Connect with us

DAKSHINA KANNADA

ತನ್ನ ಪ್ರಚಾರಪ್ರಿಯತೆಗೆ ಎಸ್ಡಿಪಿಐ ಹೆಸರು ಬಳಸುವ ಡಿವೈಎಫೈ ಮುಖಂಡನ ಕೃತ್ಯ ಹತಾಶೆಯ ಪರಮಾವಧಿ : ಎಸ್ಡಿಪಿಐ..!

Published

on

ತನ್ನ ಪ್ರಚಾರಪ್ರಿಯತೆಗೆ ಎಸ್ಡಿಪಿಐ ಹೆಸರು ಬಳಸುವ ಡಿವೈಎಫೈ ಮುಖಂಡನ ಕೃತ್ಯ ಹತಾಶೆಯ ಪರಮಾವಧಿ : ಎಸ್ಡಿಪಿಐ..!

ಮಂಗಳೂರು:- ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಸ್ತಿತ್ವಕ್ಕಾಗಿ ಪರದಾಡುತ್ತಿರುವ ಕಮ್ಯುನಿಸ್ಟ್ ಪಕ್ಷದ ಮುಖ್ಯಸ್ಥನೆಂದು ಹೇಳಿಕೊಳ್ಳುವ ವ್ಯಕ್ತಿಯೋರ್ವ ಇತ್ತೀಚೆಗೆ ಖಾಸಗಿ ಚಾನೆಲ್ ಒಂದರ ಚರ್ಚಾಗೋಷ್ಠಿಯಲ್ಲಿ ಎಸ್‌ಡಿಪಿಐ ಪಕ್ಷವನ್ನು ಬಿಜೆಪಿಯೊಂದಿಗೆ ಹೋಲಿಕೆ ಮಾಡಿ ಮಾತನಾಡಿರುವುದು ಆತನ ಹತಾಶೆಯ ಪರಮಾವಧಿಯನ್ನು ಪ್ರತಿಬಿಂಬಿಸುತ್ತದೆ.

ಮತ್ತು ಅದು ಆ ವ್ಯಕ್ತಿಯ ಪ್ರಚಾರಪ್ರಿಯತೆ ಗಳಿಸಿಕೊಳ್ಳುವ ಹಪಾಹಪಿಯಾಗಿದೆ ಎಂದು SDPI ಮಂಗಳೂರು ದಕ್ಷಿಣ ವಿದಾನ ಸಭಾ ಕ್ಷೇತ್ರ ಸಮಿತಿಯ ಅಧ್ಯಕ್ಷರಾದ ಸುಹೈಲ್ ಖಾನ್ ತಿರುಗೇಟು ನೀಡಿದ್ದಾರೆ.

ಬಿಜೆಪಿ ಮತ್ತು ಎಸ್‌ಡಿಪಿಐ ಪರಸ್ಪರ ಅಣ್ಣತಮ್ಮಂದಿರು ಎಂಬಂತಹಾ ಬಾಲಿಶತನದ ಹೇಳಿಕೆ ನೀಡಿರುವ ಕಮ್ಯುನಿಸ್ಟ್‌ ಪಕ್ಷದ ಮುಖ್ಯಸ್ಥನ ಹೆಸರಿನಲ್ಲಿ ಕಾರ್ಯಾಚರಿಸುವ ಈ ವ್ಯಕ್ತಿ ಹಲವಾರು ವರ್ಷಗಳಿಂದ ಪಕ್ಷದ ಯುವ ಘಟಕದ ರಾಜ್ಯಾಧ್ಯಕ್ಷನಾಗಿದ್ದರೂ, ಈತನ ನಾಯಕತ್ವದ ಮೂಲಕ ದಕ್ಷಿಣ ಜಿಲ್ಲೆಯಲ್ಲಿ ಪಕ್ಷದ ಸಾಧನೆ ಶೂನ್ಯವಾಗಿದೆ.

ಹೀಗಿರುವಾಗ ತಾನೊಂದು ಚಲಾವಣೆಯಲ್ಲಿರುವ ನಾಣ್ಯದಂತಾಗಬೇಕೆಂಬ ಹೆಬ್ಬಯಕೆಯಿಂದ ಇತರರ ಕಾಲೆಳೆಯುವುದೇ ಈತನ ನಿತ್ಯ ಕಾಯಕವಾಗಿದೆ.

ಪುಕ್ಕಟೆ ಪ್ರಚಾರ ಪಡೆಯುವ ಉದ್ದೇಶದಿಂದ ಎಸ್ಡಿಪಿಐ ಪಕ್ಷವನ್ನು ವಿಮರ್ಶೆ ಮಾಡುತ್ತಾ ಕಾಲ ಕಳೆಯುವ ಈತ, ಇತ್ತೀಚೆಗೆ ಎಸ್ಡಿಪಿಐ ಪಂಚಾಯತ್ ಚುನಾವಣೆಗಳಲ್ಲಿನ ಗಣನೀಯ ಸಾಧನೆಯ ಬಗ್ಗೆ ಕೂಡಾ ಸಾಮಾಜಿಕ ಜಾಲ ತಾಣಗಳಲ್ಲಿ ನಕಾರಾತ್ಮಕವಾಗಿ ಚಿತ್ರಿಸಿದ್ದ. ಇದು ಆತನ ರಾಜಕೀಯ ಅಪ್ರಬುದ್ಧತೆಯನ್ನು ಪ್ರದರ್ಶಿಸಿದ್ದು  ಮಾತ್ರವಲ್ಲ ಅದು ಜನಮತಕ್ಕೆ ಮಾಡಿದ ಅವಮಾನವಾಗಿದೆ.

ಊರಿನ ಸಮಸ್ಯೆಗಳ ವಿರುದ್ಧ ಹೋರಾಟದ ಮುಖವಾಡ ಧರಿಸುವ ಈತ ತನ್ನದೇ ಮನೆಯಂಗಳದ ಸುರತ್ಕಲ್ ನಲ್ಲಿರುವ ಅವೈಜ್ಞಾನಿಕ ಟೋಲ್ ಗೇಟ್ ವಿರುದ್ಧ ಇದುವರೆಗೆ ಯಾವುದೇ ಬಹಿರಂಗ ಹೋರಾಟ ನಡೆಸಿಲ್ಲ.

ಹೀಗಿರುವಾಗ ಬಿಜೆಪಿಯೊಂದಿಗೆ ಒಳ ಒಪ್ಪಂದ ಮಾಡಿರುವವರು ಯಾರು ಎಂದು ಇದರಿಂದ ಸ್ಪಷ್ಟವಾಗುತ್ತದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಫ್ಯಾಸಿಸಂ ವಿರುದ್ಧದ ಐಕ್ಯತೆಯನ್ನು ಮುರಿದಿರುವುದೇ ಈತನ ಇದುವರೆಗಿನ ಸಾಧನೆಯಾಗಿದೆ.

ಸಂಘಪರಿವಾರದ ವಿರುದ್ಧ ಒಗ್ಗಟ್ಟಿನ ಹೋರಾಟಗಳಲ್ಲಿ ಗೆದ್ದಲಿನಂತೆ ಕಾರ್ಯನಿರ್ವಹಿಸಿ ಅದನ್ನು ಬಲಹೀನಗೊಳಿಸುವ ಇಂಥಹವರನ್ನು ಸಮಾಜಮುಖಿ ಸಂಘಟನೆಗಳು ಮತ್ತು ಹೋರಾಟಗಾರರು ಇನ್ನಾದರೂ ಅರಿತುಕೊಳ್ಳಬೇಕಾಗಿದೆ. ಎಂದು ಮಂಗಳೂರು ವಿಧಾನಸಭಾ ಕ್ಷೇತ್ರಾಧ್ಯಕ್ಷ ಎಸ್ಡಿಪಿಐ ಸುಹೈಲ್ ಖಾನ್ ಆರೋಪಿಸಿದ್ದಾರೆ.

Click to comment

Leave a Reply

Your email address will not be published. Required fields are marked *

DAKSHINA KANNADA

ಪತಿ ಇನ್ನಿಲ್ಲ ಅನ್ನೋ ಸುದ್ದಿ ಗೊತ್ತಾಗಿ ಮತದಾನದ ಕೊನೆ ಆಸೆ ತೀರಿಸಿದ ಪತ್ನಿ.‌.!

Published

on

ಮಂಗಳೂರು : ಅವರ ಪತಿ ಆಸ್ಪತ್ರೆಯಲ್ಲಿ ಕೊನೆ ಉಸಿರು ಎಳೆದಿದ್ದಾರೆ. ಅದೇ ದಿನ ರಾಜ್ಯದಲ್ಲಿ ಎರಡನೇ ಹಂತದ ಮತದಾನ ಕೂಡಾ ನಡೆದಿದೆ. ಆಕೆಗೆ ಪತಿ ಇನ್ನಿಲ್ಲ ಅನ್ನೋ ವಿಚಾರವನ್ನು ಯಾರೋ ತಿಳಿಸಿದ್ದಾರೆ. ಆದ್ರೆ ಆಕೆ ಪತಿಯ ಕೊನೆ ಆಸೆ ಈಡೇರಿಸಿದ ಬಳಿಕ ಪತಿಯ ಅಂತಿಮ ದರ್ಶನ ಪಡೆದಿದ್ದಾರೆ‌.

ಇದು ಮತದಾನ ಮಾಡದೇ ಇರುವವರಿಗೆ ಇವರೊಂದು ಪಾಠವಾಗಿದೆ. ಮಂಗಳವಾರ ರಾಜ್ಯದಲ್ಲಿ ನಡೆದ ಎರಡನೇ ಹಂತದ ಮತದಾನದಲ್ಲಿ ನಡೆದ ಘಟನೆ ಇದು. ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಗುಡ್ಡೇಕೊಪ್ಪ ಪಂಚಾಯತ್ ವ್ಯಾಪ್ತಿಯಲ್ಲಿ ಇದು ನಡೆದಿದೆ. ಇಲ್ಲಿನ ಆಡುಗೋಡಿನ ಕಲಾವತಿ ವೆಂಕಟೇಶ್ ಇವರ ಪತಿ ವೆಂಕಟೇಶ್ ಚುನಾವಣೆಯ ದಿನ ಮಂಗಳೂರಿನ ವೆನ್ ಲಾಕ್ ಆಸ್ಪತ್ರೆಯಲ್ಲಿ  ಇಹಲೋಕ ತ್ಯಜಿಸಿದ್ದಾರೆ.  ಇನ್ನೇನು ಓಟು ಹಾಕಲು ಹೋಗಬೇಕು ಅನ್ನೋ ಅಷ್ಟರಲ್ಲಿ ಪತಿ ಇಹಲೋಕ ತ್ಯಜಿಸಿದ ಮಾಹಿತಿ ಪತ್ನಿ ಕಲಾವತಿಗೆ ಬಂದಿದೆ. ಆದ್ರೆ ಕಲಾವತಿ ಅವರು ಈ ವೇಳೆ ತಮ್ಮ ಅಮೂಲ್ಯ ಮತ ಚಲಾಯಿಸಿ, ಬಳಿಕ ಪತಿಯ ದೇಹವನ್ನು ನೋಡಲು ತೆರಳಿದ್ದಾರೆ.

ಪತಿ ಒಂದು ಪಕ್ಷದ ಅಭಿಮಾನಿಯಾಗಿದ್ದು ,ಆ ಪಕ್ಷದ ನಾಯಕನನ್ನು ಯಾವಾಗಲು ಜಪಿಸ್ತಾ ಇದ್ರು ಹಾಗಾಗಿ ಪತಿಯ ಕೊ‌‌ನೆಯ ಆಸೆಯಾಗಿ ಅವರ ಪ್ರೀಯಪಟ್ಟವರಿಗೆ ಮತ ಚಲಾಯಿಸಿದೆ ಅಂತ ಕಲಾವತಿ ಹೇಳಿಕೊಂಡಿದ್ದಾರೆ.

Continue Reading

DAKSHINA KANNADA

ಪ್ರಜ್ವಲ್‌ ಅಶ್ಲೀಲ್ ವಿಡಿಯೋ ಡಿಲೀಟ್ ಮಾಡಿ..! ಎಸ್‌ಐಟಿ ವಾರ್ನಿಂಗ್..!

Published

on

ಮಂಗಳೂರು : ಸದ್ಯ ಸಂಸದ ಪ್ರಜ್ವಲ್ ರೇವಣ್ಣ ವೀಡಿಯೋ ಪ್ರಕರಣ ಭಾರೀ ಸದ್ದು ಮಾಡುತ್ತಿದೆ. ಪ್ರಕರಣ ಬೆಂಬತ್ತಿರುವ ಎಸ್ ಐ ಟಿ ಖಡಕ್ ವಾರ್ನ್ ಮಾಡಿದೆ. ಅಶ್ಲೀಲ ವಿಡಿಯೋಗಳನ್ನು ಶೇರ್ ಮಾಡದಂತೆ ಹೇಳಿದೆ. ಅಷ್ಟೇ ಅಲ್ಲದೆ, ಅಶ್ಲೀಲ ವಿಡಿಯೋ ಮೊಬೈಲ್ ನಲ್ಲಿ ಸ್ಟೋರ್ ಮಾಡಿಕೊಂಡಿದ್ದರೆ, ಒಂದು ವೇಳೆ ಡಿಲೀಟ್‌ ಮಾಡದೇ ಇದ್ದರೆ ಕಾನೂನು ಕ್ರಮಗಳನ್ನು ಎದುರಿಸಬೇಕಾದೀತು ಎಂದು ಎಸ್ಐಟಿ ಮುಖ್ಯಸ್ಥ ಬಿ.ಕೆ. ಸಿಂಗ್ ಮಾಧ್ಯಮ ಪ್ರಕಟಣೆ ಮೂಲಕ ಎಚ್ಚರಿಕೆ ನೀಡಿದ್ದಾರೆ.

ಅಲ್ಲದೇ, ಯಾವುದೇ ಅಶ್ಲೀಲ ವೀಡಿಯೋ ಹಾಗೂ ಧ್ವನಿ ಮುದ್ರಣವನ್ನು ಇಟ್ಟುಕೊಂಡಿದ್ದರೆ ಅದು ಅಪರಾಧವಾಗುವುದರಿಂದ ಜನರು ತಮ್ಮ ಮೊಬೈಲ್‌ ಅಥವಾ ಯಾವುದೇ ಎಲೆಕ್ಟ್ರಾನಿಕ್ ಉಪಕರಣಗಳಲ್ಲಿ ಇಟ್ಟುಕೊಳ್ಳಬಾರದು. ಒಂದು ವೇಳೆ ಇಟ್ಟುಕೊಂಡಿದ್ದರೆ ಕೂಡಲೇ ಡಿಲೀಟ್‌ ಮಾಡಿಬಿಡಿ. ಮೊಬೈಲ್ ನಲ್ಲಿ ಅಶ್ಲೀಲ ವಿಡಿಯೋ ಇದ್ದರೆ ಅದರ ರಚನಕಾರರು ನೀವು ಎಂದು ಪರಿಗಣಿಸಿ ಕ್ರಿಮಿನಲ್ ಕೇಸ್ ಬೀಳುತ್ತದೆ. ಆದ್ದರಿಂದ, ಡಿಲೀಟ್ ಮಾಡುವುದರಿಂದ ಕಾನೂನು ಕ್ರಮಗಳಿಂದ ಪಾರಾಗುವ ಸಾಧ್ಯತೆ ಇರುತ್ತದೆ ಎಂದು ಬಿ.ಕೆ. ಸಿಂಗ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Continue Reading

BANTWAL

ಸಾಲದ ಶೂಲಕ್ಕೆ ಜೀವಾಂತ್ಯಗೊಳಿಸಿದ ಯುವಕ…!

Published

on

ಮಂಗಳೂರು : ತಾನು ತಂಗಿದ್ದ ಲಾಡ್ಜ್ ನಲ್ಲಿಯೇ ಅವಿವಾಹಿತ ಯುವಕನೋರ್ವ ನೇಣು ಬಿಗಿದು ಆತ್ಮಹ*ತ್ಯೆ ಮಾಡಿಕೊಂಡ ‌ಘಟನೆ ಬಿಸಿರೋಡಿನಲ್ಲಿ ನಡೆದಿದೆ.

ಮಂಗಳೂರು ಅತ್ತಾವರ ನಿವಾಸಿ ಪ್ರಜ್ವಲ್ ( 30) ನೇಣು ಬಿಗಿದು ಆತ್ಮಹ*ತ್ಯೆ ಮಾಡಿಕೊಂಡ ಯುವಕ. ಮೇ. 5 ರಂದು ಬಿಸಿರೋಡಿನ ಖಾಸಗಿ ಬಸ್ ನಿಲ್ದಾಣದ ಹತ್ತಿರವಿರುವ ಹೋಟೆಲೊಂದರಲ್ಲಿ ರೂಂ ಮಾಡಿದ್ದ. ಈತ ಮೇ.6 ರಂದು ರಾತ್ರಿ ಊಟ ಮುಗಿಸಿ, ಬಾಗಿಲು ಹಾಕಿಕೊಂಡಿದ್ದ. ಮಂಗಖವಾರ ಬೆಳಿಗ್ಗೆ ರೂಂನ ಬಾಗಿಲು ತೆರೆಯದ ಇದ್ದ ಕಾರಣ ಹೋಟೆಲ್ ಸಿಬ್ಬಂದಿ ಕರೆದರೂ ಸ್ಪಂದಿಸಿರಲಿಲ್ಲ. ಹೀಗಾಗಿ ಪೊಲೀಸರಿಗೆ ಮಾಹಿತಿ ನೀಡಿ ಬಾಗಿಲು ತೆರೆದಾಗ ನೇಣು ಬಿಗಿದ ಸ್ಥಿತಿಯಲ್ಲಿ ಪ್ರಜ್ವಲ್ ಮೃ*ತದೇಹದ ಪತ್ತೆಯಾಗಿದೆ.


ಓನ್ ಲೈನ್ ಕಂಪೆನಿಯೊಂದರಲ್ಲಿ ಉದ್ಯೋಗದಲ್ಲಿದ್ದ ಪ್ರಜ್ವಲ್ ಇತ್ತೀಚಿನ ದಿನಗಳಲ್ಲಿ ಮಾನಸಿಕವಾಗಿ ತೀವ್ರವಾಗಿ ನೊಂದಿದ್ದ ಎನ್ನಲಾಗಿದೆ. ತಾನು ಕೆಲಸ ಮಾಡಿಕೊಂಡಿದ್ದ ಕಂಪೆನಿಯ ಮಾಲಕರಿಂದ 60 ಸಾವಿರ ಸಾಲ ಪಡೆದು ಬಳಿಕ ಹಣ ಹೊಂದಿಸಲಾಗದೆ, ಸರಿಯಾದ ಸಮಯಕ್ಕೆ ಹಿಂದುರುಗಿಸಲಾಗಿಲ್ಲ ಎಂಬ ಕಾರಣಕ್ಕೆ ಕೊರುಗುತ್ತಿದ್ದ ಎಂದು ಹೇಳಲಾಗಿದೆ. ಸಾಲದ ವಿಚಾರವಲ್ಲದೆ ಪ್ರೀತಿಸಿದ ಯುವತಿ ಕೈಕೊಟ್ಟಿದ್ದು, ಪ್ರೇಮ ವೈಫಲ್ಯದ ನೋವಿನಲ್ಲೂ ಇದ್ದ ಎಂದು ವರದಿಯಾಗಿದೆ. ಈ ಬಗ್ಗೆ ಬಂಟ್ವಾಳ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Continue Reading

LATEST NEWS

Trending