Thursday, September 29, 2022

ಮದುವೆಯಾಗುವುದಾಗಿ ನಂಬಿಸಿ ಯುವತಿಗೆ ಎಂಟು ಲಕ್ಷ ಪಂಗನಾಮ…!

ಕಾಸರಗೋಡು: ಮದುವೆಯಾಗುವುದಾಗಿ ನಂಬಿಸಿ ಯುವತಿಗೆ ಎಂಟು ಲಕ್ಷ ಪಂಗನಾಮ ಹಾಕಿದ ಘಟನೆಗೆ ಸಂಬಂಧಿಸಿದಂತೆ ವ್ಯಕ್ತಿಯೋರ್ವನನ್ನು ಪೊಲೀಸರು ಬಂಧಿಸಿದ ಘಟನೆ ಕಾಸರಗೋಡಿನಲ್ಲಿ ನಡೆದಿದೆ.

ಸುರತ್ಕಲ್ ನ ಬಿನೋಯ್ ಯಾನೆ ಸನತ್ ಶೆಟ್ಟಿ ಬಂಧಿತ ಆರೋಪಿ.


ಈತ ಸಂಗಮ್ ಡಾಟ್ ಕಾಮ್ ಎಂಬ ಮೆಟ್ರೋಮೋನಿಯಲ್ ವೆಬ್ ಸೈಟ್ ಆರಂಭಿಸಿ ನಕಲಿ ಪ್ರೊಫೈಲ್ ಸೃಷ್ಟಿಸಿ ಡಾಕ್ಟರ್ ಎಂದು ಸುಳ್ಳು ಹೇಳಿ ಸುಮಾರು ಎಂಟು ಲಕ್ಷ ರೂ. ವಂಚಿಸಿದ್ದ.
ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ ಈತನನ್ನು ಬಂಧಿಸಲಾಗಿದೆ.

ವಂಚನೆ ಬಗ್ಗೆ ತಿಂಗಳುಗಳಿಂದ ಆರೋಪಿಯ ಸಾಮಾಜಿಕ ಜಾಲತಾಣಗಳ ಬಗ್ಗೆ ಪೊಲೀಸರು ನಿಗಾ ಇರಿಸಿದ್ದು, ಈತ ಮುಂಬೈ, ಹೈದರಾಬಾದ್, ಬೆಂಗಳೂರು ಮೊದಲಾದ ಕಡೆ ವಾಸ್ತವ್ಯ ಬದಲಾಯಿಸುತ್ತಿದ್ದ.

ಈತನ ಲೊಕೇಶನ್ ಹಿಂಬಾಲಿಸಿದ ಪೊಲೀಸರು ಈತನ ಬಗ್ಗೆ ಮಾಹಿತಿ ಪಡೆದು ಸುರತ್ಕಲ್ ನ ಮನೆಯಿಂದ ಈತನನ್ನು ಗುರುವಾರ ಮುಂಜಾನೆ ಬಂಧಿಸಲಾಯಿತು.

ಈತ ಇದೇ ರೀತಿ ಇನ್ನಿತರ ವಂಚನೆ ನಡೆಸಿದ್ದಾನೆಯೇ ಎಂಬ ಬಗ್ಗೆ ಪೊಲೀಸರು ಮಾಹಿತಿ ಕಲೆ ಹಾಕುತ್ತಿದ್ದಾರೆ.

LEAVE A REPLY

Please enter your comment!
Please enter your name here

Hot Topics

ಮಂಗಳೂರು: ಲೋಕಕಂಟಕ ನಿವೃತ್ತಿಗಾಗಿ ವೆಂಕಟರಮಣ ದೇಗುಲದಲ್ಲಿ ಸಹಸ್ರ ಚಂಡಿಕಾ ಮಹಾಯಾಗ ಪ್ರಾರಂಭ

ಮಂಗಳೂರು: ಶಾರದಾ ಮಹೋತ್ಸವದ 100ನೇ ವರ್ಷದ ಶತಮಾನೋತ್ಸವ ಆಚರಣೆಯ ಸಂದರ್ಭದಲ್ಲಿ ಮಂಗಳೂರಿನ ಶ್ರೀ ವೆಂಕಟರಮಣ ದೇವಸ್ಥಾನದ ರಾಜಾಂಗಣದಲ್ಲಿ ಶ್ರೀ ಸಹಸ್ರ ಚಂಡಿಕಾ ಮಹಾಯಾಗ ಇಂದು ಪ್ರಾರಂಭಗೊಂಡಿತು.ಲೋಕ ಕಂಟಕ ನಿವೃತ್ತಿಗಾಗಿ ಲೋಕದಲ್ಲಿ ಉಂಟಾದ ಕ್ಷೋಭೆಯ...

ಮಂಗಳೂರು: ಗೆಳೆಯನ ಸಾವಿಗೆ ಕಾರಣವಾದ ರಾಷ್ಟ್ರೀಯ ಹೆದ್ದಾರಿ ಅವ್ಯವಸ್ಥೆ-ಯುವಕನ ಏಕಾಂಗಿ ಪ್ರತಿಭಟನೆ

ಮಂಗಳೂರು: ರಾಷ್ಟ್ರೀಯ ಹೆದ್ದಾರಿ ಹಾಗೂ ನಗರದೊಳಗಿನ ರಸ್ತೆಗಳಲ್ಲಿರುವ ಯಮಗಾತ್ರದ ಗುಂಡಿಗಳ ಅವ್ಯವಸ್ಥೆಯಿಂದ ತನ್ನ ಗೆಳೆಯ ಮೃತಪಟ್ಟಿದ್ದು, ಈ ಹಿನ್ನಲೆ ರಸ್ತೆ ದುರಸ್ತಿ ಮಾಡುವಂತೆ ಆಗ್ರಹಿಸಿ ಮಂಗಳೂರು ಮಹಾನಗರ ಪಾಲಿಕೆ ಮುಂಭಾಗ ಏಕಾಂಗಿ ಪ್ರತಿಭಟನೆ...

ದೇಶದಲ್ಲಿ ಅಘೋಷಿತ ತುರ್ತು ಪರಿಸ್ಥಿತಿ: PFI ಬ್ಯಾನ್ ಬಗ್ಗೆ M.K ಪೈಝಿ ರಿಯಾಕ್ಷನ್

ಮಂಗಳೂರು: ಪಿಎಫ್‌ಐ ಮತ್ತು ಅದರ ಅಂಗಸಂಸ್ಥೆಗಳ ಮೇಲೆ ನಿಷೇಧ ಹೇರಿರುವ ಒಕ್ಕೂಟ ಸರ್ಕಾರದ ನಿರ್ಧಾರ ದೇಶದ ಸಂವಿಧಾನ ಪ್ರಜೆಗಳಿಗೆ ಖಾತರಿಪಡಿಸಿರುವ ಹಕ್ಕುಗಳಿಗೆ ನೀಡಿರುವ ಬಲವಾದ ಪೆಟ್ಟು ಎಂದು ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...