸಿದೆ.

Continue Reading

LATEST NEWS

Trending