Connect with us

DAKSHINA KANNADA

ಮಂಗಳೂರು: ರಾಜೇಶ್ ಪೂಜಾರಿ ಲಾಕಪ್ ಡೆತ್ ಪ್ರಕರಣದ ತನಿಖೆಗೆ ಡಿವೈಎಫ್ಐ ಆಗ್ರಹ

Published

on

ಮಂಗಳೂರು: ಬಂದರು ಪೊಲೀಸ್ ಠಾಣೆಯ ಲಾಕಪ್ ನಲ್ಲಿ ರಾಜೇಶ್ ಪೂಜಾರಿ (33) ಎಂಬ ಯುವಕ ಅನುಮಾನಾಸ್ಪದವಾಗಿ ಮೃತ ಪಟ್ಟಿರುವ ಪ್ರಕರಣ ಮುಚ್ಚಿಹಾಕಲು ವ್ಯವಸ್ಥಿತವಾದ ಯತ್ನ ನಡೆಯುತ್ತಿದೆ ಎಂದು ಡಿವೈಎಫ್ಐ ದಕ್ಷಿಣ ಕನ್ನಡ ಜಿಲ್ಲಾ ಸಮಿತಿ ಆರೋಪಿಸಿದೆ.


ಲಾಕಪ್ ಡೆತ್ ಎಂಬುದು ಅತಿ ಗಂಭೀರ ಘಟನೆಯಾಗಿರುವುದರಿಂದ ಈ ಪ್ರಕರಣವನ್ನು ಮಂಗಳೂರು ಕಮೀಷನರೇಟ್ ಹೊರಗಿನ ಅಧಿಕಾರಿಗಳ ತಂಡದಿಂದ ಸ್ವತಂತ್ರ ತನಿಖೆ ನಡೆಸುವ ಅಗತ್ಯವಿದ್ದು,

ಈ ಕುರಿತು ರಾಜ್ಯ ಸರಕಾರಕ್ಕೆ ಶಿಫಾರಸ್ಸು ಮಾಡುವಂತೆ ಮಂಗಳೂರು ಪೊಲೀಸ್ ಕಮೀಷನರ್ ಅವರಿಗೆ ಡಿವೈಎಫ್ಐ ದಕ್ಷಿಣ ಕನ್ನಡ ಜಿಲ್ಲಾ ಸಮಿತಿ ಮನವಿ ಸಲ್ಲಿಸಿದೆ.

ಇವರು ಎದೆನೋವಿನಿಂದ ಏಕಾಏಕಿ ಲಾಕಪ್‌ನಲ್ಲಿ ಮೃತ ಪಟ್ಟಿದ್ದಾನೆ ಎಂಬ ಪೊಲೀಸ್ ಇಲಾಖೆಯ ವಾದವನ್ನು ನಂಬಲು ಸಾಧ್ಯವಿಲ್ಲ, ಠಾಣೆಯಲ್ಲಿ ಪೊಲೀಸರು ನೀಡಿದ ಹಿಂಸೆಯಿಂದ ಸಾವು ಸಂಭವಿಸಿರುವ ಅನುಮಾನ ಸಾರ್ವಜನಿಕವಾಗಿ ವ್ಯಕ್ತವಾಗುತ್ತಿದೆ.

ಪೊಲೀಸರ ವಾದದ ಪ್ರಕಾರ ಮಧ್ಯರಾತ್ರಿಯಲ್ಲಿ ಅನುಮಾನಾಸ್ಪದವಾಗಿ ತಿರುಗಾಡುತ್ತಿದ್ದ ರಾಜೇಶ್ ನನ್ನು ಆತನ ಗೆಳೆಯನ ಜೊತೆ ಬಂಧಿಸಲಾಗಿದೆ ಎಂದು ಪೊಲೀಸರ ಹೇಳಿಕೆಯಲ್ಲಿ ತಿಳಿಸಲಾಗಿದೆ.

ಈ ಹಿಂದೆ ಅಂತಹ ಕ್ರಿಮಿನಲ್ ಪ್ರಕರಣದಲ್ಲಿ ಭಾಗಿಯಾದ ಆರೋಪಗಳಿಲ್ಲದ ಬಂಧಿತರನ್ನು ಮರು ದಿವಸ ಸಾಯಂಕಾಲದವರೆಗೂ ಠಾಣೆಯಲ್ಲಿ ಕೂರಿಸುವ ಅಗತ್ಯ ಏನಿತ್ತು ? ಎಫ್ಐಆರ್ ದಾಖಲಾದದ್ದು ಯಾವಾಗ ? ವೈದ್ಯರು ನೀಡಿದ ಮಾಹಿತಿ ಪ್ರಕಾರ ಆಸ್ಪತ್ರೆಗೆ ತಲುಪುವಾಗಲೇ ರಾಜೇಶ್ ಮೃತಪಟ್ಟಿದ್ದಾಗಿ ವರದಿಯಾಗಿದೆ.

ಆಸ್ಪತ್ರೆಗಳಿಂದ ಕೂದಲೆಳೆಯ ದೂರದಲ್ಲಿರುವ ಬಂದರು ಠಾಣೆಯಿಂದ ಹೃದಯ ನೋವಿಗೆ ಗುರಿಯಾದ ವ್ಯಕ್ತಿಯನ್ನು ಆಸ್ಪತ್ರೆಗೆ ತಲುಪಿಸಲು ಅಷ್ಟು ತಡವಾಗಲು ಕಾರಣ ಏನು ?

ಮೊದಲು ಸಾವಿನ ಕುರಿತು ಅನುಮಾನ ವ್ಯಕ್ತಪಡಿಸಿದ ರಾಜೇಶ್ ಕುಟುಂಬಿಕರು ಈಗ ಮೌನವಾಗಿರುವಂತೆ ಮಾಡಿದ ಶಕ್ತಿಗಳು ಯಾವುದು ?

ಎಂಬ ಸಾಲು ಸಾಲು ಪ್ರಶ್ನೆಗಳು ಬಂದರು ಠಾಣೆಯ ಲಾಕಪ್ ಡೆತ್ ಪ್ರಕರಣದಿಂದ ಸಾರ್ವಜನಿಕರ ಮಧ್ಯೆ ಉದ್ಭವವಾಗಿದೆ.
ಇದೀಗ ಪ್ರಕರಣ ಮುಚ್ಚಿ ಹಾಕಲು ವ್ಯವಸ್ಥಿತ ಹುನ್ನಾರ ನಡೆಯುತ್ತಿರುವ ಸುದ್ದಿ ಹರಿದಾಡುತ್ತಿದೆ.

ಲಾಕಪ್ ಡೆತ್‌ನಂತಹ ಗಂಭೀರ ಪ್ರಕರಣ ಪೊಲೀಸ್ ಇಲಾಖೆಗೆ ಕಳಂಕವಾಗಿದೆ. ಈ ಎಲ್ಲಾ ಅನುಮಾನಗಳ ಕಾರಣಕ್ಕೆ ಪ್ರಕರಣದ ತನಿಖೆಯನ್ನು ಸ್ವತಂತ್ರ ತನಿಖಾ ತಂಡ ನಡೆಸುವ ಅಗತ್ಯ ಇದೆ.

ಆ ಹಿನ್ನಲೆಯಲ್ಲಿ ಮಂಗಳೂರು ಕಮಿಷನರೇಟ್ ನಿಂದ ಹೊರಗಡೆಯ ಅಧಿಕಾರಿಗಳ ಸ್ವತಂತ್ರ ತಂಡಕ್ಕೆ ರಾಜೇಶ್ ಪೂಜಾರಿ ಲಾಕಪ್ ಡೆತ್ ಪ್ರಕರಣ ವರ್ಗಾಯಿಸಬೇಕಾಗಿದೆ.

ಆ ನಿಟ್ಟಿನಲ್ಲಿ ರಾಜ್ಯ ಸರಕಾರಕ್ಕೆ ಶಿಫಾರಸ್ಸು ಮಾಡುವಂತೆ ಡಿವೈಎಫ್ಐ ಮಂಗಳೂರು ಪೊಲೀಸ್ ಕಮೀಷನರ್ ರಿಗೆ ನೀಡಿದ ಮನವಿಯಲ್ಲಿ ವಿನಂತಿಸಿದೆ.

ಮನವಿ ನೀಡಿದ ನಿಯೋಗದಲ್ಲಿ ಡಿವೈಎಫ್ಐ ರಾಜ್ಯಾಧ್ಯಕ್ಷ ಮುನೀರ್ ಕಾಟಿಪಳ್ಳ, ಸಿಪಿಐಎಂ ನಾಯಕ ಸುನಿಲ್ ಕುಮಾರ್ ಬಜಾಲ್, ಡಿವೈಎಫ್ಐ ಜಿಲ್ಲಾಧ್ಯಕ್ಷ ಬಿ ಕೆ ಇಮ್ತಿಯಾಜ್, ಕಾರ್ಯದರ್ಶಿ ಸಂತೋಷ್ ಬಜಾಲ್ ಉಪಸ್ಥಿತರಿದ್ದರು.

 

Click to comment

Leave a Reply

Your email address will not be published. Required fields are marked *

BANTWAL

ಮತ ಚಲಾಯಿಸಿದ ನವ ದಂಪತಿ…! ಶುಭ ಹಾರೈಸಿದ ಸ್ನೇಹಿತರು..!

Published

on

ಮಂಗಳೂರು : ಇಂದು ಹೊಸ ಬಾಳಿಗೆ ಕಾಲಿಡುತ್ತಿದ್ದ ಆ ಜೋಡಿಗಳು ಹೊಸ ಬಾಳಿನ ಚಿಂತನೆಯ ಜೊತೆಗೆ ದೇಶದ ಚಿಂತನೆಯನ್ನೂ ಮಾಡಿದ್ದಾರೆ. ಮದುವೆಯ ಸಮಾರಂಭದಲ್ಲಿ ಹಸಮಣೆ ಏರಿ ಪತಿ ಪತ್ನಿಯರಾಗಿ ಒಂದಾದ ಜೋಡಿ ಎಲ್ಲಾ ಸಂಪ್ರದಾಯಗಳು ಪೂರ್ಣಗೊಂಡ ತಕ್ಷಣ ಮದುವೆ ಮನೆಯಿಂದ ಹೊರ ನಡೆದಿದ್ದಾರೆ. ಮದುವೆ ಮನೆಯಿಂದ ಬಂದವರೇ ನೇರವಾಗಿ ಮತಗಟ್ಟೆಗೆ ಹೋಗಿ ತಮ್ಮ ಹಕ್ಕನ್ನು ಚಲಾಯಿಸಿದ್ದಾರೆ.

ಹೌದು ಇದು ನಡೆದಿರುವುದು ಬಂಟ್ವಾಳ ತಾಲೂಕಿನ ಅಜ್ಜಿಬೆಟ್ಟು ಗ್ರಾಮದ ಬೂತ್ ಸಂಖ್ಯೆ 16 ರಲ್ಲಿ . ಇವರ ಮದುವೆ ನಿಗದಿಯಾದ ದಿನಂದಂತೆ ಪ್ರಜಾಪ್ರಭುತ್ವದ ಹಬ್ಬವಾಗಿರೋ ಚುನಾವಣೆ ದಿನಾಂಕ ಕೂಡಾ ಘೋಷಣೆ ಆಗಿದೆ. ಒಂದು ಕಡೆ ಹಸೆಮಣೆ ಏರಿ ತಮ್ಮ ಸ್ವಂತ ಭವಿಷ್ಯ ಕಟ್ಟಿಕೊಳ್ಳುವ ಜೊತೆಗೆ ದೇಶದ ಭವಿಷ್ಯವನ್ನೂ ಕಟ್ಟಲು ತಮ್ಮ ಅಮೂಲ್ಯ ಮತವನ್ನು ಚಲಾಯಿಸಿ ಮಾದರಿಯಾಗಿದ್ದಾರೆ. ಬಂಟ್ವಾಳ ತಾಲೂಕಿನ ಮಲ್ಲೆರ್ಮಳಕೋಡಿ ಜಯರಾಮ ಕುಲಾಲ್ ಎಂಬ ವರ ವದುವಿವೊಂದಿಗೆ ಬಂದು ತನ್ನ ಮತ ಚಲಾಯಿಸಿದ್ದಾರೆ. ಇವರಿಬ್ಬರ ಈ ಕಾಳಜಿಗೆ ಜನರು ಹಾಗೂ ಮತಗಟ್ಟೆ ಅಧಿಕಾರಿಗಳು ಶುಭ ಹಾರೈಸಿದ್ದಾರೆ. ಇದೇ ವೇಳೆ ಜಯರಾಮ್ ಕುಲಾಲ್ ಅವರ ಸ್ನೇಹಿತರು ಹಿತೈಷಿಗಳು ಕೂಡಾ ಶುಭ ಹಾರೈಸಿದ್ದಾರೆ.

Continue Reading

DAKSHINA KANNADA

ಮತದಾನ ಮಾಡುವ ಫೋಟೊ ಕ್ಲಿಕ್ಕಿಸಿ ಶೇರ್ ಮಾಡಿದ ಯುವಕ; ಎಫ್ ಐ ಆರ್ ದಾಖಲಿಸಿದ ಚುನಾವಣಾ ಆಯೋಗ

Published

on

ಪುತ್ತೂರು : ಮತಗಟ್ಟೆಯೊಳಗೆ ಮೊಬೈಲ್ ಗೆ ನಿರ್ಬಂಧ ವಿಧಿಸಿದರೂ ಕಾನೂನು ಉಲ್ಲಂಘನೆಯಾಗಿರುವ ಘಟನೆ ಪುತ್ತೂರಿನ ಮತಗಟ್ಟೆಯೊಂದರಲ್ಲಿ ನಡೆದಿದೆ. ಮತದಾನ ಮಾಡುವ ಫೋಟೊ ಕ್ಲಿಕ್ಕಿಸಿ ಗ್ರೂಪ್ ಗೆ ಶೇರ್ ಮಾಡಿದ ಯುವಕನ ವಿರುದ್ಧ ಆಕ್ರೋಶ ಕೇಳಿ ಬಂದಿತ್ತು.

ಪುತ್ತೂರಿನ ಕೋಟಿ-ಚೆನ್ನಯ ಕಂಬಳ ಗ್ರೂಪ್ ಗೆ ಮತದಾನ ಮಾಡುವ ಫೋಟೊವನ್ನು ರಂಜಿತ್ ಬಂಗೇರ ಎಂಬ ಯುವಕ ಶೇರ್ ಮಾಡಿರುವ ಬಗ್ಗೆ ತಿಳಿದು ಬಂದಿದೆ.

ಇದನ್ನೂ ಓದಿ : ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಕುಸಿದು ಬಿದ್ದು ಸಾ*ವು

ಕಾಂಗ್ರೆಸ್ ಅಭ್ಯರ್ಥಿಗೆ ಮತ ಹಾಕುವ ಫೋಟೊವನ್ನು ರಂಜಿತ್ ಬಂಗೇರ ಎಂಬ ಯುವಕ ತೆಗೆದಿದ್ದಾನೆ.  ಇದೀಗ ಈ ಘಟನೆಗೆ ಸಂಬಂಧಿಸಿದಂತೆ ಚುನಾವಣಾ ಆಯೋಗದಿಂದ ಎಫ್ ಐ ಆರ್ ದಾಖಲಾಗಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ / ಜಿಲ್ಲಾ ಚುನಾವಣಾಧಿಕಾರಿ ಮುಲೈ ಮುಗಿಲನ್ ಮಾಹಿತಿ ನೀಡಿದ್ದಾರೆ.

Continue Reading

DAKSHINA KANNADA

ಬೈಕ್-ಕಾರು ನಡುವೆ ಅಪ*ಘಾತ; ಓರ್ವ ಮೃ*ತ್ಯು

Published

on

ಅರಂತೋಡು: ಬೈಕ್ ಹಾಗೂ ಕಾರಿನ ನಡುವೆ ಸಂಭವಿಸಿದ ಭೀಕರ ರಸ್ತೆ ಅಪ*ಘಾತದಲ್ಲಿ ಬೈಕ್‌ನ ಹಿಂಬದಿ ಸವಾರ ಮೃ*ತಪಟ್ಟ ಘಟನೆ ಸಂಪಾಜೆ ಕಲ್ಲುಗುಂಡಿ ಸಮೀಪ ದೊಡ್ಡಡ್ಕ ಎಂಬಲ್ಲಿ ಗುರುವಾರ ತಡರಾತ್ರಿ ಸಂಭವಿಸಿದೆ.


ಮತದಾನ ಮಾಡಲು ಊರಿಗೆ ಬರುತ್ತಿದ್ದರು ಎಂದು ಹೇಳಲಾಗುತ್ತಿದ್ದು ಡಿ*ಕ್ಕಿಯ ರಭಸಕ್ಕೆ ಬೈಕ್‌ನ ಹಿಂಬದಿ ಸವಾರನಿಗೆ ಗಂಭೀರ ಗಾಯಗೊಂಡು ಮೃ*ತಪಟ್ಟರೆ ಇನ್ನೋರ್ವನಿಗೆ ಗಾಯವಾಗಿದ್ದು ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಮೃ*ತರ ವಿವರ ಇನ್ನಷ್ಟೇ ತಿಳಿದುಬರಬೇಕಾಗಿದೆ.

Continue Reading

LATEST NEWS

Trending