Connect with us

DAKSHINA KANNADA

ಮಂಗಳೂರು ಆಯುಕ್ತ ಕಚೇರಿಯಲ್ಲಿ Ecosystem ಅಭಿಯಾನ ಪೋಸ್ಟರ್ ಬಿಡುಗಡೆ

Published

on

ಮಂಗಳೂರು: ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ಮಂಗಳೂರು ನಗರ ಸಮಿತಿ ವತಿಯಿಂದ ಮಂಗಳೂರು ಆಯುಕ್ತರ ಕಚೇರಿಯಲ್ಲಿ ಪೋಲಿಸ್ ಉಪ ಆಯುಕ್ತರು Think Green – Restore Ecosystem ಎಂಬ ಅಭಿಯಾನದ ಪೋಸ್ಟರ್ ಬಿಡುಗಡೆಗೊಳಿಸುವ ಮೂಲಕ ಚಾಲನೆ ನೀಡಲಾಯಿತು.


ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ವಿದ್ಯಾರ್ಥಿಗಳಲ್ಲಿ, ಯುವಜನತೆಯಲ್ಲಿ ಪರಿಸರದ ಬಗ್ಗೆ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಅಭಿಯಾನವನ್ನು ಹಮ್ಮಿಕೊಳ್ಳಲಾಯಿತು.

ಅಭಿಯಾನದಲ್ಲಿ ವಿಚಾರ ಸಂಕಿರಣ, ಗಿಡ ನೆಡುವುದು,ರೈತರೊಂದಿಗೆ ಸೆಲ್ಫಿ, ಜಾಗೃತಿ ಕಾರ್ಯಕ್ರಮಗಳು, ಸಾರ್ವಜನಿಕ ಸಂಪರ್ಕ ಮುಂತಾದ ಕಾರ್ಯಕ್ರಮಗಳು ನಡೆಯಲಿದೆ.

ಈ ಸಂದರ್ಭದಲ್ಲಿ ಕ್ಯಾಂಪಸ್ ಫ್ರಂಟ್ ಮಂಗಳೂರು ನಗರಾಧ್ಯಕ್ಷ ಶರ್ಫುಧ್ಧೀನ್ ಬಜ್ಪೆ, ಜಿಲ್ಲಾ ಮುಖಂಡ ಉಸಾಮ ಗಂಗೊಳ್ಳಿ , ಶಬೀರ್ ತನುಫ್ ಮತ್ತು ಶಾಹಿಲ್ ಉಪಸ್ಥಿತರಿದ್ದರು.

DAKSHINA KANNADA

UDUPI : ಕ್ರೈಸ್ತ ಧರ್ಮದ ಪ್ರಚಾರಕ್ಕೆ ಬಂದವರನ್ನು ಬಾ.. ಬಾ.. ಎಂದು ಅಟ್ಟಾಡಿಸಿಕೊಂಡು ಹೋದ ಸ್ಥಳೀಯ

Published

on

ಉಡುಪಿ : ಕ್ರೈಸ್ತ ಧರ್ಮದ ಪ್ರಚಾರಕ್ಕೆ ಬಂದವರನ್ನು ಸ್ಥಳೀಯರೊಬ್ಬರು ಅಟ್ಟಾಡಿಸಿಕೊಂಡು ಹೋದ ಘಟನೆ ಉಡುಪಿ ಜಿಲ್ಲೆ  ಬ್ರಹ್ಮಾವರ ತಾಲೂಕಿನ ಉಪ್ಪಿನಕೋಟೆ ಎಂಬಲ್ಲಿ ನಡೆದಿದೆ. ಘಟನೆಯ ದೃಶ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಇಬ್ಬರು ಮಹಿಳೆಯರು ಉಪ್ಪಿನಕೋಟೆಯ ಬಳಿ ಕ್ರೈಸ್ತ ಧರ್ಮದ ಬಗ್ಗೆ ಮಾಹಿತಿ ನೀಡುತ್ತಿದ್ದ ಸಂಧರ್ಭದಲ್ಲಿ ಸ್ಥಳೀಯ ವ್ಯಕ್ತಿಯೊಬ್ಬರು ಆಕ್ರೋಶಗೊಂಡಿದ್ದಾರೆ.

ಮತಾಂತರ ಮಾಡಲು ಬಂದಿದ್ದೀರ ಎಂದು ಆಕ್ರೋಶ ವ್ಯಕ್ತಪಡಿಸಿದ ಆತ ಬಳಿಕ ಕೋಲು ಹಿಡಿದು ಅವರನ್ನು ಓಡಿಸಿದ್ದಾರೆ. ಅವ್ಯಾಚ ಶಬ್ಧಗಳಿಂದ ನಿಂದಿಸಿ ಮಹಿಳೆಯರನ್ನು ಓಡಿಸಿದ್ದು, ಹೆದರಿ ಓಡಿದ ಮಹಿಳೆಯರನ್ನು ಬೆನ್ನು ಹತ್ತಿ ಇನ್ನೊಮ್ಮೆ ಈ ಭಾಗಕ್ಕೆ ಭಾರದಂತೆ ಎಚ್ಚರಿಕೆ ನೀಡಿದ್ದಾರೆ.

ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿರೋ ಈ ವಿಡಿಯೋ ಬಗ್ಗೆ ಸಾಕಷ್ಟು ಪರ ವಿರೋಧ ಅಭಿಪ್ರಾಯಗಳು ವ್ಯಕ್ತವಾಗಿದೆ.

Continue Reading

DAKSHINA KANNADA

ಶಿಬರೂರು ಶ್ರೀ ಕೊಡಮಣಿತ್ತಾಯ ಕ್ಷೇತ್ರದಲ್ಲಿ ನೂತನ ಧ್ವಜ ಮರ ಸ್ಥಾಪನೆ

Published

on

ಸುರತ್ಕಲ್‍: ಶ್ರೀ ಕೊಡಮಣಿತ್ತಾಯ ಕ್ಷೇತ್ರ ಶಿಬರೂರು ದೇಲಂತಬೆಟ್ಟು ಇಲ್ಲಿ ನೂತನ ಧ್ವಜಮರ ಸ್ಥಾಪನೆ ಫೆ. 21ರಂದು  ಜರಗಿತು.


ಶಿಬರೂರು ವೇದವ್ಯಾಸ ತಂತ್ರಿಗಳ ಪೌರೋಹಿತ್ಯದಲ್ಲಿ ಧಾರ್ಮಿಕ ವಿಧಿವಿಧಾನಗಳು,ಪೂಜೆ ನೆರವೇರಿದ ಬಳಿಕ ಧ್ವಜಮರವನ್ನು ಪುನರ್ ಸ್ಥಾಪಿಸಲಾಯಿತು.

ಇದೇ ಸಂದರ್ಭ ಎ.22ರಿಂದ 30ರವರೆಗೆ ನಡೆಯುವ ಬ್ರಹ್ಮಕುಂಭಾಭಿಷೇಕ, ನಾಗಮಂಡಲ ಹಾಗೂ ವಿಶೇಷ ಜಾತ್ರಾ ಮಹೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ ನಡೆಯಿತು.


ಉಮೇಶ್ ಗುತ್ತಿನಾರ್ ಶಿಬರೂರುಗುತ್ತು, ಜೀರ್ಣೋದ್ದಾರ ಸಮಿತಿ ಅಧ್ಯಕ್ಷ ಪ್ರಭಾಕರ ಶೆಟ್ಟಿ ಕೊಂಜಾಲಗುತ್ತು, ಪ್ರಮುಖರಾದ ಐಕಳ ಹರೀಶ್ ಶೆಟ್ಟಿ, ತೋನ್ಸೆ ಆನಂದ ಶೆಟ್ಟಿ, ಶಶಿರೇಖಾ ಶೆಟ್ಟಿ, ಸಿ.ಎ ಉದಯಕುಮಾರ್ ಶೆಟ್ಟಿ, ಉದಯ ಸುಂದರ್ ಶೆಟ್ಟಿ, ಯದುನಾರಾಯಣ ಶೆಟ್ಟಿ , ಸುಧಾಕರ ಪೂಂಜ ಸುರತ್ಕಲ್, ಸಿ.ಎ ಸುದೇಶ್ ಕುಮಾರ್ ರೈ, ಬಾಲಕೃಷ್ಣ ಕೊಠಾರಿ,ಪಾಲಿಕೆ ಸದಸ್ಯ ಲೋಕೇಶ್ ಬೊಳ್ಳಾಜೆ, ಕ್ಷೇತ್ರದ ಸಮಿತಿ ಪ್ರಮುಖರು, ಸಂಬಂಧಪಟ್ಟ ಗುತ್ತು ಮನೆತನದವರು , ಗ್ರಾಮಸ್ಥರು ಭಾಗವಹಿಸಿದ್ದರು

Continue Reading

DAKSHINA KANNADA

ಮಂಗಳೂರು : ಹಲವು ಕ್ರಿಮಿನಲ್ ಕೃತ್ಯದಲ್ಲಿ ಶಾಮೀಲಾಗಿದ್ದ ಕುಖ್ಯಾತ ಕಳ್ಳರಿಬ್ಬರ ಬಂಧನ

Published

on

ಮಂಗಳೂರು: ಹಲವು ಪ್ರಕರಣಗಳಲ್ಲಿ ಭಾಗಿಯಾಗಿ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಇಬ್ಬರು ಆರೋಪಿಗಳನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿ, ಕೊಣಾಜೆ ಪೊಲೀಸ್ ಠಾಣೆಗೆ ಹಸ್ತಾಂತರಿಸಿದ್ದಾರೆ. ನಾಟೆಕಲ್ ಸಮೀಪದ ಕಲ್ಕಟ್ಟ ಎಂಬಲ್ಲಿನ  ಅಬ್ದುಲ್ ಫಯಾನ್ (26) ಮತ್ತು ನರಿಂಗಾನ ಸಮೀಪದ ತೌಡುಗೋಳಿ ಕ್ರಾಸ್ ನಿವಾಸಿ ಮೊಯಿದ್ದೀನ್ ಹಫೀಸ್ ಯಾನೆ ಆಬಿ (47) ಬಂಧಿತ ಆರೋಪಿಗಳು.  ಅಬ್ದುಲ್ ಫಯಾನ್ ಎಂಬಾತನು ಕೊಣಾಜೆ, ಉಳ್ಳಾಲ, ಬಂಟ್ವಾಳ ನಗರ, ಬಂಟ್ವಾಳ ಗ್ರಾಮಾಂತರ, ಉಪ್ಪಿನಂಗಡಿ, ಕಡಬ ಪೊಲೀಸ್ ಠಾಣೆಗಳಲ್ಲಿನ ವಿವಿಧ ಕಡೆಗಳಲ್ಲಿ ಸರಕಾರಿ ಕಚೇರಿ, ಶಾಲೆ ಹಾಗೂ ಅಂಗಡಿಗಳಲ್ಲಿ ಕಳ್ಳತನ ಸಹಿತ 23 ಪ್ರಕರಣಗಳಲ್ಲಿ ಭಾಗಿಯಾಗಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.

ನ್ಯಾಯಾಂಗ ಬಂಧನದಲ್ಲಿದ್ದ ಈತನ ವಿರುದ್ಧ ಕಾರಾಗೃಹದೊಳಗೆ ಇತರ ಕೈದಿಗಳಿಗೆ ಹಲ್ಲೆ ನಡೆಸಿದ ಮತ್ತು ಜೈಲು ಸಿಬ್ಬಂದಿಯ ಕರ್ತವ್ಯಕ್ಕೆ ಅಡ್ಡಿಪಡಿಸಿ ಕೊಲೆಗೆ ಯತ್ನಿಸಿದ ಆರೋಪವೂ ಇದೆ. ನ್ಯಾಯಾಲಯದಿಂದ ಜಾಮೀನು ಪಡೆದು ಬಿಡುಗಡೆಗೊಂಡಿದ್ದ ಈತ ಕಳೆದ 2 ವರ್ಷದಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ. ಖಚಿತ ಮಾಹಿತಿ ಮೇರೆಗೆ ಸಿಸಿಬಿ ಪೊಲೀಸರು ಬೆಂಗಳೂರಿನಿಂದ ಈತನನ್ನು ಬಂಧಿಸಿದ್ದಾರೆ.

ಮೊಯಿದ್ದೀನ್ ಹಫೀಸ್ ಯಾನೆ ಆಬಿ ಕೊಣಾಜೆ, ಉಳ್ಳಾಲ, ಬಂದರ್, ಸುರತ್ಕಲ್, ಕಂಕನಾಡಿ ನಗರ ಹಾಗೂ ಸೆನ್ ಕ್ರೈಂ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮಾದಕ ವಸ್ತು ಮಾರಾಟ/ಸಾಗಾಟ ಸಹಿತ 10 ಪ್ರಕರಣಗಳಲ್ಲಿ ಭಾಗಿಯಾಗಿದ್ದ. ಪೊಲೀಸರಿಂದ ಬಂಧನಕ್ಕೊಳಗಾಗಿ ನ್ಯಾಯಾಲಯದಿಂದ ಜಾಮೀನಿನಲ್ಲಿ ಬಿಡುಗಡೆಗೊಂಡ ಬಳಿಕ ಈತ ಮತ್ತೆ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ. ಖಚಿತ ಮಾಹಿತಿಯ ಮೇರೆಗೆ ಈತನನ್ನು ಮಂಜೇಶ್ವರ ಸಮೀಪದ ಮೀಂಜದಿಂದ ಬಂಧಿಸಲಾಗಿದೆ.

 

Continue Reading

LATEST NEWS

Trending