Friday, July 1, 2022

ಸರ್ಕಾರದಲ್ಲಿ ‘ಮಹಾ’ ಬಿರುಕು: ಬಂಡಾಯ ಸಚಿವ ಶಿಂಧೆಗೆ ಶಿವಸೇನೆಯಿಂದ ಗೇಟ್‌ಪಾಸ್‌

ಮುಂಬೈ: ಮಹಾರಾಷ್ಟ್ರದ ನಗರಾಭಿವೃದ್ಧಿ ಸಚಿವ ಏಕನಾಥ್ ಶಿಂಧೆ ಅವರನ್ನು ಶಿವಸೇನಾ ಶಾಸಕಾಂಗ ಪಕ್ಷದ ನಾಯಕನ ಸ್ಥಾನದಿಂದ ವಜಾಗೊಳಿಸಲಾಗಿದೆ.

ಗುಜರಾತ್‌ನಲ್ಲಿ 10ಕ್ಕೂ ಹೆಚ್ಚು ಶಾಸಕರೊಂದಿಗೆ ಏಕನಾಥ್ ಶಿಂಧೆ ಬೀಡುಬಿಟ್ಟಿದ್ದು, ಈ ಹಿನ್ನೆಲೆಯಲ್ಲಿ ಶಿವಸೇನಾ ಶಿಂಧೆ ವಿರುದ್ಧ ಕ್ರಮ ಕೈಗೊಂಡಿದೆ.

ಶಿಂಧೆ ಸ್ಥಾನಕ್ಕೆ ಶಾಸಕ ಅಜಯ್ ಚೌಧರಿ ಬರಲಿದ್ದಾರೆ. ಸಿಎಂ ಉದ್ಧವ್ ಠಾಕ್ರೆ ಅವರ ಅಧಿಕೃತ ನಿವಾಸದಲ್ಲಿ ನಡೆದ ಸಭೆಯಲ್ಲಿ ಶಿಂಧೆಯನ್ನು ತೆಗೆದುಹಾಕುವ ನಿರ್ಧಾರ ಕೈಗೊಳ್ಳಲಾಗಿದೆ.

ಶಿವಸೇನಾ ಕ್ರಮ ಕೈಗೊಂಡ ಬೆನ್ನಲ್ಲೇ ಟ್ವೀಟ್ ಮಾಡಿದ ಶಿಂಧೆ ನಾವು ಬಾಳಾಸಾಹೇಬರ ನಿಷ್ಠ ಶಿವಸೈನಿಕರು. ಬಾಳಾಸಾಹೇಬರು ನಮಗೆ ಹಿಂದುತ್ವದ ಬಗ್ಗೆ ಕಲಿಸಿದ್ದಾರೆ.

ಬಾಬಾಸಾಹೇಬರ ಚಿಂತನೆಗಳು ಮತ್ತು ಧರ್ಮವೀರ್ ಆನಂದ್ ದಿಘೆ ಸಾಹೇಬ್ ಅವರ ಬೋಧನೆಯಿಂದ ನಾವು ಎಂದಿಗೂ ಮತ್ತು ಅಧಿಕಾರಕ್ಕಾಗಿ ಏನನ್ನೂ ಮಾಡಿಲ್ಲ ಎಂದಿದ್ದಾರೆ.

LEAVE A REPLY

Please enter your comment!
Please enter your name here

Hot Topics

ಅಘಾಡಿ ಸರ್ಕಾರ ಪತನಗೊಂಡ ಮರುದಿನವೇ ‘ನನಗೆ EDಯಿಂದ ಲವ್‌ ಲೆಟರ್‌ ಬಂದಿದೆ’ ಎಂದ ಶರದ್‌ ಪವಾರ್‌

ಹೊಸದಿಲ್ಲಿ: ಮಹಾರಾಷ್ಟ್ರದಲ್ಲಿ ಅಘಾಡಿ ಸರ್ಕಾರ ಪತನಗೊಂಡ ಮರುದಿನವೇ ಎನ್‌ಸಿಪಿ ಮುಖ್ಯಸ್ಥ ಶರದ್ ಪವಾರ್ ಅವರಿಗೆ ಆದಾಯ ತೆರಿಗೆ ಇಲಾಖೆ ನೋಟಿಸ್ ನೀಡಿದೆ. 2004, 2009, 2014 ಮತ್ತು 2020ರ ಚುನಾವಣೆಗಳಲ್ಲಿ ಅವರು ಸಲ್ಲಿಸಿದ್ದ...

ಮಂಗಳೂರು: ಪತ್ರಿಕಾ ದಿನಾಚರಣೆ ಹಾಗೂ ಹರ್ಮನ್ ಮೊಗ್ಲಿಂಗ್ ಸ್ಮರಣೆ

ಮಂಗಳೂರು: ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ದ.ಕ.ಜಿಲ್ಲಾ ಸಮಿತಿಯ ವತಿಯಿಂದ ಪತ್ರಿಕಾ ದಿನಾಚರಣೆ ಹಾಗೂ ರೆವರೆಂಡ್ ಹರ್ಮನ್ ಮೊಗ್ಲಿಂಗ್ ಸ್ಮರಣೆ ಕಾರ್ಯಕ್ರಮ ಇಂದು ಮಂಗಳೂರು ಬಲ್ಮಠದ ಕರ್ನಾಟಕ ಥಿಯೋಲಾಜಿಕಲ್ ಕಾಲೇಜಿನಲ್ಲಿ ನಡೆಯಿತು.ಕನ್ನಡದ ಪ್ರಥಮ ಪತ್ರಿಕೆ...

ಬಂಟ್ವಾಳ: ರಸ್ತೆ ಬದಿ ಗುಡ್ಡ ಜರಿದು ವಿದ್ಯುತ್ ಕಂಬಕ್ಕೆ ಹಾನಿ-ರಸ್ತೆ ಸಂಚಾರ ಅಸ್ತವ್ಯಸ್ತ

ಬಂಟ್ವಾಳ : ಧಾರಾಕಾರವಾಗಿ ಸುರಿದ ಮಳೆಗೆ ರಸ್ತೆಯ ಬದಿಯಲ್ಲಿ ಗುಡ್ಡ ಜರಿದು ವಿದ್ಯುತ್ ಕಂಬಕ್ಕೆ ಹಾನಿಯಾಗಿದ್ದಲ್ಲದೆ ಅರ್ಧ ತಾಸಿಗಿಂತಲೂ ಹೆಚ್ಚು ಸಮಯ ರಸ್ತೆ ಸಂಚಾರಕ್ಕೆ ಅಡಚಣೆಯಾದ ಘಟನೆ ಬೆಳ್ತಂಗಡಿ ರಾಷ್ಟ್ರೀಯ ಹೆದ್ದಾರಿಯ ನಾವೂರ,...