ಜುಗಾರಿ ಅಡ್ಡೆ, ವಿಡಿಯೋ ಗೇಮ್, ಸ್ಕಿಲ್ ಗೇಮ್ ಗಳಂತಹ ಜೂಜುಕೇಂದ್ರಗಳನ್ನು ಶಾಶ್ವತವಾಗಿ ಮುಚ್ಚಲು ಒತ್ತಾಯಿಸಿ ಇಂದು ಡಿವೈಎಫ್ಐ ಕಾರ್ಯಕರ್ತರು ನಗರ ಹೃದಯ ಭಾಗದಲ್ಲಿ ಕಾರ್ಯಾಚರಿಸುತ್ತಿದ್ದ ಜೂಜು ಕೇಂದ್ರಗಳಿಗೆ ಮುತ್ತಿಗೆ ಹಾಕಿ ಪ್ರತಿಭಟಿಸಿ ಬಾಗಿಲು ಮುಚ್ಚಿಸಿದರು.
ಮಂಗಳೂರು : ಮಂಗಳೂರು ಪೊಲೀಸ್ ಕಮೀಷನರೇಟ್ ವ್ಯಾಪ್ತಿಯೊಳಗೆ ದಿನೇ ದಿನೇ ಸ್ಕಿಲ್ ಗೇಮ್, ವಿಡಿಯೋ ಗೇಮ್, ಜುಗಾರಿ ಅಡ್ಡೆಗಳು ರಾಜಾರೋಷವಾಗಿ ಕಾರ್ಯಾಚರಿಸುತ್ತಿವೆ.
ಈ ಹಿನ್ನೆಲೆಯಲ್ಲಿ ಜುಗಾರಿ ಅಡ್ಡೆ, ವಿಡಿಯೋ ಗೇಮ್, ಸ್ಕಿಲ್ ಗೇಮ್ ಗಳಂತಹ ಜೂಜುಕೇಂದ್ರಗಳನ್ನು ಶಾಶ್ವತವಾಗಿ ಮುಚ್ಚಲು ಒತ್ತಾಯಿಸಿ ಇಂದು ಡಿವೈಎಫ್ಐ ಕಾರ್ಯಕರ್ತರು ನಗರ ಹೃದಯ ಭಾಗದಲ್ಲಿ ಕಾರ್ಯಾಚರಿಸುತ್ತಿದ್ದ ಜೂಜು ಕೇಂದ್ರಗಳಿಗೆ ಮುತ್ತಿಗೆ ಹಾಕಿ ಪ್ರತಿಭಟಿಸಿ ಬಾಗಿಲು ಮುಚ್ಚಿಸಿದರು.
ರಿಕ್ರಿಯೇಶನ್ ಕ್ಲಬ್ ನ ಹೆಸರಿನಲ್ಲಿ ಜೂಜು ಕೇಂದ್ರಗಳನ್ನು ನಡೆಸಿ ಮೋಸದಾಟಕ್ಕೆ ಜನರನ್ನು ಬಲಿಪಡೆಯುತ್ತಿದೆ.
ನಗರದ ಸಣ್ಣ ವ್ಯಾಪಾರಿಗಳು , ಕಾರ್ಮಿಕರು ,ವಿದ್ಯಾರ್ಥಿಗಳನ್ನು ಒಳಗೊಂಡಂತೆ ಬಡ ಮಧ್ಯಮ ವರ್ಗದ ಕೂಲಿ ಕಾರ್ಮಿಕರನ್ನು ಈ ಅಡ್ಡೆ ಗುರಿಯಾಗಿಸಿ ಜನರ ದುಡಿಮೆಯ ಹಣವನ್ನು ದೋಚುವ ಕಾರ್ಯದಲ್ಲಿ ತೊಡಗಿದೆ.
ಈ ಮೋಸದಾಟಕ್ಕೆ ಸಿಲುಕಿದ ಬಹಳಷ್ಟು ಕುಟುಂಬಗಳು ತಮ್ಮ ಮನೆ, ಮಠ ಅಮೂಲ್ಯ ಸೊತ್ತುಗಳನ್ನು ಕಳಕೊಂಡು ಬೀದಿಗೆ ಬಿದ್ದಿವೆ.
ಇಂತಹ ಅಕ್ರಮ ಜೂಜು ಕೇಂದ್ರಗಳ ವಿರುದ್ಧ ಸಾರ್ವಜನಿಕರು ಬಹಳಷ್ಟು ವಿರೋಧ ವ್ಯಕ್ತಪಡಿಸಿದರೂ ಸ್ಥಳೀಯ ಠಾಣೆಗಳು ಯಾವುದೇ ಕ್ರಮ ಕೈಗೊಂಡಿಲ್ಲ.
ಬರೀ ತೋರಿಕೆಗಷ್ಟೆ ಬಂದ್ ಮಾಡುವ ನಾಟಕ ಮಾಡಿ ಮತ್ತೆ ಕೆಲದಿನದ ನಂತರ ಯಥಾ ಸ್ಥಿತಿಯಾಗಿ ಜೂಜು ಕೇಂದ್ರಗಳು ಕಾರ್ಯಾಚರಿಸುತ್ತವೆ.
ಈ ಹಿನ್ನೆಲೆಯಲ್ಲಿ ಜುಗಾರಿ ಅಡ್ಡೆ, ವಿಡಿಯೋ ಗೇಮ್, ಸ್ಕಿಲ್ ಗೇಮ್ ಗಳಂತಹ ಜೂಜುಕೇಂದ್ರಗಳನ್ನು ಶಾಶ್ವತವಾಗಿ ಮುಚ್ಚಲು ಒತ್ತಾಯಿಸಿ ಇಂದು ಡಿವೈಎಫ್ಐ ಕಾರ್ಯಕರ್ತರು ನಗರ ಹೃದಯ ಭಾಗದಲ್ಲಿ ಕಾರ್ಯಾಚರಿಸುತ್ತಿದ್ದ ಜೂಜು ಕೇಂದ್ರಗಳಿಗೆ ಮುತ್ತಿಗೆ ಹಾಕಿ ಪ್ರತಿಭಟಿಸಿ ಬಾಗಿಲು ಮುಚ್ಚಿಸಿದರು.
ಈ ವೇಳೆ DYFI ನ ಜಿಲ್ಲಾಧ್ಯಕ್ಷರಾದ ಬಿ.ಕೆ ಇಂಮ್ತಿಯಾಜ್, ಜಿಲ್ಲಾ ಕಾರ್ಯದರ್ಶಿ ಸಂತೋಷ್ ಬಜಾಲ್, ಜಿಲ್ಲಾ ಕೋಶಾಧಿಕಾರಿ ಮನೋಜ್ ವಾಮಂಜೂರ್, ನವೀನ್ ಕೊಂಚಾಡಿ, ಹನೀಫ್ ಬೇಂಗ್ರೆ, ಮುಸ್ತಫ ಕಲ್ಲಕಟ್ಟೆ, ರಿಯಾಬ್, ಆಸೀಫ್, ಸಾಧಿಕ್ ಮುಂತಾದವರು ಉಪಸ್ಥಿತರಿದ್ದರು.
ಬಂಟ್ವಾಳ: ಬೈಕ್ ಗಳ ನಡುವೆ ಭೀ*ಕರ ಅ*ಪಘಾ*ತ ಸಂಭವಿಸಿ ಬೈಕ್ ನಲ್ಲಿ ಸಹ ಪ್ರಯಾಣಿಕೆಯಾಗಿದ್ದ ಬಾಲಕಿ ಮೃ*ತಪಟ್ಟ ಘಟನೆ ಮಂಗಳೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ರಾಮಲ್ ಕಟ್ಟೆ ಎಂಬಲ್ಲಿ ನಿನ್ನೆ (ಜ.14) ರಾತ್ರಿ ನಡೆದಿದೆ.
ಕುಕ್ಕಿಪಾಡಿ ಗ್ರಾಮದ ಕೊಡಂಬೆಟ್ಟು ನಿವಾಸಿ ಇಸ್ಮತ್ ಆಯಿಶಾ (13) ಮೃ*ತ ಬಾಲಕಿ ಎಂದು ಗುರುತಿಸಲಾಗಿದೆ.
ಬಾಲಕಿಯ ತಂದೆ ಬೈಕ್ ಚಾಲಕ ಅಬ್ದುಲ್ ರಹಮಾನ್ ಕೂಡ ಗಾ*ಯಗೊಂಡಿದ್ದು ಮಂಗಳೂರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ರಾಮಲ್ ಕಟ್ಟೆಯಿಂದ ಹೆದ್ದಾರಿಯಲ್ಲಿ ರಾಂಗ್ ಸೈಡ್ ನಲ್ಲಿ ಬಂದ ನೆತ್ತರಕೆರೆ ನಿವಾಸಿ ರಂಜಿತ್ ಎಂಬಾತ ಬಿ.ಸಿ ರೋಡಿನ ಕಡೆಯಿಂದ ತುಂಬೆ ಕಡೆಗೆ ಸರಿಯಾದ ದಿಕ್ಕಿನಲ್ಲಿ ಬರುತ್ತಿದ್ದ ಬೈಕ್ ಗೆ ಡಿ*ಕ್ಕಿ ಹೊಡೆದಿದ್ದಾನೆ. ರಂಜಿತ್ ಗೆ ಕೂಡ ಗಾ*ಯವಾಗಿದ್ದು, ಆಸ್ಪತ್ರೆಯಲ್ಲಿ ದಾಖಲಾಗಿದ್ದಾನೆ.
ಅ*ಪಘಾ*ತ ನಡೆದ ರಭಸಕ್ಕೆ ಬೈಕ್ ಸಂಪೂರ್ಣ ಜ*ಖಂಗೊಂಡಿದೆ. ಘಟನಾ ಸ್ಥಳಕ್ಕೆ ಪಾಣೆಮಂಗಳೂರು ಟ್ರಾಫಿಕ್ ಎಸ್.ಐ ಸುತೇಶ್ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಮಂಗಳೂರು : ನಗರದ ಜೈಲಿನಲ್ಲಿ ಕೈದಿಗಳು ಜೈಲು ಅಧಿಕಾರಿಗಳ ಕರ್ತವ್ಯಕ್ಕೆ ಅಡ್ಡಿ ಪಡಿಸಿ ಹ*ಲ್ಲೆಗೆ ಯತ್ನಿಸಿದ ಘಟನೆ ನಡೆದಿದ್ದು, ಬರ್ಕೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮಂಗಳೂರಿನ ಜಿಲ್ಲಾ ಕಾರಾಗೃಹದ ‘ಎ’ ಬ್ಲಾಕ್‌ನ ಸೆಲ್‌ಗಳಲ್ಲಿ ನಿಷೇಧಿತ ವಸ್ತುಗಳಿರುವ ಶಂಕೆಯ ಹಿನ್ನೆಲೆಯಲ್ಲಿ ಸೋಮವಾರ ರಾತ್ರಿ ಜೈಲು ಸಿಬಂದಿ ತಪಾಸಣೆಗೆ ತೆರಳಿದ್ದರು. ಈ ವೇಳೆ ವಿಚಾರಣಾಧೀನ ಕೈದಿಗಳು ಬೆದರಿಕೆಯೊಡ್ಡಿ ಕರ್ತವ್ಯಕ್ಕೆ ಅಡ್ಡಿ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ.
ಜೈಲಿನಲ್ಲಿ ಮೊಬೈಲ್, ಗಾಂಜಾ ಮೊದಲಾದ ನಿಷೇಧಿತ ವಸ್ತುಗಳಿರುವ ಶಂಕೆಯಿಂದ ಜೈಲು ಅಧೀಕ್ಷಕ ಎಂ.ಎಚ್.ಆಶೇಖಾನ್ ನೇತೃತ್ವದಲ್ಲಿ ತಪಾಸಣೆಗೆ ಮುಂದಾಗಿದ್ದರು. ಆಗ ಪಾತ್ರೆ ಮತ್ತಿತರ ವಸ್ತುಗಳಿಂದ ವಿಚಾರಣಾ ಕೈದಿಗಳು ಹಲ್ಲೆಗೆ ಮುಂದಾಗಿದ್ದಾರೆ. ಅಲ್ಲದೆ ಅ*ವಾಚ್ಯ ಶಬ್ದಗಳಿಂದ ಬೈ*ದು ಬೆದರಿಕೆ ಒಡ್ಡಿ ಕರ್ತವ್ಯಕ್ಕೆ ಅಡ್ಡಿಪಡಿಸಿದ್ದಾರೆ ಎಂದು ಬರ್ಕೆ ಪೊಲೀಸ್ ಠಾಣೆಗೆ ನೀಡಿದ ದೂರಿನಲ್ಲಿ ತಿಳಿಸಲಾಗಿದೆ.
ಮಂಗಳೂರು/ಬೆಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯ ಹಲವೆಡೆ ನಿನ್ನೆ ಸಂಜೆ ಮತ್ತು ರಾತ್ರಿ ಮಳೆಯಾಗಿದ್ದು, ಕೆಲವೆಡೆ ಮಳೆಗಾಲದಂತೆ ಜೋರಾಗಿ ಮಳೆಯಾಗಿದೆ.
ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದಾಗಿ ದಕ್ಷಿಣ ಕನ್ನಡ, ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಸಾಧಾರಣ ಮಳೆ ಆಗಿದ್ದು, ಇನ್ನೂ ಮುಂದಿನ 2 ದಿನ ಮಳೆಯಾಗಲಿದೆ ಎಂದ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕೊಮೊರಿನ್ ಪ್ರದೇಶ ಮತ್ತು ನೆರೆಹೊರೆಗಳಲ್ಲಿ ಚಂಡಮಾರುತದ ಪರಿಚಲನೆಯು ಈಗ ಅಗ್ನೇಯ ಅರೇಬಿಯನ್ ಸಮುದ್ರ ಮತ್ತು ಪಕ್ಕದ ಸಮಭಾಜಕ ವೃತ್ತದ ಹಿಂದೂ ಮಹಾಸಾಗರದ ಮೇಲೆ ಸರಾಸರಿ ಸಮುದ್ರ ಮಟ್ಟದಿಂದ 0.9 ಕಿ.ಮೀ. ಎತ್ತರದಲ್ಲಿದೆ. ಇದರಿಂದ ಕೆಲ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಇಲಾಖೆ ತಿಳಿಸಿದೆ.
ಯಾವ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ?
ಹಾಸನ, ಚಾಮರಾಜನಗರ, ಕೊಡಗು, ಮೈಸೂರು, ಚಿಕ್ಕಮಗಳೂರು, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳ ಕೆಲವೆಡೆ ಮಳೆಯಾಗುವ ಸಾಧ್ಯತೆ ಇದ್ದು, ಇನ್ನು ಉತ್ತರ ಒಳನಾಡಿನ ಪ್ರತ್ಯೇಕ ಸ್ಥಳಗಳಲ್ಲಿ ಮಂಜು ಬೀಳುವ ಸಾಧ್ಯತೆ ಇದೆ. ಜನವರಿ 20 ರವರೆಗೂ ಇದೇ ಹವಾಮಾನ ಮುಂದುವರಿಯಲಿದೆ.
ಮುಂದಿನ 24 ಗಂಟೆಗಳ ಕಾಲ ಬೆಂಗಳೂರು ಹಾಗೂ ನೆರೆಯ ಜಿಲ್ಲೆಗಳಲ್ಲಿ ಭಾಗಶಃ ಮೋಡ ಕವಿದ ವಾತಾವರಣ ಇರಲಿದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನ ಕ್ರಮವಾಗಿ 28 ಡಿ.ಸೆ ಮತ್ತು 20 ಡಿ. ಸೆ ಇರುವ ಸಾಧ್ಯತೆ ಇದ್ದು, ನಾಳೆಯೂ ಹೀಗೆ ಇರಲಿದೆ.
ಬೆಂಗಳೂರು ನಗರ ಸೇರಿದಂತೆ ದಕ್ಷಿಣ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಸೋಮವಾರ ಹಗುರ ಮಳೆಯಾಗಿದೆ. ವಿಜಯಪುರದಲ್ಲಿ ಕನಿಷ್ಠ ತಾಪಮಾನ 14.6 ಡಿ. ಸೆ ಹಾಗೂ ಉತ್ತರ ಕನ್ನಡ ಜಿಲ್ಲೆ ಹೊನ್ನಾವರದಲ್ಲಿ ಗರಿಷ್ಠ ತಾಪಮಾನ 32.8 ಡಿ. ಸೆ ದಾಖಲಾಗಿದೆ. ಇನ್ನು ಬೆಂಗಳೂರಿನಲ್ಲಿ ಇನ್ನೆರಡು ದಿನ 20 ಡಿಗ್ರಿ ಸೆಲ್ಸಿಯಸ್ ತಾಪಮಾನ ಮುಂದುವರಿಯುವ ಸಾಧ್ಯತೆ ಇದೆ.