Friday, August 12, 2022

ಮಹಾರಾಷ್ಟ್ರದ ಹೊಸ ಮುಖ್ಯಮಂತ್ರಿಯಾಗಿ ಏಕನಾಥ್ ಶಿಂಧೆ ಆಯ್ಕೆ : ಇಂದು ಸಂಜೆ 7.30 ಪ್ರಮಾಣವಚನ..!

ಮುಂಬೈ : ಮಹಾರಾಷ್ಟ್ರದ ಹೊಸ ಮುಖ್ಯಮಂತ್ರಿಯಾಗಿ ಏಕನಾಥ್ ಶಿಂಧೆ ಆಯ್ಕೆಯಾಗಿದ್ದಾರೆ. ಭಾರತೀಯ ಜನತಾ ಪಾರ್ಟಿಯ (ಬಿಜೆಪಿ) ದೇವೇಂದ್ರ ಫಡ್ನವೀಸ್​ ರಾಜ್ಯಪಾಲ ಭಗತ್ ಸಿಂಗ್ ಕೋಶ್ಯಾರಿ ಅವರನ್ನು ಭೇಟಿ ಮಾಡಿದ ನಂತರ ಜಂಟಿ ಸುದ್ದಿಗೋಷ್ಠಿ ನಡೆಸಿ ಶಿಂಧೆ ಸಿಎಂ ಆಗುವ ಅಚ್ಚರಿಯ ವಿಚಾರ ಪ್ರಕಟಿಸಿದ್ದಾರೆ.

ಇಂದು ರಾತ್ರಿ 7:30ಕ್ಕೆ ಪದಗ್ರಹಣ ಕಾರ್ಯಕ್ರಮ ನಡೆಯಲಿದ್ದು ಮುಖ್ಯಮಂತ್ರಿಯಾಗಿ ಏಕನಾಥ್​ ಶಿಂಧೆ ಪ್ರಮಾಣ ವಚನ ಸ್ವೀಕರಿಸುವರು ಎಂದು ಅವರು ತಿಳಿಸಿದರು.

ನಿಯೋಜಿತ ಮುಖ್ಯಮಂತ್ರಿ ಏಕನಾಥ್ ಶಿಂಧೆ ಮಾತನಾಡಿ, “ಬಾಳಾಸಾಹೇಬ್​ ಅವರ ಹಿಂದುತ್ವವನ್ನು ಮುಂದೆ ತೆಗೆದುಕೊಂಡು ಹೋಗುವ ಉದ್ದೇಶದಿಂದ ನಾವು ಈ ನಿರ್ಧಾರ ಕೈಗೊಂಡಿದ್ದೇವೆ.

ರಾಜ್ಯದಲ್ಲಿ ಅಭಿವೃದ್ಧಿ ಪರ ಕಾರ್ಯಗಳು ಮುಂದುವರೆಯಲಿದ್ದು, ನಮ್ಮ ಪರವಾಗಿ 50 ಶಾಸಕರಿದ್ದಾರೆ” ಎಂದರು ಇನ್ನು ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಬಿಜೆಪಿ ಮುಖಂಡ ದೇವೇಂದ್ರ ಫಡ್ನವೀಸ್​ “2019ರಲ್ಲಿ ನಡೆದ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ-ಶಿವಸೇನೆ ಮೈತ್ರಿ ಮಾಡಿಕೊಂಡಿದ್ದವು.

ಜನರು ನಮಗೆ ಸರ್ಕಾರ ರಚಿಸಲು ಬೇಕಾದಷ್ಟು ಶಾಸಕರನ್ನು ಗೆಲ್ಲಿಸಿಕೊಟ್ಟಿದ್ದರು. ಆದರೆ, ಶಿವಸೇನೆಯು ಕಾಂಗ್ರೆಸ್​, ಎನ್​​ಸಿಪಿ ಜೊತೆ ಮೈತ್ರಿ ಮಾಡಿಕೊಂಡಿತು.

ಬಾಳಾಸಾಹೇಬ್​​ ತಮ್ಮ ಜೀವನದುದ್ದಕ್ಕೂ ಯಾರ ವಿರುದ್ಧ ಪ್ರತಿಭಟನೆ ಮಾಡುತ್ತಾ ಬಂದರೂ ಅವರೊಂದಿಗೆ ಶಿವಸೇನೆ ಕೈಜೋಡಿಸಿತು. ಹಿಂದುತ್ವವಾದಿ ಮತ್ತು ಸಾವರ್ಕರ್​ ಅವರ ವಿರುದ್ಧ ಇರುವವರೊಂದಿಗೆ ಸೇನೆ ಸೇರಿಕೊಂಡು, ಜನರ ಆದೇಶವನ್ನು ಅವಮಾನಿಸಿದರು” ಎಂದು ಫಡ್ನವೀಸ್ ಹೇಳಿದ್ದಾರೆ.

ಇದೇ ವೇಳೆ, ಹೊಸ ಸರ್ಕಾರದಲ್ಲಿ ತಾವು ಭಾಗಿಯಾಗುವುದಿಲ್ಲ ಎಂದು ಫಡ್ನವೀಸ್ ಸ್ಪಷ್ಟಪಡಿಸಿದರು.

“ಒಂದೆಡೆ ದಾವೂದ್ ಇಬ್ರಾಹಿಂನನ್ನು ವಿರೋಧಿಸಿದ ಶಿವಸೇನೆ, ಮತ್ತೊಂದೆಡೆ ದಾವೂದ್​ಗೆ ಸಹಾಯ ಮಾಡಿದ ಆರೋಪದಲ್ಲಿ ಜೈಲಿಗೆ ಹೋಗಿ ಬಂದ ವ್ಯಕ್ತಿಯನ್ನೇ ಸಂಪುಟದಲ್ಲಿ ಇಟ್ಟುಕೊಂಡಿತ್ತು. ಇದರಿಂದ ಜನರು ಬೇಸತ್ತು ಹೋಗಿದ್ದರು” ಎಂದು ಅವರು ಹೇಳಿದ್ದಾರೆ.

LEAVE A REPLY

Please enter your comment!
Please enter your name here

Hot Topics

ಸಂಸದ ಡಾ. ಡಿ.ವಿ ಹೆಗ್ಗಡೆಯವರ ನೂತನ ಕಾರ್ಯಾಲಯ ಉದ್ಘಾಟನೆ

ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥನ ಕ್ಷೇತ್ರದ ಧರ್ಮಾಧಿಕಾರಿಗಳು ಆಗಿರುವ ಹಾಗು ರಾಜ್ಯ ಸಭೆಯ ಸಂಸದರಾಗಿ ಆಯ್ಕೆಯಾದ ಡಾ.ಡಿ.ವೀರೇಂದ್ರ ಹೆಗ್ಗಡೆಯವರ ನೂತನ 'ಸಂಸದರ ಕಾರ್ಯಾಲಯ'ವು ಧರ್ಮಸ್ಥಳದ ಮಂಜೂಷಾ ವಸ್ತು ಸಂಗ್ರಹಾಲಯದ ಬಳಿ ಉದ್ಘಾಟನೆಗೊಂಡಿತು.ಸ್ಥಳೀಯ...

ಮಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ಹಿಟ್‌ ಆ್ಯಂಡ್‌ ರನ್‌: ಓರ್ವ ಸ್ಪಾಟ್‌ ಡೆತ್‌, ಮತ್ತೋರ್ವನಿಗೆ ಗಾಯ

ಮಂಗಳೂರು: ರಾಷ್ಟ್ರೀಯ ಹೆದ್ದಾರಿ ಬದಿ ಹುಲ್ಲು ಕಟಾವು ಮಾಡುತ್ತಿದ್ದ ಕಾರ್ಮಿಕರಿಗೆ ಅಪರಿಚಿತ ವಾಹನವೊಂದು ಢಿಕ್ಕಿ ಹೊಡೆದು ಸ್ಥಳದಲ್ಲಿ ನಿಲ್ಲಿಸದೇ ಪರಾರಿಯಾದ ಘಟನೆ ಮಂಗಳೂರು ನಗರದ ಜೆಪ್ಪಿನಮೊಗರುವಿನ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಇಂದು...

ಶಿವಳ್ಳಿ ಸ್ಪಂದನ ಅಧ್ಯಕ್ಷರಾಗಿ ಯಕ್ಷಗುರು ರಾಮಚಂದ್ರ ಭಟ್‌ ಎಲ್ಲೂರು ಆಯ್ಕೆ

ಮಂಗಳೂರು: ಕದ್ರಿ ವಲಯ ಶಿವಳ್ಳಿ ಸ್ಪಂದನ ಅಧ್ಯಕ್ಷರಾಗಿ ಯಕ್ಷಗುರು ರಾಮಚಂದ್ರ ಭಟ್‌ ಎಲ್ಲೂರು ಸರ್ವಾನುಮತದಿಂದ ಆಯ್ಕೆಯಾಗಿದ್ದಾರೆ.ಕದ್ರಿ ಮಲ್ಲಿಕಟ್ಟೆ ಶ್ರೀಕೃಷ್ಣ ಮಂದಿರದಲ್ಲಿ ನಡೆದ ಮಹಾಸಭೆಯಲ್ಲಿ ಆಯ್ಕೆ ಪ್ರಕ್ರಿಯೆ ಘೋಷಿಸಲಾಯಿತು.ಅದರಲ್ಲಿ ಶಿವಳ್ಳಿ ಸ್ಪಂದನ ಉಪಾಧ್ಯಕ್ಷರು- ಸದಾನಂದ...