LATEST NEWS
ಮೊದ್ಲು ಕಾಂಗ್ರೆಸ್ನಲ್ಲಿ ಇದ್ದವ, ಬಿಜೆಪಿಗೆ ಬಂದು ಸಿದ್ದು ಕಾರಿಗೆ ಮೊಟ್ಟೆ ಎಸೆದ..!
Published
2 years agoon
By
Adminಕುಶಾಲನಗರ: ಮಡಿಕೇರಿಯ ಕುಶಾಲ ನಗರ ಭೇಟಿ ವೇಳೆ ಸಿದ್ದರಾಮಯ್ಯ ಕಾರಿಗೆ ಎಸೆದ ವ್ಯಕ್ತಿ ಈ ಹಿಂದೆ ಕಾಂಗ್ರೆಸ್ನಲ್ಲಿದ್ದು, ಕಳೆದೆರಡು ವರ್ಷಗಳಿಂದ ಬಿಜೆಪಿಯಲ್ಲಿ ಸಕ್ರಿಯನಾಗಿದ್ದ ಎಂದು ತಿಳಿದು ಬಂದಿದೆ. ಆದರೆ ನಮ್ಮ ಸಕ್ರಿಯ ಕಾರ್ಯಕರ್ತನೇ ಅಲ್ಲಾ ಎಂದು ಸ್ಥಳೀಯ ಶಾಸಕ ಅಪ್ಪಚ್ಚು ರಂಜನ್ ಹೇಳಿಕೆ ನೀಡಿದ್ದಾರೆ.
ಕುಶಾಲ ನಗರದ ಗುಡ್ಡೆಹೊಸೂರಿನ ಸಂಪತ್ ಅಂದು ಸಿದ್ದರಾಮಯ್ಯ ಕಾರಿಗೆ ಮೊಟ್ಟೆ ಎಸೆದಿದ್ದರು. ತಕ್ಷಣ ಅಲ್ಲಿಯೇ ಇದ್ದ ಪೊಲೀಸ್ ಅಧಿಕಾರಿ ಅತನನ್ನು ವಶಕ್ಕೆ ಪಡೆದಿದ್ದರು.
ಈ ಹಿಂದೆ ಆತ ಕಾಂಗ್ರೆಸ್ನಲ್ಲಿದ್ದ, ಕಳೆದೆರಡು ವರ್ಷಗಳಿಂದ ಬಿಜೆಪಿಯಲ್ಲಿ ಸಕ್ರಿಯನಾಗಿದ್ದ ಎಂದು ತಿಳಿದು ಬಂದಿದೆ.
ಆದರೆ ಆದರೆ ಆತ ನಮ್ಮ ಕಾರ್ಯಕರ್ತನೇ ಅಲ್ಲ ಎಂದು ಶಾಸಕ ಅಪ್ಪಚ್ಚು ರಂಜನ್ ಸ್ಪಷ್ಟನೆ ನೀಡಿದ್ದಾರೆ. ಆತನ ತಂದೆ ಮಾತ್ರ 10 ವರ್ಷದ ಹಿಂದೆ ಬಿಜೆಪಿ ಕಾರ್ಯಕರ್ತರಾಗಿದ್ದರು ಎಂದು ಶಾಸಕರು ಇದೇ ವೇಳೆ ಹೇಳಿದ್ದಾರೆ.
International news
ಮಹತ್ವದ ನಿರ್ಧಾರ ಕೈಗೊಂಡ ಬೈಡನ್: 4.3 ಶತಕೋಟಿ ಡಾಲರ್ ವಿದ್ಯಾರ್ಥಿ ಸಾಲ ಮನ್ನಾ
Published
38 minutes agoon
22/12/2024By
NEWS DESK3ಮಂಗಳೂರು/ವಾಷಿಂಗ್ಟನ್: ಅಮೆರಿಕದ ಅಧ್ಯಕ್ಷ ಜೋ ಬೈಡನ್ ನಿವೃತ್ತಿಯಾಗುವುದಕ್ಕೂ ಮುನ್ನ ವಿದ್ಯಾರ್ಥಿ ಸಾಲವನ್ನು ಮನ್ನಾ ಮಾಡುವ ಮೂಲಕ ಮಹತ್ವದ ನಿರ್ಧಾರ ಕೈಗೊಂಡಿದ್ದಾರೆ.
ಇದನ್ನೂ ಓದಿ: ರಷ್ಯಾದ ಮೇಲೆ ಉಕ್ರೇನ್ ಡ್ರೋನ್ ದಾಳಿ; ಬೆಚ್ಚಿಬಿದ್ದ ಕಜಾನ್ ಜನತೆ !
4.28 ಶತಕೋಟಿ ಡಾಲರ್ ಮೊತ್ತದ ವಿದ್ಯಾರ್ಥಿ ಸಾಲವನ್ನು ಮನ್ನಾ ಮಾಡುವ ಯೋಜನೆಯನ್ನು ಅಧ್ಯಕ್ಷರು ಘೋಷಿಸಿದ್ದಾರೆ. ಇದರೊಂದಿಗೆ ವಿದ್ಯಾರ್ಥಿ ಸಾಲದಿಂದ ಮುಕ್ತರಾದವರ ಸಂಖ್ಯೆ ಸುಮಾರು 5 ದಶಲಕ್ಷಕ್ಕೆ ತಲುಪಿದೆ ಎಂದು ಶ್ವೇತಭವನದ ಹೇಳಿಕೆಯಲ್ಲಿ ತಿಳಿಸಿದೆ.
LATEST NEWS
ಅರೆಸ್ಟ್ ವಾರೆಂಟ್ ಬೆನ್ನಲ್ಲೇ ಮಾಜಿ ಕ್ರಿಕೆಟರ್ ರಾಬಿನ್ ಉತ್ತಪ್ಪ ಸ್ಪಷ್ಟನೆ !
Published
1 hour agoon
22/12/2024By
NEWS DESK3ಮಂಗಳೂರು/ಬೆಂಗಳೂರು: ಅರೆಸ್ಟ್ ವಾರೆಂಟ್ ಜಾರಿಯಾದ ಬೆನ್ನಲ್ಲೇ ಭಾರತ ಮಾಜಿ ಕ್ರಿಕೆಟರ್ ರಾಬಿನ್ ಉತ್ತಪ್ಪ ಅವರು ಸ್ಪಷ್ಟನೆ ಕೊಟ್ಟಿದ್ದಾರೆ. ಪ್ರಸ್ತುತ ಆರೋಪ ಕೇಳಿ ಬಂದಿರುವ ಕಂಪನಿಯ ನಿರ್ದೇಶಕ ಸ್ಥಾನಕ್ಕೆ ಕೆಲ ವರ್ಷಗಳ ಹಿಂದೆ ರಾಜೀನಾಮೆ ನೀಡಿದ್ದೆ ಎಂದು ಹೇಳಿದ್ದಾರೆ.
ಉದ್ಯೋಗಿಗಳಿಗೆ ಮತ್ತು ಸರ್ಕಾರಕ್ಕೆ ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಬಿನ್ ಉತ್ತಪ್ಪ ವಿರುದ್ಧ ಬಂಧನದ ವಾರೆಂಟ್ ಜಾರಿ ಮಾಡಲಾಗಿತ್ತು. ಇದೀಗ ಈ ವಿಚಾರವಾಗಿ ಮಾಧ್ಯಮ ಪ್ರಕಟನೆಯ ಮೂಲಕ ರಾಬಿನ್ ಉತ್ತಪ್ಪ ಸ್ಪಷ್ಟನೆ ನೀಡಿದ್ದು, ಆರೋಪ ಹೊತ್ತ ಕಂಪನಿಗೆ ಕೆಲ ವರ್ಷಗಳ ಹಿಂದೆಯೇ ನಾನು ರಾಜೀನಾಮೆ ನೀಡಿದ್ದೇನೆ. ಈ ಪ್ರಕರಣದಲ್ಲಿ ತಮ್ಮ ಪಾತ್ರವಿಲ್ಲ ಎಂದು ತಿಳಿಸಿದ್ದಾರೆ.
ಕ್ರಿಕೆಟರ್ ರಾಬಿನ್ ಉತ್ತಪ್ಪ ಅವರು ತಮ್ಮ ಮೇಲೆ ಬಂದಿರುವ ಆರೋಪ ಕುರಿತು ಪತ್ರಿಕಾ ಪ್ರಕಟಣೆ ಮೂಲಕ ಸ್ಪಷ್ಟನೆ ನೀಡಿದ್ದಾರೆ. ಕಂಪನಿಗಳಲ್ಲಿ ಉದ್ಯೋಗಿಗಳಿಗೆ ಬಾಕಿಯಿರುವ ಪಿಎಫ್ ಹಣ ಪಾವತಿಸುವಂತೆ ಒತ್ತಾಯಿಸಿ ಅಧಿಕಾರಿಗಳು ನೀಡಿರುವ ನೋಟಿಸ್ಗಳಿಗೆ ನನ್ನ ಕಾನೂನು ಸಲಹಾ ತಂಡ ಪ್ರತಿಕ್ರಿಯಿಸಿದೆ. ಆ ಕಂಪನಿಗಳಲ್ಲಿ ನನ್ನ ಪಾತ್ರವಿಲ್ಲ ಎಂದು ದೃಢೀಕರಿಸುವ ದಾಖಲೆ ನೀಡಿದ್ದೇನೆ.
ಅದರ ಹೊರತಾಗಿ ಪಿಎಫ್ ಅಧಿಕಾರಿಗಳು ಪ್ರಕ್ರಿಯೆ ಮುಂದುವರೆಸಿದ್ದಾರೆ. ಮುಂದಿನ ದಿನಗಳಲ್ಲಿ ಈ ವಿಷಯವನ್ನು ಬಗೆಹರಿಸಲು ನನ್ನ ಪರ ಕಾನೂನು ಸಲಹೆಗಾರರು ಕ್ರಮ ಕೈಗೊಳ್ಳಲಿದ್ದಾರೆ ಎಂದು ರಾಬಿನ್ ಉತ್ತಪ್ಪ ಸ್ಪಷ್ಟನೆ ನೀಡಿದ್ದಾರೆ.
ಇದನ್ನೂ ಓದಿ: ಮಾಜಿ ಕ್ರಿಕೆಟಿಗ ರಾಬಿನ್ ಉತ್ತಪ್ಪ ಬಂಧನಕ್ಕೆ ಅರೆಸ್ಟ್ ವಾರೆಂಟ್ ಜಾರಿ !
2018-19ರಲ್ಲಿ ಸ್ಟ್ರಾಬೆರಿ ಲೆನ್ಸೆರಿಯಾ ಪ್ರೈವೇಟ್ ಲಿಮಿಟೆಡ್, ಸೆಂಟಾರಸ್ ಲೈಫ್ ಸ್ಟೈಲ್ ಬ್ರ್ಯಾಂಡ್ಸ್ ಪ್ರೈವೇಟ್ ಲಿಮಿಟೆಡ್, ಬೆರ್ರೀಸ್ ಫ್ಯಾಶನ್ ಹೌಸ್ ಕಂಪನಿಗಳಿಗೆ ಸಾಲದ ರೂಪದಲ್ಲಿ ಹಣಕಾಸು ತೊಡಗಿಸಿದ್ದೆ. ಇದಕ್ಕಾಗಿ ಕಂಪನಿಗಳು ನನ್ನನ್ನ ನಿರ್ದೇಶಕನಾಗಿ ನೇಮಕ ಮಾಡಿದ್ದವು. ಆದರೆ ಇವುಗಳಲ್ಲಿ ಯಾವುದೇ ಸಕ್ರಿಯ ಕಾರ್ಯನಿರ್ವಾಹಕ ಪಾತ್ರ ಹೊಂದಿರಲಿಲ್ಲ. ಇದರ ಜೊತೆ ಕಂಪನಿಗಳ ನಿತ್ಯದ ವ್ಯವಹಾರಗಳಲ್ಲಿ ನಾನು ಭಾಗಿಯಾಗಿರಲಿಲ್ಲ ಎಂದು ಹೇಳಿದ್ದಾರೆ.
ವೃತ್ತಿಪರ ಕ್ರಿಕೆಟಿಗ, ಬಳಿಕ ನಿರೂಪಕನಾಗಿ, ವೀಕ್ಷಕ ವಿವರಣೆಗಾರನಾಗಿ ಇದ್ದಿದ್ದರಿಂದ ಕಂಪನಿಗಳ ಕಾರ್ಯಾಚರಣೆಗಳಲ್ಲಿ ಭಾಗವಹಿಸಲು ಸಮಯವಿರಲಿಲ್ಲ. ಇದುವರೆಗೂ ಹಣ ಹೂಡಿಕೆ ಮಾಡಿದ ಇತರೆ ಕಂಪನಿಗಳಲ್ಲಿಯೂ ಕಾರ್ಯನಿರ್ವಾಹಕನಾಗಿ ಕೆಲಸ ಮಾಡಿಲ್ಲ. ಆದರೆ ಈಗ ಕೇಳಿ ಬಂದಿರುವ ಆರೋಪ ಇರುವ ಕಂಪನಿಗಳು ಸಾಲದ ರೂಪದಲ್ಲಿ ನೀಡಿದ ಹಣವನ್ನು ನನಗೆ ಮರುಪಾವತಿಸಲು ವಿಫಲವಾಗಿವೆ. ಹೀಗಾಗಿ ಹಲವು ವರ್ಷಗಳ ಹಿಂದೆ ನಿರ್ದೇಶಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು ಈ ಬಗ್ಗೆ ಕಾನೂನು ಪ್ರಕ್ರಿಯೆಗಳು ಚಾಲ್ತಿಯಲ್ಲಿವೆ ಎಂದು ಹೇಳಿದ್ದಾರೆ.
ಮಂಗಳೂರು/ಕುವೈತ್ : ಭಾರತದ ಪ್ರಧಾನಿ ನರೇಂದ್ರ ಮೋದಿ ಎರಡು ದಿನ ಕುವೈತ್ ಪ್ರವಾಸದಲ್ಲಿದ್ದಾರೆ. ಈ ವೇಳೆ ಕುವೈತ್ನ ಮಿನಾ ಅಬ್ದುಲ್ಲಾ ಪ್ರದೇಶದಲ್ಲಿರುವ ಗಲ್ಫ್ ಸ್ಪಿಕ್ ಕಾರ್ಮಿಕ ಶಿಬಿರಕ್ಕೆ ಭೇಟಿ ನೀಡಿದ ಪ್ರಧಾನಿಯವರು ಭಾರತೀಯರನ್ನುದ್ದೇಶಿಸಿ ಮಾತನ್ನಾಡಿದ್ದಾರೆ.
ಪ್ರಧಾನಿ ಮೋದಿ ಕುವೈತ್ಗೆ ಭೇಟಿ ನೀಡಿದ ಮೊದಲ ದಿನ ಭಾರತದ ವಿವಿಧ ರಾಜ್ಯಗಳ ಸುಮಾರು 1,500 ಪ್ರಜೆಗಳೊಂದಿಗೆ ಸಂವಾದ ಮಾಡಿ ಅವರ ಯೋಗಕ್ಷೇಮವನ್ನು ವಿಚಾರಿಸಿದ್ದಾರೆ. ಜೊತೆಗೆ ಎಲ್ಲರಿಗೂ ತಿಂಡಿ ತಿನಿಸುಗಳನ್ನು ಬಡಿಸಿದ್ದಾರೆ. ವಿದೇಶದಲ್ಲಿರುವ ಭಾರತೀಯ ಕಾರ್ಮಿಕರಿಗೆ ಪ್ರಧಾನಿ ಮೋದಿ ಅವರ ಭೇಟಿ ವಿದೇಶದಲ್ಲಿರುವ ಬಾರತೀಯರಿ ಕಾರ್ಮಿಕರಿಗೆ ನೀಡಿದ ಪ್ರಾಮುಖ್ಯತೆಯ ಸಂಕೇತವಾಗಿದೆ. ಕಳೆದ ಕೆಲವು ವರ್ಷಗಳಲ್ಲಿ ವಿದೇಶದಲ್ಲಿರುವ ಭಾರತೀಯ ಕಾರ್ಮಿಕರ ಕಲ್ಯಾಣಕ್ಕಾಗಿ ಇ-ಮೈಗ್ರೇಟ್ ಪೋರ್ಟಲ್, ಎಂಎಡಿಎಡಿ ಪೋರ್ಟಲ್ ಮತ್ತು ವಿಮಾ ಸೇರಿದಂತೆ ಹಲವಾರು ಯೋಜನೆಗಳನ್ನು ಸರ್ಕಾರ ಜಾರಿಗೆ ತಂದಿದೆ.
ಇದನ್ನೂ ಓದಿ : 43 ವರ್ಷಗಳ ಬಳಿಕ ಕುವೈತ್ಗೆ ಭಾರತದ ಪ್ರಧಾನಿ ಮೋದಿ ಭೇಟಿ
ವಿದೇಶದಲ್ಲಿರುವ ಭಾರತೀಯ ಕಾರ್ಮಿಕರ ಪರಿಸ್ಥಿತಿಗಳನ್ನು ಸುಧಾರಿಸುವ ನಿಟ್ಟಿನಲ್ಲಿ ಪ್ರಧಾನಿ ಮೋದಿ ಮಹತ್ವದ ದಾಪುಗಾಲು ಇಟ್ಟಿದ್ದಾರೆ. 40ಕ್ಕೂ ಹೆಚ್ಚು ಭಾರತೀಯರ ಸಾವಿಗೆ ಕಾರಣವಾದ ಕುವೈಟ್ ಅಗ್ನಿ ದುರಂತದ ಬಳಿಕ ಪಿಎಂ ಮೋದಿ ಅವರು ಪರಿಶೀಲನಾ ಸಭೆ ಅಧ್ಯಕ್ಷತೆ ವಹಿಸಿದ್ದರು ಮತ್ತು ಸಂತ್ರಸ್ತರ ಕುಟುಂಬಗಳಿಗೆ ಪರಿಹಾರವನ್ನು ಒದಗಿಸಿದ್ದರು. ಮೋದಿಜಿಯವರು 2015 ರಲ್ಲಿ ಅಬು ಧಾಬಿಯ ಕಾರ್ಮಿಕ ಶಿಬಿರಕ್ಕೂ ಭೇಟಿ ನೀಡಿದ್ದರು. ಅಲ್ಲಿ ಅವರು ವಲಸೆ ಕಾರ್ಮಿಕರ ಕಲ್ಯಾಣದ ಬಗ್ಗೆ ಭಾರತದ ಕಾಳಜಿಯನ್ನು ಎತ್ತಿ ತೋರಿಸಿತ್ತು. ಶಿಬಿರಗಳಲ್ಲಿ ಭಾರತೀಯ ಕಾರ್ಮಿಕರೊಂದಿಗೆ ಸಂವಾದ ನಡೆಸಿ ಅವರು ಎದುರಿಸುತ್ತಿರುವ ಸಮಸ್ಯೆಗಳನ್ನು ಅರಿತುಕೊಂಡು, ಭಾರತ ಸರ್ಕಾರವು ಅವರಿಗೆ ಹೇಗೆ ಸಹಾಯ ಮಾಡಬಹುದೆಂದು ಚರ್ಚಿಸಿದ್ದರು.
LATEST NEWS
ತೆಲಂಗಾಣ ಸರ್ಕಾರದಿಂದ ಟಾಲಿವುಡ್ಗೆ ಭಾರೀ ದೊಡ್ಡ ಹೊಡೆತ !!
ಕ್ರಿಸ್ಮಸ್ ಸ್ಪೆಷಲ್ ಆಫರ್; ಮಂಗಳೂರು – ಬೆಂಗಳೂರು ವಿಶೇಷ ರೈಲು ಸಂಚಾರ
ಕಾನ್ ಸ್ಟೆಬಲ್ ಮನೆಯಲ್ಲಿ ಭರ್ಜರಿ ಬೇಟೆಯಾಡಿದ ಲೋಕಾಯುಕ್ತ ಪೊಲೀಸರು !
ಮುಂಬೈ ಬೋಟ್ ದುರಂತ ಪ್ರಕರಣ: ನಾಪತ್ತೆಯಾಗಿದ್ದ ಬಾಲಕ ಶವವಾಗಿ ಪತ್ತೆ, ಸಾವಿನ ಸಂಖ್ಯೆ 15ಕ್ಕೆ ಏರಿಕೆ
ರಷ್ಯಾದ ಮೇಲೆ ಉಕ್ರೇನ್ ಡ್ರೋನ್ ದಾಳಿ; ಬೆಚ್ಚಿಬಿದ್ದ ಕಜಾನ್ ಜನತೆ !
3 ಮಕ್ಕಳ ತಾಯಿಗೆ, 2 ಮಕ್ಕಳ ತಂದೆ ಜೊತೆ ಅ*ಫೇರ್; ಜೋಡಿಗೆ ಭರ್ಜರಿ ಮರುವಿವಾಹ
Trending
- BIG BOSS6 days ago
ಡ್ರೋನ್ ಪ್ರತಾಪ್ ಪೊಲೀಸ್ ಕಸ್ಟಡಿ ಇಂದಿಗೆ ಅಂತ್ಯ; ವಿಚಾರಣೆಯಲ್ಲಿ ಪೊಲೀಸರಿಗೆ ಸಿಕ್ತು ಮಹತ್ವದ ಮಾಹಿತಿ
- DAKSHINA KANNADA7 days ago
ಕ್ಯಾಟ್ಕದ ನೂತನ ಅಧ್ಯಕ್ಷರಾಗಿ ಲಂಚುಲಾಲ್ ಅವಿರೋಧವಾಗಿ ಆಯ್ಕೆ
- BIG BOSS7 days ago
ದಿಢೀರ್ ನಿರ್ಧಾರ ಕೈಗೊಂಡ ಗೋಲ್ಡ್ ಸುರೇಶ್; ಕಿಚ್ಚ ಸುದೀಪ್ ಶಾಕ್ !
- LATEST NEWS4 days ago
ದಹಿ ಪುರಿ ಚಾಟ್ಸ್ ಬದಲು ಪೂರಿ, ಮೊಸರು ಕಳುಹಿಸಿಕೊಟ್ಟ ರೆಸ್ಟೋರೆಂಟ್