DAKSHINA KANNADA
ಮಂಗಳೂರು:ಭೂಮಿ ಧಾರೆಯೆರೆಯುವ ಯೋಜನೆಯನ್ನು ವಿರೋಧಿಸಿ ಡಿವೈಎಫ್ಐ ಪ್ರತಿಭಟನೆ
ಮಂಗಳೂರು:ಭೂಮಿ ಧಾರೆಯೆರೆಯುವ ಯೋಜನೆಯನ್ನು ವಿರೋಧಿಸಿ ಡಿವೈಎಫ್ಐ ಪ್ರತಿಭಟನೆ
ಮಂಗಳೂರು:ಬೆಂಗರೆ ಗ್ರಾಮದ ಜನರನ್ನು ಮೂಲಭೂತ ಸೌಕರ್ಯಗಳಿಂದ ವಂಚಿಸಿ ಕೇ ವಲ ಪ್ರವಾಸೋದ್ಯಮದ ಹೆಸರಲ್ಲಿ ಸ್ಥಳೀಯ ಜನರನ್ನು ಸಮುದ್ರದಿಂದ ಬೇರ್ಪಡಿಸುವ, ಶ್ರೀಮಂತರ ಮೋಜಿನಾಟಕೆ ಬೆಲೆಬಾಳುವ ಭೂಮಿಯನ್ನು ಖಾಸಗೀ ಕಂಪೆನಿಗಳಿಗೆ ಧಾರೆಯೆರೆಯುವ ಯೋಜನೆಯನ್ನು ವಿರೋಧಿಸಿ ಡಿವೈಎಫ್ಐ ಬೆಂಗರೆ ಗ್ರಾಮಸಮಿತಿಯಿಂದ ಬೆಂಗರೆ ಕಡಲ ಕಿನಾರೆಯಲ್ಲಿ ಪ್ರತಿಭಟನಾ ಪ್ರದರ್ಶನ ನಡೆಯಿತು.
ಪ್ರತಿಭಟನೆಯನ್ನು ಉದ್ದೇಶಿಸಿ ಡಿವೈಎಫ್ಐ ಜಿಲ್ಲಾದ್ಯಕ್ಷರಾದ ಬಿ.ಕೆ ಇಮ್ತಿಯಾಜ್ ಮಾತನಾಡಿ ಬೆಂಗರೆ ಪ್ರದೇಶವನ್ನು ಅಭಿವೃದ್ಧಿ ಪಡಿಸುವೆವೆಂದು ಕೇವಲ ಬೀಚ್ ಗಳನ್ನಷ್ಟೇ ಅಭಿವೃದ್ಧಿ ಪಡಿಸಿದರೆ, ಅದು ನಿಜವಾದ ಅಭಿವೃದ್ಧಿ ಅಲ್ಲ ಇಲ್ಲಿ ನೂರಾರು ವರುಷಗಳಿಂದ ನೆಲೆನಿಂತಿರುವ ನಿವಾಸಿಗಳ ಕನಿಷ್ಟ ಮೂಲಭೂತ ಸೌಕರ್ಯಗಳನ್ನು ಈಡೇರಿಸುವುದೇ ನಿಜವಾದ ಅಭಿವೃದ್ಧಿ.
ಕಳೆದ ಹಲವಾರು ವರುಷಗಳಿಂದ ಈ ಬೆಂಗರೆಯ ನಿವಾಸಿಗಳ ಬಹುಮುಖ್ಯ ಬೇಡಿಕೆ ಮಹಾನಗರ ಪಾಲಿಕೆ ಈವರೆಗೂ ಈಡೇರಿಸಲಿಲ್ಲ. ಕುಡಿಯುವ ನೀರಿನ ಸಂಪರ್ಕ ಕೊಟ್ಟಿಲ್ಲ, ಹಕ್ಕುಪತ್ರವಿಲ್ಲ, ಡ್ರೈನೇಜ್ ಇಲ್ಲ, ಚರಂಡಿ ಇಲ್ಲ, ಆಟದ ಮೈದಾನ ಇಂತಹ ಯಾವುದೇ ಅಭಿವೃದ್ಧಿ ಕಾರ್ಯಗಳನ್ನು ಮಾಡದೇ ಅಭಿವೃದ್ಧಿ ಹೆಸರಲ್ಲಿ ಇಲ್ಲಿನ ಫಲವತ್ತಾದ ಭೂಮಿಯನ್ನು ಖಾಸಗೀ ಧಣಿಗಳಿಗೆ ಮಾರಲು ಹೊರಟ ಯೋಜನೆಯನ್ನು ಪ್ರಾರಂಭಿಸಲು ಯಾವುದೇ ಕಾರಣಕ್ಕೂ ಬಿಡುವುದಿಲ್ಲ.
ಶಾಸಕರು , ಜನಪ್ರತಿನಿಧಿಗಳು ಈ ಊರಿಗೆ ಚುನಾವಣೆ ಸಂದರ್ಭ ಕೊಟ್ಟ ಆಶ್ವಾಸನೆಗಳೆಲ್ಲವು ಏನಾದವು. ಈ ಹಿಂದೆಯೂ ಗಾಲ್ಫ್ ಕ್ಲಬ್ ನಿರ್ಮಾಣದ ವಿರುದ್ದ ರಾಜಿರಹಿತ ಹೋರಾಟಗಳನ್ನು ಮಾಡಿದ್ದೇವೆ ಇಂತಹದೇ ಯೋಜನೆ ಮತ್ತೊಮ್ಮೆ ಕೈಗೊಂಡರೆ ಅದರ ವಿರುದ್ದವೂ ಹೋರಾಟಗಳನ್ನು ಕೈಗೊಳ್ಳುವ ಎಚ್ಚರಿಕೆಯನ್ನು ನೀಡಿದರು.
ಡಿವೈಎಫ್ಐ ದ.ಕ ಜಿಲ್ಲಾ ಕಾರ್ಯದರ್ಶಿ ಸಂತೋಷ್ ಬಜಾಲ್ ಮಾತನಾಡಿ ಬೌಗೋಳಿಕವಾಗಿ ಸುಂದರವಾಗಿರುವ ಬೆಂಗರೆ ಪ್ರದೇಶದ ಜನರ ಬದುಕು ಮಾತ್ರ ಸುಂದರವಾಗಿಲ್ಲ. ಮಂಗಳೂರು ಮಹಾನಗರ ಪಾಲಿಕೆ ಮತ್ತು ಜಿಲ್ಲಾಡಳಿತ ಬೆಂಗರೆ ಪ್ರದೇಶದಲ್ಲಿ ಬದುಕುವ ಜನರ ಪ್ರಶ್ನೆಗಳನ್ನು ಕೇಳಲು ಈವರೆಗೂ ಬೆಂಗರೆಗೆ ಕಾಲಿಟ್ಟಿಲ್ಲ ಬರೇ ಶ್ರೀಮಂತರ ಮೋಜಿನಾಟದ ಯೋಜನೆಗಳಿಗೆ ಭೇಟಿಕೊಡಲು ಇವರುಗಳಿಗೆ ಬೇಕಾದಷ್ಟು ಸಮಯಗಳಿವೆ. ಸ್ಮಾರ್ಟ್ ಸಿಟಿ ಅನ್ನೋದೆ ಒಂದು ಭ್ರಷ್ಟಾಚಾರದ ಕೊಂಪೆ . ಸ್ಮಾರ್ಟ್ ಸಿಟಿ ಯೋಜನೆಯಲ್ಲಿ ಬೀಚ್ ಗಳನ್ನು ಅಭಿವೃದ್ಧಿ ಪಡಿಸುವಿರಾದರೆ ಈ ಊರಿನ ಜನರ ಮೂಲಭೂತದ ಸೌಕರ್ಯಗಳ ಅಭಿವೃದ್ಧಿ ಯಾಕೆ ಸಾದ್ಯವಿಲ್ಲ. ಇಲ್ಲಿನ ನಿವಾಸಿಗಳಿಗೆ ಕುಡಿಯುವ ನೀರಿನಿಂದ ಹಿಡಿದು ಹಕ್ಕುಪತ್ರ, ಡ್ರೈನೇಜ್, ಸಾರಿಗೆ, ಆರೋಗ್ಯ ಕೇಂದ್ರ , ಶಾಲೆ ಎಲ್ಲದರಿಂದಲೂ ವಂಚಿತರಾಗಿದ್ದಾರೆ ನಗರ ಪಾಲಿಕೆಯ ಯಾವುದೇ ಅಭಿವೃದ್ಧಿ ಕಾಮಗಾರಿ ಇಲ್ಲಿ ನಡೆಯುವುದಿಲ್ಲ ಆದರೆ ಈ ಜನರಿಂದ ಸ್ವಯಂ ಘೋಷಿತ ಆಸ್ತಿ ತೆರಿಗೆಯನ್ನು ಪ್ರತೀ ವರುಷ ವಸೂಲಿ ಮಾಡುವುದು ನಿಮ್ಮದೆಂತಹ ನೀತಿ ಎಂದು ಪ್ರಶ್ನಿಸಿದರು.
ಪ್ರತಿಭಟನೆಯಲ್ಲಿ ಕಾರ್ಮಿಕ ಸಂಘಟನೆಯ ಮುಖಂಡರಾದ ವಿಲ್ಲಿ ವಿಲ್ಸನ್, ಮೋನಾಕ, ಡಿವೈಎಫ್ಐ ಜಿಲ್ಲಾ ಮುಖಂಡರಾದ ಎ.ಬಿ ನೌಶದ್ ಡಿವೈಎಫ್ಐ ಬೆಂಗರೆ ಗ್ರಾಮ ಸಮಿತಿ ಅದ್ಯಕ್ಷರಾದ ಹನೀಫ್ ಬೆಂಗರೆ, ಕಾರ್ಯದರ್ಶಿ ರಿಜ್ವಾನ್, ಅಸ್ಲಂ, ನಾಸಿರ್, ತೌಸೀಫ್, ತಸ್ರೀಫ್, ಸಮದ್, ಬಿಲಾಲ್, ಜಮಾಹತ್ ಕಮಿಟಿ ಸದಸ್ಯ ಆಶ್ರಫ್, ಬಶೀರ್ ಮುಂತಾದವರು ಉಪಸ್ಥಿತರಿದ್ದರು.
bangalore
“ಎಂಚ ಉಲ್ಲಾರ್ ಮರ್ರೆ”…. ಎಂದು ತುಳುವಿನಲ್ಲಿ ಮಾತನಾಡಿದ ನಟಿ ಡಿಂಪಲ್ ಕ್ವೀನ್ ರಚಿತಾ ರಾಮ್
ಮಂಗಳೂರು: ಕಟೀಲು ಶ್ರೀ ದುರ್ಗಾಪರಮೇಶ್ವರೀ ಸಮೂಹ ಶಿಕ್ಷಣ ಸಂಸ್ಥೆಗಳ ಅಶ್ರಯದಲ್ಲಿ ಮೂರು ದಿನಗಳ ಕಾಲ ನಡೆಯುತ್ತಿರುವ ಭ್ರಮರ ಇಂಚರ ನುಡಿಹಬ್ಬ ಕಾರ್ಯಕ್ರಮಕ್ಕೆ ಅತಿಥಿಯಾಗಿ ಭಾಗವಹಿಸಿದ ಸ್ಯಾಂಡಲ್ ವುಡ್ ನ ಡಿಂಪಲ್ ಕ್ವೀನ್ ರಚಿತಾ ರಾಮ್ ಅವರು ಭಾಗವಹಿಸಿ ಮಕ್ಕಳ ಜೊತೆಗೆ ಮಕ್ಕಳಂತೆ ಬೆರೆತು ಮಕ್ಕಳನ್ನು ಕೊಂಡಾಡಿದರು.
ಈ ವೇದಿಕೆಯಲ್ಲಿ ವಿದ್ಯಾಥಿಗಳು ನಟಿ ರಚಿತಾ ರಾಮ್ ಅವರ ಡ್ರಾಯಿಂಗ್ ಮಾಡಿ ಕೊಡುಗೆಯಾಗಿ ನೀಡಿದಾಗ ಖುಷಿ ಪಟ್ಟ ನಟಿ ಆ ವಿದ್ಯಾರ್ಥಿಗಳನ್ನು ವೇದಿಕೆಗೆ ತಾವೇ ಕರೆಸಿ ಅಭಿನಂದಿಸದರು.
ಹಾಗೂ ಕೆಲವು ವಿದ್ಯಾರ್ಥಿಗಳ ಜೊತೆ ವೇದಿಕೆಗೆ ಕರೆಸಿ ಹಾಡಿಸಿದರು. ಅದರಲ್ಲಿ ತಾನೇ ಬಂದು ವೇದಿಕೆಯಲ್ಲಿ ಒಂದು ಪುಟಾಣಿ ‘ಬಾಳ ಒಳ್ಳೇರು ನಮ್ಮ ಮಿಸ್ ಎನ ಹೇಳಿದ್ರು ಎಸ್ ಎಸ್ಸು’ ಎಂದು ಹಾಡಿದಾಗ ನಟಿ ಬಹಳ ಖುಷಿ ಪಟ್ಟರು.
ಈ ಸಂದರ್ಭ ರಚಿತರಾಮ್ ಜೊತೆ ಹಾಡಲು ಹೇಳಿದಾಗ ಅವರು ಕೂಡ “ಬಾಳ ಒಳ್ಳೇರು ನಮ್ಮ ಮಿಸ್ ಎನ ಹೇಳಿದ್ರು ಎಸ್ ಎಸ್ಸು” ಎಂದು ನಗ್ತಾ ನಗ್ತಾ ಹಾಡಿದರು.
ಬಳಿಕ ಮಾತನಾಡಿದ ನಟಿ ವಿದ್ಯಾರ್ಥಿಗಳು ಇಂತಹ ವೇದಿಕೆ ಸಿಕ್ಕಾಗ ಬಳಸಿಕೊಳ್ಳಬೇಕು. ಮತ್ತೇ ಇಂತಹ ವೇದಿಕೆ ಸಿಗುವುದಿಲ್ಲ. ನಮ್ಮ ಪ್ರತಿಭೆಯನ್ನು ನಾವೇ ಪ್ರದರ್ಶನ ಮಾಡಬೇಕು. ಬೇರೆ ಯಾರೂ ಕೂಡ ನಮಗೆ ಹೇಳಲು ಬರುವುದಿಲ್ಲ.
ಯಾರೂ ಕೂಡ ಸಪೋರ್ಟ್ ಮಾಡುವುದಿಲ್ಲ. ಸ್ವಾಯತ್ತತೆಯಿಂದ ನಾವು ಗೆಲ್ಲಬೇಕು. ಒಳ್ಳೆ ಒಳ್ಳೆ ವೇದಿಕೆ ಸಿಕ್ಕಾಗ ಬಿಡಬಾರದು. ಅದರ ಜೊತೆಗೆ ನಮ್ಮ ಗುರುಗುಳಿಗೆ ಹಾಗೂ ತಮ್ಮ ಪೋಷಕರಿಗೆ ಗೌರವ ಕೊಡಿ, ಮರ್ಯಾದೆ ಕೊಡಿ ಜೊತೆಗೆ ಅವರನ್ನು ಪ್ರೀತಿಸಿ ಎಂದರು.
ಈ ವೇಳೆ ರಚಿತರಾಮ್ ಕನ್ನಡದಲ್ಲಿ ಮಾತನಾಡಿದಾಗ ವಿದ್ಯಾರ್ಥಿಗಳು ತುಳುವಿನಲ್ಲಿ ಮಾತನಾಡಿ ಎಂದು ಕೂಗಾಡಿದರು. ಆಗ ಅವರು ಎಂಚ ವುಲ್ಲರ್ ಮರ್ರೆ…ಹುಷಾರ್ ವುಲ್ಲರಾ…ಎಂದು ತುಳುವಿನಲ್ಲಿ ಮಾತನಾಡಿದರು.
BELTHANGADY
Belthangady: ರಸ್ತೆ ಪಕ್ಕದ ಗೂಡಂಗಡಿಯನ್ನು ಧ್ವಂಸಗೊಳಿಸಿದ ಕಿಡಿಗೇಡಿಗಳು..!
ಬೆಳ್ತಂಗಡಿ: ಬೆಳ್ತಂಗಡಿ ನಿಡ್ಲೆ ಗ್ರಾಮದ ಬೂಡುಜಾಲು ಎಂಬಲ್ಲಿ ರಸ್ತೆ ಬದಿಯಲ್ಲಿದ್ದ ಗೂಡಂಗಡಿಯನ್ನು ಕಿಡಿಗೇಡಿಗಳು ರಾತ್ರಿಯ ವೇಳೆ ಧ್ವಂಸಗೊಳಿಸಿದ ಘಟನೆ ಸಂಭವಿಸಿದ್ದು, ಈ ಬಗ್ಗೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ದೂರು ನೀಡಲಾಗಿದೆ.
ಕೊಕ್ಕಡ ಗ್ರಾಮದ ಮಲ್ಲಿಗೆಮಜಲು ನಿವಾಸಿ ಅಬ್ದುಲ್ ಅಝೀಝ್ ಎಂಬವರು ತಮ್ಮ ಜೀವನೋಪಾಯಕ್ಕಾಗಿ ರಾಜ್ಯ ಹೆದ್ದಾರಿಯ ಬದಿಯಲ್ಲಿ ಗೂಡಂಗಡಿಯನ್ನು ಹಾಕಿ ವ್ಯಾಪಾರ ನಡೆಸುತ್ತಿದ್ದರು.
ಕಳೆದ ಮೂರು ವರ್ಷಗಳಿಂದ ಈ ಗೂಡಂಗಡಿ ಕಾರ್ಯ ನಿರ್ವಹಿಸುತ್ತಿತ್ತು. ರಸ್ತೆ ಸಂಚಾರಕ್ಕೆ ಯಾವುದೇ ಅಡಚಣೆಯಾಗದಂತೆ ಗೂಡಂಗಡಿಯನ್ನು ನಿರ್ಮಿಸಲಾಗಿತ್ತು. ಎಂದಿನಂತೆ ಶುಕ್ರವಾರ ರಾತ್ರಿಯ ವೇಳೆ ಅಂಗಡಿಯನ್ನು ಮುಚ್ಚಿ ಹೋಗಿದ್ದ ಅಬ್ದುಲ್ ಅಝೀಝ್ ಶನಿವಾರ ಬೆಳಗ್ಗೆ ಬಂದು ನೋಡಿದಾಗ ಅಂಗಡಿಯನ್ನು ಧ್ವಂಸಗೊಳಿಸಿರುವುದು ಕಂಡು ಬಂದಿದೆ. ಅಂಗಡಿಯಲ್ಲಿದ್ದ ವಸ್ತುಗಳೆಲ್ಲವನ್ನು ಹೊರಗೆಳೆದು ನಾಶಗೊಳಿಸಲಾಗಿದೆ. ತಂಪು ಪಾನೀಯಗಳ ಬಾಟ್ಲಿಗಳನ್ನು ಒಡೆದು ಹಾಕಲಾಗಿದೆ. ಅಂಗಡಿಯನ್ನು ಬಹುತೇಕ ಧ್ವಂಸಗೊಳಿಸಲಾಗಿದೆ. ಈ ಬಗ್ಗೆ ಧರ್ಮಸ್ಥಳ ಪೊಲೀಸರಿಗೆ ದೂರು ನೀಡಲಾಗಿದೆ.
DAKSHINA KANNADA
Mangaluru: 4 ತಿಂಗಳ ಮಗುವನ್ನು ಉಸಿರುಕಟ್ಟಿಸಿ ಕೊಂದ ತಾಯಿ ಕೂಡ ಜೀವಾಂತ್ಯ..!
ಮಂಗಳೂರು: ತನ್ನ ಪುಟ್ಟ ಕಂದಮ್ಮನನ್ನು ನೀರಿನ ಟಬ್ ಒಳಗೆ ಮುಳುಗಿಸಿ ತಾನೂ ನೇಣು ಬಿಗಿದುಕೊಂಡು ಹೆತ್ತಬ್ಬೆಯೊಬ್ಬಾಕೆಯ ಕೃತ್ಯ ಮನಕಲಕಿದ ಘಟನೆ ಮಂಗಳೂರಿನ ಗುಜ್ಜರಕರೆ ಬಳಿ ನಡೆದಿದೆ.
ಅಪಾರ್ಟ್‌ಮೆಂಟ್ ಒಂದರಲ್ಲಿ ವಾಸ ಮಾಡುವ ಫಾತಿಮಾ ರುಕಿಯಾ(23) ಎಂಬಾಕೆ ತನ್ನ ನಾಲ್ಕೂವರೆ ತಿಂಗಳ ಮಗು ಅಬ್ದುಲ್ಲಾ ಹೂದ್ ಎಂಬಾತನನ್ನು ನೀರಿನ ಟಬ್‌ನೊಳಗೆ ಮುಳುಗಿಸಿ ಉಸಿರುಕಟ್ಟಿ ಕೊಂದು ಬಳಿಕ ತಾನೂ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಫಾತಿಮಾಗೆ ಸುಮಾರು ಒಂದೂವರೆ ವರ್ಷದ ಹಿಂದೆ ಮುಹಮ್ಮದ್ ಉನೈಸ್ ಎಂಬವರ ಜೊತೆ ಮದುವೆಯಾಗಿತ್ತು. 2023 ಜು. 7 ರಂದು ಹೆರಿಗೆಯಾಗಿತ್ತು. ಅಬ್ದುಲ್ಲಾ ಹೂದ್ ಎಂಬ ಸುಮಾರು 4ವರೆ ತಿಂಗಳ ಗಂಡು ಮಗು ಇತ್ತು. ಹೆರಿಗೆಯಾದ ಬಳಿಕ ಮಾನಸಿಕ ಖಿನ್ನತೆಗೆ ಒಳಗಾಗಿದ್ದ ಫಾತಿಮಾಗೆ ಚಿಕಿತ್ಸೆಯನ್ನು ಕೂಡಾ ನೀಡಲಾಗುತ್ತಿತ್ತು. ಈ ನಡುವೆ ಫಾತಿಮಾ ತಾನು ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ತನ್ನ ತಾಯಿ ಬಳಿ ಹೇಳುತ್ತಿದ್ದರು ಎನ್ನಲಾಗಿದೆ. ನಿನ್ನೆ ಬೆಳಿಗ್ಗೆ 11 ಗಂಟೆಯಿಂದ ಮಧ್ಯಾಹ್ನ 1-30 ಗಂಟೆಯ ಮಧ್ಯೆ ಮನೆಯಲ್ಲಿ ಯಾರೂ ಇಲ್ಲದ ಸಮಯ ಫಾತಿಮಾ ರುಕಿಯಾ ತಾನು ವಾಸವಾಗಿದ್ದ ಮಂಗಳೂರು ನಗರದ ಗುಜ್ಜರಕೆರೆ ಲೇಕ್ ವ್ಯೂ ಅಪಾರ್ಟ್ಮೆಂಟ್ನ ಬೆಡ್ ರೂಮ್ನ ಗ್ಯಾಲರಿಯಲ್ಲಿ ಪ್ಲಾಸ್ಟಿಕ್ ಟಬ್ನಲ್ಲಿ ನೀರು ತುಂಬಿಸಿ ಮಗುವನ್ನು ನೀರಿನಲ್ಲಿ ಮುಳುಗಿಸಿ ಉಸಿರುಗಟ್ಟಿಸಿ ಹತ್ಯೆ ಮಾಡಿದ್ದಾಳೆ. ಬಳಿಕ ತಾನೂ ಕೂಡ ರೂಮಿನ ಕಿಟಕಿಯ ಕಬ್ಬಿಣದ ಸರಳಿಗೆ ಸೀರೆಯಿಂದ ಕಟ್ಟಿ ಮತ್ತೊಂದು ತುದಿಯಿಂದ ಕುತ್ತಿಗೆಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮಂಗಳೂರು ದಕ್ಷಿಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ.