Wednesday, October 5, 2022

ಮಂಗಳೂರು: ಶ್ರೀಲಂಕಾದಲ್ಲಿ ಆರ್ಥಿಕ ಬಿಕ್ಕಟ್ಟು-ಕರಾವಳಿಯಲ್ಲಿ ಹೈ ಅಲರ್ಟ್

ಮಂಗಳೂರು: ದ್ವೀಪರಾಷ್ಟ್ರ ಶ್ರೀಲಂಕಾದಲ್ಲಿ ಆರ್ಥಿಕ ಬಿಕ್ಕಟ್ಟು, ಅರಾಜಕತೆ ಉಂಟಾಗಿರುವುದರಿಂದ ಅಲ್ಲಿನ ಜನ ಅಕ್ರಮವಾಗಿ ಸಮುದ್ರ ಮಾರ್ಗದ ಮೂಲಕ ಭಾರತಕ್ಕೆ ನುಸುಳುವ ಸಾಧ್ಯತೆ ಇದೆ.

ಈ ಸಂಬಂಧ ಕರಾವಳಿ ತಟ ರಕ್ಷಣಾ ಪಡೆಯನ್ನು ಸನ್ನದ್ದ ಗೊಳಿಸಲಾಗಿದ್ದು ಸಮುದ್ರದಲ್ಲಿ ಸಂಚರಿಸುವ ಹಡಗು, ನೌಕೆಗಳ ಮೇಲೆ ಮತ್ತು ಹೊರ ದೇಶಗಳ ಮೀನುಗಾರರ ಮೇಲೆ ತೀವ್ರ ನಿಗಾ ಇರಿಸಲಾಗಿದೆ. ಜೊತೆಗೆ ರಾಜ್ಯದ ಕರಾವಳಿ ಕಾವಲು ಪೊಲೀಸ್ ದಳವೂ ಕಟ್ಟೆಚ್ಚರ ವಹಿಸುತ್ತಿದ್ದು ಮೀನುಗಾರು ಸೇರಿ ತೀರದ ನಿವಾಸಿಗಳಿಗೆ ನೋಡಿಸ್ ಜಾರಿ ಮಾಡಿದೆ.


ದೇಶದಲ್ಲಿ ತೀವ್ರ ಆರ್ಥಿಕ ಬಿಕ್ಕಟ್ಟು ಉಂಟಾಗಿರುವುದರಿಂದ ವಿದ್ಯುತ್​, ಔಷಧ, ಆಹಾರ ಪದಾರ್ಥಗಳಿಗಾಗಿ ಪರದಾಟ ನಡೆಯುತ್ತಿದೆ. ಅಲ್ಲಿನ ಜನರು ಕೊಲೆ, ದರೋಡೆ, ಕಲಹದಿಂದ ತತ್ತರಿಸಿದ್ದು, ಸಮುದ್ರ ಸೇರಿದಂತೆ ಇನ್ನಿತರೆ ಮಾರ್ಗಗಳ ಮೂಲಕ ಭಾರತಕ್ಕೆ ಅಕ್ರಮವಾಗಿ ನುಸುಳುವ ಸಾಧ್ಯತೆ ಇದೆ.

ಈ ಹಿನ್ನೆಲೆಯಲ್ಲಿ ಜಾಗ್ರತೆ ವಹಿಸುವಂತೆ ಮಂಗಳೂರಿನ ಕರಾವಳಿ ಕಾವಲು ಪೊಲೀಸ್ ಠಾಣೆ ತಿಳಿಸಿದೆ. ನೋಟಿಸ್ ನೀಡಿದ ಕರಾವಳಿ ಕಾವಲು ಪೊಲೀಸ್ ಠಾಣೆ ಅಪರಿಚಿತ ವ್ಯಕ್ತಿಗಳಿಗೆ ಮನೆ ಬಾಡಿಗೆ ನೀಡುವ ಸಮಯದಲ್ಲಿ ಅವರುಗಳ ಪೂರ್ವಾಪರ ಮಾಹಿತಿ ತಿಳಿದು, ಸೂಕ್ತ ದಾಖಲೆಯನ್ನು ಪಡೆದು ಕೂಡಲೇ ಪೊಲೀಸ್ ಠಾಣೆಗೆ‌ ಮಾಹಿತಿ ನೀಡುವಂತೆ ಸೂಚಿಸಲಾಗಿದೆ.

ಜೊತೆಗೆ ಕರಾವಳಿ ಪೊಲೀಸ್ ಠಾಣೆಯು ಮಂಗಳೂರಿನ ಮೀನುಗಾರರು,‌ ರಿಕ್ಷಾ ಚಾಲಕರು ಸೇರಿದಂತೆ ವಿವಿಧೆಡೆ ಎಚ್ಚರಿಕೆಯ ನೋಟಿಸ್ ನೀಡಿದೆ‌.

LEAVE A REPLY

Please enter your comment!
Please enter your name here

Hot Topics

ಉಡುಪಿಯಲ್ಲಿ ಬೋನಿಗೆ ಬಿದ್ದ ಚಿರತೆ: ಮತ್ತೆ ಕಾಡಿಗೆ ಬಿಟ್ಟ ಅರಣ್ಯ ಸಿಬ್ಬಂದಿ

ಉಡುಪಿ: ಜಿಲ್ಲೆಯ ಮಟಪಾಡಿ ಗ್ರಾಮದಲ್ಲಿ ಊರಿನ ಜನರು ಅರಣ್ಯ ಇಲಾಖೆ ಮೂಲಕ ಇರಿಸಿದ್ದ ಬೋನಿಗೆ ಚಿರತೆ ಬಿದ್ದಿದೆ.ಮಟಪಾಡಿ ಗ್ರಾಮದಲ್ಲಿ ಬಹಳಷ್ಟು ದಿನಗಳಿಂದ ಚಿರತೆ ಹಾವಳಿ ಹೆಚ್ಚಾಗಿದ್ದರಿಂದ ಗ್ರಾಮಸ್ಥರು ಅರಣ್ಯ ಇಲಾಖೆ ಮೂಲಕ ಬೋನನ್ನು...

ಮಹಾನವಮಿ ಸಂಭ್ರಮ: ಕಟೀಲು ಕ್ಷೇತ್ರದಲ್ಲಿ ಮಹಾ ರಂಗ ಪೂಜೆ

ಮಂಗಳೂರು: ಪುರಾಣ ಪ್ರಸಿದ್ಧ ಕಟೀಲು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ ಮಹಾನವಮಿ ಪ್ರಯುಕ್ತ ಮಹಾ ರಂಗ ಪೂಜೆ ನಡೆಯಿತು. ಆರು ನೂರಕ್ಕೂ ಹೆಚ್ಚು ವಿಶಿಷ್ಟ ಆರತಿಗಳಿಂದ ಸುಮಾರು ಒಂದೂಕಾಲು ಗಂಟೆಗಳ ಕಾಲ ನಡೆದ ಮಹಾಪೂಜೆಯನ್ನು...

ಎಲ್‌ಇಡಿ ಟಿ.ವಿ ಬ್ಲಾಸ್ಟ್‌..! : ಬಾಲಕ ಸಾವು-ಮನೆ ಗೋಡೆ ಕುಸಿತ

ಲಕ್ನೋ: ಎಲ್‌ಇಡಿ ಟಿ.ವಿ ಸ್ಪೋಟಗೊಂಡ ಪರಿಣಾಮ ಬಾಲಕನೊಬ್ಬ ಸಾವನಪ್ಪಿರುವ ಘಟನೆ ಉತ್ತರ ಪ್ರದೇಶದ ಗಾಜಿಯಾಬಾದ್‌ನಲ್ಲಿ ನಡೆದಿದೆ.ಮೃತ ಬಾಲಕನನ್ನು ಓಮೇಂದ್ರ (16) ಎಂದು ಗುರುತಿಸಲಾಗಿದೆ. ಮನೆಯಲ್ಲಿ ಟಿವಿ ನೋಡುತ್ತಿದ್ದ ಸಂದರ್ಭ ಎಲ್ ಐಡಿ ಟಿವಿ...