ಚಂಡೀಘಡ: ವಿಜಯದಶಮಿ ನಿಮಿತ್ತ ಆಯೋಜಿಸಿದ್ದ ರಾವಣ ದಹನ ಕಾರ್ಯಕ್ರಮದ ವೇಳೆ ಸಂಭವಿಸಬಹುದಾಗಿದ್ದ ಭಾರಿ ದುರಂತವೊಂದು ಕೂದಲೆಳೆ ಅಂತರದಲ್ಲಿ ತಪ್ಪಿದೆ. ಹಲವರಿಗೆ ಸುಟ್ಟ ಗಾಯಗಳಾದ ಬಗ್ಗೆ ವರದಿಯಾಗಿದೆ.
ಹರ್ಯಾಣದ ಯಮುನಾನಗರದಲ್ಲಿ ಆಯೋಜಿಸಲಾಗಿದ್ದ ರಾವಣ ದಹನ ಕಾರ್ಯಕ್ರಮದ ವೇಳೆ ಬೆಂಕಿ ಹಚ್ಚಲಾಗಿದ್ದ ರಾವಣನ ದೊಡ್ಡ ಕಟೌಟ್ ವೊಂದು ನೆರೆದಿದ್ದವರ ಮೇಲೆ ಬಿದ್ದ ಘಟನೆ ಹರ್ಯಾಣದಲ್ಲಿ ನಡೆದಿದೆ.
ಹರ್ಯಾಣ ಯಮುನಾನಗರದಲ್ಲಿ ಸ್ಥಳೀಯರು ಆಯೋಜಿಸಿದ್ದ ರಾವಣ ದಹನ ಕಾರ್ಯಕ್ರಮದಲ್ಲಿ ಈ ಘಟನೆ ನಡೆದಿದ್ದು, ರಾವಣ ದಹನ ಬಳಿಕ ಬೆಂಕಿ ಹೊತ್ತಿಕೊಂಡಿದ್ದ ರಾವಣನ ಕಟೌಟ್ ನೋಡನೋಡುತ್ತಿದ್ದಂತೆಯೇ ಅಲ್ಲಿ ನೆರೆದಿದ್ದವರ ಮೇಲೆ ಬಿದ್ದಿದೆ.
ಘಟನೆಯಲ್ಲಿ ಹಲವರಿಗೆ ಸುಟ್ಟ ಗಾಯಗಳಾಗಿದ್ದು, ಸಾವಿನ ಬಗ್ಗೆ ವರದಿಯಾಗಿಲ್ಲ. ಈ ಕುರಿತ ವಿಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ವೈರಲ್ ಆಗುತ್ತಿದೆ.
Haryana: A major accident was averted during Ravan Dahan in Yamunanagar where the effigy of Ravana fell on the people gathered. Some people were injured. Further details awaited. pic.twitter.com/LkTSvTsaKD
— TIMES NOW (@TimesNow) October 5, 2022